قُلْ مَن يَرْزُقُكُم مِّنَ ٱلسَّمَآءِ وَٱلْأَرْضِ أَمَّن يَمْلِكُ ٱلسَّمْعَ وَٱلْأَبْصَٰرَ وَمَن يُخْرِجُ ٱلْحَىَّ مِنَ ٱلْمَيِّتِ وَيُخْرِجُ ٱلْمَيِّتَ مِنَ ٱلْحَىِّ وَمَن يُدَبِّرُ ٱلْأَمْرَ فَسَيَقُولُونَ ٱللَّهُ فَقُلْ أَفَلَا تَتَّقُونَ
Kannada Translation - Hamza Buturಕೇಳಿರಿ: “ಆಕಾಶದಿಂದ ಮತ್ತು ಭೂಮಿಯಿಂದ ನಿಮಗೆ ಆಹಾರವನ್ನು ಒದಗಿಸುವುದು ಯಾರು? ನಿಮ್ಮ ಶ್ರವಣ ಮತ್ತು ದೃಷ್ಟಿ ಯಾರ ನಿಯಂತ್ರಣದಲ್ಲಿದೆ? ನಿರ್ಜೀವಿಯಿಂದ ಜೀವಿಯನ್ನು ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರತರುವುದು ಯಾರು? ಜಗತ್ತಿನ ಎಲ್ಲಾ ವಿಷಯಗಳನ್ನು ನಿಯಂತ್ರಿಸುವುದು ಯಾರು?” ಆಗ ಅವರು ಹೇಳುವರು: “ಅಲ್ಲಾಹು.” ಕೇಳಿರಿ: “ಆದರೂ ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ?”