وَرَفَعَ أَبَوَيْهِ عَلَى ٱلْعَرْشِ وَخَرُّوا۟ لَهُۥ سُجَّدًا وَقَالَ يَٰٓأَبَتِ هَٰذَا تَأْوِيلُ رُءْيَٰىَ مِن قَبْلُ قَدْ جَعَلَهَا رَبِّى حَقًّا وَقَدْ أَحْسَنَ بِىٓ إِذْ أَخْرَجَنِى مِنَ ٱلسِّجْنِ وَجَآءَ بِكُم مِّنَ ٱلْبَدْوِ مِنۢ بَعْدِ أَن نَّزَغَ ٱلشَّيْطَٰنُ بَيْنِى وَبَيْنَ إِخْوَتِىٓ إِنَّ رَبِّى لَطِيفٌ لِّمَا يَشَآءُ إِنَّهُۥ هُوَ ٱلْعَلِيمُ ٱلْحَكِيمُ
Kannada Translation - Hamza Buturಅವರು ತಮ್ಮ ತಂದೆ-ತಾಯಿಯನ್ನು ಸಿಂಹಾಸನಕ್ಕೇರಿಸಿ ಕೂರಿಸಿದರು. ಅವರೆಲ್ಲರೂ ಯೂಸುಫರ ಮುಂದೆ ಸಾಷ್ಟಾಂಗ ಮಾಡುತ್ತಾ ಬಿದ್ದರು. ಯೂಸುಫ್ ಹೇಳಿದರು: “ಅಪ್ಪಾಜಿ! ಇದೇ ನಾನು ಆವತ್ತು ಕಂಡ ಕನಸಿನ ವ್ಯಾಖ್ಯಾನ. ನನ್ನ ಪರಿಪಾಲಕನು (ಅಲ್ಲಾಹು) ಅದನ್ನು ನಿಜಗೊಳಿಸಿದ್ದಾನೆ. ನನ್ನನ್ನು ಕಾರಾಗೃಹದಿಂದ ಹೊರತಂದಾಗ, ಮತ್ತು ನನ್ನ ಹಾಗೂ ನನ್ನ ಸಹೋದರರ ಮಧ್ಯೆ ಶೈತಾನನು ದ್ವೇಷ ಮೂಡಿಸಿದ ನಂತರವೂ ನಿಮ್ಮನ್ನು ಮರುಭೂಮಿಯಿಂದ ಇಲ್ಲಿಗೆ ಕರೆತಂದಾಗ ಅವನು ನನಗೆ ಬಹಳ ಉಪಕಾರ ಮಾಡಿದ್ದಾನೆ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಅವನು ಬಯಸುವುದನ್ನು ಬಹಳ ನಾಜೂಕಾಗಿ ನಿರ್ವಹಿಸುತ್ತಾನೆ. ನಿಜಕ್ಕೂ ಅವನು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.”