وَمَا ظَلَمْنَٰهُمْ وَلَٰكِن ظَلَمُوٓا۟ أَنفُسَهُمْ فَمَآ أَغْنَتْ عَنْهُمْ ءَالِهَتُهُمُ ٱلَّتِى يَدْعُونَ مِن دُونِ ٱللَّهِ مِن شَىْءٍ لَّمَّا جَآءَ أَمْرُ رَبِّكَ وَمَا زَادُوهُمْ غَيْرَ تَتْبِيبٍ
Kannada Translation - Hamza Buturನಾವು ಅವರಿಗೆ ಯಾವುದೇ ಅನ್ಯಾಯ ಮಾಡಲಿಲ್ಲ. ಆದರೆ ಅವರು ಅವರಿಗೇ ಅನ್ಯಾಯ ಮಾಡಿದರು. ನಿಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆಯು ಬಂದಾಗ, ಅವರು ಅಲ್ಲಾಹನನ್ನು ಬಿಟ್ಟು ಕರೆದು ಪ್ರಾರ್ಥಿಸುತ್ತಿದ್ದ ಅವರ ದೇವರುಗಳಲ್ಲಿ ಯಾರೂ ಕೂಡ ಅವರಿಗೆ ಸ್ವಲ್ಪವೂ ಪ್ರಯೋಜನಕ್ಕೆ ಬರಲಿಲ್ಲ. ಅವರು (ಆ ದೇವರುಗಳು) ಅವರಿಗೆ ನಷ್ಟವನ್ನಲ್ಲದೆ ಇನ್ನೇನನ್ನೂ ಹೆಚ್ಚಿಸಿ ಕೊಡುತ್ತಿರಲಿಲ್ಲ.