وَمَآ أَرْسَلْنَا مِن قَبْلِكَ إِلَّا رِجَالًا نُّوحِىٓ إِلَيْهِم مِّنْ أَهْلِ ٱلْقُرَىٰٓ أَفَلَمْ يَسِيرُوا۟ فِى ٱلْأَرْضِ فَيَنظُرُوا۟ كَيْفَ كَانَ عَٰقِبَةُ ٱلَّذِينَ مِن قَبْلِهِمْ وَلَدَارُ ٱلْـَٔاخِرَةِ خَيْرٌ لِّلَّذِينَ ٱتَّقَوْا۟ أَفَلَا تَعْقِلُونَ
Kannada Translation - Hamza Buturನಿಮಗಿಂತ ಮೊದಲು ನಾವು ವಿಭಿನ್ನ ಊರುಗಳಲ್ಲಿ ಎಷ್ಟು ಸಂದೇಶವಾಹಕರನ್ನು ಕಳುಹಿಸಿದ್ದೆವೋ ಅವರೆಲ್ಲರೂ ನಾವು ದೇವವಾಣಿ ನೀಡಿದ ಪುರುಷರಾಗಿದ್ದರು. ಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನ ಜನರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ದೇವಭಯವುಳ್ಳವರಿಗೆ ಪರಲೋಕ ಭವನವೇ ಅತಿಶ್ರೇಷ್ಠವಾಗಿದೆ. ಆದರೂ ನೀವು ಅರ್ಥಮಾಡಿಕೊಳ್ಳುವುದಿಲ್ಲವೇ?