قَالَ لَا يَأْتِيكُمَا طَعَامٌ تُرْزَقَانِهِۦٓ إِلَّا نَبَّأْتُكُمَا بِتَأْوِيلِهِۦ قَبْلَ أَن يَأْتِيَكُمَا ذَٰلِكُمَا مِمَّا عَلَّمَنِى رَبِّىٓ إِنِّى تَرَكْتُ مِلَّةَ قَوْمٍ لَّا يُؤْمِنُونَ بِٱللَّهِ وَهُم بِٱلْـَٔاخِرَةِ هُمْ كَٰفِرُونَ
Kannada Translation - Hamza Buturಯೂಸುಫ್ ಹೇಳಿದರು: “ನಿಮಗೆ ಒದಗಿಸಲಾಗುವ ಆಹಾರವು ನಿಮ್ಮ ಬಳಿಗೆ ಬರುವ ಮೊದಲೇ ನಾನು ಅದರ (ಕನಸಿನ) ವ್ಯಾಖ್ಯಾನವನ್ನು ನಿಮಗೆ ತಿಳಿಸಿಕೊಡುವೆನು. ನಾನು ಹೇಳುವ ವ್ಯಾಖ್ಯಾನವು ನನ್ನ ಪರಿಪಾಲಕನು (ಅಲ್ಲಾಹು) ನನಗೆ ಕಲಿಸಿಕೊಟ್ಟ ವಿಷಯಗಳಲ್ಲಿ ಸೇರಿದ್ದಾಗಿದೆ. ಅಲ್ಲಾಹನಲ್ಲಿ ವಿಶ್ವಾಸವಿಡದ ಮತ್ತು ಪರಲೋಕವನ್ನು ನಿಷೇಧಿಸುವ ಜನರ ಮಾರ್ಗವನ್ನು ನಿಶ್ಚಯವಾಗಿಯೂ ನಾನು ತೊರೆದಿದ್ದೇನೆ.