قَالَ مَا خَطْبُكُنَّ إِذْ رَٰوَدتُّنَّ يُوسُفَ عَن نَّفْسِهِۦ قُلْنَ حَٰشَ لِلَّهِ مَا عَلِمْنَا عَلَيْهِ مِن سُوٓءٍ قَالَتِ ٱمْرَأَتُ ٱلْعَزِيزِ ٱلْـَٰٔنَ حَصْحَصَ ٱلْحَقُّ أَنَا۠ رَٰوَدتُّهُۥ عَن نَّفْسِهِۦ وَإِنَّهُۥ لَمِنَ ٱلصَّٰدِقِينَ
Kannada Translation - Hamza Buturಅರಸ ಕೇಳಿದನು: “ನೀವು ಯೂಸುಫರನ್ನು ಪುಸಲಾಯಿಸಿದ ಆ ಘಟನೆಯ ನಿಜಸ್ಥಿತಿಯೇನು?” ಆ ಮಹಿಳೆಯರು ಹೇಳಿದರು: “ಅಲ್ಲಾಹು ಕಾಪಾಡಲಿ! ಯೂಸುಫರಲ್ಲಿ ಏನಾದರೂ ದುರ್ನಡತೆಯಿರುವುದು ನಮ್ಮ ಗಮನಕ್ಕೆ ಬಂದಿಲ್ಲ.” ಅಝೀಝನ ಹೆಂಡತಿ ಹೇಳಿದಳು: “ಈಗ ಸತ್ಯವು ಬೆಳಕಿಗೆ ಬಂದಿದೆ. ನಾನೇ ಅವರನ್ನು ಪುಸಲಾಯಿಸಿದ್ದೆ. ಅವರು ನಿಜವಾಗಿಯೂ ಸತ್ಯವಂತರಾಗಿದ್ದಾರೆ.