ಮುಖಪುಟ › ಸೂರಗಳು › ಸೂರ Al-Hijr
ಸೂರ Al-Hijr الحجر
99 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 54
بِسْمِ ٱللَّهِ ٱلرَّحْمَٰنِ ٱلرَّحِيمِ الٓر تِلْكَ ءَايَٰتُ ٱلْكِتَٰبِ وَقُرْءَانٍ مُّبِينٍ
Kannada Translation - Hamza Butur ಅಲಿಫ್ ಲಾಮ್ ರಾ. ಇವು ದೈವಿಕ ಗ್ರಂಥದ ವಚನಗಳು ಮತ್ತು ಸ್ಪಷ್ಟ ಕುರ್‌ಆನ್ ಆಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
رُّبَمَا يَوَدُّ ٱلَّذِينَ كَفَرُوا۟ لَوْ كَانُوا۟ مُسْلِمِينَ
Kannada Translation - Hamza Butur ”ನಾವು ಮುಸಲ್ಮಾನರಾಗಿದ್ದರೆ!” ಎಂದು ಕೆಲವೊಮ್ಮೆ ಸತ್ಯನಿಷೇಧಿಗಳು ಹಾರೈಸುವರು.[1]
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ذَرْهُمْ يَأْكُلُوا۟ وَيَتَمَتَّعُوا۟ وَيُلْهِهِمُ ٱلْأَمَلُ فَسَوْفَ يَعْلَمُونَ
Kannada Translation - Hamza Butur ಅವರನ್ನು ಬಿಟ್ಟುಬಿಡಿ. ಅವರು ತಿನ್ನುತ್ತಲೂ, ಆನಂದಿಸುತ್ತಲೂ, ಹುಸಿ ಭರವಸೆಗಳಲ್ಲಿ ತಲ್ಲೀನರಾಗುತ್ತಲೂ ಇರಲಿ. ಸದ್ಯವೇ ಅವರು ತಿಳಿಯುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمَآ أَهْلَكْنَا مِن قَرْيَةٍ إِلَّا وَلَهَا كِتَابٌ مَّعْلُومٌ
Kannada Translation - Hamza Butur ನಾವು ಯಾವುದೇ ಊರನ್ನು ಅದಕ್ಕೆ ಒಂದು ನಿಗದಿತ ಅವಧಿಯನ್ನು ನೀಡದೆ ನಾಶ ಮಾಡಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مَّا تَسْبِقُ مِنْ أُمَّةٍ أَجَلَهَا وَمَا يَسْتَـْٔخِرُونَ
Kannada Translation - Hamza Butur ಯಾವುದೇ ಜನತೆ ತಮ್ಮ ನಿಗದಿತ ಅವಧಿಯನ್ನು ದಾಟಿಹೋಗುವುದಿಲ್ಲ, ಹಿಂದೆ ಉಳಿಯುವುದೂ ಇಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَقَالُوا۟ يَٰٓأَيُّهَا ٱلَّذِى نُزِّلَ عَلَيْهِ ٱلذِّكْرُ إِنَّكَ لَمَجْنُونٌ
Kannada Translation - Hamza Butur ಸತ್ಯನಿಷೇಧಿಗಳು ಹೇಳಿದರು: “ಓ ದೇವವಾಣಿ ಅವತೀರ್ಣವಾಗುವವನೇ! ನಿಜಕ್ಕೂ ನೀನೊಬ್ಬ ಮಾನಸಿಕ ಅಸ್ವಸ್ಥ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَّوْ مَا تَأْتِينَا بِٱلْمَلَٰٓئِكَةِ إِن كُنتَ مِنَ ٱلصَّٰدِقِينَ
Kannada Translation - Hamza Butur ನೀನು ಸತ್ಯವಂತನಾಗಿದ್ದರೆ ನೀನೇಕೆ ನಮ್ಮ ಬಳಿಗೆ ದೇವದೂತರುಗಳನ್ನು ತರುವುದಿಲ್ಲ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مَا نُنَزِّلُ ٱلْمَلَٰٓئِكَةَ إِلَّا بِٱلْحَقِّ وَمَا كَانُوٓا۟ إِذًا مُّنظَرِينَ
Kannada Translation - Hamza Butur ನಾವು ದೇವದೂತರುಗಳನ್ನು ಸತ್ಯ ಸಮೇತವಾಗಿಯೇ ಇಳಿಸುತ್ತೇವೆ.[1] ಆಗ ಅವರಿಗೆ ಯಾವುದೇ ಕಾಲಾವಕಾಶ ನೀಡಲಾಗಿರುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّا نَحْنُ نَزَّلْنَا ٱلذِّكْرَ وَإِنَّا لَهُۥ لَحَٰفِظُونَ
Kannada Translation - Hamza Butur ಈ ಕುರ್‌ಆನನ್ನು ಅವತೀರ್ಣಗೊಳಿಸಿದ್ದು ನಾವೇ. ನಾವೇ ಇದನ್ನು ಸಂರಕ್ಷಿಸುತ್ತೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ أَرْسَلْنَا مِن قَبْلِكَ فِى شِيَعِ ٱلْأَوَّلِينَ
Kannada Translation - Hamza Butur ನಿಮಗಿಂತ ಮೊದಲು ನಾವು ಹಿಂದಿನ ಕಾಲದ ಜನರ ಅನೇಕ ಪಂಗಡಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمَا يَأْتِيهِم مِّن رَّسُولٍ إِلَّا كَانُوا۟ بِهِۦ يَسْتَهْزِءُونَ
Kannada Translation - Hamza Butur ಯಾವುದೇ ಸಂದೇಶವಾಹಕರು ಅವರ ಬಳಿಗೆ ಬಂದಾಗಲೆಲ್ಲಾ ಅವರು ತಮಾಷೆ ಮಾಡಿ ನಗುತ್ತಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَذَٰلِكَ نَسْلُكُهُۥ فِى قُلُوبِ ٱلْمُجْرِمِينَ
Kannada Translation - Hamza Butur ಅಪರಾಧಿಗಳ ಹೃದಯಗಳಲ್ಲಿ ನಾವು ಈ ರೀತಿ ಅದನ್ನು (ತಮಾಷೆ ಮಾಡುವುದನ್ನು) ತೂರಿಸಿ ಬಿಡುತ್ತೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَا يُؤْمِنُونَ بِهِۦ وَقَدْ خَلَتْ سُنَّةُ ٱلْأَوَّلِينَ
Kannada Translation - Hamza Butur ಅವರು ಅದರಲ್ಲಿ ವಿಶ್ವಾಸವಿಡುವುದಿಲ್ಲ. ಹಿಂದಿನ ಕಾಲದ ಜನರ ಮೇಲಿನ ಶಿಕ್ಷಾಕ್ರಮವು ಈಗಾಗಲೇ ಜರುಗಿ ಬಿಟ್ಟಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَوْ فَتَحْنَا عَلَيْهِم بَابًا مِّنَ ٱلسَّمَآءِ فَظَلُّوا۟ فِيهِ يَعْرُجُونَ
Kannada Translation - Hamza Butur ನಾವು ಅವರ ಮೇಲೆ ಆಕಾಶದ ದ್ವಾರವನ್ನು ತೆರೆದುಕೊಟ್ಟು ಅವರು ಅದಕ್ಕೆ ಏರಿಹೋದರೂ ಸಹ,
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَقَالُوٓا۟ إِنَّمَا سُكِّرَتْ أَبْصَٰرُنَا بَلْ نَحْنُ قَوْمٌ مَّسْحُورُونَ
Kannada Translation - Hamza Butur ಅವರು ಹೇಳುವರು: “ನಮ್ಮನ್ನು ಮಂತ್ರಮುಗ್ಧಗೊಳಿಸಲಾಗಿದೆ. ಅಲ್ಲ, ನಮಗೆ ಮಾಟ ಮಾಡಲಾಗಿದೆ.”[1]
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ جَعَلْنَا فِى ٱلسَّمَآءِ بُرُوجًا وَزَيَّنَّٰهَا لِلنَّٰظِرِينَ
Kannada Translation - Hamza Butur ನಾವು ಆಕಾಶದಲ್ಲಿ ನಕ್ಷತ್ರ ಪುಂಜಗಳನ್ನು ಮಾಡಿದ್ದೇವೆ ಮತ್ತು ನೋಡುಗರಿಗಾಗಿ ಅವುಗಳನ್ನು ಅಲಂಕರಿಸಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَحَفِظْنَٰهَا مِن كُلِّ شَيْطَٰنٍ رَّجِيمٍ
Kannada Translation - Hamza Butur ಮತ್ತು ಅದನ್ನು (ಆಕಾಶವನ್ನು) ಎಲ್ಲಾ ಬಹಿಷ್ಕೃತ ಶೈತಾನರಿಂದ ಸಂರಕ್ಷಿಸಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا مَنِ ٱسْتَرَقَ ٱلسَّمْعَ فَأَتْبَعَهُۥ شِهَابٌ مُّبِينٌ
Kannada Translation - Hamza Butur ಯಾರಾದರೂ ಕದ್ದಾಲಿಸಲು ಪ್ರಯತ್ನಿಸಿದರೆ, ಅಗ್ನಿಜ್ವಾಲೆಯು ಅವನನ್ನು ಹಿಂಬಾಲಿಸುತ್ತದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱلْأَرْضَ مَدَدْنَٰهَا وَأَلْقَيْنَا فِيهَا رَوَٰسِىَ وَأَنۢبَتْنَا فِيهَا مِن كُلِّ شَىْءٍ مَّوْزُونٍ
Kannada Translation - Hamza Butur ನಾವು ಭೂಮಿಯನ್ನು ವಿಸ್ತರಿಸಿದೆವು ಮತ್ತು ಅದರಲ್ಲಿ ಪರ್ವತಗಳನ್ನು ಹಾಕಿದೆವು. ಅದರಲ್ಲಿ ನಾವು ಎಲ್ಲವನ್ನೂ ಒಂದು ನಿಗದಿತ ಪ್ರಮಾಣದಲ್ಲಿ ಬೆಳೆಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَجَعَلْنَا لَكُمْ فِيهَا مَعَٰيِشَ وَمَن لَّسْتُمْ لَهُۥ بِرَٰزِقِينَ
Kannada Translation - Hamza Butur ಅದರಲ್ಲಿ ನಾವು ನಿಮಗೆ ಮತ್ತು ನೀವು ಆಹಾರ ನೀಡದವರಿಗೆ[1] ಜೀವನ ಮಾರ್ಗಗಳನ್ನು ಮಾಡಿಕೊಟ್ಟೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِن مِّن شَىْءٍ إِلَّا عِندَنَا خَزَآئِنُهُۥ وَمَا نُنَزِّلُهُۥٓ إِلَّا بِقَدَرٍ مَّعْلُومٍ
Kannada Translation - Hamza Butur ಯಾವುದೇ ವಸ್ತುವಾದರೂ ಅದರ ಬೊಕ್ಕಸಗಳು ನಮ್ಮ ಬಳಿಯಲ್ಲೇ ಇವೆ. ನಾವು ಪ್ರತಿಯೊಂದು ವಸ್ತುವನ್ನೂ ಅದರ ನಿಗದಿತ ಪ್ರಮಾಣಕ್ಕೆ ಅನುಗುಣವಾಗಿಯೇ ಇಳಿಸುತ್ತೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَرْسَلْنَا ٱلرِّيَٰحَ لَوَٰقِحَ فَأَنزَلْنَا مِنَ ٱلسَّمَآءِ مَآءً فَأَسْقَيْنَٰكُمُوهُ وَمَآ أَنتُمْ لَهُۥ بِخَٰزِنِينَ
Kannada Translation - Hamza Butur ನಾವು ಫಲವತ್ತಾಗಿಸುವ ಗಾಳಿಯನ್ನು ಕಳುಹಿಸುತ್ತೇವೆ. ನಂತರ ಆಕಾಶದಿಂದ ಮಳೆಯನ್ನು ಸುರಿಸಿ, ಅದನ್ನು ನಿಮಗೆ ಕುಡಿಯಲು ನೀಡುತ್ತೇವೆ. ನೀವು ಅದನ್ನು ಸಂಗ್ರಹಿಸಿಡುವವರಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّا لَنَحْنُ نُحْىِۦ وَنُمِيتُ وَنَحْنُ ٱلْوَٰرِثُونَ
Kannada Translation - Hamza Butur ನಿಶ್ಚಯವಾಗಿಯೂ ನಾವೇ ಜೀವನ ಮತ್ತು ಮರಣವನ್ನು ನೀಡುವವರು. ನಾವೇ (ಎಲ್ಲಾ ವಸ್ತುಗಳ) ಉತ್ತರಾಧಿಕಾರಿಗಳು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ عَلِمْنَا ٱلْمُسْتَقْدِمِينَ مِنكُمْ وَلَقَدْ عَلِمْنَا ٱلْمُسْتَـْٔخِرِينَ
Kannada Translation - Hamza Butur ನಿಮ್ಮಲ್ಲಿ ಇದಕ್ಕೆ ಮೊದಲು ತೀರಿ ಹೋದವರು ಯಾರೆಂದು ನಮಗೆ ತಿಳಿದಿದೆ. ಮುಂದೆ ಬರಲಿರುವವರು ಯಾರೆಂದೂ ನಮಗೆ ತಿಳಿದಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّ رَبَّكَ هُوَ يَحْشُرُهُمْ إِنَّهُۥ حَكِيمٌ عَلِيمٌ
Kannada Translation - Hamza Butur ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅವರೆಲ್ಲರನ್ನು ಒಟ್ಟು ಸೇರಿಸುವನು. ನಿಶ್ಚಯವಾಗಿಯೂ ಅವನು ವಿವೇಕಪೂರ್ಣನು ಮತ್ತು ಸರ್ವಜ್ಞನಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ خَلَقْنَا ٱلْإِنسَٰنَ مِن صَلْصَٰلٍ مِّنْ حَمَإٍ مَّسْنُونٍ
Kannada Translation - Hamza Butur ನಾವು ಮನುಷ್ಯನನ್ನು ಕಪ್ಪು, (ತಟ್ಟಿದರೆ) ಸದ್ದು ಮಾಡುವ, ಬದಲಾದ ಒಣ ಜೇಡಿಮಣ್ಣಿನಿಂದ ಸೃಷ್ಟಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱلْجَآنَّ خَلَقْنَٰهُ مِن قَبْلُ مِن نَّارِ ٱلسَّمُومِ
Kannada Translation - Hamza Butur ನಾವು ಜಿನ್ನ್‌ಗಳನ್ನು ಇದಕ್ಕಿಂತ ಮೊದಲು ತೀಕ್ಷ್ಣ ತಾಪವಿರುವ ಬೆಂಕಿಯಿಂದ ಸೃಷ್ಟಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِذْ قَالَ رَبُّكَ لِلْمَلَٰٓئِكَةِ إِنِّى خَٰلِقٌۢ بَشَرًا مِّن صَلْصَٰلٍ مِّنْ حَمَإٍ مَّسْنُونٍ
Kannada Translation - Hamza Butur ತಮ್ಮ ಪರಿಪಾಲಕನು (ಅಲ್ಲಾಹು) ದೇವದೂತರುಗಳೊಡನೆ ಹೇಳಿದ ಸಂದರ್ಭ: “ನಾನು ಕಪ್ಪು, (ತಟ್ಟಿದರೆ) ಸದ್ದು ಮಾಡುವ, ಬದಲಾದ ಒಣ ಜೇಡಿಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸುತ್ತೇನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَإِذَا سَوَّيْتُهُۥ وَنَفَخْتُ فِيهِ مِن رُّوحِى فَقَعُوا۟ لَهُۥ سَٰجِدِينَ
Kannada Translation - Hamza Butur ನಾನು ಅವನಿಗೆ ಪೂರ್ಣ ರೂಪವನ್ನು ನೀಡಿ ಅವನಿಗೆ ನನ್ನ ಆತ್ಮವನ್ನು ಊದಿದರೆ, ನೀವೆಲ್ಲರೂ ಅವನಿಗೆ ಸಾಷ್ಟಾಂಗ ಮಾಡುತ್ತಾ ಬೀಳಿರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَسَجَدَ ٱلْمَلَٰٓئِكَةُ كُلُّهُمْ أَجْمَعُونَ
Kannada Translation - Hamza Butur ಆಗ ದೇವದೂತರುಗಳೆಲ್ಲರೂ ಒಟ್ಟಾಗಿ ಸಾಷ್ಟಾಂಗ ಮಾಡಿದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّآ إِبْلِيسَ أَبَىٰٓ أَن يَكُونَ مَعَ ٱلسَّٰجِدِينَ
Kannada Translation - Hamza Butur ಇಬ್ಲೀಸನ ಹೊರತು. ಅವನು ಸಾಷ್ಟಾಂಗ ಮಾಡುವವರೊಡನೆ ಸೇರಲು ನಿರಾಕರಿಸಿದನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ يَٰٓإِبْلِيسُ مَا لَكَ أَلَّا تَكُونَ مَعَ ٱلسَّٰجِدِينَ
Kannada Translation - Hamza Butur ಅಲ್ಲಾಹು ಕೇಳಿದನು: “ಓ ಇಬ್ಲೀಸ್! ನೀನು ಸಾಷ್ಟಾಂಗ ಮಾಡುವವರೊಡನೆ ಸೇರದಿರಲು ಕಾರಣವೇನು?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ لَمْ أَكُن لِّأَسْجُدَ لِبَشَرٍ خَلَقْتَهُۥ مِن صَلْصَٰلٍ مِّنْ حَمَإٍ مَّسْنُونٍ
Kannada Translation - Hamza Butur ಅವನು ಹೇಳಿದನು: “ನೀನು ಕಪ್ಪು, (ತಟ್ಟಿದರೆ) ಸದ್ದು ಮಾಡುವ, ಬದಲಾದ ಒಣ ಜೇಡಿಮಣ್ಣಿನಿಂದ ಸೃಷ್ಟಿಸಿದ ಈ ಮಾನವನಿಗೆ ನಾನು ಸಾಷ್ಟಾಂಗ ಮಾಡಬೇಕಾದವನಲ್ಲ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ فَٱخْرُجْ مِنْهَا فَإِنَّكَ رَجِيمٌ
Kannada Translation - Hamza Butur ಅಲ್ಲಾಹು ಹೇಳಿದನು: “ಇಲ್ಲಿಂದ ಹೊರಟುಹೋಗು. ನಿಜಕ್ಕೂ ನೀನು ಬಹಿಷ್ಕೃತನಾಗಿರುವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّ عَلَيْكَ ٱللَّعْنَةَ إِلَىٰ يَوْمِ ٱلدِّينِ
Kannada Translation - Hamza Butur ಪ್ರತಿಫಲದ ದಿನದ ತನಕ ನಿನ್ನ ಮೇಲೆ ಶಾಪವಿದೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ رَبِّ فَأَنظِرْنِىٓ إِلَىٰ يَوْمِ يُبْعَثُونَ
Kannada Translation - Hamza Butur ಅವನು ಹೇಳಿದನು: “ಓ ನನ್ನ ಪರಿಪಾಲಕನೇ! ಅವರನ್ನು ಜೀವಂತ ಎಬ್ಬಿಸಲಾಗುವ ದಿನದ ತನಕ ನನಗೆ ಕಾಲಾವಕಾಶ ನೀಡು.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ فَإِنَّكَ مِنَ ٱلْمُنظَرِينَ
Kannada Translation - Hamza Butur ಅಲ್ಲಾಹು ಹೇಳಿದನು: “ಸರಿ. ನಿನ್ನನ್ನು ಕಾಲಾವಕಾಶ ನೀಡಲಾದವರಲ್ಲಿ ಸೇರಿಸಿದ್ದೇನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَىٰ يَوْمِ ٱلْوَقْتِ ٱلْمَعْلُومِ
Kannada Translation - Hamza Butur ಆ ನಿಗದಿತ ಸಮಯದ ದಿನದ ತನಕ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ رَبِّ بِمَآ أَغْوَيْتَنِى لَأُزَيِّنَنَّ لَهُمْ فِى ٱلْأَرْضِ وَلَأُغْوِيَنَّهُمْ أَجْمَعِينَ
Kannada Translation - Hamza Butur ಅವನು ಹೇಳಿದನು: “ಓ ನನ್ನ ಪರಿಪಾಲಕನೇ! ನೀನು ನನ್ನನ್ನು ದಾರಿತಪ್ಪಿಸಿದ ಕಾರಣ, ಭೂಮಿಯಲ್ಲಿ ನಾನು ಅವರೆಲ್ಲರಿಗೂ ಪಾಪಗಳನ್ನು ಅಂದವಾಗಿ ತೋರಿಸಿಕೊಡುವೆನು ಮತ್ತು ಅವರೆಲ್ಲರನ್ನೂ ದಾರಿತಪ್ಪಿಸುವೆನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا عِبَادَكَ مِنْهُمُ ٱلْمُخْلَصِينَ
Kannada Translation - Hamza Butur ಅವರಲ್ಲಿರುವ ನಿನ್ನ ನಿಷ್ಕಳಂಕ ದಾಸರ ಹೊರತು.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ هَٰذَا صِرَٰطٌ عَلَىَّ مُسْتَقِيمٌ
Kannada Translation - Hamza Butur ಅಲ್ಲಾಹು ಹೇಳಿದನು: “ಇದು ನನ್ನ ಬಳಿಗೆ ತಲುಪುವ ನೇರ ಮಾರ್ಗವಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ عِبَادِى لَيْسَ لَكَ عَلَيْهِمْ سُلْطَٰنٌ إِلَّا مَنِ ٱتَّبَعَكَ مِنَ ٱلْغَاوِينَ
Kannada Translation - Hamza Butur ನಿಶ್ಚಯವಾಗಿಯೂ, ನನ್ನ ದಾಸರ ಮೇಲೆ ನಿನಗೆ ಯಾವುದೇ ಅಧಿಕಾರವಿಲ್ಲ. ಅವರಲ್ಲಿ ನಿನ್ನನ್ನು ಹಿಂಬಾಲಿಸಿದ ದುರ್ಮಾರ್ಗಿಗಳ ಹೊರತು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّ جَهَنَّمَ لَمَوْعِدُهُمْ أَجْمَعِينَ
Kannada Translation - Hamza Butur ನಿಶ್ಚಯವಾಗಿಯೂ, ನರಕಾಗ್ನಿಯು ಅವರೆಲ್ಲರಿಗೂ ವಾಗ್ದಾನ ಮಾಡಲಾದ ಸ್ಥಳವಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَهَا سَبْعَةُ أَبْوَٰبٍ لِّكُلِّ بَابٍ مِّنْهُمْ جُزْءٌ مَّقْسُومٌ
Kannada Translation - Hamza Butur ಅದಕ್ಕೆ ಏಳು ದ್ವಾರಗಳಿವೆ. ಪ್ರತಿಯೊಂದು ದ್ವಾರಕ್ಕೂ ಅವರಲ್ಲಿರುವ ಒಂದು ವಿಭಾಗವನ್ನು ವಿಂಗಡಿಸಿಡಲಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ ٱلْمُتَّقِينَ فِى جَنَّٰتٍ وَعُيُونٍ
Kannada Translation - Hamza Butur ನಿಶ್ಚಯವಾಗಿಯೂ, ದೇವಭಯವುಳ್ಳವರು ಉದ್ಯಾನಗಳಲ್ಲಿ ಮತ್ತು ಚಿಲುಮೆಗಳಲ್ಲಿರುತ್ತಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ٱدْخُلُوهَا بِسَلَٰمٍ ءَامِنِينَ
Kannada Translation - Hamza Butur (ಅವರೊಡನೆ ಹೇಳಲಾಗುವುದು): “ನಿರ್ಭಯ ಮತ್ತು ಶಾಂತಿಯಿಂದ ಅದರೊಳಗೆ ಪ್ರವೇಶಿಸಿರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَنَزَعْنَا مَا فِى صُدُورِهِم مِّنْ غِلٍّ إِخْوَٰنًا عَلَىٰ سُرُرٍ مُّتَقَٰبِلِينَ
Kannada Translation - Hamza Butur ಅವರ ಹೃದಯಗಳಲ್ಲಿ ಯಾವುದೇ ರೀತಿಯ ದ್ವೇಷವಿದ್ದರೆ ನಾವು ಅದನ್ನು ತೊಲಗಿಸುವೆವು. ಅವರು ಸಹೋದರರಂತೆ ಪರಸ್ಪರ ಮುಖಾಮುಖಿಯಾಗಿ ಸಿಂಹಾಸನಗಳಲ್ಲಿ ಕುಳಿತಿರುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَا يَمَسُّهُمْ فِيهَا نَصَبٌ وَمَا هُم مِّنْهَا بِمُخْرَجِينَ
Kannada Translation - Hamza Butur ಅಲ್ಲಿ ಅವರಿಗೆ ಯಾವುದೇ ರೀತಿಯ ಆಯಾಸ ಉಂಟಾಗುವುದಿಲ್ಲ. ಅವರನ್ನು ಅಲ್ಲಿಂದ ಹೊರದಬ್ಬಲಾಗುವುದೂ ಇಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
نَبِّئْ عِبَادِىٓ أَنِّىٓ أَنَا ٱلْغَفُورُ ٱلرَّحِيمُ
Kannada Translation - Hamza Butur ನನ್ನ ದಾಸರಿಗೆ, ನಾನು ಅತ್ಯಂತ ಕ್ಷಮಿಸುವವನು ಮತ್ತು ಅತ್ಯಧಿಕ ದಯೆ ತೋರುವವನೆಂದು ತಿಳಿಸಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَنَّ عَذَابِى هُوَ ٱلْعَذَابُ ٱلْأَلِيمُ
Kannada Translation - Hamza Butur ನನ್ನ ಶಿಕ್ಷೆಯು ಅತ್ಯಧಿಕ ನೋವಿನಿಂದ ಕೂಡಿದ ಶಿಕ್ಷೆಯಾಗಿದೆಯೆಂದೂ ತಿಳಿಸಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَنَبِّئْهُمْ عَن ضَيْفِ إِبْرَٰهِيمَ
Kannada Translation - Hamza Butur ಇಬ್ರಾಹೀಮರ ಅತಿಥಿಗಳ ಬಗ್ಗೆ ಅವರಿಗೆ ತಿಳಿಸಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِذْ دَخَلُوا۟ عَلَيْهِ فَقَالُوا۟ سَلَٰمًا قَالَ إِنَّا مِنكُمْ وَجِلُونَ
Kannada Translation - Hamza Butur ಅವರು ಇಬ್ರಾಹೀಮರ ಬಳಿಗೆ ಬಂದು “ಸಲಾಮ್” ಎಂದು ಹೇಳಿದ ಸಂದರ್ಭ. ಇಬ್ರಾಹೀಮ್ ಹೇಳಿದರು: “ನಿಜಕ್ಕೂ ನಮಗೆ ನಿಮ್ಮ ಬಗ್ಗೆ ಭಯವಾಗುತ್ತಿದೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالُوا۟ لَا تَوْجَلْ إِنَّا نُبَشِّرُكَ بِغُلَٰمٍ عَلِيمٍ
Kannada Translation - Hamza Butur ಅವರು ಉತ್ತರಿಸಿದರು: “ಭಯಪಡಬೇಡಿ! ನಾವು ನಿಮಗೆ ಒಬ್ಬ ಜ್ಞಾನವಂತ ಪುತ್ರನ ಜನನದ ಶುಭ ಸುದ್ದಿಯನ್ನು ತಿಳಿಸುತ್ತೇವೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ أَبَشَّرْتُمُونِى عَلَىٰٓ أَن مَّسَّنِىَ ٱلْكِبَرُ فَبِمَ تُبَشِّرُونَ
Kannada Translation - Hamza Butur ಇಬ್ರಾಹೀಮ್ ಕೇಳಿದರು: “ನಾನು ಇಳಿ ವಯಸ್ಸನ್ನು ತಲುಪಿದ ಬಳಿಕ ನೀವು ನನಗೆ ಶುಭ ಸುದ್ದಿ ತಿಳಿಸುತ್ತಿದ್ದೀರಾ? ನೀವು ಎಂತಹ ಶುಭ ಸುದ್ದಿ ತಿಳಿಸುತ್ತೀರಿ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالُوا۟ بَشَّرْنَٰكَ بِٱلْحَقِّ فَلَا تَكُن مِّنَ ٱلْقَٰنِطِينَ
Kannada Translation - Hamza Butur ಅವರು ಹೇಳಿದರು: “ನಾವು ನಿಮಗೆ ಸತ್ಯವಾದ ಒಂದು ಶುಭ ಸುದ್ದಿಯನ್ನು ತಿಳಿಸುತ್ತಿದ್ದೇವೆ. ಆದ್ದರಿಂದ ನೀವು ನಿರಾಶರಾದವರಲ್ಲಿ ಸೇರಬೇಡಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ وَمَن يَقْنَطُ مِن رَّحْمَةِ رَبِّهِۦٓ إِلَّا ٱلضَّآلُّونَ
Kannada Translation - Hamza Butur ಇಬ್ರಾಹೀಮ್ ಹೇಳಿದರು: “ತನ್ನ ಪರಿಪಾಲಕನ (ಅಲ್ಲಾಹನ) ಕರುಣೆಯ ಬಗ್ಗೆ ದಾರಿತಪ್ಪಿದವರ ಹೊರತು ಇನ್ನಾರು ನಿರಾಶರಾಗುತ್ತಾರೆ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ فَمَا خَطْبُكُمْ أَيُّهَا ٱلْمُرْسَلُونَ
Kannada Translation - Hamza Butur ಇಬ್ರಾಹೀಮ್ ಕೇಳಿದರು: “ಓ ದೂತರೇ! ಇಲ್ಲಿ ನಿಮಗೇನು ಕೆಲಸವಿದೆಯೆಂದು ಬಂದಿದ್ದೀರಿ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالُوٓا۟ إِنَّآ أُرْسِلْنَآ إِلَىٰ قَوْمٍ مُّجْرِمِينَ
Kannada Translation - Hamza Butur ಅವರು ಉತ್ತರಿಸಿದರು: “ನಮ್ಮನ್ನು ಅಪರಾಧಿಗಳಾದ ಜನರ ಬಳಿಗೆ ಕಳುಹಿಸಲಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّآ ءَالَ لُوطٍ إِنَّا لَمُنَجُّوهُمْ أَجْمَعِينَ
Kannada Translation - Hamza Butur ಆದರೆ ಲೂತ್‍ರ ಕುಟುಂಬವು ಇದರಿಂದ ಹೊರತಾಗಿದೆ. ನಾವು ಅವರೆಲ್ಲರನ್ನೂ ಖಂಡಿತ ರಕ್ಷಿಸುವೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا ٱمْرَأَتَهُۥ قَدَّرْنَآ إِنَّهَا لَمِنَ ٱلْغَٰبِرِينَ
Kannada Translation - Hamza Butur ಆದರೆ ಅವರ ಹೆಂಡತಿಯ ಹೊರತು.” ನಾವು ಅವಳನ್ನು ಬಾಕಿಯಾಗುವವರಲ್ಲಿ (ಶಿಕ್ಷೆಗೆ ಗುರಿಯಾಗುವವರಲ್ಲಿ) ನಿರ್ಣಯಿಸಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَلَمَّا جَآءَ ءَالَ لُوطٍ ٱلْمُرْسَلُونَ
Kannada Translation - Hamza Butur ನಂತರ ಆ ದೂತರು ಲೂತರ ಕುಟುಂಬದವರ ಬಳಿಗೆ ಬಂದಾಗ,
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ إِنَّكُمْ قَوْمٌ مُّنكَرُونَ
Kannada Translation - Hamza Butur ಲೂತ್ ಹೇಳಿದರು: “ನಿಜಕ್ಕೂ ನೀವು ಅಪರಿಚಿತ ಜನರಂತೆ ಕಾಣುತ್ತೀರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالُوا۟ بَلْ جِئْنَٰكَ بِمَا كَانُوا۟ فِيهِ يَمْتَرُونَ
Kannada Translation - Hamza Butur ಅವರು ಉತ್ತರಿಸಿದರು: “ಅಲ್ಲ, ವಾಸ್ತವವಾಗಿ ಈ ಜನರು ಯಾವುದರ ಬಗ್ಗೆ ಸಂಶಯಪಡುತ್ತಿದ್ದಾರೋ ಅದನ್ನೇ ನಾವು ತಂದಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَتَيْنَٰكَ بِٱلْحَقِّ وَإِنَّا لَصَٰدِقُونَ
Kannada Translation - Hamza Butur ನಾವು ನಿಮ್ಮ ಬಳಿಗೆ ಸತ್ಯದೊಂದಿಗೆ ಬಂದಿದ್ದೇವೆ. ನಿಶ್ಚಯವಾಗಿಯೂ ನಾವು ಸತ್ಯವಂತರಾಗಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَسْرِ بِأَهْلِكَ بِقِطْعٍ مِّنَ ٱلَّيْلِ وَٱتَّبِعْ أَدْبَٰرَهُمْ وَلَا يَلْتَفِتْ مِنكُمْ أَحَدٌ وَٱمْضُوا۟ حَيْثُ تُؤْمَرُونَ
Kannada Translation - Hamza Butur ಆದ್ದರಿಂದ ರಾತ್ರಿಯ ಒಂದು ಭಾಗದಲ್ಲಿ ನೀವು ತಮ್ಮ ಕುಟುಂಬ ಸಮೇತ ಇಲ್ಲಿಂದ ಹೊರಡಿ. ನೀವು ಅವರನ್ನು (ಕುಟುಂಬವನ್ನು) ಹಿಂದಿನಿಂದ ಹಿಂಬಾಲಿಸಿರಿ. ನಿಮ್ಮಲ್ಲಿ ಯಾರೂ ಹಿಂದಿರುಗಿ ನೋಡದಿರಲಿ. ನಿಮಗೆ ಆದೇಶಿಸಲಾಗುವ ಕಡೆಗೆ ಸಾಗಿರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَقَضَيْنَآ إِلَيْهِ ذَٰلِكَ ٱلْأَمْرَ أَنَّ دَابِرَ هَٰٓؤُلَآءِ مَقْطُوعٌ مُّصْبِحِينَ
Kannada Translation - Hamza Butur ನಾವು ಲೂತರಿಗೆ ಆ ವಿಷಯದ ತೀರ್ಮಾನವನ್ನು ತಿಳಿಸಿದೆವು—ಅದೇನೆಂದರೆ, ಬೆಳಗಾಗುತ್ತಿದ್ದಂತೆ ಇವರ ಬುಡವನ್ನೇ ಕತ್ತರಿಸಿ ಬಿಡಲಾಗುವುದೆಂದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَجَآءَ أَهْلُ ٱلْمَدِينَةِ يَسْتَبْشِرُونَ
Kannada Translation - Hamza Butur ನಗರ ವಾಸಿಗಳು ಕೇಕೆ ಹಾಕುತ್ತಾ ಬಂದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ إِنَّ هَٰٓؤُلَآءِ ضَيْفِى فَلَا تَفْضَحُونِ
Kannada Translation - Hamza Butur ಲೂತ್ ಹೇಳಿದರು: “ಇವರು ನನ್ನ ಅತಿಥಿಗಳು! ದಯವಿಟ್ಟು ನನಗೆ ಅವಮಾನ ಮಾಡಬೇಡಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱتَّقُوا۟ ٱللَّهَ وَلَا تُخْزُونِ
Kannada Translation - Hamza Butur ಅಲ್ಲಾಹನನ್ನು ಭಯಪಡಿರಿ. ನನ್ನನ್ನು ತಮಾಷೆ ಮಾಡಬೇಡಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالُوٓا۟ أَوَلَمْ نَنْهَكَ عَنِ ٱلْعَٰلَمِينَ
Kannada Translation - Hamza Butur ಅವರು ಹೇಳಿದರು: “ಜಗತ್ತಿನಲ್ಲಿರುವವರ ವಿಷಯದಲ್ಲಿ (ಹಸ್ತಕ್ಷೇಪ ಮಾಡಬಾರದೆಂದು) ನಾವು ನಿನ್ನನ್ನು ತಡೆದಿಲ್ಲವೇ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ هَٰٓؤُلَآءِ بَنَاتِىٓ إِن كُنتُمْ فَٰعِلِينَ
Kannada Translation - Hamza Butur ಲೂತ್ ಹೇಳಿದರು: “ನಿಮಗೆ ಅದನ್ನು ಮಾಡಲೇಬೇಕೆಂದಿದ್ದರೆ ಇಲ್ಲಿ ನನ್ನ ಹೆಣ್ಣುಮಕ್ಕಳಿದ್ದಾರೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَعَمْرُكَ إِنَّهُمْ لَفِى سَكْرَتِهِمْ يَعْمَهُونَ
Kannada Translation - Hamza Butur (ಪ್ರವಾದಿಯವರೇ) ನಿಮ್ಮ ಆಯುಷ್ಯದ ಮೇಲಾಣೆ! ಅವರು ಕಾಮೋನ್ಮಾದದಿಂದ ಅಂಧರಾಗಿ ಅಲೆಯುತ್ತಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَخَذَتْهُمُ ٱلصَّيْحَةُ مُشْرِقِينَ
Kannada Translation - Hamza Butur ಸೂರ್ಯೋದಯವಾಗುತ್ತಿದ್ದಂತೆ ಆ ಮಹಾ ಚೀತ್ಕಾರವು ಅವರನ್ನು ಹಿಡಿದುಬಿಟ್ಟಿತು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَجَعَلْنَا عَٰلِيَهَا سَافِلَهَا وَأَمْطَرْنَا عَلَيْهِمْ حِجَارَةً مِّن سِجِّيلٍ
Kannada Translation - Hamza Butur ನಂತರ ನಾವು ಆ ಊರನ್ನು ಬುಡಮೇಲು ಮಾಡಿದೆವು ಮತ್ತು ಅವರ ಮೇಲೆ ಕಲ್ಲುಗಳ ಮಳೆಯನ್ನು ಸುರಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ فِى ذَٰلِكَ لَـَٔايَٰتٍ لِّلْمُتَوَسِّمِينَ
Kannada Translation - Hamza Butur ನಿಶ್ಚಯವಾಗಿಯೂ ಅಂತರ್ದೃಷ್ಟಿಯುಳ್ಳವರಿಗೆ ಅದರಲ್ಲಿ ಅನೇಕ ದೃಷ್ಟಾಂತಗಳಿವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّهَا لَبِسَبِيلٍ مُّقِيمٍ
Kannada Translation - Hamza Butur ನಿಶ್ಚಯವಾಗಿಯೂ ಆ ಊರು ಸಮಾನಾಂತರದಲ್ಲಿ ಚಲಿಸುವ (ಚಿರಪರಿಚಿತ) ರಸ್ತೆಯಲ್ಲಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ فِى ذَٰلِكَ لَـَٔايَةً لِّلْمُؤْمِنِينَ
Kannada Translation - Hamza Butur ನಿಶ್ಚಯವಾಗಿಯೂ ಅದರಲ್ಲಿ ಸತ್ಯವಿಶ್ವಾಸಿಗಳಿಗೆ ದೃಷ್ಟಾಂತವಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِن كَانَ أَصْحَٰبُ ٱلْأَيْكَةِ لَظَٰلِمِينَ
Kannada Translation - Hamza Butur ಐಕತ್‌ನ ಜನರು (ಮದ್ಯನ್ ದೇಶದವರು) ಅಕ್ರಮಿಗಳಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱنتَقَمْنَا مِنْهُمْ وَإِنَّهُمَا لَبِإِمَامٍ مُّبِينٍ
Kannada Translation - Hamza Butur ಆದ್ದರಿಂದ, ನಾವು ಅವರಿಂದ ಪ್ರತೀಕಾರ ಪಡೆದೆವು. ಈ ಎರಡು ಊರುಗಳೂ[1] ಬಯಲು ರಸ್ತೆಯಲ್ಲಿವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ كَذَّبَ أَصْحَٰبُ ٱلْحِجْرِ ٱلْمُرْسَلِينَ
Kannada Translation - Hamza Butur ಹಿಜ್ರ್ ನಿವಾಸಿಗಳು (ಸಮೂದ್ ಗೋತ್ರದವರು) ಸಂದೇಶವಾಹಕರುಗಳನ್ನು ನಿಷೇಧಿಸಿದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَءَاتَيْنَٰهُمْ ءَايَٰتِنَا فَكَانُوا۟ عَنْهَا مُعْرِضِينَ
Kannada Translation - Hamza Butur ನಾವು ಅವರಿಗೆ ನಮ್ಮ ದೃಷ್ಟಾಂತಗಳನ್ನು ನೀಡಿದ್ದೆವು. ಆದರೆ ಅವರು ಅವುಗಳನ್ನು ಲೆಕ್ಕಿಸದೆ ವಿಮುಖರಾದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَكَانُوا۟ يَنْحِتُونَ مِنَ ٱلْجِبَالِ بُيُوتًا ءَامِنِينَ
Kannada Translation - Hamza Butur ಅವರು ನಿರ್ಭೀತವಾಗಿ ಪರ್ವತಗಳನ್ನು ಕೊರೆದು ಮನೆಗಳನ್ನು ನಿರ್ಮಿಸುತ್ತಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَخَذَتْهُمُ ٱلصَّيْحَةُ مُصْبِحِينَ
Kannada Translation - Hamza Butur ಆಗ ಬೆಳಗ್ಗಿನ ವೇಳೆ ಆ ಮಹಾ ಚೀತ್ಕಾರವು ಅವರನ್ನು ಹಿಡಿದುಬಿಟ್ಟಿತು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَمَآ أَغْنَىٰ عَنْهُم مَّا كَانُوا۟ يَكْسِبُونَ
Kannada Translation - Hamza Butur ಅವರ ಯಾವುದೇ ಕರ್ಮಗಳು ಅವರಿಗೆ ಉಪಕಾರ ಮಾಡಲಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمَا خَلَقْنَا ٱلسَّمَٰوَٰتِ وَٱلْأَرْضَ وَمَا بَيْنَهُمَآ إِلَّا بِٱلْحَقِّ وَإِنَّ ٱلسَّاعَةَ لَـَٔاتِيَةٌ فَٱصْفَحِ ٱلصَّفْحَ ٱلْجَمِيلَ
Kannada Translation - Hamza Butur ನಾವು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ವಸ್ತುಗಳನ್ನು ಸತ್ಯದೊಂದಿಗೇ ಸೃಷ್ಟಿಸಿದ್ದೇವೆ. ಅಂತ್ಯಸಮಯವು ಖಂಡಿತ ಬಂದೇ ಬರುತ್ತದೆ. ಆದ್ದರಿಂದ ನೀವು ಅತಿಸುಂದರವಾದ ರೀತಿಯಲ್ಲಿ ಕ್ಷಮಿಸಿಬಿಡಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ رَبَّكَ هُوَ ٱلْخَلَّٰقُ ٱلْعَلِيمُ
Kannada Translation - Hamza Butur ನಿಶ್ಚಯವಾಗಿಯೂ, ನಿಮ್ಮ ಪರಿಪಾಲಕನು (ಅಲ್ಲಾಹು) ಸೃಷ್ಟಿಕರ್ತನು ಮತ್ತು ಸರ್ವಜ್ಞನಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ ءَاتَيْنَٰكَ سَبْعًا مِّنَ ٱلْمَثَانِى وَٱلْقُرْءَانَ ٱلْعَظِيمَ
Kannada Translation - Hamza Butur ನಾವು ನಿಮಗೆ ಪುನರಾವರ್ತಿಸಿ ಪಠಿಸಲಾಗುವ ಏಳು ವಚನಗಳನ್ನು[1] ಮತ್ತು ಶ್ರೇಷ್ಠ ಕುರ್‌ಆನನ್ನು ನೀಡಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَا تَمُدَّنَّ عَيْنَيْكَ إِلَىٰ مَا مَتَّعْنَا بِهِۦٓ أَزْوَٰجًا مِّنْهُمْ وَلَا تَحْزَنْ عَلَيْهِمْ وَٱخْفِضْ جَنَاحَكَ لِلْمُؤْمِنِينَ
Kannada Translation - Hamza Butur ಅವರಲ್ಲಿರುವ ಪಂಗಡಗಳಿಗೆ ನಾವು ಏನೇನು ಸವಲತ್ತುಗಳನ್ನು ಒದಗಿಸಿದ್ದೇವೆಯೋ ಅದರ ಕಡೆಗೆ ನೀವು ನಿಮ್ಮ ದೃಷ್ಟಿಯನ್ನು ಹರಿಸಬೇಡಿ. ಅವರ ವಿಷಯದಲ್ಲಿ ಬೇಸರಪಡಬೇಡಿ. ಸತ್ಯವಿಶ್ವಾಸಿಗಳಿಗೆ ನಿಮ್ಮ ರೆಕ್ಕೆಗಳನ್ನು ತಗ್ಗಿಸಿಕೊಡಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَقُلْ إِنِّىٓ أَنَا ٱلنَّذِيرُ ٱلْمُبِينُ
Kannada Translation - Hamza Butur ಹೇಳಿರಿ: “ನಿಶ್ಚಯವಾಗಿಯೂ ನಾನೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರನಾಗಿದ್ದೇನೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَمَآ أَنزَلْنَا عَلَى ٱلْمُقْتَسِمِينَ
Kannada Translation - Hamza Butur ವಿಂಗಡನೆ ಮಾಡಿದವರ ಮೇಲೆ ನಾವು (ಶಿಕ್ಷೆಯನ್ನು) ಇಳಿಸಿದಂತೆ,
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ٱلَّذِينَ جَعَلُوا۟ ٱلْقُرْءَانَ عِضِينَ
Kannada Translation - Hamza Butur ಅಂದರೆ ಕುರ್‌ಆನನ್ನು ವಿವಿಧ ಭಾಗಗಳನ್ನಾಗಿ ಮಾಡಿದವರ ಮೇಲೆ.[1]
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَوَرَبِّكَ لَنَسْـَٔلَنَّهُمْ أَجْمَعِينَ
Kannada Translation - Hamza Butur ನಿಮ್ಮ ಪರಿಪಾಲಕನ (ಅಲ್ಲಾಹನ) ಮೇಲಾಣೆ! ನಾವು ಅವರಲ್ಲಿ ಎಲ್ಲರನ್ನೂ ಖಂಡಿತ ವಿಚಾರಣೆ ಮಾಡುವೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
عَمَّا كَانُوا۟ يَعْمَلُونَ
Kannada Translation - Hamza Butur ಅವರು ಮಾಡುತ್ತಿದ್ದ ಕರ್ಮಗಳ ಬಗ್ಗೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱصْدَعْ بِمَا تُؤْمَرُ وَأَعْرِضْ عَنِ ٱلْمُشْرِكِينَ
Kannada Translation - Hamza Butur ಆದ್ದರಿಂದ ನಿಮಗೆ ಆಜ್ಞಾಪಿಸಲಾಗುವುದನ್ನು ಬಹಿರಂಗವಾಗಿ ಘೋಷಿಸಿರಿ ಮತ್ತು ಬಹುದೇವಾರಾಧಕರಿಂದ ವಿಮುಖರಾಗಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّا كَفَيْنَٰكَ ٱلْمُسْتَهْزِءِينَ
Kannada Translation - Hamza Butur ನಿಮ್ಮನ್ನು ತಮಾಷೆ ಮಾಡುವವರನ್ನು ನೋಡಿಕೊಳ್ಳಲು ನಿಮಗೆ ನಾವು ಸಾಕು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ٱلَّذِينَ يَجْعَلُونَ مَعَ ٱللَّهِ إِلَٰهًا ءَاخَرَ فَسَوْفَ يَعْلَمُونَ
Kannada Translation - Hamza Butur ಅವರು ಯಾರೆಂದರೆ, ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ಸ್ಥಾಪಿಸುವವರು. ಅವರು ಸದ್ಯವೇ ತಿಳಿದುಕೊಳ್ಳುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ نَعْلَمُ أَنَّكَ يَضِيقُ صَدْرُكَ بِمَا يَقُولُونَ
Kannada Translation - Hamza Butur (ಪ್ರವಾದಿಯವರೇ) ಅವರು ಹೇಳುವ ಮಾತುಗಳಿಂದ ನಿಮ್ಮ ಹೃದಯವು ಇಕ್ಕಟ್ಟು ಅನುಭವಿಸುತ್ತಿದೆಯೆಂದು ನಮಗೆ ತಿಳಿದಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَسَبِّحْ بِحَمْدِ رَبِّكَ وَكُن مِّنَ ٱلسَّٰجِدِينَ
Kannada Translation - Hamza Butur ಆದ್ದರಿಂದ ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ ಮತ್ತು ಸಾಷ್ಟಾಂಗ ಮಾಡುವವರಲ್ಲಿ ಸೇರಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱعْبُدْ رَبَّكَ حَتَّىٰ يَأْتِيَكَ ٱلْيَقِينُ
Kannada Translation - Hamza Butur ಮರಣವು ಬರುವ ತನಕ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
← ಸೂರ Ibrahim
ಸೂರ An-Nahl →
Looking for a topic? Try the meaning search — your question is scanned across all 6,236 verses.
→
Arabic text and translations via Tanzil and QuranEnc — verbatim, unmodified · Translations belong to their translators and are not the Qur'an itself
ಇದು ಸಂಶೋಧನಾ ಸಹಾಯಕ; ಧಾರ್ಮಿಕ ತೀರ್ಪಿನ ಮೂಲವಲ್ಲ.