حَتَّىٰٓ إِذَا جَآءَ أَمْرُنَا وَفَارَ ٱلتَّنُّورُ قُلْنَا ٱحْمِلْ فِيهَا مِن كُلٍّ زَوْجَيْنِ ٱثْنَيْنِ وَأَهْلَكَ إِلَّا مَن سَبَقَ عَلَيْهِ ٱلْقَوْلُ وَمَنْ ءَامَنَ وَمَآ ءَامَنَ مَعَهُۥٓ إِلَّا قَلِيلٌ
Kannada Translation - Hamza Buturಎಲ್ಲಿಯವರೆಗೆಂದರೆ, ನಮ್ಮ ಆಜ್ಞೆಯು ಬಂದು ಒಲೆ ಉಕ್ಕಿ ಹರಿದಾಗ, ನಾವು ಹೇಳಿದೆವು: “ಎಲ್ಲಾ ಜೀವಿಗಳ ಒಂದೊಂದು ಜೋಡಿಯನ್ನು (ಗಂಡು ಮತ್ತು ಹೆಣ್ಣು) ನಾವೆಯಲ್ಲಿ ಹತ್ತಿಸಿರಿ. ನಿಮ್ಮ ಕುಟುಂಬದವರಲ್ಲಿ ಯಾರ ಮೇಲೆ ಅಲ್ಲಾಹನ ಮಾತು ಖಾತ್ರಿಯಾಗಿದೆಯೋ ಅವರನ್ನು ಬಿಟ್ಟು ಉಳಿದವರನ್ನು ಹಾಗೂ ಸತ್ಯವಿಶ್ವಾಸಿಗಳನ್ನು ಕೂಡ ಹತ್ತಿಸಿರಿ.” ಕೆಲವು ಬೆರಳೆಣಿಕೆಯ ಜನರು ಮಾತ್ರ ಅವರ ಜೊತೆಗೆ ವಿಶ್ವಾಸವಿಟ್ಟಿದ್ದರು.