caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 21

ಮಕ್ಕಾ · ಅವತರಣ ಕ್ರಮ 53 · 12:21

وَقَالَ ٱلَّذِى ٱشْتَرَىٰهُ مِن مِّصْرَ لِٱمْرَأَتِهِۦٓ أَكْرِمِى مَثْوَىٰهُ عَسَىٰٓ أَن يَنفَعَنَآ أَوْ نَتَّخِذَهُۥ وَلَدًا وَكَذَٰلِكَ مَكَّنَّا لِيُوسُفَ فِى ٱلْأَرْضِ وَلِنُعَلِّمَهُۥ مِن تَأْوِيلِ ٱلْأَحَادِيثِ وَٱللَّهُ غَالِبٌ عَلَىٰٓ أَمْرِهِۦ وَلَٰكِنَّ أَكْثَرَ ٱلنَّاسِ لَا يَعْلَمُونَ

Kannada Translation - Hamza Buturಈಜಿಪ್ಟಿನಲ್ಲಿ ಅವರನ್ನು ಖರೀದಿಸಿದ ವ್ಯಕ್ತಿ[1] ತನ್ನ ಪತ್ನಿಯೊಂದಿಗೆ ಹೇಳಿದನು: “ಇವನೊಡನೆ ಗೌರವದಿಂದ ವರ್ತಿಸು. ಇವನಿಂದ ನಮಗೆ ಉಪಕಾರವಾಗಬಹುದು ಅಥವಾ ನಮಗೆ ಇವನನ್ನು ಮಗನಾಗಿ ಸ್ವೀಕರಿಸಿಕೊಳ್ಳಬಹುದು.” ಈ ರೀತಿ ನಾವು ಯೂಸುಫರಿಗೆ (ಈಜಿಪ್ಟಿನ) ಭೂಮಿಯಲ್ಲಿ ನೆಲೆಯನ್ನು ಮಾಡಿಕೊಟ್ಟೆವು. ಅವರಿಗೆ ಕನಸುಗಳ ವ್ಯಾಖ್ಯಾನವನ್ನು ಕಲಿಸಿಕೊಡುವುದಕ್ಕಾಗಿ. ಅಲ್ಲಾಹು ತನ್ನ ಎಲ್ಲಾ ವ್ಯವಹಾರಗಳಲ್ಲಿ ಅಜೇಯನಾಗಿದ್ದಾನೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70