Kannada Translation - Hamza Buturಅವರು (ದೇವಭಯವುಳ್ಳವರು) ಯಾರೆಂದರೆ, ಅದೃಶ್ಯ ವಿಷಯಗಳಲ್ಲಿ[1] ವಿಶ್ವಾಸವಿಡುವವರು, ನಮಾಝ್ ಸಂಸ್ಥಾಪಿಸುವವರು ಮತ್ತು ನಾವು ಅವರಿಗೆ ಒದಗಿಸಿದ (ಧನದಿಂದ) ಖರ್ಚು ಮಾಡುವವರು.
Kannada Translation - Hamza Buturನಿಮಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ನಿಮಗಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ಅವರು ವಿಶ್ವಾಸವಿಡುತ್ತಾರೆ. ಪರಲೋಕದಲ್ಲಿ ಅವರು ದೃಢವಾಗಿ ವಿಶ್ವಾಸವಿಡುತ್ತಾರೆ.
Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳು ಯಾರೋ—ಅವರಿಗೆ ನೀವು ಎಚ್ಚರಿಕೆ ನೀಡಿದರೂ, ನೀಡದಿದ್ದರೂ ಅವರಿಗೆ ಅದು ಸಮಾನವಾಗಿದೆ; ಅವರು ವಿಶ್ವಾಸವಿಡುವುದಿಲ್ಲ.
Kannada Translation - Hamza Butur“ನಾವು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಟ್ಟಿದ್ದೇವೆ” ಎಂದು ಹೇಳುವ ಕೆಲವು ಜನರಿದ್ದಾರೆ. ಆದರೆ ವಾಸ್ತವವಾಗಿ ಅವರು ಸತ್ಯವಿಶ್ವಾಸಿಗಳಲ್ಲ.
Kannada Translation - Hamza Buturಅವರು (ತಮ್ಮ ಡಾಂಭಿಕತೆಯ ಮೂಲಕ) ಅಲ್ಲಾಹನನ್ನು ಮತ್ತು ಸತ್ಯವಿಶ್ವಾಸಿಗಳನ್ನು ಮೋಸಗೊಳಿಸಬಹುದೆಂದು (ಭಾವಿಸುತ್ತಾರೆ). ಆದರೆ, ವಾಸ್ತವವಾಗಿ ಅವರು ಅವರನ್ನೇ ಮೋಸಗೊಳಿಸುತ್ತಿದ್ದಾರೆ. ಆದರೆ, ಅವರು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ.
Kannada Translation - Hamza Buturಅವರ ಹೃದಯಗಳಲ್ಲಿ ರೋಗವಿದೆ. ಅಲ್ಲಾಹು ಅವರಿಗೆ ಆ ರೋಗವನ್ನು ಇನ್ನಷ್ಟು ಉಲ್ಬಣಗೊಳಿಸಿದ್ದಾನೆ.[1] ಅವರು (ನಿರಂತರ) ಸುಳ್ಳು ಹೇಳುವ ಕಾರಣ ಅವರಿಗೆ ಯಾತನಾಮಯ ಶಿಕ್ಷೆಯೂ ಇದೆ.
Kannada Translation - Hamza Butur“ಸಹಾಬಿಗಳು (ಪ್ರವಾದಿಯ ಸಂಗಡಿಗರು) ವಿಶ್ವಾಸವಿಟ್ಟಂತೆ ನೀವೂ ವಿಶ್ವಾಸವಿಡಿ” ಎಂದು ಅವರೊಡನೆ ಹೇಳಲಾದರೆ, ಅವರು ಕೇಳುತ್ತಾರೆ: “ಆ ಅವಿವೇಕಿಗಳು ವಿಶ್ವಾಸವಿಟ್ಟಂತೆ ನಾವು ವಿಶ್ವಾಸವಿಡಬೇಕೇ?” ತಿಳಿಯಿರಿ! ನಿಶ್ಚಯವಾಗಿಯೂ ಅವರೇ ಅವಿವೇಕಿಗಳು. ಆದರೆ ಅವರು ಅದನ್ನು ತಿಳಿಯುವುದಿಲ್ಲ.
Kannada Translation - Hamza Buturಸತ್ಯವಿಶ್ವಾಸಿಗಳನ್ನು ಭೇಟಿಯಾದಾಗ ಅವರು ಹೇಳುತ್ತಾರೆ: “ನಾವು ವಿಶ್ವಾಸವಿಟ್ಟಿದ್ದೇವೆ.” ಆದರೆ, ಅವರು ತಮ್ಮ ಶೈತಾನರ (ಮುಖಂಡರ) ಬಳಿ ಒಂಟಿಯಾಗಿರುವಾಗ ಹೇಳುತ್ತಾರೆ: “ನಿಜವಾಗಿಯೂ ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ. ನಾವು ಕೇವಲ ತಮಾಷೆ ಮಾಡುತ್ತಿದ್ದೆವು.”
Kannada Translation - Hamza Buturಅವರ ಉದಾಹರಣೆಯು ಬೆಂಕಿಯುರಿಸಿದ ಒಬ್ಬ ವ್ಯಕ್ತಿಯಂತೆ. ಅದು ಅವನ ಪರಿಸರವನ್ನು ಬೆಳಗಿದಾಗ, ಅಲ್ಲಾಹು ಅವರ ಬೆಳಕನ್ನು ನಿವಾರಿಸಿ ಏನೂ ಕಾಣದಂತಹ ಅಂಧಕಾರದಲ್ಲಿ ಅವರನ್ನು ಬಿಟ್ಟುಬಿಟ್ಟನು.
Kannada Translation - Hamza Buturಅಥವಾ (ಅವರ ಉದಾಹರಣೆಯು) ಆಕಾಶದಿಂದ ಸುರಿಯುವ ಜಡಿಮಳೆಯಂತೆ; ಅದರಲ್ಲಿ ಅಂಧಕಾರಗಳು, ಸಿಡಿಲು ಮತ್ತು ಮಿಂಚುಗಳಿವೆ. ಸಿಡಿಲಿನ ಆರ್ಭಟದಿಂದ ಸಾವಿಗೆ ಹೆದರಿ ಅವರು ತಮ್ಮ ಬೆರಳುಗಳನ್ನು ಕಿವಿಗಳಲ್ಲಿಡುತ್ತಾರೆ. ಅಲ್ಲಾಹು ಸತ್ಯನಿಷೇಧಿಗಳನ್ನು ಸುತ್ತುವರಿದಿದ್ದಾನೆ.
Kannada Translation - Hamza Buturಮಿಂಚು ಇನ್ನೇನು ಅವರ ದೃಷ್ಟಿಗಳನ್ನು ಕಸಿಯುವುದರಲ್ಲಿದೆ. ಅದು ಅವರಿಗೆ ಬೆಳಕು ನೀಡಿದಾಗಲೆಲ್ಲಾ ಅವರು ಅದರಲ್ಲಿ ನಡೆಯುತ್ತಾರೆ. ಕತ್ತಲೆ ಆವರಿಸಿದಾಗ ಅವರು ನಿಂತುಬಿಡುತ್ತಾರೆ. ಅಲ್ಲಾಹು ಇಚ್ಛಿಸಿದರೆ ಅವರ ಶ್ರವಣ ಮತ್ತು ದೃಷ್ಟಿಯನ್ನು ತೆಗೆದುಬಿಡುತ್ತಿದ್ದನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನು.
Kannada Translation - Hamza Buturಓ ಮನುಷ್ಯರೇ! ನಿಮ್ಮನ್ನು ಮತ್ತು ನಿಮ್ಮ ಪೂರ್ವಜರನ್ನು ಸೃಷ್ಟಿಸಿದ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಿರಿ. ನೀವು ದೇವಭಯವುಳ್ಳವರಾಗುವುದಕ್ಕಾಗಿ.
Kannada Translation - Hamza Butur(ಅವನು ಯಾರೆಂದರೆ) ನಿಮಗೋಸ್ಕರ ಭೂಮಿಯನ್ನು ಹಾಸನ್ನಾಗಿ ಮತ್ತು ಆಕಾಶವನ್ನು ಛಾವಣಿಯನ್ನಾಗಿ ಮಾಡಿಕೊಟ್ಟವನು. ಆಕಾಶದಿಂದ ಮಳೆಯನ್ನು ಸುರಿಸಿ ಅದರಿಂದ ನಿಮ್ಮ ಆಹಾರಕ್ಕಾಗಿ ಹಣ್ಣು-ಹಂಪಲುಗಳನ್ನು ಉತ್ಪಾದಿಸಿಕೊಟ್ಟವನು. ಆದ್ದರಿಂದ, ಇವೆಲ್ಲವನ್ನೂ ತಿಳಿದೂ ಸಹ ನೀವು ಅಲ್ಲಾಹನಿಗೆ ಸರಿಸಾಟಿಗಳನ್ನು ನಿಶ್ಚಯಿಸಬೇಡಿ.
Kannada Translation - Hamza Buturನಾವು ನಮ್ಮ ದಾಸನಿಗೆ ಅವತೀರ್ಣಗೊಳಿಸಿದ (ಕುರ್‌ಆನ್) ಬಗ್ಗೆ ನಿಮಗೇನಾದರೂ ಸಂದೇಹವಿದ್ದರೆ, ಅದರಂತಿರುವ ಒಂದು ಸೂರವನ್ನು (ಅಧ್ಯಾಯವನ್ನು) ರಚಿಸಿ ತನ್ನಿರಿ; ಅಲ್ಲಾಹನ ಹೊರತು ನಿಮ್ಮ ಎಲ್ಲಾ ಸಹಾಯಕರನ್ನು ಕರೆಯಿರಿ; ನೀವು ಸತ್ಯವಂತರಾಗಿದ್ದರೆ.
Kannada Translation - Hamza Buturನಿಮಗೆ ಅದನ್ನು ಮಾಡಲು ಸಾಧ್ಯವಾಗದಿದ್ದರೆ—ಅದನ್ನು ಮಾಡಲು ನಿಮಗೆ ಎಂದಿಗೂ ಸಾಧ್ಯವಾಗುವುದಿಲ್ಲ. ಆದ್ದರಿಂದ ನೀವು ಆ ನರಕವನ್ನು ಭಯಪಡಿರಿ; ಅದರ ಇಂಧನವು ಮನುಷ್ಯರು ಮತ್ತು ಕಲ್ಲುಗಳಾಗಿದ್ದಾರೆ. ಅದನ್ನು ಸತ್ಯನಿಷೇಧಿಗಳಿಗಾಗಿ ಸಿದ್ಧಗೊಳಿಸಲಾಗಿದೆ.
Kannada Translation - Hamza Buturಸತ್ಯವಿಶ್ವಾಸಿಗಳು ಹಾಗೂ ಸತ್ಕರ್ಮವೆಸಗಿದವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿವೆಯೆಂಬ ಸುವಾರ್ತೆಯನ್ನು ತಿಳಿಸಿರಿ. ಅವರಿಗೆ ಅದರ ಒಂದೊಂದು ಹಣ್ಣನ್ನು ಆಹಾರವಾಗಿ ನೀಡಲಾಗುವಾಗಲೆಲ್ಲಾ ಅವರು ಹೇಳುವರು: “ಇದು ನಮಗೆ ಮುಂಚೆ ನೀಡಲಾದದ್ದೇ ಅಲ್ಲವೇ!” ವಾಸ್ತವವಾಗಿ, ಅವರಿಗೆ ಅದನ್ನು ಹೋಲಿಕೆಯಿರುವ ರೂಪದಲ್ಲಿ ನೀಡಲಾಗಿದೆ.[1] ಅವರಿಗೆ ಅಲ್ಲಿ ಪರಿಶುದ್ಧ ಸಂಗಾತಿಗಳಿದ್ದಾರೆ; ಅವರು ಅಲ್ಲಿ ಶಾಶ್ವತವಾಗಿ ವಾಸಿಸುವರು.
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಒಂದು ಸೊಳ್ಳೆಯನ್ನು ಅಥವಾ ಅದಕ್ಕಿಂತ ಕೀಳಾದುದನ್ನು ಉದಾಹರಣೆಯಾಗಿ ತೋರಿಸಲು ಸಂಕೋಚಪಡುವುದಿಲ್ಲ. ಸತ್ಯವಿಶ್ವಾಸಿಗಳು ಅದು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವೆಂದು ತಿಳಿಯುತ್ತಾರೆ. ಆದರೆ, ಸತ್ಯನಿಷೇಧಿಗಳು ಕೇಳುತ್ತಾರೆ: “ಈ ಹೋಲಿಕೆಯಿಂದ ಅಲ್ಲಾಹು ಉದ್ದೇಶಿಸುವುದೇನು?” ಇದರ ಮೂಲಕ ಅಲ್ಲಾಹು ಅನೇಕ ಜನರನ್ನು ದಾರಿತಪ್ಪಿಸುತ್ತಾನೆ ಮತ್ತು ಅನೇಕ ಜನರಿಗೆ ಸನ್ಮಾರ್ಗವನ್ನು ತೋರಿಸುತ್ತಾನೆ. ಅವನು ಇದರ ಮೂಲಕ ದುಷ್ಕರ್ಮಿಗಳನ್ನಲ್ಲದೆ ಇನ್ನಾರನ್ನೂ ದಾರಿತಪ್ಪಿಸುವುದಿಲ್ಲ.
Kannada Translation - Hamza Buturಅವರು (ದುಷ್ಕರ್ಮಿಗಳು) ಯಾರೆಂದರೆ, ಅಲ್ಲಾಹನ ಕರಾರನ್ನು—ಅದು ಸದೃಢವಾದ ಬಳಿಕವೂ—ಮುರಿಯುವವರು, ಅಲ್ಲಾಹು ಜೋಡಿಸಲು ಆದೇಶಿಸಿದ್ದನ್ನು ಕಡಿಯುವವರು, ಮತ್ತು ಭೂಮಿಯಲ್ಲಿ ಕಿಡಿಗೇಡಿತನ ಮಾಡುವವರು. ಅವರೇ ನಷ್ಟ ಹೊಂದಿದವರು.
Kannada Translation - Hamza Buturನೀವು ಅಲ್ಲಾಹನನ್ನು ಹೇಗೆ ನಿಷೇಧಿಸುತ್ತೀರಿ? ವಾಸ್ತವವಾಗಿ, ನೀವು ನಿರ್ಜೀವಿಗಳಾಗಿದ್ದಿರಿ ಮತ್ತು ಅವನು ನಿಮಗೆ ಜೀವವನ್ನು ನೀಡಿದನು; ನಂತರ ಅವನು ನಿಮಗೆ ಸಾವನ್ನು ನೀಡುತ್ತಾನೆ. ನಂತರ ಅವನು ನಿಮಗೆ (ಪುನಃ) ಜೀವವನ್ನು ನೀಡುತ್ತಾನೆ. ನಂತರ ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುತ್ತದೆ.
Kannada Translation - Hamza Buturಭೂಮಿಯಲ್ಲಿರುವ ಎಲ್ಲಾ ವಸ್ತುಗಳನ್ನೂ ನಿಮಗಾಗಿ ಸೃಷ್ಟಿಸಿದವನು ಅವನೇ. ನಂತರ ಅವನು ಆಕಾಶಕ್ಕೇರಿ, ಅದನ್ನು ಏಳಾಕಾಶಗಳಾಗಿ ಸರಿಪಡಿಸಿದನು. ಅವನು ಎಲ್ಲಾ ವಿಷಯಗಳನ್ನೂ ತಿಳಿದವನಾಗಿದ್ದಾನೆ.
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ದೇವದೂತರೊಡನೆ, “ನಾನು ಭೂಮಿಯಲ್ಲಿ ಒಬ್ಬ ಉತ್ತರಾಧಿಕಾರಿಯನ್ನು[1] (ಮನುಷ್ಯನನ್ನು) ಮಾಡುತ್ತೇನೆ” ಎಂದು ಹೇಳಿದ ಸಂದರ್ಭ. ಅವರು ಕೇಳಿದರು: “ಅಲ್ಲಿ ಕಿಡಿಗೇಡಿತನ ಮಾಡುವವನನ್ನು ಮತ್ತು ರಕ್ತ ಹರಿಸುವವನನ್ನು ಮಾಡುವೆಯಾ? ನಾವಂತೂ ನಿನ್ನನ್ನು ಸ್ತುತಿಸುತ್ತಾ ನಿನ್ನ ಪರಿಶುದ್ಧಿಯನ್ನು ಕೊಂಡಾಡುತ್ತೇವೆ ಮತ್ತು ನಿನ್ನ ಪವಿತ್ರತೆಯನ್ನು ಹೊಗಳುತ್ತೇವೆ.” ಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ, ನಿಮಗೆ ತಿಳಿಯದೇ ಇರುವುದು ನನಗೆ ತಿಳಿದಿದೆ.”
Kannada Translation - Hamza Buturಅಲ್ಲಾಹು ಆದಮರಿಗೆ ಎಲ್ಲಾ ಹೆಸರುಗಳನ್ನು ಕಲಿಸಿದನು. ನಂತರ ಅವುಗಳನ್ನು ದೇವದೂತರುಗಳಿಗೆ ತೋರಿಸಿ ಹೇಳಿದನು: “ನೀವು ಸತ್ಯವಂತರಾಗಿದ್ದರೆ ಇವುಗಳ ಹೆಸರುಗಳನ್ನು ಹೇಳಿರಿ.”
Kannada Translation - Hamza Buturಅವರು ಹೇಳಿದರು: “ನಿನ್ನ ಪರಿಶುದ್ಧಿಯನ್ನು ನಾವು ಕೊಂಡಾಡುತ್ತೇವೆ. ನೀನು ನಮಗೆ ಕಲಿಸಿಕೊಟ್ಟದ್ದರ ಹೊರತು ಬೇರೇನೂ ನಮಗೆ ತಿಳಿದಿಲ್ಲ; ನಿಶ್ಚಯವಾಗಿಯೂ ನೀನು ಸರ್ವಜ್ಞನು ಮತ್ತು ವಿವೇಕವಂತನಾಗಿರುವೆ.”
Kannada Translation - Hamza Buturಅಲ್ಲಾಹು ಹೇಳಿದನು: “ಓ ಆದಮರೇ! ಅವರಿಗೆ ಅವುಗಳ ಹೆಸರುಗಳನ್ನು ಹೇಳಿಕೊಡಿ.” ಆದಮ್ ಅವರಿಗೆ ಅವುಗಳ ಹೆಸರುಗಳನ್ನು ಹೇಳಿಕೊಟ್ಟಾಗ ಅಲ್ಲಾಹು ಹೇಳಿದನು: “ನಾನು ನಿಮಗೆ ಹೇಳಿರಲಿಲ್ಲವೇ? ನಿಶ್ಚಯವಾಗಿಯೂ, ಭೂಮ್ಯಾಕಾಶಗಳ ಅದೃಶ್ಯ ವಿಷಯಗಳನ್ನು ನಾನು ತಿಳಿದಿದ್ದೇನೆಂದು; ನೀವು ಬಹಿರಂಗಪಡಿಸುವುದನ್ನು ಹಾಗೂ ರಹಸ್ಯವಾಗಿಡುವುದನ್ನು ನಾನು ತಿಳಿದಿದ್ದೇನೆಂದು.”
Kannada Translation - Hamza Buturನಾವು ದೇವದೂತರೊಡನೆ ಹೇಳಿದ ಸಂದರ್ಭ: “ನೀವೆಲ್ಲರೂ ಆದಮರಿಗೆ ಸಾಷ್ಟಾಂಗ ಮಾಡಿರಿ.”[1] ಅವರು ಸಾಷ್ಟಾಂಗ ಮಾಡಿದರು; ಇಬ್ಲೀಸನ ಹೊರತು.[2] ಅವನು (ಸಾಷ್ಟಾಂಗ ಮಾಡಲು) ನಿರಾಕರಿಸಿದನು ಮತ್ತು ಅಹಂಕಾರ ತೋರಿದನು. ಅವನು ಸತ್ಯನಿಷೇಧಿಗಳಲ್ಲಿ ಸೇರಿದವನಾದನು.
Kannada Translation - Hamza Buturನಾವು ಹೇಳಿದೆವು: “ಓ ಆದಮರೇ! ನೀವು ಮತ್ತು ನಿಮ್ಮ ಪತ್ನಿ ಸ್ವರ್ಗದಲ್ಲಿ ವಾಸಿಸಿರಿ; ಅಲ್ಲಿ ನೀವು ಇಚ್ಛಿಸುವ ಎಲ್ಲಾ ಕಡೆಗಳಿಂದ ಯಥೇಷ್ಟವಾಗಿ ತಿನ್ನಿರಿ. ಆದರೆ ಈ ಮರದ ಹತ್ತಿರ ಹೋಗಬೇಡಿ. ಹಾಗೇನಾದರೂ ಹೋದರೆ ನೀವು ಅಕ್ರಮಿಗಳಲ್ಲಿ ಸೇರಿದವರಾಗುವಿರಿ.”
Kannada Translation - Hamza Buturಆದರೆ ಶೈತಾನನು ಅವರನ್ನು ತಪ್ಪುದಾರಿಗೆಳೆದು, ಅವರಿಬ್ಬರೂ ವಾಸವಾಗಿದ್ದಲ್ಲಿಂದ ಹೊರಹೋಗುವಂತೆ ಮಾಡಿದನು. ನಾವು ಹೇಳಿದೆವು: “ನೀವೆಲ್ಲರೂ ಇಳಿಯಿರಿ. ನೀವು ಪರಸ್ಪರ ವೈರಿಗಳಾಗಿದ್ದೀರಿ. ನಿಮಗೆ ಭೂಮಿಯಲ್ಲಿ ಒಂದು ಅವಧಿಯವರೆಗೆ ವಾಸಸ್ಥಳ ಹಾಗೂ ಜೀವನ ಸವಲತ್ತುಗಳಿವೆ.”
Kannada Translation - Hamza Buturಆದಮ್ ತಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಕೆಲವು ವಚನಗಳನ್ನು ಕಲಿತುಕೊಂಡರು.[1] ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.
Kannada Translation - Hamza Buturನಾವು ಹೇಳಿದೆವು: “ನೀವೆಲ್ಲರೂ ಇಲ್ಲಿಂದ ಇಳಿಯಿರಿ. ನನ್ನಿಂದ ನಿಮಗೆ ಮಾರ್ಗದರ್ಶನವು ಬರುವಾಗ, ಆ ನನ್ನ ಮಾರ್ಗದರ್ಶನವನ್ನು ಯಾರು ಅನುಸರಿಸುತ್ತಾರೋ ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.
Kannada Translation - Hamza Buturಓ ಇಸ್ರಾಯೇಲ್ ಮಕ್ಕಳೇ![1] ನಾನು ನಿಮಗೆ ಅನುಗ್ರಹಿಸಿದ ನನ್ನ ಅನುಗ್ರಹಗಳನ್ನು ಸ್ಮರಿಸಿರಿ ಮತ್ತು ನನ್ನ ಕರಾರನ್ನು ನೆರವೇರಿಸಿರಿ. ನಿಮ್ಮ ಕರಾರನ್ನು ನಾನೂ ನೆರವೇರಿಸುವೆನು. ನೀವು ನನ್ನನ್ನು ಮಾತ್ರ ಭಯಪಡಿರಿ.
Kannada Translation - Hamza Buturನಿಮ್ಮ ಬಳಿಯಿರುವ (ಗ್ರಂಥವನ್ನು) ದೃಢೀಕರಿಸುತ್ತಾ ನಾನು ಅವತೀರ್ಣಗೊಳಿಸಿದ (ಕುರ್‌ಆನ್‌ನಲ್ಲಿ) ವಿಶ್ವಾಸವಿಡಿ. ಅದನ್ನು ಮೊಟ್ಟಮೊದಲು ನಿಷೇಧಿಸುವವರು ನೀವಾಗಬೇಡಿ. ನನ್ನ ವಚನಗಳನ್ನು ಅಲ್ಪ ಬೆಲೆಗೆ ಮಾರಾಟ ಮಾಡಬೇಡಿ. ನನ್ನನ್ನು ಮಾತ್ರ ಭಯಪಡಿರಿ.
Kannada Translation - Hamza Buturಅವರು (ವಿನಮ್ರತೆಯುಳ್ಳವರು) ಯಾರೆಂದರೆ, ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಖಂಡಿತವಾಗಿಯೂ ಭೇಟಿಯಾಗಲಿದ್ದೇವೆ ಮತ್ತು ಅವನ ಬಳಿಗೇ ಮರಳಲಿದ್ದೇವೆ ಎಂದು ದೃಢವಾಗಿ ನಂಬುವವರು.
Kannada Translation - Hamza Buturಓ ಇಸ್ರಾಯೇಲ್ ಮಕ್ಕಳೇ! ನಾನು ನಿಮಗೆ ಅನುಗ್ರಹಿಸಿದ ನನ್ನ ಅನುಗ್ರಹವನ್ನು, ಮತ್ತು ನಾನು ನಿಮ್ಮನ್ನು ಸರ್ವಲೋಕದವರಿಗಿಂತ (ಎಲ್ಲಾ ಮನುಷ್ಯರಿಗಿಂತ) ಶ್ರೇಷ್ಠಗೊಳಿಸಿದ್ದನ್ನು ಸ್ಮರಿಸಿರಿ.
Kannada Translation - Hamza Buturಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗೆ ಯಾವುದೇ ಉಪಕಾರ ಮಾಡದ, ಅವನಿಂದ ಯಾವುದೇ ಶಿಫಾರಸು ಸ್ವೀಕರಿಸದ, ಅವನಿಂದ ಯಾವುದೇ ಪರಿಹಾರವನ್ನು ಪಡೆಯದ ಮತ್ತು ಅವರಿಗೆ ಯಾವುದೇ ಸಹಾಯವು ದೊರೆಯದ ಒಂದು ದಿನವನ್ನು (ಪುನರುತ್ಥಾನ ದಿನವನ್ನು) ಭಯಪಡಿರಿ.
Kannada Translation - Hamza Buturನಾವು ನಿಮ್ಮನ್ನು ಫರೋಹನ ಜನರಿಂದ ರಕ್ಷಿಸಿದ ಸಂದರ್ಭ(ವನ್ನು ಸ್ಮರಿಸಿ). ಅವರು ನಿಮಗೆ ಕಠೋರ ಹಿಂಸೆ ನೀಡುತ್ತಿದ್ದರು; ನಿಮ್ಮ ಗಂಡು ಮಕ್ಕಳ ಕತ್ತು ಕೊಯ್ಯುತ್ತಿದ್ದರು ಮತ್ತು ನಿಮ್ಮ ಹೆಣ್ಣು ಮಕ್ಕಳನ್ನು ಜೀವಂತ ಉಳಿಸುತ್ತಿದ್ದರು. ಅದರಲ್ಲಿ (ನಿಮ್ಮನ್ನು ರಕ್ಷಿಸಿದ್ದರಲ್ಲಿ) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಮಹಾ ಪರೀಕ್ಷೆಯಿತ್ತು.
Kannada Translation - Hamza Buturನಾವು ಮೂಸಾರಿಗೆ ನಲ್ವತ್ತು ರಾತ್ರಿಗಳನ್ನು ವಾಗ್ದಾನ ಮಾಡಿದ ಸಂದರ್ಭ. ನಂತರ, ಅವರ (ನಿರ್ಗಮನದ) ಬಳಿಕ ನೀವು ಕರುವನ್ನು ದೇವರಾಗಿ ಮಾಡಿಕೊಂಡಿರಿ ಮತ್ತು ಅಕ್ರಮಿಗಳಾಗಿ ಬಿಟ್ಟಿರಿ.[1]
Kannada Translation - Hamza Buturಮೂಸಾ ತಮ್ಮ ಜನರೊಡನೆ ಹೇಳಿದ ಸಂದರ್ಭ: “ನನ್ನ ಜನರೇ! ಕರುವನ್ನು ದೇವರಾಗಿ ಮಾಡಿಕೊಳ್ಳುವ ಮೂಲಕ ನಿಶ್ಚಯವಾಗಿಯೂ ನೀವು ನಿಮ್ಮ ಮೇಲೆಯೇ ಅಕ್ರಮವೆಸಗಿದ್ದೀರಿ. ಆದ್ದರಿಂದ, ನೀವು ಪಶ್ಚಾತ್ತಾಪಪಟ್ಟು ನಿಮ್ಮ ಸೃಷ್ಟಿಕರ್ತನ ಕಡೆಗೆ ಮರಳಿರಿ; ನಿಮ್ಮನ್ನು ನೀವೇ ಕೊಲ್ಲಿರಿ.[1] ನಿಮ್ಮ ಸೃಷ್ಟಿಕರ್ತನ ದೃಷ್ಟಿಯಲ್ಲಿ ಅದೇ ನಿಮಗೆ ಶ್ರೇಷ್ಠವಾಗಿದೆ.” ಆಗ ಅಲ್ಲಾಹು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.
Kannada Translation - Hamza Butur“ಓ ಮೂಸಾ! ಅಲ್ಲಾಹನನ್ನು ನೇರವಾಗಿ ನೋಡುವ ತನಕ ನಾವು ನಿಮ್ಮಲ್ಲಿ ವಿಶ್ವಾಸವಿಡುವುದೇ ಇಲ್ಲ” ಎಂದು ನೀವು ಹೇಳಿದ ಸಂದರ್ಭ(ವನ್ನು ಸ್ಮರಿಸಿ). ಆಗ ನೀವು ನೋಡುತ್ತಿದ್ದಂತೆಯೇ ಮಿಂಚು ನಿಮ್ಮ ಮೇಲೆರಗಿ ಬಿಟ್ಟಿತು.
Kannada Translation - Hamza Buturನಾವು ನಿಮಗೆ ಮೋಡದ ನೆರಳನ್ನು ನೀಡಿದೆವು ಮತ್ತು ಮನ್ನ ಹಾಗೂ ಸಲ್ವಾವನ್ನು ಇಳಿಸಿಕೊಟ್ಟೆವು.[1] (ನಾವು ಹೇಳಿದೆವು): “ನಾವು ನಿಮಗೆ ಒದಗಿಸಿದ ಶುದ್ಧ ವಸ್ತುಗಳಿಂದ ತಿನ್ನಿರಿ.” ಅವರು ನಮಗೆ ಅನ್ಯಾಯ ಮಾಡಲಿಲ್ಲ; ಬದಲಿಗೆ, ಅವರು ಅವರಿಗೇ ಅನ್ಯಾಯ ಮಾಡುತ್ತಿದ್ದರು.
Kannada Translation - Hamza Buturನಾವು ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಈ ಊರನ್ನು ಪ್ರವೇಶಿಸಿರಿ.[1] ಇಲ್ಲಿ ನೀವು ಇಚ್ಛಿಸುವ ಎಲ್ಲಾ ಕಡೆಗಳಿಂದ ಯಥೇಷ್ಟವಾಗಿ ತಿನ್ನಿರಿ. ಸಾಷ್ಟಾಂಗ ಮಾಡುತ್ತಾ[2] ದ್ವಾರವನ್ನು ಪ್ರವೇಶಿಸಿರಿ ಮತ್ತು ‘ಹಿತ್ತ’[3] ಎಂದು ಹೇಳಿರಿ. ನಾವು ನಿಮ್ಮ ಪಾಪಗಳನ್ನು ಕ್ಷಮಿಸುವೆವು ಮತ್ತು ಸತ್ಕರ್ಮವೆಸಗುವವರಿಗೆ ಪ್ರತಿಫಲವನ್ನು ಹೆಚ್ಚಿಸುವೆವು.”
Kannada Translation - Hamza Buturಆದರೆ ಆ ಅಕ್ರಮಿಗಳು ಅವರಿಗೆ ಹೇಳಲಾದ ಮಾತನ್ನು ಬದಲಾಯಿಸಿದರು.[1] ಆದ್ದರಿಂದ, ನಾವು ಆ ಅಕ್ರಮಿಗಳ ಮೇಲೆ—ಅವರು ಮಾಡುತ್ತಿದ್ದ ದುಷ್ಕರ್ಮಗಳ ನಿಮಿತ್ತ—ಆಕಾಶದಿಂದ ಶಿಕ್ಷೆಯನ್ನು ಇಳಿಸಿದೆವು.
Kannada Translation - Hamza Buturಮೂಸಾ ತಮ್ಮ ಜನರಿಗಾಗಿ ನೀರನ್ನು ಬೇಡಿದ ಸಂದರ್ಭ. ನಾವು ಹೇಳಿದೆವು: “ನಿಮ್ಮ ಕೈಯಲ್ಲಿರುವ ಕೋಲಿನಿಂದ ಆ ಬಂಡೆಯ ಮೇಲೆ ಹೊಡೆಯಿರಿ.” ಆಗ ಅದರಿಂದ ಹನ್ನೆರಡು ಚಿಲುಮೆಗಳು ಚಿಮ್ಮಿ ಹರಿದವು.[1] ಎಲ್ಲಾ ಜನರೂ (ಗೋತ್ರಗಳೂ) ತಮ್ಮ ನೀರಿನ ಸ್ಥಳವನ್ನು ತಿಳಿದುಕೊಂಡರು. (ನಾವು ಹೇಳಿದೆವು): “ಅಲ್ಲಾಹು ಒದಗಿಸಿದ ಆಹಾರದಿಂದ ತಿನ್ನಿರಿ ಮತ್ತು ಕುಡಿಯಿರಿ; ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಾ ಅಲೆಯಬೇಡಿ."
Kannada Translation - Hamza Buturನೀವು ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಓ ಮೂಸಾ! ಒಂದೇ ರೀತಿಯ ಆಹಾರವನ್ನು ಸಹಿಸಿಕೊಂಡಿರಲು ನಮಗೆ ಸಾಧ್ಯವೇ ಇಲ್ಲ. ಆದ್ದರಿಂದ ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ. ಅವನು ನಮಗೆ ಭೂಮಿಯಲ್ಲಿ ಬೆಳೆಯುವ ಸೊಪ್ಪು, ಸೌತೆ, ಗೋಧಿ, ಮಸೂರ ಮತ್ತು ಈರುಳ್ಳಿಯನ್ನು ಉತ್ಪಾದಿಸಿಕೊಡಲಿ.” ಮೂಸಾ ಹೇಳಿದರು: “ಅತ್ಯುತ್ತಮ ವಸ್ತುವನ್ನು ಬಿಟ್ಟು ಕಳಪೆ ವಸ್ತುವನ್ನು ಏಕೆ ಕೇಳುತ್ತೀರಿ? ನೀವು ಯಾವುದಾದರೂ ನಗರಕ್ಕೆ ಹೋಗಿರಿ. ಅಲ್ಲಿ ನೀವು ಕೇಳಿದ್ದೆಲ್ಲವೂ ನಿಮಗೆ ಸಿಗುವುದು.” (ಅವರ ದರ್ಪದಿಂದಾಗಿ) ಅವರ ಮೇಲೆ ಅಪಮಾನ ಹಾಗೂ ಬಡತನವನ್ನು ಹೊದಿಸಲಾಯಿತು; ಅವರು ಅಲ್ಲಾಹನ ಕೋಪದೊಂದಿಗೆ ಮರಳಿದರು. ಅದೇಕೆಂದರೆ, ಅವರು ಅಲ್ಲಾಹನ ವಚನಗಳನ್ನು ನಿಷೇಧಿಸುತ್ತಿದ್ದರು ಮತ್ತು ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುತ್ತಿದ್ದರು. ಅದು ಅವರ ಅವಿಧೇಯತೆ ಮತ್ತು ಅತಿರೇಕದ ಫಲಿತಾಂಶವಾಗಿತ್ತು.
Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಯಹೂದಿಗಳು, ಕ್ರೈಸ್ತರು ಅಥವಾ ಸಾಬಿಗಳು—ಇವರ ಪೈಕಿ ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಟ್ಟವರು ಹಾಗೂ ಸತ್ಕರ್ಮವೆಸಗಿದವರು ಯಾರೋ, ಅವರಿಗೆ ಅವರ ಪ್ರತಿಫಲವು ಅವರ ಪರಿಪಾಲಕನ (ಅಲ್ಲಾಹನ) ಬಳಿಯಿದೆ. ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.[1]
Kannada Translation - Hamza Buturನಾವು ನಿಮ್ಮಿಂದ ಕರಾರನ್ನು ಪಡೆದುಕೊಂಡ ಮತ್ತು ನಿಮ್ಮ ಮೇಲೆ ತೂರ್ ಪರ್ವತವನ್ನು ಎತ್ತಿಹಿಡಿದ ಸಂದರ್ಭ. (ನಾವು ಹೇಳಿದೆವು): “ನಾವು ನಿಮಗೆ ನೀಡಿದ್ದನ್ನು ಬಿಗಿಯಾಗಿ ಹಿಡಿಯಿರಿ ಮತ್ತು ಅದರಲ್ಲಿರುವುದನ್ನು ನೆನಪಿಟ್ಟುಕೊಳ್ಳಿರಿ; ನೀವು ದೇವಭಯವುಳ್ಳವರಾಗುವುದಕ್ಕಾಗಿ.”
Kannada Translation - Hamza Buturನಂತರ, ಅದರ ಬಳಿಕವೂ ನೀವು ವಿಮುಖರಾದಿರಿ. ನಿಮ್ಮ ಮೇಲೆ ಅಲ್ಲಾಹನ ಔದಾರ್ಯ ಮತ್ತು ದಯೆಯಿಲ್ಲದಿರುತ್ತಿದ್ದರೆ, ನೀವು ನಷ್ಟ ಹೊಂದಿದವರಲ್ಲಿ ಸೇರುತ್ತಿದ್ದಿರಿ.
Kannada Translation - Hamza Buturನಿಮ್ಮ ಪೈಕಿ ಸಬ್ಬತ್‌ನ[1] ವಿಷಯದಲ್ಲಿ ಅತಿರೇಕವೆಸಗಿದವರ ಬಗ್ಗೆ ನಿಮಗೆ ಈಗಾಗಲೇ ತಿಳಿದಿದೆ. ನಾವು ಅವರೊಡನೆ ಹೇಳಿದೆವು: “ನೀವು ಹೊಲಸು ಕಪಿಗಳಾಗಿ ಬಿಡಿ.”
Kannada Translation - Hamza Buturಮೂಸಾ ತಮ್ಮ ಜನರೊಡನೆ ಹೇಳಿದ ಸಂದರ್ಭ: “ಅಲ್ಲಾಹು ನಿಮ್ಮೊಡನೆ ಒಂದು ಹಸುವನ್ನು ಕೊಯ್ಯಲು ಆದೇಶಿಸುತ್ತಿದ್ದಾನೆ.”[1] ಅವರು ಕೇಳಿದರು: “ಏನು ನೀವು ನಮ್ಮನ್ನು ಅಣಕಿಸುತ್ತಿದ್ದೀರಾ?” ಮೂಸಾ ಹೇಳಿದರು: “ಅವಿವೇಕಿಗಳಲ್ಲಿ ಸೇರದಂತೆ ನಾನು ಅಲ್ಲಾಹನಲ್ಲಿ ಅಭಯ ಕೋರುತ್ತೇನೆ.”
Kannada Translation - Hamza Buturಅವರು ಹೇಳಿದರು:”ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ; ಅದು (ಹಸು) ಯಾವುದೆಂದು ಅವನು ನಮಗೆ ವಿವರಿಸಿಕೊಡಲಿ.” ಮೂಸಾ ಹೇಳಿದರು: “ಅದು ಮುದಿ ಪ್ರಾಯದ್ದೋ ಅಥವಾ ಎಳೆಯ ಪ್ರಾಯದ್ದೋ ಅಲ್ಲದ ಅದರ ನಡುವಿನ ಪ್ರಾಯದ ಹಸುವಾಗಿದೆಯೆಂದು ಅವನು ಹೇಳುತ್ತಿದ್ದಾನೆ. ಆದ್ದರಿಂದ ನಿಮಗೆ ಆದೇಶಿಸಲಾಗುವಂತೆ ಕಾರ್ಯೋನ್ಮುಖರಾಗಿರಿ.”
Kannada Translation - Hamza Buturಅವರು ಹೇಳಿದರು: “ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ; ಅದರ ಬಣ್ಣ ಯಾವುದೆಂದು ಅವನು ನಮಗೆ ವಿವರಿಸಿಕೊಡಲಿ.” ಮೂಸಾ ಹೇಳಿದರು: “ಅದು ಶುಭ್ರ ಹಳದಿ ಬಣ್ಣದ ಹಸುವಾಗಿದ್ದು ನೋಡುಗರನ್ನು ಮುದಗೊಳಿಸುತ್ತದೆ ಎಂದು ಅವನು (ಅಲ್ಲಾಹು) ಹೇಳುತ್ತಿದ್ದಾನೆ.”
Kannada Translation - Hamza Buturಅವರು ಹೇಳಿದರು: “ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ; ಅದು (ಹಸು) ಯಾವುದೆಂದು ಅವನು ನಮಗೆ ವಿವರಿಸಿಕೊಡಲಿ. ನಿಶ್ಚಯವಾಗಿಯೂ ಹಸುಗಳು ನಮಗೆ ಒಂದೇ ರೀತಿಯಾಗಿ ಕಾಣುತ್ತಿವೆ.[1] ಅಲ್ಲಾಹು ಇಚ್ಛಿಸಿದರೆ ಖಂಡಿವಾಗಿಯೂ ನಾವು ಸನ್ಮಾರ್ಗವನ್ನು ಪಡೆಯುವೆವು.”
Kannada Translation - Hamza Buturಮೂಸಾ ಹೇಳಿದರು: “ಅದು ಎಂತಹ ಹಸುವೆಂದರೆ, ಭೂಮಿಯನ್ನು ಉಳಲು ಅಥವಾ ನೀರನ್ನು ಹಾಯಿಸಲು ಅದನ್ನು ಪಳಗಿಸಲಾಗಿಲ್ಲ; ಅದಕ್ಕೆ ಯಾವುದೇ ನ್ಯೂನತೆಗಳಿಲ್ಲ; ಅದರಲ್ಲಿ ಯಾವುದೇ ಕಲೆಗಳೂ ಇಲ್ಲ ಎಂದು ಅಲ್ಲಾಹು ಹೇಳುತ್ತಿದ್ದಾನೆ.” ಅವರು ಹೇಳಿದರು: “ಈಗ ನೀವು ಸತ್ಯವನ್ನು ತಂದಿದ್ದೀರಿ.” ಹೀಗೆ ಅವರು ಅದನ್ನು ಕೊಯ್ದರು. ಆದರೆ ಅದನ್ನು ಮಾಡುವುದು ಅವರಿಗೆ ಅಷ್ಟು ಸುಲಭವಾಗಿರಲಿಲ್ಲ.[1]
Kannada Translation - Hamza Buturನಾವು ಹೇಳಿದೆವು: “ಅದರ (ಹಸುವಿನ) ಒಂದು ಭಾಗದಿಂದ ಅವನಿಗೆ (ಅವನ ಕಳೇಬರಕ್ಕೆ) ಹೊಡೆಯಿರಿ. (ಆಗ ಅವನು ಜೀವಂತ ಎದ್ದು ನಿಲ್ಲುವನು).” ಈ ರೀತಿ ಅಲ್ಲಾಹು ಸತ್ತವರಿಗೆ ಜೀವ ನೀಡುತ್ತಾನೆ. ನೀವು ಆಲೋಚಿಸುವುದಕ್ಕಾಗಿ ಅವನು ಅವನ ದೃಷ್ಟಾಂತಗಳನ್ನು ನಿಮಗೆ ತೋರಿಸುತ್ತಾನೆ.
Kannada Translation - Hamza Buturನಂತರ, ಅದರ ಬಳಿಕವೂ ನಿಮ್ಮ ಹೃದಯಗಳು ಕಠೋರವಾದವು. ಅವು ಬಂಡೆಯಂತೆ ಅಥವಾ ಅದಕ್ಕಿಂತಲೂ ಹೆಚ್ಚು ಕಠೋರವಾದವು. ನಿಶ್ಚಯವಾಗಿಯೂ, ಕೆಲವು ಬಂಡೆಗಳಿಂದ ನದಿಗಳು ಚಿಮ್ಮಿ ಹರಿಯುತ್ತವೆ; ಕೆಲವು ಬಂಡೆಗಳು ಒಡೆದು ನೀರು ಹೊರಬರುತ್ತದೆ; ಕೆಲವು ಬಂಡೆಗಳು ಅಲ್ಲಾಹನ ಭಯದಿಂದ ಉರುಳಿ ಬೀಳುತ್ತವೆ. ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.
Kannada Translation - Hamza Butur(ಸತ್ಯವಿಶ್ವಾಸಿಗಳೇ!), ಅವರು ವಿಶ್ವಾಸವಿಡುವರೆಂದು ನೀವು ಹಾರೈಸುತ್ತೀರಾ? ವಾಸ್ತವದಲ್ಲಿ, ಅವರಲ್ಲೊಂದು ಗುಂಪು ಅಲ್ಲಾಹನ ವಚನಗಳಿಗೆ ಕಿವಿಗೊಡುತ್ತಾರೆ; ನಂತರ, ಅದನ್ನು ಸರಿಯಾಗಿ ಅರ್ಥಮಾಡಿಕೊಂಡ ಬಳಿಕ, ತಿಳುವಳಿಕೆಯುಳ್ಳವರಾಗಿದ್ದೂ ಸಹ ಅವರು ಅದನ್ನು ವಿರೂಪಗೊಳಿಸುತ್ತಾರೆ.
Kannada Translation - Hamza Buturಸತ್ಯವಿಶ್ವಾಸಿಗಳನ್ನು ಭೇಟಿ ಮಾಡಿದರೆ ಅವರು ಹೇಳುತ್ತಾರೆ: “ನಾವು ವಿಶ್ವಾಸವಿಟ್ಟಿದ್ದೇವೆ.” ಆದರೆ ಅವರು ಪರಸ್ಪರ ಏಕಾಂತದಲ್ಲಿರುವಾಗ ಹೇಳುತ್ತಾರೆ: “ಅಲ್ಲಾಹು ನಿಮಗೆ ತಿಳಿಸಿಕೊಟ್ಟ ವಿಷಯಗಳನ್ನು ನೀವೇಕೆ ಅವರಿಗೆ ತಿಳಿಸುತ್ತೀರಿ? ಅವರು ಅದನ್ನು ಹಿಡಿದು ನಿಮ್ಮ ಪರಿಪಾಲಕನ (ಅಲ್ಲಾಹನ) ಮುಂದೆ ನಿಮ್ಮೊಡನೆ ತರ್ಕಿಸುವುದಕ್ಕೋ? ನೀವು ಆಲೋಚಿಸುವುದಿಲ್ಲವೇ?”
Kannada Translation - Hamza Buturಅವರಲ್ಲಿ ಕೆಲವು ಅನಕ್ಷರಸ್ಥರಿದ್ದಾರೆ; ಅವರಿಗೆ ಗ್ರಂಥದಲ್ಲಿ ಏನಿದೆಯೆಂದೇ ತಿಳಿದಿಲ್ಲ. ಅವರು ಕೆಲವು ಗುಮಾನಿಗಳನ್ನಷ್ಟೇ ಹೊಂದಿದ್ದಾರೆ. ಅವರು ಕೇವಲ ಊಹಿಸುವುದನ್ನಷ್ಟೇ ಮಾಡುತ್ತಾರೆ.
Kannada Translation - Hamza Buturಆದ್ದರಿಂದ, ತಮ್ಮ ಕೈಗಳಿಂದ ಗ್ರಂಥವನ್ನು ಬರೆದು, ನಂತರ ಅದರ ಮೂಲಕ ತುಚ್ಛ ಬೆಲೆಯನ್ನು ಪಡೆಯಲು “ಇದು ಅಲ್ಲಾಹನಿಂದ ಬಂದಿದೆ” ಎಂದು ಹೇಳುವವರಿಗೆ ವಿನಾಶ ಕಾದಿದೆ. ಅವರ ಕೈಗಳು ಬರೆದಿರುವುದಕ್ಕೆ ಅವರಿಗೆ ವಿನಾಶವಿದೆ; ಅವರು ಸಂಪಾದಿಸಿರುವುದಕ್ಕೂ ಅವರಿಗೆ ವಿನಾಶವಿದೆ.
Kannada Translation - Hamza Buturಅವರು ಹೇಳಿದರು: “ಬೆರಳೆಣಿಕೆಯ ಕೆಲವು ದಿನಗಳು ಮಾತ್ರ ನರಕಾಗ್ನಿಯು ನಮ್ಮನ್ನು ಸ್ಪರ್ಶಿಸುತ್ತದೆ.”[1] ಹೇಳಿರಿ: “ನೀವೇನಾದರೂ ಅಲ್ಲಾಹನಿಂದ ಕರಾರು ಪಡೆದಿದ್ದೀರಾ? ಹಾಗಿದ್ದರೆ ಅಲ್ಲಾಹು ಅವನ ಕರಾರನ್ನು ಎಂದಿಗೂ ಉಲ್ಲಂಘಿಸುವುದಿಲ್ಲ. ಅಥವಾ ನೀವು ಅಲ್ಲಾಹನ ಬಗ್ಗೆ ನಿಮಗೆ ಗೊತ್ತಿಲ್ಲದ್ದನ್ನು ಹೇಳುತ್ತಿದ್ದೀರಾ?”
Kannada Translation - Hamza Buturಹೌದು! ಯಾರು ಕೆಡುಕು ಮಾಡುತ್ತಾನೋ ಮತ್ತು ಯಾರನ್ನು ಅವನ ಪಾಪವು ಸುತ್ತುವರಿದಿದೆಯೋ—ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.
Kannada Translation - Hamza Butur“ಅಲ್ಲಾಹನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸಬೇಡಿ, ಮಾತಾಪಿತರಿಗೆ, ಸಂಬಂಧಿಕರಿಗೆ, ಅನಾಥರಿಗೆ ಹಾಗೂ ಬಡವರಿಗೆ ಒಳಿತು ಮಾಡಿರಿ; ಜನರೊಡನೆ ಒಳ್ಳೆಯ ಮಾತನ್ನು ಆಡಿರಿ; ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ" ಎಂದು (ಆದೇಶಿಸುತ್ತಾ) ನಾವು ಇಸ್ರಾಯೇಲ್ ಮಕ್ಕಳಿಂದ ಕರಾರು ಪಡೆದ ಸಂದರ್ಭ. ನಂತರ, ನಿಮ್ಮಲ್ಲಿ ಕೆಲವರ ಹೊರತು ಉಳಿದವರೆಲ್ಲವರೂ ನಿರ್ಲಕ್ಷಿಸುತ್ತಾ ವಿಮುಖರಾದಿರಿ.
Kannada Translation - Hamza Butur“ನೀವು ನಿಮ್ಮವರ ರಕ್ತ ಹರಿಸಬೇಡಿ ಮತ್ತು ನಿಮ್ಮ ಮನೆಗಳಿಂದ ನಿಮ್ಮವರನ್ನು ಹೊರಹಾಕಬೇಡಿ" ಎಂದು (ಆದೇಶಿಸುತ್ತಾ) ನಾವು ನಿಮ್ಮಿಂದ ಕರಾರು ಪಡೆದ ಸಂದರ್ಭ. ನಂತರ ನೀವು ಸಾಕ್ಷಿ ವಹಿಸುತ್ತಾ ಅದನ್ನು ಒಪ್ಪಿಕೊಂಡಿರಿ.
Kannada Translation - Hamza Buturನಂತರ, ನೀವು ನಿಮ್ಮವರನ್ನೇ ಕೊಲ್ಲುತ್ತೀರಿ, ನಿಮ್ಮವರ ಒಂದು ಗುಂಪನ್ನು ಅವರ ಮನೆಗಳಿಂದ ಹೊರಹಾಕುತ್ತೀರಿ; ಪಾಪ ಮತ್ತು ಅತಿರೇಕದಲ್ಲಿ ಅವರ ವಿರುದ್ಧ ಪರಸ್ಪರ ಸಹಕರಿಸುತ್ತೀರಿ; ಅವರು ನಿಮ್ಮ ಬಳಿಗೆ ಸೆರೆಯಾಳುಗಳಾಗಿ ಬಂದರೆ ಅವರಿಗೆ ಪರಿಹಾರವನ್ನು ನೀಡುತ್ತೀರಿ. ವಾಸ್ತವದಲ್ಲಿ, ಅವರನ್ನು ಹೊರಹಾಕುವುದನ್ನು ನಿಮಗೆ ನಿಷೇಧಿಸಲಾಗಿದ್ದರೂ (ನೀವು ಅದರ ಬಗ್ಗೆ ಯೋಚಿಸುವುದೇ ಇಲ್ಲ). ಹಾಗಾದರೆ, ನೀವು ಗ್ರಂಥದ ಕೆಲವು ಭಾಗಗಳಲ್ಲಿ ನಂಬಿಕೆಯಿಟ್ಟು ಕೆಲವು ಭಾಗಗಳನ್ನು ನಿಷೇಧಿಸುತ್ತೀರಾ? ನಿಮ್ಮ ಪೈಕಿ ಹೀಗೆ ಮಾಡುವವರಿಗೆ ಇಹಲೋಕದಲ್ಲಿ ಅವಮಾನವಲ್ಲದೆ ಇನ್ನೇನು ಪ್ರತಿಫಲವಿರಲು ಸಾಧ್ಯ? ಪುನರುತ್ಥಾನ ದಿನ ಅವರನ್ನು ಅತಿಕಠೋರ ಶಿಕ್ಷೆಗೆ ಮರಳಿಸಲಾಗುವುದು. ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.[1]
Kannada Translation - Hamza Buturಅವರೇ ಪರಲೋಕಕ್ಕೆ ಬದಲಿಯಾಗಿ ಇಹಲೋಕವನ್ನು ಖರೀದಿಸಿದವರು. ಆದ್ದರಿಂದ, ಅವರಿಗೆ ಶಿಕ್ಷೆಯಲ್ಲಿ ರಿಯಾಯಿತಿಯಿಲ್ಲ. ಅವರಿಗೆ ಯಾವುದೇ ಸಹಾಯವೂ ದೊರೆಯುವುದಿಲ್ಲ.
Kannada Translation - Hamza Buturನಿಶ್ಚಯವಾಗಿಯೂ ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು. ಅವರ ಹಿಂದೆಯೇ ಹಲವಾರು ಸಂದೇಶವಾಹಕರುಗಳನ್ನು ಕಳುಹಿಸಿದೆವು. ಮರ್ಯಮರ ಮಗ ಈಸಾರಿಗೆ ನಾವು ಸ್ಪಷ್ಟ ಸಾಕ್ಷ್ಯಾಧಾರಗಳನ್ನು ನೀಡಿದೆವು ಮತ್ತು ಪವಿತ್ರಾತ್ಮನ ಮೂಲಕ ಅವರನ್ನು ಬೆಂಬಲಿಸಿದೆವು. ಆದರೆ ನಿಮಗೆ ಇಷ್ಟವಿಲ್ಲದ ವಿಷಯಗಳೊಂದಿಗೆ ಸಂದೇಶವಾಹಕರುಗಳು ನಿಮ್ಮ ಬಳಿಗೆ ಬಂದಾಗಲೆಲ್ಲಾ, ನೀವು ಅಹಂಕಾರ ತೋರಿದಿರಿ. ಅವರಲ್ಲಿ ಕೆಲವರನ್ನು ನೀವು ನಿಷೇಧಿಸಿದಿರಿ ಮತ್ತು ಕೆಲವರನ್ನು ಹತ್ಯೆ ಮಾಡಿದಿರಿ.
Kannada Translation - Hamza Buturಅವರು ಹೇಳಿದರು: “ನಮ್ಮ ಹೃದಯಗಳು ಮುಚ್ಚಿಕೊಂಡಿವೆ.” ಅಲ್ಲ; ವಾಸ್ತವವಾಗಿ ಅವರ ನಿಷೇಧದಿಂದಾಗಿ ಅಲ್ಲಾಹು ಅವರನ್ನು ಶಪಿಸಿದ್ದಾನೆ. ಆದ್ದರಿಂದ ಅವರು ಸ್ವಲ್ಪ ಮಾತ್ರ ವಿಶ್ವಾಸವಿಡುತ್ತಾರೆ.
Kannada Translation - Hamza Buturಅವರಲ್ಲಿರುವ (ಗ್ರಂಥವನ್ನು) ದೃಢೀಕರಿಸುವ ಒಂದು ಗ್ರಂಥವು (ಕುರ್‌ಆನ್) ಅಲ್ಲಾಹನ ಬಳಿಯಿಂದ ಅವರಿಗೆ ಬಂದಾಗ—ವಾಸ್ತವವಾಗಿ, ಇದಕ್ಕೆ ಮೊದಲು ಅವರು (ಅಂತಹ ಒಂದು ಗ್ರಂಥದ ಮೂಲಕ) ಸತ್ಯನಿಷೇಧಿಗಳ ವಿರುದ್ಧ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದರೂ ಸಹ—ಅವರಿಗೆ ಪರಿಚಿತವಾದ ಆ ಸಂದೇಶವು ಅವರ ಬಳಿಗೆ ಬಂದಾಗ ಅವರು ಅದನ್ನು ನಿಷೇಧಿಸಿದರು.[1] ಆದ್ದರಿಂದ ಸತ್ಯನಿಷೇಧಿಗಳ ಮೇಲೆ ಅಲ್ಲಾಹನ ಶಾಪವಿರಲಿ.
Kannada Translation - Hamza Buturಅಲ್ಲಾಹು ಅವನ ದಾಸರಲ್ಲಿ ಅವನು ಇಚ್ಛಿಸುವವರಿಗೆ ಅವನ ಔದಾರ್ಯವನ್ನು ಇಳಿಸಿಕೊಡುತ್ತಾನೆ ಎಂಬ ಅಸೂಯೆಯಿಂದ, ಅಲ್ಲಾಹು ಅವತೀರ್ಣಗೊಳಿಸಿದ ಸಂದೇಶವನ್ನು ನಿಷೇಧಿಸುವ ರೀತಿಯಲ್ಲಿ ಅವರು ತಮ್ಮನ್ನು ತಾವೇ ಮಾರಿಕೊಂಡದ್ದು ಬಹಳ ನಿಕೃಷ್ಟವಾಗಿದೆ.[1] ಇದರಿಂದ ಅವರು ಕೋಪದ ಮೇಲೆ ಕೋಪಕ್ಕೆ ಪಾತ್ರರಾದರು. ಆ ಸತ್ಯನಿಷೇಧಿಗಳಿಗೆ ಅಪಮಾನಕರ ಶಿಕ್ಷೆಯಿದೆ.
Kannada Translation - Hamza Butur“ಅಲ್ಲಾಹು ಅವತೀರ್ಣಗೊಳಿಸಿದ ಗ್ರಂಥದಲ್ಲಿ (ಕುರ್‌ಆನ್‍ನಲ್ಲಿ) ವಿಶ್ವಾಸವಿಡಿ” ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ನಮಗೆ ಅವತೀರ್ಣವಾದ ಗ್ರಂಥದಲ್ಲಿ ನಾವು ವಿಶ್ವಾಸವಿಡುತ್ತೇವೆ.” ವಾಸ್ತವವಾಗಿ, ಅದರ ನಂತರದ ಗ್ರಂಥವು (ಕುರ್‌ಆನ್) ಅವರ ಬಳಿಯಿರುವ ಗ್ರಂಥವನ್ನು ದೃಡೀಕರಿಸುವ ಸತ್ಯವಾಗಿದ್ದೂ ಸಹ ಅವರು ಅದನ್ನು ನಿಷೇಧಿಸುತ್ತಾರೆ. ಹೇಳಿರಿ: “ನೀವು ಸತ್ಯವನ್ನೇ ಹೇಳುವವರಾಗಿದ್ದರೆ, ಮೊದಲು ಬಂದ ಅಲ್ಲಾಹನ ಪ್ರವಾದಿಗಳನ್ನು ನೀವೇಕೆ ಕೊಲೆ ಮಾಡಿದಿರಿ?”[1]
Kannada Translation - Hamza Buturನಿಶ್ಚಯವಾಗಿಯೂ, ಮೂಸಾ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ನಿಮ್ಮ ಬಳಿಗೆ ಬಂದಿದ್ದರು. ನಂತರ, ಅವರ (ನಿರ್ಗಮನದ) ಬಳಿಕ ನೀವು ಕರುವನ್ನು (ದೇವರಾಗಿ) ಮಾಡಿಕೊಂಡು ಅಕ್ರಮಿಗಳಾಗಿ ಬಿಟ್ಟಿರಿ.
Kannada Translation - Hamza Buturನಾವು ನಿಮ್ಮಿಂದ ಕರಾರನ್ನು ಪಡೆದ ಮತ್ತು ನಿಮ್ಮ ಮೇಲೆ ತೂರ್ ಪರ್ವತವನ್ನು ಎತ್ತಿಹಿಡಿದ ಸಂದರ್ಭ. (ನಾವು ಹೇಳಿದೆವು): “ನಾವು ನಿಮಗೆ ನೀಡಿದ್ದನ್ನು ಬಿಗಿಯಾಗಿ ಹಿಡಿಯಿರಿ ಮತ್ತು ಕಿವಿಗೊಟ್ಟು ಕೇಳಿರಿ.” ಅವರು ಹೇಳಿದರು: “ನಾವು ಕೇಳಿದ್ದೇವೆ ಮತ್ತು ಅವಿಧೇಯತೆ ತೋರಿದ್ದೇವೆ.” ಅವರ ಸತ್ಯನಿಷೇಧದಿಂದಾಗಿ ಅವರ ಹೃದಯಗಳಲ್ಲಿ ಕರುವಿನ ಪ್ರೀತಿಯು ಲೀನವಾಗಿಬಿಟ್ಟಿತ್ತು. ಹೇಳಿರಿ: “ನೀವು ಸತ್ಯವಿಶ್ವಾಸಿಗಳಾಗಿದ್ದರೆ ನಿಮ್ಮ ವಿಶ್ವಾಸವು ನಿಮಗೆ ಏನು ಆದೇಶಿಸುತ್ತಿದೆಯೋ ಅದು ಬಹಳ ನಿಕೃಷ್ಟವಾಗಿದೆ.”
Kannada Translation - Hamza Buturಹೇಳಿರಿ: “ಅಲ್ಲಾಹನ ಬಳಿ ಪರಲೋಕ ಭವನವು ಇತರ ಜನರಿಗೆ ದೊರೆಯದೆ ಕೇವಲ ನಿಮಗೆ ಮಾತ್ರ ಇರುವುದಾದರೆ ನೀವು ಸಾವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ!”
Kannada Translation - Hamza Buturಆದರೆ ಅವರ ಕೈಗಳು ಮಾಡಿಟ್ಟಿರುವ (ದುಷ್ಕರ್ಮಗಳ) ನಿಮಿತ್ತ ಅವರೆಂದೂ ಸಾವನ್ನು ಬಯಸುವುದಿಲ್ಲ. ಅಲ್ಲಾಹು ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.
Kannada Translation - Hamza Buturಅವರಿಗೆ ಬದುಕಲು ಆತ್ಯಧಿಕ ಆಸಕ್ತಿಯಿರುವುದನ್ನು—ಬಹುದೇವವಿಶ್ವಾಸಿಗಳಿಗಿಂತಲೂ ಹೆಚ್ಚು ಆಸಕ್ತಿಯಿರುವುದನ್ನು—ನೀವು ಕಾಣುವಿರಿ. ಅವರಲ್ಲಿ ಪ್ರತಿಯೊಬ್ಬನೂ ಸಾವಿರ ವರ್ಷ ಆಯುಷ್ಯ ದೊರೆಯಬೇಕೆಂದು ಬಯಸುತ್ತಾನೆ. ಆದರೆ ದೀರ್ಘಾಯುಷ್ಯ ಸಿಗುವುದರಿಂದ ಅವನಿಗೆ ಶಿಕ್ಷೆಯಿಂದ ಮುಕ್ತಿ ಸಿಗುವುದಿಲ್ಲ. ಅವರು ಮಾಡುತ್ತಿರುವ ಕರ್ಮಗಳನ್ನು ಅಲ್ಲಾಹು ನೋಡುತ್ತಿದ್ದಾನೆ.
Kannada Translation - Hamza Buturಹೇಳಿರಿ: “ಯಾರು ಜಿಬ್ರೀಲರಿಗೆ ವೈರಿಯೋ (ಅವನು ಅಲ್ಲಾಹನಿಗೂ ವೈರಿಯಾಗಿದ್ದಾನೆ).”[1] (ಏಕೆಂದರೆ) ನಿಶ್ಚಯವಾಗಿಯೂ ಜಿಬ್ರೀಲ್ ಅದನ್ನು (ಕುರ್‌ಆನನ್ನು) ನಿಮ್ಮ ಹೃದಯದಲ್ಲಿ ಅವತೀರ್ಣಗೊಳಿಸಿದ್ದು ಅಲ್ಲಾಹನ ಆದೇಶದಂತೆ ಮಾತ್ರ. ಅದು ಪೂರ್ವಗ್ರಂಥಗಳನ್ನು ದೃಢೀಕರಿಸುತ್ತದೆ ಮತ್ತು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗ ಹಾಗೂ ಸುವಾರ್ತೆಯಾಗಿದೆ.
Kannada Translation - Hamza Buturಯಾರು ಅಲ್ಲಾಹನಿಗೆ, ಅವನ ದೇವದೂತರುಗಳಿಗೆ, ಅವನ ಸಂದೇಶವಾಹಕರುಗಳಿಗೆ, ಜಿಬ್ರೀಲರಿಗೆ ಮತ್ತು ಮೀಕಾಯೀಲರಿಗೆ ವೈರಿಯೋ—ನಿಶ್ಚಯವಾಗಿಯೂ ಅಲ್ಲಾಹು ಆ ಸತ್ಯನಿಷೇಧಿಗಳಿಗೂ ವೈರಿಯಾಗಿದ್ದಾನೆ.
Kannada Translation - Hamza Buturಅವರು ಯಾವುದೇ ಕರಾರು ಮಾಡಿದಾಗಲೂ ಅವರಲ್ಲೊಂದು ಗುಂಪು ಅದನ್ನು ಎಸೆದು ಬಿಡುತ್ತಿತ್ತು. ಅಷ್ಟೇ ಅಲ್ಲ, ಅವರಲ್ಲಿ ಹೆಚ್ಚಿನವರಿಗೆ ವಿಶ್ವಾಸವೇ ಇರಲಿಲ್ಲ.
Kannada Translation - Hamza Buturಅವರಲ್ಲಿರುವ ಗ್ರಂಥವನ್ನು ದೃಢೀಕರಿಸುತ್ತಾ ಅಲ್ಲಾಹನ ಕಡೆಯಿಂದ ಒಬ್ಬ ಸಂದೇಶವಾಹಕರು ಅವರ ಬಳಿಗೆ ಬಂದಾಗ, ಗ್ರಂಥ ನೀಡಲಾದವರಲ್ಲಿ ಸೇರಿದ ಒಂದು ಗುಂಪು ಅಲ್ಲಾಹನ ಗ್ರಂಥವನ್ನು, ಅದರ ಬಗ್ಗೆ ಏನೂ ತಿಳಿಯದವರಂತೆ ತಮ್ಮ ಬೆನ್ನ ಹಿಂಭಾಗಕ್ಕೆ ಎಸೆದು ಬಿಟ್ಟರು.
Kannada Translation - Hamza Buturಶೈತಾನರು ಸುಲೈಮಾನರ ಆಡಳಿತಕಾಲದಲ್ಲಿ ಪಠಿಸುತ್ತಿದ್ದ ವಿಷಯಗಳನ್ನು ಅವರು ಹಿಂಬಾಲಿಸಿದರು. ಸುಲೈಮಾನ್ ಸತ್ಯನಿಷೇಧಿಯಾಗಿರಲಿಲ್ಲ. ಆದರೆ ಶೈತಾನರು ಸತ್ಯನಿಷೇಧಿಗಳಾಗಿದ್ದರು.[1] ಅವರು ಜನರಿಗೆ ಮಾಟಗಾರಿಕೆಯನ್ನು ಮತ್ತು ಬ್ಯಾಬಿಲೋನಿಯಾದಲ್ಲಿ ಹಾರೂತ್ ಮತ್ತು ಮಾರೂತ್ ಎಂಬ ಎರಡು ದೇವದೂತರಿಗೆ ಅವತೀರ್ಣವಾಗುತ್ತಿದ್ದ ವಿಷಯಗಳನ್ನು ಕಲಿಸುತ್ತಿದ್ದರು. ಆದರೆ, “ನಾವೊಂದು ಪರೀಕ್ಷೆಯಾಗಿದ್ದೇವೆ; ಆದ್ದರಿಂದ ನೀವು ಸತ್ಯನಿಷೇಧಿಗಳಾಗಬೇಡಿ” ಎಂದು ಹೇಳದೆ ಅವರಿಬ್ಬರು (ಹಾರೂತ್ ಮತ್ತು ಮಾರೂತ್) ಯಾರಿಗೂ ಕಲಿಸಿಕೊಡುತ್ತಿರಲಿಲ್ಲ. ಹೀಗೆ ಜನರು ಅವರಿಬ್ಬರಿಂದ ಗಂಡ-ಹೆಂಡತಿಯ ನಡುವೆ ಒಡಕು ಮೂಡಿಸುವ ತಂತ್ರಗಳನ್ನು ಕಲಿಯುತ್ತಿದ್ದರು. ಆದರೆ ಅಲ್ಲಾಹನ ಅಪ್ಪಣೆಯಿಲ್ಲದೆ ಯಾರಿಗೂ ಯಾವುದೇ ತೊಂದರೆ ಮಾಡಲು ಅವರಿಗೆ ಸಾಧ್ಯವಿಲ್ಲ. ಸ್ವತಃ ಅವರಿಗೆ ತೊಂದರೆಯಾಗುವ ಮತ್ತು ಅವರಿಗೆ ಯಾವುದೇ ಪ್ರಯೋಜನ ನೀಡದ ವಿಷಯಗಳನ್ನು ಅವರು ಕಲಿಯುತ್ತಿದ್ದರು. ಅದನ್ನು ಪಡೆದವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲವೆಂದು ಅವರು ದೃಢವಾಗಿ ತಿಳಿದಿದ್ದರು. ಅವರು ಯಾವುದಕ್ಕೆ ತಮ್ಮ ಆತ್ಮಗಳನ್ನು ಮಾರಿಕೊಂಡರೋ ಅದು ಬಹಳ ನಿಕೃಷ್ಟವಾಗಿದೆ. ಅವರು ಅದನ್ನು ತಿಳಿದಿದ್ದರೆ (ಎಷ್ಟು ಚೆನ್ನಾಗಿತ್ತು)!
Kannada Translation - Hamza Buturಅವರು ವಿಶ್ವಾಸವಿಟ್ಟವರು ಮತ್ತು ದೇವಭಯವುಳ್ಳವರಾಗಿದ್ದರೆ, ಅವರಿಗೆ ಅಲ್ಲಾಹನಿಂದ ಉತ್ತಮ ಪ್ರತಿಫಲವು ದೊರೆಯುತ್ತಿತ್ತು. ಅವರು ಅದನ್ನು ತಿಳಿದಿದ್ದರೆ (ಎಷ್ಟು ಚೆನ್ನಾಗಿತ್ತು)!
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು (ಪ್ರವಾದಿಯೊಡನೆ) ‘ರಾಇನಾ’ ಎಂದು ಹೇಳಬೇಡಿ.[1] ಬದಲಿಗೆ, ‘ಉನ್‍ಝುರ್‌ನಾ’ ಎಂದು ಹೇಳಿರಿ ಮತ್ತು ಕಿವಿಗೊಟ್ಟು ಕೇಳಿರಿ. ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯಿದೆ.
Kannada Translation - Hamza Buturನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಏನಾದರೂ ಒಳಿತು ಅವತೀರ್ಣವಾಗುವುದು ಗ್ರಂಥದವರಲ್ಲಿ ಮತ್ತು ಬಹುದೇವಾರಾಧಕರಲ್ಲಿ ಸೇರಿದ ಸತ್ಯನಿಷೇಧಿಗಳಿಗೆ ಸ್ವಲ್ಪವೂ ಇಷ್ಟವಿಲ್ಲ. ಅಲ್ಲಾಹು ಅವನು ಇಚ್ಛಿಸುವವರಿಗೆ ಅವನ ದಯೆಯಿಂದ ವಿಶೇಷವಾಗಿ ಕರುಣಿಸುತ್ತಾನೆ. ಅಲ್ಲಾಹು ಮಹಾ ಔದಾರ್ಯದ ಒಡೆಯನಾಗಿದ್ದಾನೆ.
Kannada Translation - Hamza Buturನಾವು ಯಾವುದಾದರೂ ವಚನವನ್ನು ರದ್ದುಗೊಳಿಸಿದರೆ, ಅಥವಾ ಮರೆಯುವಂತೆ ಮಾಡಿದರೆ, ಅದಕ್ಕಿಂತಲೂ ಉತ್ತಮವಾದುದನ್ನು ಅಥವಾ ಅದಕ್ಕೆ ಸಮಾನವಾದುದನ್ನು ತರುವೆವು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನೆಂದು ನಿಮಗೆ ತಿಳಿದಿಲ್ಲವೇ?
Kannada Translation - Hamza Buturಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಮಾತ್ರ ಸೇರಿದ್ದೆಂದು ಮತ್ತು ಅಲ್ಲಾಹನ ಹೊರತು ನಿಮಗೆ ಯಾವುದೇ ರಕ್ಷಕನೋ, ಸಹಾಯಕನೋ ಇಲ್ಲವೆಂದು ನಿಮಗೆ ತಿಳಿದಿಲ್ಲವೇ?
Kannada Translation - Hamza Buturಹಿಂದೆ ಮೂಸಾರೊಡನೆ ಅವರ ಅನುಯಾಯಿಗಳು ಕೇಳಿದಂತೆ ನಿಮ್ಮ ಸಂದೇಶವಾಹಕರೊಡನೆ ಕೇಳಲು ನೀವು ಬಯಸುತ್ತೀರಾ? ಯಾರು ಸತ್ಯವಿಶ್ವಾಸವನ್ನು ಸತ್ಯನಿಷೇಧಕ್ಕೆ ಬದಲಾಯಿಸುತ್ತಾನೋ ಅವನು ನೇರ ಮಾರ್ಗದಿಂದ ತಪ್ಪಿ ಹೋಗುತ್ತಾನೆ.
Kannada Translation - Hamza Buturಗ್ರಂಥದವರಲ್ಲಿ ಹೆಚ್ಚಿನವರು ಅವರಿಗೆ ಸತ್ಯವೇನೆಂದು ಸ್ಪಷ್ಟವಾದ ಬಳಿಕವೂ ಕೇವಲ ಅಸೂಯೆ ಮತ್ತು ದ್ವೇಷದಿಂದ ನಿಮ್ಮನ್ನು ಸತ್ಯವಿಶ್ವಾಸದಿಂದ ತಪ್ಪಿಸಿ ಸತ್ಯನಿಷೇಧಿಗಳಾಗಿ ಮಾಡಲು ಬಯಸುತ್ತಾರೆ. ಅಲ್ಲಾಹು ತನ್ನ ಆಜ್ಞೆಯನ್ನು ತರುವವರೆಗೆ ನೀವು ಅವರನ್ನು ಕ್ಷಮಿಸಿರಿ ಮತ್ತು ನಿರ್ಲಕ್ಷಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
Kannada Translation - Hamza Buturನೀವು ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ. ನೀವು ನಿಮಗಾಗಿ ಯಾವೆಲ್ಲಾ ಸತ್ಕಾರ್ಯಗಳನ್ನು ಮುಂದಕ್ಕೆ ಕಳುಹಿಸುತ್ತೀರೋ ಅವೆಲ್ಲವನ್ನೂ ನೀವು ಅಲ್ಲಾಹನ ಬಳಿ ಕಾಣುವಿರಿ. ನಿಶ್ಚಯವಾಗಿಯೂ ಅಲ್ಲಾಹು ನೀವು ಮಾಡುವ ಕರ್ಮಗಳನ್ನು ನೋಡುತ್ತಿದ್ದಾನೆ.
Kannada Translation - Hamza Buturಅವರು ಹೇಳುತ್ತಾರೆ: “ಯಹೂದಿ ಅಥವಾ ಕ್ರೈಸ್ತರ ಹೊರತು ಇನ್ನಾರೂ ಸ್ವರ್ಗಕ್ಕೆ ಹೋಗುವುದಿಲ್ಲ.” ಅವೆಲ್ಲವೂ ಅವರ ಗುಮಾನಿಗಳಾಗಿವೆ. ಹೇಳಿರಿ: “ನೀವು ಸತ್ಯವಂತರಾಗಿದ್ದರೆ ನಿಮ್ಮ ಪುರಾವೆಯನ್ನು ತನ್ನಿರಿ.”
Kannada Translation - Hamza Buturಹೌದು! ಯಾರು ನಿಷ್ಕಳಂಕತೆಯಿಂದ ತನ್ನನ್ನು ತಾನೇ ಅಲ್ಲಾಹನಿಗೆ ಶರಣಾಗಿಸುತ್ತಾನೋ ಅವನಿಗೆ ಅವನ ಪ್ರತಿಫಲವು ಅವನ ಪರಿಪಾಲಕನ (ಅಲ್ಲಾಹನ) ಬಳಿಯಿದೆ. ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.
Kannada Translation - Hamza Buturಕ್ರೈಸ್ತರು ಸತ್ಯದಲ್ಲಿಲ್ಲ ಎಂದು ಯಹೂದಿಗಳು ಹೇಳುತ್ತಾರೆ. ಯಹೂದಿಗಳು ಸತ್ಯದಲ್ಲಿಲ್ಲ ಎಂದು ಕ್ರೈಸ್ತರು ಹೇಳುತ್ತಾರೆ. ವಾಸ್ತವವಾಗಿ, ಅವರೆಲ್ಲರೂ ಗ್ರಂಥವನ್ನು (ತೋರಾ) ಪಠಿಸುತ್ತಾರೆ. ತಿಳುವಳಿಕೆಯಿಲ್ಲದ ಜನರು ಕೂಡ ಅವರು ಹೇಳಿದಂತೆಯೇ ಹೇಳುತ್ತಾರೆ. ಅವರು ಯಾವ ವಿಷಯದಲ್ಲಿ ಭಿನ್ನಮತ ತಳೆದರೋ ಅದರ ಬಗ್ಗೆ ಪುನರುತ್ಥಾನ ದಿನದಂದು ಅಲ್ಲಾಹು ಅವರ ನಡುವೆ ತೀರ್ಪು ನೀಡುವನು.
Kannada Translation - Hamza Buturಅಲ್ಲಾಹನ ಮಸೀದಿಗಳಲ್ಲಿ ಅವನ ಹೆಸರನ್ನು ಸ್ಮರಿಸುವುದನ್ನು ತಡೆಯುವವನಿಗಿಂತ ಮತ್ತು ಅವುಗಳ (ಮಸೀದಿಗಳ) ನಾಶಕ್ಕಾಗಿ ಪರಿಶ್ರಮಿಸುವವನಿಗಿಂತ ದೊಡ್ಡ ಅಕ್ರಮಿ ಯಾರು? ಅವರು ಭಯಪಡುವವರಾಗಿಯೇ ಹೊರತು ಅವುಗಳನ್ನು ಪ್ರವೇಶಿಸಬಾರದಿತ್ತು. ಅವರಿಗೆ ಇಹಲೋಕದಲ್ಲಿ ಅಪಮಾನವಿದೆ ಮತ್ತು ಪರಲೋಕದಲ್ಲಿ ಕಠೋರ ಶಿಕ್ಷೆಯಿದೆ.
Kannada Translation - Hamza Buturಪೂರ್ವ ಮತ್ತು ಪಶ್ಚಿಮವು ಅಲ್ಲಾಹನಿಗೆ ಸೇರಿದ್ದು. ನೀವು ಯಾವ ದಿಕ್ಕಿಗೆ ತಿರುಗಿದರೂ ಅಲ್ಲಿ ಅಲ್ಲಾಹನ ಮುಖವಿದೆ. ನಿಶ್ಚಯವಾಗಿಯೂ ಅಲ್ಲಾಹು ಅತ್ಯಂತ ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.
Kannada Translation - Hamza Buturಅಲ್ಲಾಹನಿಗೆ ಮಕ್ಕಳಿದ್ದಾರೆ ಎಂದು ಅವರು ಹೇಳುತ್ತಾರೆ. (ಇಲ್ಲ, ಬದಲಿಗೆ) ಅವನು ಪರಿಶುದ್ಧನು! ಭೂಮ್ಯಾಕಾಶಗಳಲ್ಲಿರುವ ಎಲ್ಲಾ ಸೃಷ್ಟಿಗಳೂ ಅವನಿಗೆ ಸೇರಿದ್ದು. ಎಲ್ಲವೂ ಅವನಿಗೆ ವಿಧೇಯವಾಗಿವೆ.
Kannada Translation - Hamza Buturಅವನು ಯಾವುದೇ ಪೂರ್ವ ಮಾದರಿಯಿಲ್ಲದೆ ಭೂಮ್ಯಾಕಾಶಗಳನ್ನು ಸೃಷ್ಟಿಸಿದವನು. ಅವನು ಒಂದು ವಿಷಯವನ್ನು ತೀರ್ಮಾನಿಸಿದರೆ, ಅದಕ್ಕೆ ಉಂಟಾಗು ಎಂದು ಹೇಳುವನು; ಆಗ ಅದು ಉಂಟಾಗುವುದು.
Kannada Translation - Hamza Buturಜ್ಞಾನವಿಲ್ಲದವರು ಹೇಳುತ್ತಾರೆ: “ಅಲ್ಲಾಹನೇಕೆ ನಮ್ಮೊಡನೆ ಮಾತನಾಡುವುದಿಲ್ಲ? ಅಥವಾ ನಮ್ಮ ಬಳಿಗೆ ಒಂದು ದೃಷ್ಟಾಂತವೇಕೆ ಬರುವುದಿಲ್ಲ?” ಇವರು ಹೇಳಿದಂತೆಯೇ ಇವರಿಗಿಂತ ಮೊದಲಿನವರೂ ಹೇಳಿದ್ದರು. ಇವರ ಮತ್ತು ಅವರ ಹೃದಯಗಳು ಸಮಾನವಾಗಿವೆ. ದೃಢವಿಶ್ವಾಸವಿಡುವ ಜನರಿಗೆ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.
Kannada Translation - Hamza Buturನಿಶ್ಚಯವಾಗಿಯೂ ನಾವು ನಿಮ್ಮನ್ನು ಸುವಾರ್ತೆ ನೀಡುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿ ಸತ್ಯದೊಂದಿಗೆ ಕಳುಹಿಸಿದ್ದೇವೆ. ನರಕವಾಸಿಗಳ ಕುರಿತು ನಿಮ್ಮೊಂದಿಗೆ ಪ್ರಶ್ನಿಸಲಾಗುವುದಿಲ್ಲ.
Kannada Translation - Hamza Buturನೀವು ಅವರ ಮಾರ್ಗವನ್ನು ಅನುಸರಿಸುವ ತನಕ ಯಹೂದಿಗಳು ಮತ್ತು ಕ್ರೈಸ್ತರು ನಿಮ್ಮ ಬಗ್ಗೆ ಸಂಪ್ರೀತರಾಗುವುದೇ ಇಲ್ಲ. ಹೇಳಿರಿ: “ಅಲ್ಲಾಹನ ಮಾರ್ಗದರ್ಶನವೇ ನಿಜವಾದ ಮಾರ್ಗದರ್ಶನ.” ನಿಮ್ಮ ಬಳಿಗೆ ಜ್ಞಾನವು ಬಂದ ಬಳಿಕವೂ ನೀವು ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಿದರೆ, ಅಲ್ಲಾಹನಿಂದ ನಿಮ್ಮನ್ನು ರಕ್ಷಿಸುವ ಯಾವುದೇ ರಕ್ಷಕರು ಅಥವಾ ಸಹಾಯಕರು ಇರಲಾರರು.
Kannada Translation - Hamza Buturನಾವು ಯಾರಿಗೆ ಗ್ರಂಥವನ್ನು ನೀಡಿದ್ದೇವೆಯೋ ಅವರು ಅದನ್ನು ಪಠಿಸಬೇಕಾದ ರೀತಿಯಲ್ಲೇ ಪಠಿಸುತ್ತಾರೆ. ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ. ಯಾರು ಅದರಲ್ಲಿ ವಿಶ್ವಾಸವಿಡುವುದಿಲ್ಲವೋ ಅವರೇ ನಷ್ಟ ಹೊಂದಿದವರು.
Kannada Translation - Hamza Buturಓ ಇಸ್ರಾಯೇಲ್ ಮಕ್ಕಳೇ! ನಾನು ನಿಮಗೆ ಅನುಗ್ರಹಿಸಿದ ನನ್ನ ಅನುಗ್ರಹವನ್ನು ಮತ್ತು ನಾನು ನಿಮ್ಮನ್ನು ಸರ್ವಲೋಕದವರಿಗಿಂತ (ಎಲ್ಲಾ ಮನುಷ್ಯರಿಗಿಂತ) ಶ್ರೇಷ್ಠಗೊಳಿಸಿರುವುದನ್ನು ಸ್ಮರಿಸಿರಿ.
Kannada Translation - Hamza Buturಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗೆ ಯಾವುದೇ ಉಪಕಾರ ಮಾಡದ, ಅವನಿಂದ ಯಾವುದೇ ದಂಡ ಸ್ವೀಕರಿಸದ, ಅವನಿಗೆ ಯಾವುದೇ ಶಿಫಾರಸು ಪ್ರಯೋಜನಪಡದ ಮತ್ತು ಅವರಿಗೆ ಯಾವುದೇ ಸಹಾಯವು ದೊರೆಯದ ಒಂದು ದಿನವನ್ನು ಭಯಪಡಿರಿ.
Kannada Translation - Hamza Buturಇಬ್ರಾಹೀಮರನ್ನು ಅವರ ಪರಿಪಾಲಕನು (ಅಲ್ಲಾಹು) ಕೆಲವು ವಚನಗಳ ಮೂಲಕ ಪರೀಕ್ಷಿಸಿದ ಸಂದರ್ಭ(ವನ್ನು ಸ್ಮರಿಸಿ). ಅವರು ಅವೆಲ್ಲವನ್ನೂ ಪೂರ್ಣಗೊಳಿಸಿದರು. ಅಲ್ಲಾಹು ಹೇಳಿದನು: “ನಾನು ನಿಮ್ಮನ್ನು ಜನರಿಗೆ ಮುಖಂಡನನ್ನಾಗಿ ಮಾಡುತ್ತೇನೆ.” ಅವರು ಹೇಳಿದರು: “ನನ್ನ ಸಂತಾನದಲ್ಲಿಯೂ ಮಾಡು.” ಅಲ್ಲಾಹು ಹೇಳಿದನು: “ನನ್ನ ವಾಗ್ದಾನವು ಅಕ್ರಮಿಗಳಿಗೆ ಅನ್ವಯವಾಗುವುದಿಲ್ಲ.”
Kannada Translation - Hamza Buturನಾವು ಆ ಭವನವನ್ನು (ಕಅಬಾಲಯವನ್ನು) ಜನರಿಗೆ ಪುಣ್ಯಸ್ಥಳವಾಗಿ ಮತ್ತು ನಿರ್ಭಯ ಸ್ಥಳವಾಗಿ ಮಾಡಿದ ಸಂದರ್ಭ. ಇಬ್ರಾಹೀಮರು ನಿಂತ ಸ್ಥಳವನ್ನು ನಮಾಝಿನ ಸ್ಥಳವಾಗಿ ಮಾಡಿಕೊಳ್ಳಿರಿ. “ಪ್ರದಕ್ಷಿಣೆ ಮಾಡುವವರಿಗೆ, ಧ್ಯಾನ ಮಗ್ನರಾಗಿ ಕೂರುವವರಿಗೆ, ತಲೆಬಾಗುವವರಿಗೆ ಮತ್ತು ಸಾಷ್ಟಾಂಗ ಮಾಡುವವರಿಗೆ ನನ್ನ ಭವನವನ್ನು ಶುದ್ಧೀಕರಿಸಿರಿ” ಎಂದು ನಾವು ಇಬ್ರಾಹೀಮ್ ಮತ್ತು ಇಸ್ಮಾಈಲರಿಗೆ ಆದೇಶಿಸಿದೆವು.
Kannada Translation - Hamza Buturಇಬ್ರಾಹೀಮ್ ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಓ ನನ್ನ ಪರಿಪಾಲಕನೇ! ನೀನು ಇದನ್ನು ಸುರಕ್ಷಿತ ನಗರವನ್ನಾಗಿ ಮಾಡು ಮತ್ತು ಇದರ ನಿವಾಸಿಗಳಿಗೆ—ಅವರ ಪೈಕಿ ಅಲ್ಲಾಹನಲ್ಲಿ ಮತ್ತು ಅಂತ್ಯ ದಿನದಲ್ಲಿ ವಿಶ್ವಾಸವಿಡುವವರಿಗೆ—ಹಣ್ಣು-ಹಂಪಲುಗಳ ಆಹಾರವನ್ನು ನೀಡು.” ಅಲ್ಲಾಹು ಹೇಳಿದನು: “ನಾನು ಸತ್ಯನಿಷೇಧಿಗಳಿಗೂ ಅಲ್ಪಕಾಲದ ಸವಲತ್ತುಗಳನ್ನು ನೀಡುವೆನು. ನಂತರ ನರಕ ಶಿಕ್ಷೆಗೆ ಅವರನ್ನು ನಿರ್ಬಂಧಿಸುವೆನು.” ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.
Kannada Translation - Hamza Buturಇಬ್ರಾಹೀಮ್ ಮತ್ತು ಇಸ್ಮಾಈಲರು ಕಅಬಾಲಯದ ಅಡಿಪಾಯ ಮತ್ತು ಗೋಡೆಗಳನ್ನು ಎತ್ತರಿಸುತ್ತಿದ್ದ ಸಂದರ್ಭ. (ಅವರು ಹೇಳಿದರು): “ಓ ನಮ್ಮ ಪರಿಪಾಲಕನೇ! ನಮ್ಮಿಂದ ಇದನ್ನು ಸ್ವೀಕರಿಸು. ನಿಶ್ಚಯವಾಗಿಯೂ ನೀನು ಎಲ್ಲವನ್ನೂ ಕೇಳುವವನು ಮತ್ತು ಎಲ್ಲವನ್ನೂ ತಿಳಿದವನಾಗಿರುವೆ.
Kannada Translation - Hamza Buturಓ ನಮ್ಮ ಪರಿಪಾಲಕನೇ! ನಮ್ಮಿಬ್ಬರನ್ನೂ ನಿನ್ನ ಆಜ್ಞಾಪಾಲಕರನ್ನಾಗಿ ಮಾಡು ಮತ್ತು ನಮ್ಮ ಸಂತಾನದಿಂದಲೂ ನಿನಗೆ ಶರಣಾದ ಒಂದು ಸಮುದಾಯವನ್ನು ಉಂಟುಮಾಡು. ನಮಗೆ ನಮ್ಮ ಆರಾಧನಾ ಕ್ರಮಗಳನ್ನು ಕಲಿಸಿಕೊಡು ಮತ್ತು ನಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸು. ನಿಶ್ಚಯವಾಗಿಯೂ ನೀನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿರುವೆ.
Kannada Translation - Hamza Buturಓ ನಮ್ಮ ಪರಿಪಾಲಕನೇ! ನಿನ್ನ ದೃಷ್ಟಾಂತಗಳನ್ನು ಪಠಿಸುವ, ಗ್ರಂಥವನ್ನು ಹಾಗೂ ವಿವೇಕವನ್ನು ಕಲಿಸಿಕೊಡುವ ಮತ್ತು ಅವರನ್ನು ಶುದ್ಧೀಕರಿಸುವ ಒಬ್ಬ ಸಂದೇಶವಾಹಕರನ್ನು ಅವರಿಂದಲೇ ಅವರಿಗೆ ಕಳುಹಿಸು.[1] ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ವಿವೇಕಪೂರ್ಣನಾಗಿರುವೆ.”
Kannada Translation - Hamza Buturಸ್ವಯಂ ಅವಿವೇಕಿಯಾಗಿರುವವನ ಹೊರತು ಇನ್ನಾರೂ ಇಬ್ರಾಹೀಮರ ಮಾರ್ಗದಿಂದ ವಿಮುಖರಾಗುವುದಿಲ್ಲ. ಇಹಲೋಕದಲ್ಲಿ ನಾವು ಅವರನ್ನು (ಇಬ್ರಾಹೀಮರನ್ನು) ವಿಶೇಷವಾಗಿ ಆರಿಸಿದ್ದೇವೆ. ಪರಲೋಕದಲ್ಲಿ ಅವರು ನೀತಿವಂತರಲ್ಲಿ ಸೇರಿರುತ್ತಾರೆ.
Kannada Translation - Hamza Buturಅವರೊಡನೆ ಅವರ ಪರಿಪಾಲಕನು (ಅಲ್ಲಾಹು) “ಶರಣಾಗು” ಎಂದಾಗ, ಅವರು ಹೇಳಿದರು: “ಸರ್ವಲೋಕಗಳ ಪರಿಪಾಲಕನಿಗೆ (ಅಲ್ಲಾಹನಿಗೆ) ನಾನು ಸಂಪೂರ್ಣ ಶರಣಾಗಿದ್ದೇನೆ.”
Kannada Translation - Hamza Buturಇಬ್ರಾಹೀಮ್ ಮತ್ತು ಯಾಕೂಬರು ತಮ್ಮ ಸಂತಾನಕ್ಕೆ ಅದನ್ನೇ ಉಪದೇಶಿಸುತ್ತಾ ಹೇಳಿದರು: “ಓ ನನ್ನ ಮಕ್ಕಳೇ! ನಿಶ್ಚಯವಾಗಿಯೂ ಅಲ್ಲಾಹು ಈ ಧರ್ಮವನ್ನು ನಿಮಗೆ ವಿಶೇಷವಾಗಿ ಆರಿಸಿದ್ದಾನೆ. ಆದ್ದರಿಂದ ನೀವು ಮುಸ್ಲಿಮರಾಗಿಯೇ ಹೊರತು ಇಹಲೋಕ ತ್ಯಜಿಸಬೇಡಿ.”
Kannada Translation - Hamza Buturಯಾಕೂಬರ ಮರಣದ ಸಮಯದಲ್ಲಿ ನೀವು ಅಲ್ಲಿ ಉಪಸ್ಥಿತರಿದ್ದಿರಾ? ಅವರು ತಮ್ಮ ಮಕ್ಕಳೊಡನೆ, “ನನ್ನ ಬಳಿಕ ನೀವು ಯಾರನ್ನು ಆರಾಧಿಸುತ್ತೀರಿ?” ಎಂದು ಕೇಳಿದ ಸಂದರ್ಭ. ಮಕ್ಕಳು ಹೇಳಿದರು: “ನಾವು ನಿಮ್ಮ ದೇವನು ಮತ್ತು ನಿಮ್ಮ ಪೂರ್ವಜರಾದ ಇಬ್ರಾಹೀಮ್, ಇಸ್ಮಾಈಲ್ ಹಾಗೂ ಇಸ್‍ಹಾಕರ ದೇವನಾದ ಏಕೈಕ ದೇವನನ್ನು ಆರಾಧಿಸುತ್ತೇವೆ. ನಾವು ಅವನಿಗೆ ಶರಣಾಗಿ ಬದುಕುತ್ತೇವೆ.”
Kannada Translation - Hamza Buturಆ ಸಮುದಾಯವು ಕಳೆದುಹೋಗಿದೆ. ಅವರು ಮಾಡಿದ್ದು ಅವರಿಗೆ ಮತ್ತು ನೀವು ಮಾಡಿದ್ದು ನಿಮಗೆ. ಅವರು ಮಾಡಿದ ಕರ್ಮಗಳ ಬಗ್ಗೆ ನಿಮ್ಮೊಂದಿಗೆ ಪ್ರಶ್ನಿಸಲಾಗುವುದಿಲ್ಲ.
Kannada Translation - Hamza Buturಅವರು ಹೇಳಿದರು: “ನೀವು ಯಹೂದಿಗಳು ಅಥವಾ ಕ್ರೈಸ್ತರಾಗಿರಿ; ನೀವು ಸನ್ಮಾರ್ಗ ಪಡೆಯುವಿರಿ.” ಹೇಳಿರಿ: “ಅಲ್ಲ; (ವಾಸ್ತವವಾಗಿ ಸನ್ಮಾರ್ಗದಲ್ಲಿರುವವರು) ಇಬ್ರಾಹೀಮರ ಮಾರ್ಗವನ್ನು ಹಿಂಬಾಲಿಸುವವರು. ಅವರು (ಇಬ್ರಾಹೀಮ್) ಏಕನಿಷ್ಠರಾಗಿದ್ದರು.[1] ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.”
Kannada Translation - Hamza Buturಹೇಳಿರಿ: “ನಾವು ಅಲ್ಲಾಹನಲ್ಲಿ, ನಮಗೆ ಅವತೀರ್ಣವಾಗಿರುವುದರಲ್ಲಿ, ಇಬ್ರಾಹೀಮರಿಗೆ, ಇಸ್ಮಾಈಲರಿಗೆ, ಇಸ್‍ಹಾಕರಿಗೆ, ಯಾಕೂಬರಿಗೆ ಮತ್ತು ಯಾಕೂಬರ ಸಂತಾನಕ್ಕೆ ಅವತೀರ್ಣವಾಗಿರುವುದರಲ್ಲಿ, ಮೂಸಾ ಮತ್ತು ಈಸಾರಿಗೆ ನೀಡಲಾಗಿರುವುದರಲ್ಲಿ, ಎಲ್ಲಾ ಪ್ರವಾದಿಗಳಿಗೂ ಅವರ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನೀಡಲಾಗಿರುವುದರಲ್ಲಿ ವಿಶ್ವಾಸವಿಟ್ಟಿದ್ದೇವೆ. ಅವರಲ್ಲಿ ಯಾರ ನಡುವೆಯೂ ನಾವು ಬೇಧ ಮಾಡುವುದಿಲ್ಲ. ನಾವು ಅವನಿಗೆ ಶರಣಾಗಿ ಬದುಕುತ್ತೇವೆ.”
Kannada Translation - Hamza Buturನೀವು ವಿಶ್ವಾಸವಿಟ್ಟಂತೆಯೇ ಅವರೂ ವಿಶ್ವಾಸವಿಟ್ಟರೆ ಅವರು ಸನ್ಮಾರ್ಗ ಪಡೆಯುವರು. ಆದರೆ ಅವರು ವಿಮುಖರಾಗುವುದಾದರೆ ಅವರು ಸ್ಪಷ್ಟ ಭಿನ್ನಮತದಲ್ಲಿದ್ದಾರೆ. ಅವರ ವಿರುದ್ಧ ನಿಮಗೆ ಅಲ್ಲಾಹು ಸಾಕಾಗುವನು. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.[1]
Kannada Translation - Hamza Butur(ಓ ಪ್ರವಾದಿಯವರೇ!) ಹೇಳಿರಿ: “ನೀವು ನಮ್ಮ ಮತ್ತು ನಿಮ್ಮ ಪರಿಪಾಲಕನಾದ ಅಲ್ಲಾಹನ ವಿಷಯದಲ್ಲಿ ನಮ್ಮೊಡನೆ ತರ್ಕಿಸುತ್ತೀರಾ? ನಮ್ಮ ಕರ್ಮಗಳು ನಮಗೆ ಮತ್ತು ನಿಮ್ಮ ಕರ್ಮಗಳು ನಿಮಗೆ. ನಾವಂತೂ ಅವನಿಗೆ ಸಂಪೂರ್ಣ ನಿಷ್ಕಳಂಕರಾಗಿದ್ದೇವೆ.”
Kannada Translation - Hamza Buturಇಬ್ರಾಹೀಮ್, ಇಸ್ಮಾಈಲ್, ಇಸ್‍ಹಾಕ್, ಯಾಕೂಬ್ ಮತ್ತು ಯಾಕೂಬರ ಸಂತಾನಗಳು ಯಹೂದಿಗಳು ಅಥವಾ ಕ್ರೈಸ್ತರಾಗಿದ್ದರೆಂದು ನೀವು ಹೇಳುತ್ತೀರಾ? ಹೇಳಿರಿ: “ಹೆಚ್ಚು ತಿಳಿದವರು ನೀವೋ ಅಥವಾ ಅಲ್ಲಾಹನೋ?” ಅಲ್ಲಾಹನ ಬಳಿ ಸಾಕ್ಷಿಯನ್ನು ಅಡಗಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.
Kannada Translation - Hamza Buturಆ ಸಮುದಾಯವು ಕಳೆದುಹೋಗಿದೆ. ಅವರು ಮಾಡಿದ್ದು ಅವರಿಗೆ ಮತ್ತು ನೀವು ಮಾಡಿದ್ದು ನಿಮಗೆ. ಅವರು ಮಾಡಿದ ಕರ್ಮಗಳ ಬಗ್ಗೆ ನಿಮ್ಮೊಂದಿಗೆ ಪ್ರಶ್ನಿಸಲಾಗುವುದಿಲ್ಲ.
Kannada Translation - Hamza Butur“ಇವರು ಇದುವರೆಗೆ ಯಾವ ಕಿಬ್ಲದಲ್ಲಿದ್ದರೋ ಅದರಿಂದ ಇವರನ್ನು ತಿರುಗಿಸಿದ್ದೇನು?” ಎಂದು ಸದ್ಯವೇ ಜನರಲ್ಲಿರುವ ಕೆಲವು ತಿಳಿಗೇಡಿಗಳು ಕೇಳುವರು. ಹೇಳಿರಿ: “ಪೂರ್ವ ಮತ್ತು ಪಶ್ಚಿಮಗಳು ಅಲ್ಲಾಹನಿಗೆ ಸೇರಿದ್ದು. ಅವನು ಇಚ್ಛಿಸುವವರಿಗೆ ಅವನು ನೇರ ಮಾರ್ಗವನ್ನು ತೋರಿಸುತ್ತಾನೆ.”
Kannada Translation - Hamza Buturಈ ರೀತಿ ನಾವು ನಿಮ್ಮನ್ನು ಒಂದು ಮಧ್ಯಮ ಸಮುದಾಯವನ್ನಾಗಿ ಮಾಡಿದೆವು; ನೀವು ಜನರಿಗೆ ಸಾಕ್ಷಿಗಳಾಗಲು ಮತ್ತು ಸಂದೇಶವಾಹಕರು ನಿಮಗೆ ಸಾಕ್ಷಿಯಾಗಲು. ನೀವು (ಮೊದಲು) ಯಾವ ಕಿಬ್ಲದಲ್ಲಿದ್ದಿರೋ ಅದನ್ನು ನಾವು ನಿಶ್ಚಯಿಸಿದ್ದು, ಸಂದೇಶವಾಹಕರನ್ನು ಹಿಂಬಾಲಿಸುವವರು ಯಾರು ಮತ್ತು ತಮ್ಮ ಹಿಮ್ಮಡಿಗಳಲ್ಲಿ ತಿರುಗಿ ನಡೆಯುವವರು ಯಾರು ಎಂದು ತಿಳಿಯುವುದಕ್ಕಾಗಿ ಮಾತ್ರ. ಅಲ್ಲಾಹು ಸನ್ಮಾರ್ಗದಲ್ಲಿ ಸೇರಿಸಿದವರ ಹೊರತು ಇತರೆಲ್ಲರಿಗೂ ಅದು ಬಹಳ ಕಷ್ಟದ ಕೆಲಸವಾಗಿದೆ. ಅಲ್ಲಾಹು ನಿಮ್ಮ ವಿಶ್ವಾಸವನ್ನು ವ್ಯರ್ಥಗೊಳಿಸುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಮನುಷ್ಯರೊಂದಿಗೆ ಅನುಕಂಪವುಳ್ಳವನು ಮತ್ತು ಕರುಣೆಯುಳ್ಳವನಾಗಿದ್ದಾನೆ.
Kannada Translation - Hamza Buturನಿಮ್ಮ ಮುಖವು ಪದೇ ಪದೇ ಆಕಾಶದ ಕಡೆಗೆ ತಿರುಗುವುದನ್ನು ನಾವು ನೋಡುತ್ತಿದ್ದೇವೆ. ಆದ್ದರಿಂದ ಈಗ ನಾವು ನಿಮ್ಮನ್ನು ನೀವು ಇಷ್ಟಪಡುವ ಕಿಬ್ಲದ ಕಡೆಗೆ ತಿರುಗಿಸುತ್ತೇವೆ.[1] ನೀವು ನಿಮ್ಮ ಮುಖವನ್ನು ಮಸ್ಜಿದುಲ್ ಹರಾಮ್‍ನ ಕಡೆಗೆ ತಿರುಗಿಸಿರಿ; ಮತ್ತು ನೀವು (ಮುಸ್ಲಿಮರು) ಎಲ್ಲೇ ಇದ್ದರೂ ನಿಮ್ಮ ಮುಖಗಳನ್ನು ಕೂಡ ಅದರ ಕಡೆಗೆ ತಿರುಗಿಸಿರಿ. ನಿಶ್ಚಯವಾಗಿಯೂ, ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವೆಂದು ಗ್ರಂಥ ನೀಡಲಾದವರಿಗೆ ಚೆನ್ನಾಗಿ ತಿಳಿದಿದೆ.[2] ಅವರು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.
Kannada Translation - Hamza Buturಗ್ರಂಥ ನೀಡಲಾದವರಿಗೆ ನೀವು ಎಲ್ಲಾ ರೀತಿಯ ಪುರಾವೆಗಳನ್ನು ತಂದು ತೋರಿಸಿದರೂ ಅವರು ನಿಮ್ಮ ಕಿಬ್ಲವನ್ನು ಹಿಂಬಾಲಿಸುವುದಿಲ್ಲ. ನೀವು ಕೂಡ ಅವರ ಕಿಬ್ಲವನ್ನು ಅಂಗೀಕರಿಸುವುದಿಲ್ಲ. ಅವರಲ್ಲಿ ಒಬ್ಬರು ಇನ್ನೊಬ್ಬರ ಕಿಬ್ಲವನ್ನು ಅಂಗೀಕರಿಸುವುದಿಲ್ಲ. ನಿಮಗೆ ಜ್ಞಾನವು ಬಂದ ಬಳಿಕ ನೀವೇನಾದರೂ ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಿದರೆ, ನಿಶ್ಚಯವಾಗಿಯೂ ನೀವು ಅಕ್ರಮಿಗಳಲ್ಲಿ ಸೇರುವಿರಿ.
Kannada Translation - Hamza Buturನಾವು ಯಾರಿಗೆ ಗ್ರಂಥವನ್ನು ನೀಡಿದ್ದೇವೆಯೋ ಅವರು ತಮ್ಮ ಮಕ್ಕಳನ್ನು ಗುರುತಿಸುವಂತೆಯೇ ಅವರನ್ನು (ಪ್ರವಾದಿಯನ್ನು) ಗುರುತಿಸುತ್ತಾರೆ. ನಿಶ್ಚಯವಾಗಿಯೂ ಅವರಲ್ಲೊಂದು ಗುಂಪು ಸತ್ಯವನ್ನು ತಿಳಿದೂ ಸಹ ಅದನ್ನು ಮುಚ್ಚಿಡುತ್ತಾರೆ.
Kannada Translation - Hamza Buturಪ್ರತಿಯೊಬ್ಬರೂ (ಪ್ರಾರ್ಥನೆಯ ವೇಳೆ) ಒಂದಲ್ಲ ಒಂದು ಕಡೆಗೆ ತಿರುಗುತ್ತಾರೆ. ನೀವು ಸತ್ಕರ್ಮಗಳನ್ನು ಮಾಡಲು ಧಾವಿಸಿರಿ. ನೀವೆಲ್ಲೇ ಇದ್ದರೂ ಅಲ್ಲಾಹು ನಿಮ್ಮೆಲ್ಲರನ್ನೂ ತರುವನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
Kannada Translation - Hamza Buturನೀವು ಎಲ್ಲಿಂದ ಹೊರಟರೂ ನಿಮ್ಮ ಮುಖವನ್ನು ಮಸ್ಜಿದುಲ್ ಹರಾಮ್‍ನ ಕಡೆಗೆ ತಿರುಗಿಸಿರಿ. ನಿಶ್ಚಯವಾಗಿಯೂ ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ. ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.
Kannada Translation - Hamza Buturನೀವು ಎಲ್ಲಿಂದ ಹೊರಟರೂ ನಿಮ್ಮ ಮುಖವನ್ನು ಮಸ್ಜಿದುಲ್ ಹರಾಮ್‍ನ ಕಡೆಗೆ ತಿರುಗಿಸಿರಿ. ನೀವು (ಮುಸ್ಲಿಮರು) ಎಲ್ಲೇ ಇದ್ದರೂ ನಿಮ್ಮ ಮುಖಗಳನ್ನು ಅದರ ಕಡೆಗೆ ತಿರುಗಿಸಿರಿ. ನಿಮ್ಮ ವಿರುದ್ಧ ಜನರಿಗೆ ಯಾವುದೇ ಸಾಕ್ಷ್ಯಾಧಾರ ಇಲ್ಲದಿರುವುದಕ್ಕಾಗಿ; ಆದರೆ ಅವರ ಪೈಕಿ ಅಕ್ರಮವೆಸಗಿದವರ ಹೊರತು. ನೀವು ಅವರನ್ನು ಭಯಪಡಬೇಡಿ; ನನ್ನನ್ನು ಭಯಪಡಿರಿ. ನಾನು ನನ್ನ ಅನುಗ್ರಹವನ್ನು ನಿಮಗೆ ಪೂರ್ಣಗೊಳಿಸುವುದಕ್ಕಾಗಿ ಮತ್ತು ನೀವು ಸನ್ಮಾರ್ಗ ಪಡೆಯುವುದಕ್ಕಾಗಿ.
Kannada Translation - Hamza Buturನಾವು ನಿಮ್ಮಿಂದಲೇ ನಿಮಗೆ ಒಬ್ಬ ಸಂದೇಶವಾಹಕರನ್ನು ಕಳುಹಿಸಿದಂತೆ. ಅವರು ನಮ್ಮ ವಚನಗಳನ್ನು ನಿಮಗೆ ಓದಿಕೊಡುತ್ತಾರೆ, ನಿಮ್ಮನ್ನು ಶುದ್ಧೀಕರಿಸುತ್ತಾರೆ, ನಿಮಗೆ ಗ್ರಂಥವನ್ನು ಮತ್ತು ವಿವೇಕವನ್ನು ಕಲಿಸಿಕೊಡುತ್ತಾರೆ ಮತ್ತು ನಿಮಗೆ ತಿಳಿದಿರದ ವಿಷಯಗಳನ್ನು ಕಲಿಸಿಕೊಡುತ್ತಾರೆ.
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ತಾಳ್ಮೆ ಮತ್ತು ನಮಾಝಿನ ಮೂಲಕ (ಅಲ್ಲಾಹನಲ್ಲಿ) ಸಹಾಯ ಬೇಡಿರಿ. ನಿಶ್ಚಯವಾಗಿಯೂ ಅಲ್ಲಾಹು ತಾಳ್ಮೆಯುಳ್ಳವರ ಜೊತೆಗಿದ್ದಾನೆ.
Kannada Translation - Hamza Buturನಿಶ್ಚಯವಾಗಿಯೂ ನಾವು ನಿಮ್ಮನ್ನು ಶತ್ರುಗಳ ಭಯದಿಂದ, ಹಸಿವಿನಿಂದ, ಆಸ್ತಿ, ಜೀವ ಅಥವಾ ಹಣ್ಣುಗಳ ನಷ್ಟದಿಂದ, ಹೀಗೆ ಒಂದಲ್ಲ ಒಂದು ವಿಧದಲ್ಲಿ ಪರೀಕ್ಷಿಸುತ್ತೇವೆ; ತಾಳ್ಮೆ ವಹಿಸುವವರಿಗೆ ಸುವಾರ್ತೆ ನೀಡಿರಿ.
Kannada Translation - Hamza Buturಅವರು ಯಾರೆಂದರೆ, ಅವರಿಗೆ ಏನಾದರೂ ಅನಾಹುತ ಸಂಭವಿಸುವಾಗ ಅವರು ಹೇಳುತ್ತಾರೆ: “ನಿಶ್ಚಯವಾಗಿಯೂ ನಾವು ಅಲ್ಲಾಹನಿಗೆ ಸೇರಿದವರು; ಮತ್ತು ನಾವು ಅವನ ಕಡೆಗೇ ಮರಳುವವರು.”
Kannada Translation - Hamza Buturನಿಶ್ಚಯವಾಗಿಯೂ ಸಫಾ ಮತ್ತು ಮರ್ವಾ ಅಲ್ಲಾಹನ ಚಿಹ್ನೆಗಳಲ್ಲಿ ಒಳಪಟ್ಟದ್ದಾಗಿವೆ. ಆದ್ದರಿಂದ ಅಲ್ಲಾಹನ ಭವನಕ್ಕೆ ಹಜ್ ಅಥವಾ ಉಮ್ರಾ ಮಾಡುವವರು ಇವುಗಳಿಗೆ ಪ್ರದಕ್ಷಿಣೆ ಮಾಡುವುದರಲ್ಲಿ ಯಾವುದೇ ದೋಷವಿಲ್ಲ.[1] ಸ್ವಯಂಪ್ರೇರಿತವಾಗಿ ಒಳಿತು ಮಾಡುವವರನ್ನು ಅಲ್ಲಾಹು ಮೆಚ್ಚುತ್ತಾನೆ ಮತ್ತು ಅವರ ಬಗ್ಗೆ ಅವನು ಚೆನ್ನಾಗಿ ತಿಳಿದಿದ್ದಾನೆ.
Kannada Translation - Hamza Buturನಾವು ಅವತೀರ್ಣಗೊಳಿಸಿದ ಸಾಕ್ಷ್ಯಾಧಾರಗಳನ್ನು ಮತ್ತು ಸನ್ಮಾರ್ಗವನ್ನು—ಅದನ್ನು ನಾವು ಗ್ರಂಥದಲ್ಲಿ ಜನರಿಗೆ ವಿವರಿಸಿಕೊಟ್ಟ ಬಳಿಕವೂ—ಬಚ್ಚಿಡುವವರು ಯಾರೋ ಅವರ ಮೇಲೆ ಅಲ್ಲಾಹನ ಶಾಪವಿದೆ; ಶಪಿಸುವವರೆಲ್ಲರ ಶಾಪವೂ ಇದೆ.
Kannada Translation - Hamza Buturಆದರೆ ಪಶ್ಚಾತ್ತಾಪಪಡುವವರು, ಸರಿಪಡಿಸುವವರು ಮತ್ತು ವಿವರಿಸಿಕೊಡುವವರು ಯಾರೋ (ಅವರು ಇದಕ್ಕೆ ಹೊರತಾಗಿದ್ದಾರೆ). ಅವರ ಪಶ್ಚಾತ್ತಾಪವನ್ನು ನಾನು ಸ್ವೀಕರಿಸುತ್ತೇನೆ. ನಾನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದೇನೆ.
Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳು ಮತ್ತು ಸತ್ಯನಿಷೇಧಿಗಳಾಗಿಯೇ ಸಾಯುವವರು ಯಾರೋ ಅವರ ಮೇಲೆ ಅಲ್ಲಾಹನ, ದೇವದೂತರುಗಳ ಮತ್ತು ಮನುಷ್ಯರೆಲ್ಲರ ಶಾಪವಿದೆ.
Kannada Translation - Hamza Buturನಿಶ್ಚಯವಾಗಿಯೂ ಭೂಮ್ಯಾಕಾಶಗಳ ಸೃಷ್ಟಿಯಲ್ಲಿ, ರಾತ್ರಿ-ಹಗಲುಗಳ ಬದಲಾವಣೆಯಲ್ಲಿ, ಜನರಿಗೆ ಉಪಕರಿಸುವ ವಸ್ತುಗಳೊಂದಿಗೆ ಸಮುದ್ರದಲ್ಲಿ ಚಲಿಸುವ ನಾವೆಗಳಲ್ಲಿ, ಅಲ್ಲಾಹು ಆಕಾಶದಿಂದ ಮಳೆಯನ್ನು ಸುರಿಸಿ ಅದರ ಮೂಲಕ ನಿರ್ಜೀವ ಭೂಮಿಗೆ ಜೀವ ನೀಡುವುದರಲ್ಲಿ, ಭೂಮಿಯಲ್ಲಿ ಎಲ್ಲಾ ರೀತಿಯ ಜೀವಿಗಳನ್ನು ಹಬ್ಬಿಸಿರುವುದರಲ್ಲಿ, ಗಾಳಿಯು ದಿಕ್ಕನ್ನು ಬದಲಿಸುವುದರಲ್ಲಿ ಮತ್ತು ಭೂಮ್ಯಾಕಾಶಗಳ ನಡುವೆ ನಿಯಂತ್ರಿಸಲಾಗುವ ಮೋಡಗಳಲ್ಲಿ ಆಲೋಚಿಸುವ ಜನರಿಗೆ ಹಲವಾರು ದೃಷ್ಟಾಂತಗಳಿವೆ.
Kannada Translation - Hamza Buturಅಲ್ಲಾಹನಿಗೆ ಇತರರನ್ನು ಸರಿಸಾಟಿಯಾಗಿ ಮಾಡುವ ಕೆಲವರಿದ್ದಾರೆ. ಅಲ್ಲಾಹನನ್ನು ಪ್ರೀತಿಸುವಂತೆಯೇ ಅವರು ಅವರನ್ನೂ ಪ್ರೀತಿಸುತ್ತಾರೆ. ಆದರೆ ಸತ್ಯವಿಶ್ವಾಸಿಗಳು ಅಲ್ಲಾಹನನ್ನು (ಎಲ್ಲಕ್ಕಿಂತಲೂ) ಗಾಢವಾಗಿ ಪ್ರೀತಿಸುತ್ತಾರೆ.[1] ಅಕ್ರಮಿಗಳು (ಅಲ್ಲಾಹನ) ಶಿಕ್ಷೆಯನ್ನು ನೇರವಾಗಿ ನೋಡುವಾಗ, ಶಕ್ತಿ-ಸಾಮರ್ಥ್ಯವಿರುವುದು ಸಂಪೂರ್ಣವಾಗಿ ಅಲ್ಲಾಹನಿಗೆ ಮಾತ್ರ; ಮತ್ತು ಅಲ್ಲಾಹು ಅತಿಕಠೋರವಾಗಿ ಶಿಕ್ಷಿಸುತ್ತಾನೆಂದು ತಿಳಿಯುತ್ತಿದ್ದರೆ (ಎಷ್ಟು ಚೆನ್ನಾಗಿತ್ತು)!
Kannada Translation - Hamza Buturಹಿಂಬಾಲಕರು ಹೇಳುವರು: “ನಮಗೆ (ಇಹಲೋಕಕ್ಕೆ) ಮರಳುವ ಇನ್ನೊಂದು ಅವಕಾಶವು ಸಿಗುತ್ತಿದ್ದರೆ, ಅವರು ನಮ್ಮಿಂದ ದೂರವಾದಂತೆ ನಾವೂ ಅವರಿಂದ ದೂರವಾಗುವೆವು.” ಈ ರೀತಿ ಅಲ್ಲಾಹು ಅವರ ಕರ್ಮಗಳನ್ನು ಅವರಿಗೆ ವಿಷಾದವಾಗುವ ರೀತಿಯಲ್ಲಿ ತೋರಿಸುವನು. ಅವರು ನರಕಾಗ್ನಿಯಿಂದ ಹೊರಹೋಗುವುದೇ ಇಲ್ಲ.
Kannada Translation - Hamza Buturಓ ಜನರೇ! ಭೂಮಿಯಲ್ಲಿರುವ ಧರ್ಮಸಮ್ಮತವಾದ ಮತ್ತು ಶುದ್ಧವಾದ ಆಹಾರವನ್ನು ತಿನ್ನಿರಿ. ಶೈತಾನನ ಹೆಜ್ಜೆಗಳನ್ನು ಹಿಂಬಾಲಿಸಬೇಡಿ. ನಿಶ್ಚಯವಾಗಿಯೂ ಅವನು ನಿಮ್ಮ ಪ್ರತ್ಯಕ್ಷ ವೈರಿಯಾಗಿದ್ದಾನೆ.
Kannada Translation - Hamza Butur“ಅಲ್ಲಾಹು ಅವತೀರ್ಣಗೊಳಿಸಿದ್ದನ್ನು ಅನುಸರಿಸಿರಿ” ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ಇಲ್ಲ, ನಮ್ಮ ಪೂರ್ವಜರು ಯಾವ ಮಾರ್ಗದಲ್ಲಿರುವುದನ್ನು ನಾವು ಕಂಡೆವೋ ಅದನ್ನೇ ನಾವು ಅನುಸರಿಸುತ್ತೇವೆ.”[1] ಅವರ ಪೂರ್ವಜರು ಏನೂ ತಿಳಿಯದವರು ಮತ್ತು ಸನ್ಮಾರ್ಗ ಪಡೆಯದವರಾಗಿದ್ದರೂ ಸಹ.
Kannada Translation - Hamza Buturಸತ್ಯನಿಷೇಧಿಗಳ ಉದಾಹರಣೆಯು ಕರೆ ಮತ್ತು ಕೂಗನ್ನು ಮಾತ್ರ ಕೇಳುವ ಜಾನುವಾರುಗಳ ಮುಂದೆ ಕಿರಿಚುವ ವ್ಯಕ್ತಿಯಂತೆ. ಅವರು ಕಿವುಡರು, ಮೂಕರು ಮತ್ತು ಕುರುಡರು. ಆದ್ದರಿಂದ ಅವರು ಅರ್ಥಮಾಡಿಕೊಳ್ಳುವುದಿಲ್ಲ.
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನಾವು ನಿಮಗೆ ನೀಡಿದ ಶುದ್ಧ ವಸ್ತುಗಳಿಂದ ತಿನ್ನಿರಿ ಮತ್ತು ಅಲ್ಲಾಹನಿಗೆ ಕೃತಜ್ಞರಾಗಿರಿ; ನೀವು ಅವನನ್ನು ಮಾತ್ರ ಆರಾಧಿಸುವವರಾಗಿದ್ದರೆ.
Kannada Translation - Hamza Buturಅವನು ನಿಮಗೆ ಶವ, ರಕ್ತ, ಹಂದಿ ಮಾಂಸ ಮತ್ತು ಅಲ್ಲಾಹೇತರರ ಹೆಸರನ್ನು ಘೋಷಿಸಲಾದ ವಸ್ತುಗಳನ್ನು ಮಾತ್ರ ನಿಷೇಧಿಸಿದ್ದಾನೆ.[1] ಆದರೆ ಯಾರಾದರೂ (ಇವುಗಳನ್ನು ಸೇವಿಸಲು) ನಿರ್ಬಂಧಿತನಾದರೆ ಅವನ ಮೇಲೆ ದೋಷವಿಲ್ಲ. ಆದರೆ ಅವನು ಅಗತ್ಯಕ್ಕಿಂತ ಹೆಚ್ಚು ಸೇವಿಸಬಾರದು ಮತ್ತು (ಅಲ್ಲಾಹು ಅನುಮತಿಸಿದ) ಎಲ್ಲೆಯನ್ನು ಮೀರಬಾರದು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಅವತೀರ್ಣಗೊಳಿಸಿದ ಗ್ರಂಥವನ್ನು ಬಚ್ಚಿಡುವವರು ಮತ್ತು ಅದನ್ನು ಅಲ್ಪ ಬೆಲೆಗೆ ಮಾರುವವರು ಯಾರೋ—ಅವರು ತಮ್ಮ ಉದರಗಳಲ್ಲಿ ಅಗ್ನಿಯನ್ನಲ್ಲದೆ ಬೇರೇನನ್ನೂ ತುಂಬಿಸುವುದಿಲ್ಲ. ಪುನರುತ್ಥಾನ ದಿನದಂದು ಅಲ್ಲಾಹು ಅವರೊಡನೆ ಮಾತನಾಡುವುದಿಲ್ಲ ಮತ್ತು ಅವರನ್ನು ಶುದ್ಧೀಕರಿಸುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ.
Kannada Translation - Hamza Buturಅವರೇ ಸನ್ಮಾರ್ಗದ ಬದಲಿಗೆ ದುರ್ಮಾರ್ಗವನ್ನು ಮತ್ತು ಕ್ಷಮೆಯ ಬದಲಿಗೆ ಶಿಕ್ಷೆಯನ್ನು ಖರೀದಿಸಿದವರು. ಅವರು ನರಕ ಶಿಕ್ಷೆಯನ್ನು ಎಷ್ಟರಮಟ್ಟಿಗೆ ಸಹಿಸಿಕೊಳ್ಳುವರು!
Kannada Translation - Hamza Buturಅದೇಕೆಂದರೆ, ಅಲ್ಲಾಹು ಗ್ರಂಥವನ್ನು ಸತ್ಯ ಸಮೇತ ಅವತೀರ್ಣಗೊಳಿಸಿದ್ದನು. ಗ್ರಂಥದ ವಿಷಯದಲ್ಲಿ ಭಿನ್ನಮತದಲ್ಲಿರುವವರು ವಿದೂರ ಮನಸ್ತಾಪದಲ್ಲಿದ್ದಾರೆ.
Kannada Translation - Hamza Buturಒಳಿತು ಎಂದರೆ ನೀವು ನಿಮ್ಮ ಮುಖಗಳನ್ನು ಪೂರ್ವಕ್ಕೆ ಅಥವಾ ಪಶ್ಚಿಮಕ್ಕೆ ತಿರುಗಿಸುವುದಲ್ಲ. ಬದಲಿಗೆ, ಒಳಿತಿನಲ್ಲಿರುವವನು ಯಾರೆಂದರೆ ಅಲ್ಲಾಹನಲ್ಲಿ, ಅಂತ್ಯದಿನದಲ್ಲಿ, ದೇವದೂತರುಗಳಲ್ಲಿ, ಗ್ರಂಥದಲ್ಲಿ ಮತ್ತು ಪ್ರವಾದಿಗಳಲ್ಲಿ ವಿಶ್ವಾಸವಿಡುವವನು, ಧನದ ಮೇಲೆ ಪ್ರೀತಿಯಿದ್ದೂ ಸಹ ಅದನ್ನು ಸಂಬಂಧಿಕರಿಗೆ, ಅನಾಥರಿಗೆ, ನಿರ್ಗತಿಕರಿಗೆ, ದಾರಿಹೋಕನಿಗೆ, ಬೇಡುವವರಿಗೆ ಮತ್ತು ಗುಲಾಮ ವಿಮೋಚನೆಗೆ ಖರ್ಚು ಮಾಡುವವನು, ನಮಾಝನ್ನು ಸಂಸ್ಥಾಪಿಸುವವನು, ಝಕಾತ್ ನೀಡುವವನು, ಕರಾರು ಮಾಡಿದರೆ ಅದನ್ನು ನೆರವೇರಿಸುವವನು ಮತ್ತು ಬಡತನ, ಸಂಕಷ್ಟ ಹಾಗೂ ಯುದ್ಧಗಳ ಸಂದರ್ಭಗಳಲ್ಲಿ ತಾಳ್ಮೆಯಿಂದಿರುವವರು. ಅವರೇ (ನಿಜವಾದ) ಸತ್ಯವಂತರು ಮತ್ತು ಅವರೇ ದೇವಭಯವುಳ್ಳವರು.
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಕೊಲೆಯಾದವರ ವಿಷಯದಲ್ಲಿ ಪ್ರತೀಕಾರ ಪಡೆಯುವುದನ್ನು ನಿಮಗೆ ಕಡ್ಡಾಯಗೊಳಿಸಲಾಗಿದೆ. ಸ್ವತಂತ್ರನ ಬದಲಿಗೆ ಸ್ವತಂತ್ರ, ಗುಲಾಮನ ಬದಲಿಗೆ ಗುಲಾಮ ಮತ್ತು ಹೆಣ್ಣಿನ ಬದಲಿಗೆ ಹೆಣ್ಣು. ಯಾರಿಗಾದರೂ ಅವನ ಸಹೋದರನ (ಕೊಲೆಯಾದವನ) ಕಡೆಯಿಂದ ಮಾಫಿ ನೀಡಲಾದರೆ, ಅವನು ಸ್ವೀಕಾರಾರ್ಹ ರೀತಿಯನ್ನು ಅನುಸರಿಸಲಿ ಮತ್ತು ಒಳ್ಳೆಯ ರೀತಿಯಲ್ಲಿ ಪರಿಹಾರವನ್ನು ನೀಡಲಿ. ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ರಿಯಾಯಿತಿ ಮತ್ತು ದಯೆಯಾಗಿದೆ. ಅದರ ನಂತರವೂ ಯಾರಾದರೂ ಅತಿರೇಕವೆಸಗಿದರೆ ಅವನಿಗೆ ವೇದನಾಭರಿತ ಶಿಕ್ಷೆಯಿದೆ.
Kannada Translation - Hamza Buturನಿಮ್ಮಲ್ಲೊಬ್ಬರಿಗೆ ಮರಣವು ಆಸನ್ನವಾಗಿ ಅವನು ಆಸ್ತಿಯನ್ನು ಬಿಟ್ಟು ಹೋಗುವುದಾದರೆ, ತಂದೆ-ತಾಯಿಗೆ ಮತ್ತು ನಿಕಟ ಸಂಬಂಧಿಕರಿಗೆ ಸ್ವೀಕಾರಾರ್ಹ ರೀತಿಯಲ್ಲಿ ಉಯಿಲು ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.[1] ಇದು ದೇವಭಯವುಳ್ಳವರ ಕರ್ತವ್ಯವಾಗಿದೆ.
Kannada Translation - Hamza Buturಆದರೆ, ಅದನ್ನು (ಉಯಿಲನ್ನು) ಕೇಳಿದ ಬಳಿಕವೂ ಯಾರಾದರೂ ಅದನ್ನು ಬದಲಾಯಿಸಿದರೆ, ಆ ಪಾಪವು ಬದಲಾಯಿಸುವವರಿಗೆ ಮಾತ್ರವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Kannada Translation - Hamza Buturಆದರೆ, ಉಯಿಲು ಮಾಡಿದವನಿಂದ ಏನಾದರೂ ತಪ್ಪು ಅಥವಾ ಪಾಪವು ಸಂಭವಿಸಿದೆಯೆಂದು ಹೆದರಿ, ಯಾರಾದರೂ ಸಂಬಂಧಿತ ಕಕ್ಷಿಗಳ ಮಧ್ಯೆ ಸಂಧಾನ ಮಾಡಿದರೆ ಅದರಲ್ಲಿ ಅವರಿಗೆ ದೋಷವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.
Kannada Translation - Hamza Buturಬೆರಳೆಣಿಕೆಯ ಕೆಲವು ದಿನಗಳು ಮಾತ್ರ. ನಿಮ್ಮಲ್ಲಿ ಯಾರಾದರೂ ಅನಾರೋಗ್ಯದಲ್ಲಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಅವನು ಇತರ ದಿನಗಳಲ್ಲಿ ಆ ಎಣಿಕೆಯನ್ನು ಪೂರ್ತಿ ಮಾಡಲಿ.[1] (ಉಪವಾಸ ಆಚರಿಸಲು) ಸಾಧ್ಯವಾಗುವವರು[2] (ಅದರ ಬದಲಿಗೆ) ಪ್ರಾಯಶ್ಚಿತ್ತವಾಗಿ ಒಬ್ಬ ಬಡವನಿಗೆ ಆಹಾರವನ್ನು ನೀಡಲಿ. ಯಾರಾದರೂ ಸ್ವಯಂ ಪ್ರೇರಣೆಯಿಂದ ಒಳಿತು ಮಾಡಿದರೆ ಅದು ಅವನಿಗೆ ಒಳಿತಾಗಿದೆ. ಆದರೆ ಉಪವಾಸ ಆಚರಿಸುವುದೇ ನಿಮಗೆ ಒಳ್ಳೆಯದು.[3] ನೀವು ತಿಳಿದವರಾಗಿದ್ದರೆ.
Kannada Translation - Hamza Buturರಮದಾನ್ ಎಂದರೆ ಜನರಿಗೆ ಸನ್ಮಾರ್ಗವನ್ನು ತೋರಿಸಿಕೊಡುವ ಮತ್ತು ಸನ್ಮಾರ್ಗ ಹಾಗೂ ಸತ್ಯಾಸತ್ಯತೆಗಳನ್ನು ಬೇರ್ಪಡಿಸುವ ಪುರಾವೆಗಳನ್ನು ಹೊಂದಿರುವ ಪವಿತ್ರ ಕುರ್‌ಆನ್ ಅವತೀರ್ಣವಾದ ತಿಂಗಳು. ಆದ್ದರಿಂದ ನಿಮ್ಮಲ್ಲಿ ಯಾರಾದರೂ ಆ ತಿಂಗಳಿಗೆ ಸಾಕ್ಷಿಯಾದರೆ ಅವನು ಉಪವಾಸವನ್ನು ಆಚರಿಸಲಿ. ಯಾರಾದರೂ ಅನಾರೋಗ್ಯದಲ್ಲಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಅವನು ಇತರ ದಿನಗಳಲ್ಲಿ ಆ ಎಣಿಕೆಯನ್ನು ಪೂರ್ತಿ ಮಾಡಲಿ. ಅಲ್ಲಾಹು ನಿಮಗೆ ಸುಲಭ ಮಾಡಲು ಬಯಸುತ್ತಾನೆ; ಅವನು ನಿಮಗೆ ಕಷ್ಟ ಕೊಡಲು ಬಯಸುವುದಿಲ್ಲ. ನೀವು ಆ ಎಣಿಕೆಯನ್ನು ಪೂರ್ತಿ ಮಾಡಲು, ಅಲ್ಲಾಹು ನಿಮಗೆ ಸನ್ಮಾರ್ಗವನ್ನು ತೋರಿಸಿದ್ದಕ್ಕಾಗಿ ಅವನ ಮಹಾತ್ಮೆಯನ್ನು ಕೊಂಡಾಡಲು ಮತ್ತು ಅವನಿಗೆ ಕೃತಜ್ಞರಾಗಿ ಬದುಕಲು (ಅವನು ಬಯಸುತ್ತಾನೆ).
Kannada Translation - Hamza Buturನನ್ನ ದಾಸರು ನಿಮ್ಮೊಂದಿಗೆ ನನ್ನ ಬಗ್ಗೆ ಕೇಳಿದರೆ ನಾನು ಬಹಳ ಹತ್ತಿರದಲ್ಲಿದ್ದೇನೆ (ಎಂದು ಹೇಳಿರಿ). ಪ್ರಾರ್ಥಿಸುವವನು ನನ್ನನ್ನು ಕರೆದು ಪ್ರಾರ್ಥಿಸಿದರೆ ನಾನು ಅವನ ಪ್ರಾರ್ಥನೆಗೆ ಉತ್ತರ ನೀಡುತ್ತೇನೆ. ಆದ್ದರಿಂದ ಅವರು ನನಗೆ ವಿಧೇಯರಾಗಲಿ ಮತ್ತು ನನ್ನಲ್ಲಿ ವಿಶ್ವಾಸವಿಡಲಿ. ಅವರು ಸನ್ಮಾರ್ಗ ಪಡೆಯುವುದಕ್ಕಾಗಿ.
Kannada Translation - Hamza Buturಉಪವಾಸದ ರಾತ್ರಿಯಲ್ಲಿ ನಿಮ್ಮ ಪತ್ನಿಯರೊಂದಿಗೆ ಲೈಂಗಿಕ ಸಂಪರ್ಕ ಮಾಡುವುದನ್ನು ನಿಮಗೆ ಅನುಮತಿಸಲಾಗಿದೆ. ಅವರು ನಿಮ್ಮ ಉಡುಪಾಗಿದ್ದಾರೆ ಮತ್ತು ನೀವು ಅವರ ಉಡುಪಾಗಿದ್ದೀರಿ. ನೀವು ನಿಮ್ಮ ಆತ್ಮಗಳನ್ನು ವಂಚಿಸುತ್ತಿದ್ದೀರಿ ಎಂದು ಅಲ್ಲಾಹನಿಗೆ ತಿಳಿದಿದೆ. ಆದ್ದರಿಂದ, ಅವನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದ್ದಾನೆ ಮತ್ತು ನಿಮ್ಮನ್ನು ಕ್ಷಮಿಸಿದ್ದಾನೆ. ಈಗ ನೀವು ಅವರೊಂದಿಗೆ ಲೈಂಗಿಕ ಸಂಪರ್ಕವನ್ನು ಮಾಡಬಹುದು ಮತ್ತು ಅಲ್ಲಾಹು ನಿಮಗೆ ವಿಧಿಸಿದ್ದನ್ನು (ಮಕ್ಕಳನ್ನು) ಅರಸಬಹುದು. ಪ್ರಭಾತದ ಬಿಳಿಯ ನೂಲು ಕಪ್ಪು ನೂಲಿನಿಂದ ಸ್ಪಷ್ಟವಾಗಿ ಗೋಚರಿಸುವವರೆಗೆ ತಿನ್ನಿರಿ ಮತ್ತು ಕುಡಿಯಿರಿ. ನಂತರ ರಾತ್ರಿಯ ತನಕ ಉಪವಾಸವನ್ನು ಪೂರ್ತಿಗೊಳಿಸಿರಿ. ಆದರೆ ನೀವು ಮಸೀದಿಗಳಲ್ಲಿ ಧ್ಯಾನ (ಈತಿಕಾಫ್) ನಿರತರಾಗಿರುವಾಗ ಅವರೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡಿ. ಇವು ಅಲ್ಲಾಹನ ಎಲ್ಲೆಗಳಾಗಿವೆ. ನೀವು ಅವುಗಳ ಸಮೀಪಕ್ಕೂ ಹೋಗಬೇಡಿ. ಹೀಗೆ ಅಲ್ಲಾಹು ಜನರಿಗೆ ತನ್ನ ನಿಯಮಗಳನ್ನು ವಿವರಿಸಿಕೊಡುತ್ತಿದ್ದಾನೆ. ಅವರು ದೇವಭಯವುಳ್ಳವರಾಗುವುದಕ್ಕಾಗಿ.[1]
Kannada Translation - Hamza Buturನೀವು ಒಬ್ಬರು ಇನ್ನೊಬ್ಬರ ಆಸ್ತಿಯನ್ನು ಅನ್ಯಾಯವಾಗಿ ತಿನ್ನಬೇಡಿ. ಜನರ ಆಸ್ತಿಯಿಂದ ಏನನ್ನಾದರೂ ಅನ್ಯಾಯವಾಗಿ ಕಬಳಿಸಲು ಆಡಳಿತಗಾರರಿಗೆ ಲಂಚ ತಲುಪಿಸುವುದನ್ನೂ ಮಾಡಬೇಡಿ. (ಅದು ಸರಿಯಲ್ಲವೆಂದು) ನೀವು ತಿಳಿದವರಾಗಿದ್ದೂ ಸಹ.[1]
Kannada Translation - Hamza Buturಅವರು ತಮ್ಮೊಂದಿಗೆ ಚಂದ್ರನ ಬಗ್ಗೆ ಕೇಳುತ್ತಾರೆ. ಹೇಳಿರಿ: “ಅದು ಜನರಿಗೆ (ಅವರ ಆರಾಧನಾ ಸಮಯಗಳನ್ನು ತಿಳಿಯುವ) ಮತ್ತು ಹಜ್ಜ್‌ನ ಸಮಯವನ್ನು ತಿಳಿಯುವ ಸಾಧನವಾಗಿದೆ.” ನೀವು ಮನೆಗಳನ್ನು ಹಿಂಭಾಗದಿಂದ ಪ್ರವೇಶಿಸುವುದರಲ್ಲಿ ಒಳಿತಿಲ್ಲ.[1] ಬದಲಿಗೆ, ದೇವಭಯವುಳ್ಳವನೇ ಒಳಿತಿನಲ್ಲಿರುವವನು. ನೀವು ಮನೆಗಳನ್ನು ಅವುಗಳ ಬಾಗಿಲುಗಳಿಂದ ಪ್ರವೇಶಿಸಿ. ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ವಿಯಾಗುವುದಕ್ಕಾಗಿ.
Kannada Translation - Hamza Buturನಿಮ್ಮ ವಿರುದ್ಧ ಯುದ್ಧ ಮಾಡುವವರೊಡನೆ ಅಲ್ಲಾಹನ ಮಾರ್ಗದಲ್ಲಿ ನೀವು ಕೂಡ ಯುದ್ಧ ಮಾಡಿರಿ. ಆದರೆ ಎಲ್ಲೆ ಮೀರಬೇಡಿ. ನಿಶ್ಚಯವಾಗಿಯೂ ಎಲ್ಲೆ ಮೀರುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ.[1]
Kannada Translation - Hamza Buturನೀವು ಅವರನ್ನು ಕಂಡಲ್ಲಿ ಕೊಲ್ಲಿರಿ ಮತ್ತು ಅವರು ನಿಮ್ಮನ್ನು ಹೊರಹಾಕಿದ ಸ್ಥಳದಿಂದ ಅವರನ್ನೂ ಹೊರಹಾಕಿರಿ. ಕ್ಷೋಭೆಯು ಕೊಲೆಗಿಂತಲೂ ಘೋರವಾಗಿದೆ. ಮಸ್ಜಿದುಲ್ ಹರಾಮ್‍ನ ಬಳಿ ಅವರು ನಿಮ್ಮೊಂದಿಗೆ ಯುದ್ಧ ಮಾಡುವ ತನಕ ನೀವು ಅವರೊಂದಿಗೆ ಅಲ್ಲಿ ಯುದ್ಧ ಮಾಡಬೇಡಿ. ಅವರು ನಿಮ್ಮೊಂದಿಗೆ ಯುದ್ಧ ಮಾಡಿದರೆ ಅವರನ್ನು ಕೊಲ್ಲಿರಿ. ಈ ರೀತಿ ಸತ್ಯನಿಷೇಧಿಗಳಿಗೆ ಪ್ರತಿಫಲ ನೀಡಲಾಗುತ್ತದೆ.
Kannada Translation - Hamza Buturಕ್ಷೋಭೆ ನಿವಾರಣೆಯಾಗುವ ತನಕ ಮತ್ತು ಧರ್ಮವು ಅಲ್ಲಾಹನಿಗಾಗುವ ತನಕ ಅವರೊಂದಿಗೆ ಯುದ್ಧ ಮಾಡಿರಿ. ಆದರೆ ಅವರೇನಾದರೂ ನಿಲ್ಲಿಸಿದರೆ, ಮತ್ತೆ ಅಕ್ರಮವೆಸಗಿದವರ ಮೇಲೆಯೇ ಹೊರತು ಇನ್ನಾರ ಮೇಲೂ ಅತಿರೇಕವೆಸಗಬೇಡಿ.
Kannada Translation - Hamza Buturಪವಿತ್ರ ತಿಂಗಳ ಬದಲಿಗೆ ಪವಿತ್ರ ತಿಂಗಳು. ಪವಿತ್ರವಾದ ಎಲ್ಲವೂ ಅದಲಿ ಬದಲಿಯಾಗಿ ಇರುವುದಾಗಿವೆ. ನಿಮ್ಮ ಮೇಲೆ ಯಾರಾದರೂ ಅತಿರೇಕವೆಸಗಿದರೆ, ಅವನು ನಿಮ್ಮ ಮೇಲೆ ಅತಿರೇಕವೆಸಗಿದಂತೆಯೇ ನೀವು ಅವನ ಮೇಲೆ ಅತಿರೇಕವೆಸಗಿರಿ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ಅಲ್ಲಾಹು ಅವನನ್ನು ಭಯಪಡುವವರ ಜೊತೆಗಿದ್ದಾನೆ.
Kannada Translation - Hamza Buturಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ. ನಿಮ್ಮ ಕೈಗಳನ್ನು ನೀವೇ ವಿನಾಶಕ್ಕೆ ತಳ್ಳಬೇಡಿ. ಒಳಿತು ಮಾಡಿರಿ. ನಿಶ್ಚಯವಾಗಿಯೂ ಒಳಿತು ಮಾಡುವವರನ್ನು ಅಲ್ಲಾಹು ಪ್ರೀತಿಸುತ್ತಾನೆ.
Kannada Translation - Hamza Buturಅಲ್ಲಾಹನಿಗಾಗಿ ಹಜ್ಜ್ ಮತ್ತು ಉಮ್ರಗಳನ್ನು ಪೂರ್ತಿಗೊಳಿಸಿರಿ. ನಿಮ್ಮನ್ನು (ದಾರಿ ಮಧ್ಯೆ) ತಡೆಯಲಾದರೆ ನಿಮಗೆ ಸುಲಭವಾಗಿರುವ ಒಂದು ಪ್ರಾಣಿಯನ್ನು ಬಲಿ ನೀಡಿರಿ.[1] ಬಲಿಮೃಗವು ಅದರ ಸ್ಥಳವನ್ನು ತಲುಪುವ ತನಕ ಕೇಶಮುಂಡನ ಮಾಡಬೇಡಿ. ನಿಮ್ಮಲ್ಲಿ ಯಾರಾದರೂ ಅನಾರೋಗ್ಯದಲ್ಲಿದ್ದು ಅಥವಾ ತಲೆಯಲ್ಲಿ ಏನಾದರೂ ತೊಂದರೆಯಿದ್ದು, (ಕೇಶ ಮುಂಡನ ಮಾಡಿದ್ದರೆ) ಅದಕ್ಕೆ ಪರಿಹಾರವಾಗಿ ಉಪವಾಸ ಅಥವಾ ದಾನಧರ್ಮ ಅಥವಾ ಬಲಿಕರ್ಮ ನಿರ್ವಹಿಸಲಿ. ಆದರೆ ನೀವು ನಿರ್ಭಯ ಸ್ಥಿತಿಯಲ್ಲಿದ್ದು, ನಿಮ್ಮಲ್ಲಿ ಯಾರಾದರೂ ಉಮ್ರಾ ನಿರ್ವಹಿಸಿ ಹಜ್ಜ್ ತನಕ ವಿಶ್ರಾಂತಿ ಪಡೆದರೆ, ಅವನು ಸುಲಭವಾಗಿರುವ ಒಂದು ಪ್ರಾಣಿಯನ್ನು ಬಲಿ ನೀಡಲಿ. ಯಾರಿಗೆ ಬಲಿಮೃಗ ಸಿಗುವುದಿಲ್ಲವೋ ಅವನು ಹಜ್ಜ್‌ನ ಸಮಯದಲ್ಲಿ ಮೂರು ದಿನ ಮತ್ತು (ಊರಿಗೆ) ಮರಳಿದ ಬಳಿಕ ಏಳು ದಿನ; ಒಟ್ಟು ಹತ್ತು ದಿನ ಉಪವಾಸ ಆಚರಿಸಲಿ. ಈ ನಿಯಮವಿರುವುದು ಮಸ್ಜಿದುಲ್ ಹರಾಮ್‍ನ ನಿವಾಸಿಗಳಲ್ಲದವರಿಗೆ ಮಾತ್ರ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ಅಲ್ಲಾಹು ಅತಿ ಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ.
Kannada Translation - Hamza Buturಹಜ್ಜ್ ಪರಿಚಿತ ತಿಂಗಳುಗಳಲ್ಲಾಗಿದೆ.[1] ಆದ್ದರಿಂದ ಯಾರಾದರೂ ಆ ತಿಂಗಳುಗಳಲ್ಲಿ (ಇಹ್ರಾಮ್ ಧರಿಸಿ) ಹಜ್ಜ್ ನಿರ್ವಹಿಸುವುದನ್ನು ಕಡ್ಡಾಯಗೊಳಿಸಿದರೆ, ಅವನು ಹಜ್ಜ್‌ನ ಸಮಯದಲ್ಲಿ ಲೈಂಗಿಕ ಸಂಪರ್ಕ, ದುಷ್ಕರ್ಮ ಮತ್ತು ತರ್ಕ ಮಾಡಬಾರದು. ನೀವು ಏನೇ ಸತ್ಕರ್ಮ ಮಾಡಿದರೂ ಅಲ್ಲಾಹು ಅದನ್ನು ತಿಳಿಯುತ್ತಾನೆ. ನೀವು (ಹಜ್ಜ್ ಯಾತ್ರೆಗಾಗಿ) ಸಿದ್ಧತೆ ಮಾಡಿಕೊಳ್ಳಿರಿ. ನಿಶ್ಚಯವಾಗಿಯೂ ನೀವು ಮಾಡಿಕೊಳ್ಳುವ ಸಿದ್ಧತೆಗಳಲ್ಲಿ ದೇವಭಯವು ಅತಿಶ್ರೇಷ್ಠವಾಗಿದೆ. ಓ ಬುದ್ಧಿವಂತರೇ! ನೀವು ನನ್ನನ್ನು ಭಯಪಡಿರಿ.
Kannada Translation - Hamza Buturನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಯಾವುದೇ ಔದಾರ್ಯವನ್ನು ಅರಸುವುದರಲ್ಲಿ ನಿಮಗೆ ದೋಷವಿಲ್ಲ. ನೀವು ಅರಫಾತ್‍ನಿಂದ ತೆರಳಿದರೆ ಮಶ್‍ಅರುಲ್ ಹರಾಮ್‍ನ ಬಳಿ ಅಲ್ಲಾಹನನ್ನು ಸ್ಮರಿಸಿರಿ. ಅವನು ನಿಮಗೆ ಸನ್ಮಾರ್ಗ ತೋರಿಸಿದಂತೆಯೇ ನೀವು ಅವನನ್ನು ಸ್ಮರಿಸಿರಿ. ವಾಸ್ತವವಾಗಿ, ಇದಕ್ಕೆ ಮುಂಚೆ ನೀವು ದಾರಿ ತಪ್ಪಿದವರಾಗಿದ್ದಿರಿ.
Kannada Translation - Hamza Buturನಂತರ ಜನರು ಎಲ್ಲಿಂದ ಹೊರಡುತ್ತಾರೋ ಅಲ್ಲಿಂದ ನೀವೂ ಹೊರಡಿರಿ. ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.
Kannada Translation - Hamza Buturನೀವು ಹಜ್ಜ್ ಕರ್ಮಗಳನ್ನು ಪೂರೈಸಿದರೆ, ನಿಮ್ಮ ಪೂರ್ವಜರನ್ನು ಸ್ಮರಿಸುವಂತೆಯೇ ಅಥವಾ ಅದಕ್ಕಿಂತಲೂ ತೀವ್ರವಾಗಿ ಅಲ್ಲಾಹನನ್ನು ಸ್ಮರಿಸಿರಿ. ಜನರಲ್ಲಿ ಕೆಲವರು ಹೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಇಹಲೋಕದಲ್ಲಿ ದಯಪಾಲಿಸು.” ಅಂತಹವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲ.
Kannada Translation - Hamza Buturಇತರ ಕೆಲವರು ಹೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಇಹಲೋಕದಲ್ಲಿ ಒಳಿತನ್ನು ದಯಪಾಲಿಸು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ಪಾರು ಮಾಡು.”
Kannada Translation - Hamza Buturಬೆರಳೆಣಿಕೆಯ ಕೆಲವು ದಿನಗಳಲ್ಲಿ[1] ಅಲ್ಲಾಹನನ್ನು ಸ್ಮರಿಸಿರಿ. ಯಾರಾದರೂ ಎರಡೇ ದಿನಗಳಲ್ಲಿ ತರಾತುರಿಯಿಂದ ಹೊರಟರೆ ಅವರಿಗೆ ದೋಷವಿಲ್ಲ.[2] ಯಾರಾದರೂ ವಿಳಂಬ ಮಾಡಿದರೆ ಅವರಿಗೂ ದೋಷವಿಲ್ಲ. ಇದು ದೇವಭಯವುಳ್ಳವರಿಗಾಗಿದೆ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ನಿಮ್ಮೆಲ್ಲರನ್ನೂ ಅವನ ಬಳಿಗೇ ಒಟ್ಟುಗೂಡಿಸಲಾಗುತ್ತದೆ.
Kannada Translation - Hamza Buturಜನರಲ್ಲಿ ಕೆಲವರಿದ್ದಾರೆ. ಅವರಲ್ಲೊಬ್ಬನು ಇಹಲೋಕದ ಕುರಿತು ಹೇಳುವ ಮಾತುಗಳು ನಿಮ್ಮನ್ನು ಆಶ್ಚರ್ಯಗೊಳಿಸಬಹುದು. ಅವನು ತನ್ನ ಹೃದಯದಲ್ಲಿರುವುದಕ್ಕೆ ಅಲ್ಲಾಹನನ್ನು ಸಾಕ್ಷಿಯಾಗಿ ಮಾಡುತ್ತಾನೆ. ವಾಸ್ತವವಾಗಿ, ಅವನ ಮಹಾ ಜಗಳಗಂಟಿಯಾಗಿದ್ದಾನೆ.
Kannada Translation - Hamza Buturಅವನು ಮರಳಿ ಹೋಗುವಾಗ, ಭೂಮಿಯಲ್ಲಿ ಕಿಡಿಗೇಡಿತನ ಮಾಡಲು ಮತ್ತು ಹೊಲಗಳನ್ನು ಹಾಗೂ ವಂಶಗಳನ್ನು ನಾಶ ಮಾಡಲು ಶ್ರಮಿಸುತ್ತಾನೆ. ಅಲ್ಲಾಹು ಕಿಡಿಗೇಡಿತನವನ್ನು ಇಷ್ಟಪಡುವುದಿಲ್ಲ.
Kannada Translation - Hamza Butur“ಅಲ್ಲಾಹನನ್ನು ಭಯಪಡು” ಎಂದು ಅವನೊಡನೆ ಹೇಳಲಾದರೆ, ಪ್ರತಿಷ್ಠೆಯು ಅವನನ್ನು ಪಾಪಕ್ಕೆ ಎಳೆಯುತ್ತದೆ. ಅವನಿಗೆ ನರಕವೇ ಸಾಕು. ಆ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ.
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಇಸ್ಲಾಂ ಧರ್ಮದಲ್ಲಿ ಪೂರ್ಣವಾಗಿ ಪ್ರವೇಶಿಸಿರಿ. ಶೈತಾನನ ಹೆಜ್ಜೆಗಳನ್ನು ಹಿಂಬಾಲಿಸಬೇಡಿ. ನಿಶ್ಚಯವಾಗಿಯೂ ಅವನು ನಿಮ್ಮ ಪ್ರತ್ಯಕ್ಷ ವೈರಿಯಾಗಿದ್ದಾನೆ.
Kannada Translation - Hamza Buturನಿಮಗೆ ಸ್ಪಷ್ಟ ಸಾಕ್ಷ್ಯಾಧಾರಗಳು ತಲುಪಿದ ಬಳಿಕವೂ ನೀವು ತಪ್ಪಿ ನಡೆದರೆ, ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Kannada Translation - Hamza Buturಅಲ್ಲಾಹು ಮತ್ತು ದೇವದೂತರು ಮೋಡಗಳ ನೆರಳುಗಳಲ್ಲಿ ಅವರ ಬಳಿಗೆ ಬರುವುದನ್ನು ಮತ್ತು ವಿಷಯವು ತೀರ್ಮಾನಿಸಿ ಬಿಡಲಾಗುವುದನ್ನು ಅವರು ಕಾಯುತ್ತಿದ್ದಾರೆಯೇ? ವಿಷಯಗಳೆಲ್ಲವೂ ಅಲ್ಲಾಹನ ಬಳಿಗೇ ಮರಳುತ್ತವೆ.
Kannada Translation - Hamza Buturಇಸ್ರಾಯೇಲ್ ಮಕ್ಕಳೊಡನೆ ನಾವು ಅವರಿಗೆ ಎಷ್ಟೆಷ್ಟು ಸ್ಪಷ್ಟ ದೃಷ್ಟಾಂತಗಳನ್ನು ನೀಡಿದ್ದೇವೆಂದು ಕೇಳಿರಿ. ಅಲ್ಲಾಹನ ಅನುಗ್ರಹವು ತನ್ನ ಬಳಿಗೆ ಬಂದ ಬಳಿಕವೂ ಅದನ್ನು ಬದಲಾಯಿಸುವವನು ಯಾರೋ—ನಿಶ್ಚಯವಾಗಿಯೂ ಅಲ್ಲಾಹು ಅತಿಕಠೋರವಾಗಿ ಶಿಕ್ಷಿಸುವವನೆಂದು (ಅವನು ತಿಳಿದುಕೊಳ್ಳಲಿ).
Kannada Translation - Hamza Buturಸತ್ಯನಿಷೇಧಿಗಳಿಗೆ ಇಹಲೋಕ ಜೀವನವನ್ನು ಅಲಂಕರಿಸಿಕೊಡಲಾಗಿದೆ. ಅವರು ಸತ್ಯವಿಶ್ವಾಸಿಗಳನ್ನು ತಮಾಷೆ ಮಾಡುತ್ತಾರೆ. ಆದರೆ, ಪುನರುತ್ಥಾನ ದಿನದಂದು ದೇವಭಯವುಳ್ಳವರು ಅವರಿಗಿಂತ ಮೇಲಿರುತ್ತಾರೆ. ಅಲ್ಲಾಹು ಅವನು ಇಚ್ಛಿಸಿದವರಿಗೆ ಲೆಕ್ಕವಿಲ್ಲದೆ ನೀಡುತ್ತಾನೆ.
Kannada Translation - Hamza Buturಮಾನವರೆಲ್ಲರೂ ಒಂದೇ ಸಮುದಾಯವಾಗಿದ್ದರು. ನಂತರ ಅಲ್ಲಾಹು ಸುವಾರ್ತೆ ತಿಳಿಸಲು ಮತ್ತು ಎಚ್ಚರಿಕೆ ನೀಡಲು ಪ್ರವಾದಿಗಳನ್ನು ಕಳುಹಿಸಿದನು. ಜನರು ಭಿನ್ನಾಭಿಪ್ರಾಯ ತಳೆದ ವಿಷಯದಲ್ಲಿ ತೀರ್ಪು ನೀಡುವುದಕ್ಕಾಗಿ ಅವರ ಜೊತೆಗೆ ಗ್ರಂಥವನ್ನು ಸತ್ಯ ಸಮೇತ ಅವತೀರ್ಣಗೊಳಿಸಿದನು. ಆದರೆ ಗ್ರಂಥ ನೀಡಲಾದ ಅದೇ ಜನರು ಸ್ಪಷ್ಟ ಸಾಕ್ಷ್ಯಾಧಾರಗಳು ತಮಗೆ ತಲುಪಿದ ಬಳಿಕವೂ ತಮ್ಮೊಳಗಿನ ವಿದ್ವೇಷದ ನಿಮಿತ್ತ ಅದರ (ಗ್ರಂಥದ) ವಿಷಯದಲ್ಲಿ ಭಿನ್ನಮತ ತಳೆದರು. ಆದ್ದರಿಂದ ಅಲ್ಲಾಹು ತನ್ನ ಅಪ್ಪಣೆ ಪ್ರಕಾರ ಅವರು ಭಿನ್ನಮತೀಯರಾದ ಆ ಸತ್ಯಕ್ಕೆ ಸತ್ಯವಿಶ್ವಾಸಿಗಳನ್ನು ಮುನ್ನಡೆಸಿದನು. ಅಲ್ಲಾಹು ಅವನು ಇಚ್ಛಿಸಿದವರನ್ನು ನೇರಮಾರ್ಗಕ್ಕೆ ಮುನ್ನಡೆಸುತ್ತಾನೆ.
Kannada Translation - Hamza Buturನಿಮಗಿಂತ ಮೊದಲಿನವರಿಗೆ ಬಂದಂತಹ ಪರೀಕ್ಷೆಗಳು ನಿಮಗೂ ಬಾರದೆ ನಿರಾಯಾಸವಾಗಿ ಸ್ವರ್ಗವನ್ನು ಪ್ರವೇಶಿಸಿ ಬಿಡಬಹುದೆಂದು ನೀವು ಭಾವಿಸಿದ್ದೀರಾ? ಅವರಿಗೆ ಬಡತನ ಮತ್ತು ಕಷ್ಟಗಳು ಎರಗಿದ್ದವು. ಅಲ್ಲಾಹನ ಸಹಾಯ ಬರುವುದು ಯಾವಾಗ ಎಂದು ಸಂದೇಶವಾಹಕರು ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳು ಕೇಳುವವರೆಗೆ ಅವರನ್ನು ನಡುಗಿಸಲಾಯಿತು. ತಿಳಿಯಿರಿ! ಅಲ್ಲಾಹನ ಸಹಾಯವು ಹತ್ತಿರದಲ್ಲೇ ಇದೆ.
Kannada Translation - Hamza Buturಅವರು ಏನು ಖರ್ಚು ಮಾಡಬೇಕೆಂದು ಅವರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ: “ನೀವು ಒಳಿತಾಗಿರುವ ಏನು ಖರ್ಚು ಮಾಡುವುದಾದರೂ ಅದು ಮಾತಾಪಿತರಿಗೆ, ಹತ್ತಿರದ ಸಂಬಂಧಿಕರಿಗೆ, ಅನಾಥರಿಗೆ, ನಿರ್ಗತಿಕರಿಗೆ ಮತ್ತು ದಾರಿಹೋಕರಿಗೆ ಖರ್ಚು ಮಾಡಿರಿ. ನೀವು ಏನೇ ಒಳಿತು ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.”
Kannada Translation - Hamza Buturನಿಮಗೆ ಅಸಹ್ಯವೆನಿಸಿದರೂ ಸಹ ನಿಮ್ಮ ಮೇಲೆ ಯುದ್ಧವನ್ನು ಕಡ್ಡಾಯಗೊಳಿಸಲಾಗಿದೆ. ಬಹುಶಃ ನಿಮಗೊಂದು ವಿಷಯವು ಅಸಹ್ಯವೆನಿಸಿದರೂ ಅದು ನಿಮಗೆ ಒಳಿತಾಗಿರಬಹುದು. ಹಾಗೆಯೇ, ನಿಮಗೊಂದು ವಿಷಯವು ಇಷ್ಟವಾಗಿದ್ದರೂ ಅದು ನಿಮಗೆ ಕೆಡುಕಾಗಿರಬಹುದು. ಅಲ್ಲಾಹು ತಿಳಿದಿದ್ದಾನೆ; ಆದರೆ ನೀವು ತಿಳಿದಿಲ್ಲ.
Kannada Translation - Hamza Buturನಿಷೇಧಿತ ತಿಂಗಳಲ್ಲಿ ಯುದ್ಧ ಮಾಡುವುದರ ಕುರಿತು ಅವರು ನಿಮ್ಮಲ್ಲಿ ವಿಚಾರಿಸುತ್ತಾರೆ. ಹೇಳಿರಿ: “ಅದರಲ್ಲಿ ಯುದ್ಧ ಮಾಡುವುದು ಮಹಾ ಅಪರಾಧವಾಗಿದೆ.” ಆದರೆ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆಯುವುದು, ಅವನನ್ನು ನಿಷೇಧಿಸುವುದು, ಮಸ್ಜಿದುಲ್ ಹರಾಮ್‍ನಿಂದ (ಜನರನ್ನು) ತಡೆಯುವುದು ಮತ್ತು ಅದರ ನಿವಾಸಿಗಳನ್ನು ಅಲ್ಲಿಂದ ಹೊರಹಾಕುವುದು ಅಲ್ಲಾಹನ ದೃಷ್ಟಿಯಲ್ಲಿ ಅದಕ್ಕಿಂತಲೂ ಗಂಭೀರ ಅಪರಾಧಗಳಾಗಿವೆ. ಕ್ಷೋಭೆಯು ಕೊಲೆಗಿಂತಲೂ ಘೋರವಾಗಿದೆ. ಅವರಿಗೆ ಸಾಧ್ಯವಾಗುವುದಾದರೆ ಅವರು ನಿಮ್ಮನ್ನು ನಿಮ್ಮ ಧರ್ಮದಿಂದ ಹಿಂದಿರುಗುವಂತೆ ಮಾಡುವವರೆಗೂ ನಿಮ್ಮೊಂದಿಗೆ ಯುದ್ಧ ಮಾಡುತ್ತಲೇ ಇರುವರು. ನಿಮ್ಮಲ್ಲಿ ಯಾರಾದರೂ ತನ್ನ ಧರ್ಮವನ್ನು ತ್ಯಜಿಸಿ, ನಂತರ ಸತ್ಯನಿಷೇಧಿಯಾಗಿ ಸಾಯುವುದಾದರೆ, ಅವರ ಕರ್ಮಗಳು ಇಹಲೋಕದಲ್ಲೂ ಪರಲೋಕದಲ್ಲೂ ನಿಷ್ಫಲವಾಗುತ್ತವೆ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.
Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಹಿಜ್ರ (ವಲಸೆ) ಹೋದವರು ಮತ್ತು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿದವರು ಯಾರೋ—ಅವರು ಅಲ್ಲಾಹನ ದಯೆಯನ್ನು ನಿರೀಕ್ಷಿಸುತ್ತಾರೆ. ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.
Kannada Translation - Hamza Buturಅವರು ನಿಮ್ಮೊಂದಿಗೆ ಮದ್ಯ ಮತ್ತು ಜೂಜಿನ ಬಗ್ಗೆ ವಿಚಾರಿಸುತ್ತಾರೆ. ಹೇಳಿರಿ: “ಅವೆರಡರಲ್ಲೂ ಬಹುದೊಡ್ಡ ಪಾಪವಿದೆ ಮತ್ತು ಜನರಿಗೆ ಕೆಲವು ಪ್ರಯೋಜನಗಳೂ ಇವೆ.[1] ಆದರೆ ಅವುಗಳ ಪಾಪವು ಪ್ರಯೋಜನಕ್ಕಿಂತಲೂ ದೊಡ್ಡದು.” ಅವರು ಏನು ಖರ್ಚು ಮಾಡಬೇಕೆಂದು ಅವರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ: “ಅಗತ್ಯಕ್ಕಿಂತ ಮಿಕ್ಕಿದ್ದು.” ಈ ರೀತಿ ಅಲ್ಲಾಹು ತನ್ನ ನಿಯಮಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ. ನೀವು ಆಲೋಚಿಸುವುದಕ್ಕಾಗಿ.
Kannada Translation - Hamza Buturಇಹಲೋಕ ಮತ್ತು ಪರಲೋಕದ ಕುರಿತು. ಅವರು ನಿಮ್ಮೊಂದಿಗೆ ಅನಾಥರ ಕುರಿತು ವಿಚಾರಿಸುತ್ತಾರೆ. ಹೇಳಿರಿ: “ಅವರ ಯೋಗಕ್ಷೇಮ ನೋಡಿಕೊಳ್ಳುವುದು ಒಳ್ಳೆಯದೇ ಆಗಿದೆ. ನೀವು ಅವರ ಆಸ್ತಿಯನ್ನು ನಿಮ್ಮ ಆಸ್ತಿಯೊಂದಿಗೆ ಸೇರಿಸಿದರೂ (ತಪ್ಪಿಲ್ಲ); ಅವರು ನಿಮ್ಮ ಸಹೋದರರಾಗಿದ್ದಾರೆ. ಯಾರಿಗೆ ಕೆಟ್ಟ ಉದ್ದೇಶವಿದೆ ಮತ್ತು ಯಾರಿಗೆ ಒಳ್ಳೆಯ ಉದ್ದೇಶವಿದೆಯೆಂದು ಅಲ್ಲಾಹು ತಿಳಿದಿದ್ದಾನೆ. ಅಲ್ಲಾಹು ಇಚ್ಛಿಸಿದರೆ ನಿಮಗೆ ಕಷ್ಟ ಕೊಡುತ್ತಿದ್ದನು. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.”
Kannada Translation - Hamza Buturಬಹುದೇವವಿಶ್ವಾಸಿ ಮಹಿಳೆಯರನ್ನು ಅವರು ಸತ್ಯವಿಶ್ವಾಸಿಗಳಾಗುವ ತನಕ ವಿವಾಹವಾಗಬೇಡಿ. ಸತ್ಯವಿಶ್ವಾಸಿಯಾದ ಗುಲಾಮಸ್ತ್ರೀ ಸ್ವತಂತ್ರಳಾದ ಬಹುದೇವವಿಶ್ವಾಸಿ ಮಹಿಳೆಗಿಂತ ಶ್ರೇಷ್ಠಳು. ಅವಳು (ಬಹುದೇವವಿಶ್ವಾಸಿ) ನಿಮಗೆ ಆಕರ್ಷಕವಾಗಿ ಕಂಡರೂ ಸಹ. ಬಹುದೇವವಿಶ್ವಾಸಿ ಪುರುಷರಿಗೆ ಅವರು ಸತ್ಯವಿಶ್ವಾಸಿಗಳಾಗುವ ತನಕ ನಿಮ್ಮ ಮಹಿಳೆಯರನ್ನು ವಿವಾಹ ಮಾಡಿಕೊಡಬೇಡಿ. ಸತ್ಯವಿಶ್ವಾಸಿಯಾದ ಗುಲಾಮ ಸ್ವತಂತ್ರನಾದ ಬಹುದೇವವಿಶ್ವಾಸಿಗಿಂತ ಶ್ರೇಷ್ಠನು. ಅವನು (ಬಹುದೇವವಿಶ್ವಾಸಿ) ನಿಮಗೆ ಆಕರ್ಷಕವಾಗಿ ಕಂಡರೂ ಸಹ. ಅವರು ನಿಮ್ಮನ್ನು ನರಕಕ್ಕೆ ಕರೆಯುತ್ತಿದ್ದಾರೆ. ಅಲ್ಲಾಹು ತನ್ನ ಅಪ್ಪಣೆಯಿಂದ ನಿಮ್ಮನ್ನು ಸ್ವರ್ಗಕ್ಕೆ ಮತ್ತು ಕ್ಷಮೆಗೆ ಕರೆಯುತ್ತಿದ್ದಾನೆ. ಅವನು ಜನರಿಗೆ ತನ್ನ ನಿಯಮಗಳನ್ನು ವಿವರಿಸಿಕೊಡುತ್ತಾನೆ. ಅವರು ಉಪದೇಶ ಪಡೆಯುವುದಕ್ಕಾಗಿ.
Kannada Translation - Hamza Buturಅವರು ನಿಮ್ಮೊಂದಿಗೆ ಋತುಸ್ರಾವದ ಕುರಿತು ವಿಚಾರಿಸುತ್ತಾರೆ. ಹೇಳಿರಿ: “ಅದು ಹೊಲಸು. ಆದ್ದರಿಂದ ಋತುಸ್ರಾವದ ಅವಧಿಯಲ್ಲಿ ಮಹಿಳೆಯರಿಂದ ದೂರವಿರಿ. ಅವರು ಶುದ್ಧವಾಗುವ ತನಕ ಅವರ ಬಳಿಗೆ ಹೋಗಬೇಡಿ. ಅವರು ಶುದ್ಧವಾದರೆ ಅಲ್ಲಾಹು ನಿಮಗೆ ಆಜ್ಞಾಪಿಸಿದ ಕಡೆಯಿಂದ ಅವರ ಬಳಿಗೆ ಹೋಗಿರಿ. ನಿಶ್ಚಯವಾಗಿಯೂ ಅಲ್ಲಾಹು ಪಶ್ಚಾತ್ತಾಪಪಡುವವರನ್ನು ಪ್ರೀತಿಸುತ್ತಾನೆ ಮತ್ತು ಶುದ್ಧವಾಗಿರುವವರನ್ನು ಕೂಡ ಪ್ರೀತಿಸುತ್ತಾನೆ.”
Kannada Translation - Hamza Buturನಿಮ್ಮ ಪತ್ನಿಯರು ನಿಮ್ಮ ಹೊಲದಂತೆ. ನೀವು ಇಚ್ಛಿಸುವಂತೆ ನಿಮ್ಮ ಹೊಲಕ್ಕೆ ಹೋಗಿರಿ ಮತ್ತು ನಿಮಗಾಗಿ (ಸತ್ಕರ್ಮಗಳನ್ನು) ಮುಂದಕ್ಕೆ ಕಳುಹಿಸಿರಿ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ನಿಶ್ಚಯವಾಗಿಯೂ ನೀವು ಅವನನ್ನು ಭೇಟಿಯಾಗಲಿರುವಿರಿ. ಸತ್ಯವಿಶ್ವಾಸಿಗಳಿಗೆ ಸುವಾರ್ತೆಯನ್ನು ತಿಳಿಸಿರಿ.
Kannada Translation - Hamza Buturಒಳಿತು ಮಾಡುವುದನ್ನು, ದೇವಭಯದಿಂದ ಜೀವಿಸುವುದನ್ನು ಮತ್ತು ಜನರ ನಡುವೆ ಸುಧಾರಣೆ ಮಾಡುವುದನ್ನು ಬಿಟ್ಟುಬಿಡುವುದಕ್ಕಾಗಿ ನಿಮ್ಮ ಪ್ರತಿಜ್ಞೆಗಳಿಗೆ ಅಲ್ಲಾಹನನ್ನು ಗುರಿಯನ್ನಾಗಿ ಮಾಡಬೇಡಿ.[1] ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Kannada Translation - Hamza Buturನೀವು ದೃಢನಿರ್ಧಾರದಿಂದ ಮಾಡದ ಪ್ರತಿಜ್ಞೆಗಳಿಗಾಗಿ ಅಲ್ಲಾಹು ನಿಮ್ಮನ್ನು ಶಿಕ್ಷಿಸುವುದಿಲ್ಲ.[1] ಆದರೆ ನೀವು ನಿಮ್ಮ ಹೃದಯದಲ್ಲಿ ಮಾಡಿದ ಪ್ರತಿಜ್ಞೆಗಳಿಗೆ ಅವನು ನಿಮ್ಮನ್ನು ಶಿಕ್ಷಿಸುತ್ತಾನೆ. ಅಲ್ಲಾಹು ಕ್ಷಮಿಸುವವನು ಮತ್ತು ಸಹಿಷ್ಣುತೆಯುಳ್ಳನಾಗಿದ್ದಾನೆ.
Kannada Translation - Hamza Buturತಮ್ಮ ಪತ್ನಿಯರೊಡನೆ (ಲೈಂಗಿಕ ಸಂಪರ್ಕ ಮಾಡುವುದಿಲ್ಲವೆಂದು) ಪ್ರತಿಜ್ಞೆ ಮಾಡುವವರಿಗೆ ನಾಲ್ಕು ತಿಂಗಳ ಕಾಲಾವಕಾಶವಿದೆ. ಅವರೇನಾದರೂ (ದಾಂಪತ್ಯಕ್ಕೆ) ಮರಳಿದರೆ, ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.[1]
Kannada Translation - Hamza Buturವಿಚ್ಛೇದಿತ ಮಹಿಳೆಯರು ಸ್ವಯಂ ಮೂರು ಋತುಸ್ರಾವಗಳ ತನಕ ಕಾಯಬೇಕು. ಅವರಿಗೆ ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿದ್ದರೆ ಅವರ ಗರ್ಭಗಳಲ್ಲಿ ಅಲ್ಲಾಹು ಸೃಷ್ಟಿಸಿರುವುದನ್ನು ಮುಚ್ಚಿಡುವುದು ಅವರಿಗೆ ಧರ್ಮಸಮ್ಮತವಲ್ಲ. ಅವರ ಗಂಡಂದಿರು ಅವರನ್ನು ಆ ಅವಧಿಯೊಳಗೆ ಮರಳಿ ಸ್ವೀಕರಿಸಲು ಪೂರ್ಣ ಹಕ್ಕುಳ್ಳವರಾಗಿದ್ದಾರೆ—ಅವರ (ಗಂಡಂದಿರ) ಉದ್ದೇಶವು ರಾಜಿ ಮಾಡುವುದಾಗಿದ್ದರೆ.[1] ಪುರುಷರಿಗೆ ಮಹಿಳೆಯರ ಮೇಲೆ ಹಕ್ಕುಗಳಿರುವಂತೆ ಮಹಿಳೆಯರಿಗೂ ಪುರುಷರ ಮೇಲೆ ಸ್ವೀಕಾರಾರ್ಹ ರೀತಿಯಲ್ಲಿರುವ ಹಕ್ಕುಗಳಿವೆ. ಆದರೆ ಪುರುಷರಿಗೆ ಮಹಿಳೆಯರಿಗಿಂತ ಹೆಚ್ಚಿನ ಒಂದು ಪದವಿಯಿದೆ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Kannada Translation - Hamza Buturವಿಚ್ಛೇದನವು ಎರಡು ಬಾರಿ.[1] ನಂತರ ಒಂದೋ ಸ್ವೀಕಾರಾರ್ಹ ರೀತಿಯಲ್ಲಿ ಬಳಿಯಿರಿಸಿಕೊಳ್ಳಬೇಕು ಅಥವಾ ಉತ್ತಮ ರೀತಿಯಲ್ಲಿ ಬಿಟ್ಟು ಬಿಡಬೇಕು. ನೀವು ಅವರಿಗೆ ನೀಡಿದ ಯಾವುದೇ ವಸ್ತುವನ್ನು ಮರಳಿ ಪಡೆಯುವುದು ನಿಮಗೆ ಧರ್ಮಸಮ್ಮತವಲ್ಲ. ಅಲ್ಲಾಹನ ಎಲ್ಲೆಗಳೊಳಗೆ ನಿಲ್ಲಲು ಅವರಿಬ್ಬರಿಗೆ ಸಾಧ್ಯವಾಗಲಾರದು ಎಂದು ಅವರಿಬ್ಬರು ಭಯಪಡುವ ಹೊರತು. ಅಲ್ಲಾಹನ ಎಲ್ಲೆಗಳೊಳಗೆ ನಿಲ್ಲಲು ಅವರಿಬ್ಬರಿಗೆ ಸಾಧ್ಯವಾಗಲಾರದೆಂದು ನೀವು ಭಯಪಡುವುದಾದರೆ, ಪತ್ನಿ ಏನಾದರೂ ಕೊಟ್ಟು ವಿಚ್ಛೇದನ ಪಡೆಯುವುದರಲ್ಲಿ ಅವರಿಬ್ಬರಿಗೂ ದೋಷವಿಲ್ಲ.[2] ಇವು ಅಲ್ಲಾಹನ ಎಲ್ಲೆಗಳಾಗಿವೆ. ನೀವು ಅವುಗಳನ್ನು ಮೀರಿ ಹೋಗಬೇಡಿ. ಯಾರು ಅಲ್ಲಾಹನ ಎಲ್ಲೆಗಳನ್ನು ಮೀರಿ ಹೋಗುತ್ತಾರೋ ಅವರೇ ಅಕ್ರಮಿಗಳು.
Kannada Translation - Hamza Buturಇನ್ನು (ಮೂರನೇ ಬಾರಿ) ಅವನು ಅವಳನ್ನು ವಿಚ್ಛೇದಿಸಿದರೆ, ನಂತರ ಅವಳು ಬೇರೊಬ್ಬನನ್ನು ವಿವಾಹವಾಗುವ ತನಕ ಇವನಿಗೆ ಧರ್ಮಸಮ್ಮತಳಾಗುವುದಿಲ್ಲ. ಆದರೆ ಅವನು ಕೂಡ ಅವಳಿಗೆ ವಿಚ್ಛೇದನ ನೀಡಿದರೆ, ಅಲ್ಲಾಹನ ಎಲ್ಲೆಗಳೊಳಗೆ ನಿಲ್ಲಲು ಸಾಧ್ಯವಾಗುವುದೆಂದು ಇವರಿಬ್ಬರು ಭಾವಿಸುವುದಾದರೆ (ಹಳೆಯ ದಾಂಪತ್ಯಕ್ಕೆ) ಮರಳುವುದರಲ್ಲಿ ಇವರಿಬ್ಬರಿಗೆ ದೋಷವಿಲ್ಲ. ಇವು ಅಲ್ಲಾಹನ ಎಲ್ಲೆಗಳಾಗಿವೆ. ತಿಳುವಳಿಕೆಯಿರುವ ಜನರಿಗಾಗಿ ಅವನು ಅವುಗಳನ್ನು ವಿವರಿಸಿಕೊಡುತ್ತಾನೆ.
Kannada Translation - Hamza Buturನೀವು ನಿಮ್ಮ ಪತ್ನಿಯರಿಗೆ ವಿಚ್ಛೇದನ ನೀಡಿ, ನಂತರ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸಿದರೆ, ಸ್ವೀಕಾರಾರ್ಹ ರೀತಿಯಲ್ಲಿ ಅವರನ್ನು ಬಳಿಯಿಟ್ಟುಕೊಳ್ಳಿ ಅಥವಾ ಸ್ವೀಕಾರಾರ್ಹ ರೀತಿಯಲ್ಲಿ ಅವರನ್ನು ಬಿಟ್ಟು ಬಿಡಿ. ಅವರಿಗೆ ತೊಂದರೆ ಕೊಡುವ ಉದ್ದೇಶದಿಂದ ಅತಿರೇಕವೆಸಗಲು ಅವರನ್ನು ಬಳಿಯಿಟ್ಟುಕೊಳ್ಳಬೇಡಿ. ಯಾರು ಹೀಗೆ ಮಾಡುತ್ತಾನೋ ಅವನು ಅವನ ಮೇಲೆಯೇ ಅಕ್ರಮವೆಸಗಿದ್ದಾನೆ. ಅಲ್ಲಾಹನ ನಿಯಮಗಳನ್ನು ತಮಾಷೆಯಾಗಿ ಸ್ವೀಕರಿಸಬೇಡಿ. ಅಲ್ಲಾಹು ನಿಮಗೆ ದಯಪಾಲಿಸಿದ ಅನುಗ್ರಹಗಳನ್ನು ಮತ್ತು ನಿಮಗೆ ಉಪದೇಶ ನೀಡುತ್ತಾ ಅವನು ಅವತೀರ್ಣಗೊಳಿಸಿದ ಗ್ರಂಥ ಮತ್ತು ವಿವೇಕವನ್ನು ಸ್ಮರಿಸಿರಿ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ಅಲ್ಲಾಹು ಎಲ್ಲಾ ವಿಷಯಗಳನ್ನೂ ತಿಳಿದವನಾಗಿದ್ದಾನೆ.
Kannada Translation - Hamza Buturನೀವು ನಿಮ್ಮ ಪತ್ನಿಯರಿಗೆ ವಿಚ್ಛೇದನ ನೀಡಿ, ನಂತರ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸಿದರೆ, ಅವರು ಅವರ ಗಂಡಂದಿರನ್ನು ವಿವಾಹವಾಗುವುದನ್ನು ತಡೆಯಬೇಡಿ—ಸ್ವೀಕಾರಾರ್ಹ ರೀತಿಯಲ್ಲಿ ಅವರು ಪರಸ್ಪರ ಸಂತೃಪ್ತರಾಗಿದ್ದರೆ. ಇದು ನಿಮ್ಮ ಪೈಕಿ ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವರಿಗೆ ನೀಡುವ ಉಪದೇಶವಾಗಿದೆ. ಅದು ನಿಮಗೆ ಅತಿಶ್ರೇಷ್ಠ ಮತ್ತು ಅತ್ಯಂತ ಪರಿಶುದ್ಧವಾಗಿದೆ. ಅಲ್ಲಾಹು ತಿಳಿದಿದ್ದಾನೆ; ಆದರೆ ನೀವು ತಿಳಿದಿಲ್ಲ.
Kannada Translation - Hamza Buturತಾಯಂದಿರು ತಮ್ಮ ಮಕ್ಕಳಿಗೆ ಎರಡು ವರ್ಷ ಪೂರ್ಣವಾಗಿ ಸ್ತನಪಾನ ಮಾಡಬೇಕು—ಇದು ಸ್ತನಪಾನದ ಅವಧಿಯನ್ನು ಪೂರ್ಣಗೊಳಿಸಲು ಬಯಸುವವರಿಗೆ. ಸ್ವೀಕಾರಾರ್ಹ ರೀತಿಯಲ್ಲಿ ಅವರಿಗೆ ಆಹಾರ ಮತ್ತು ಬಟ್ಟೆಬರೆಗಳನ್ನು ಒದಗಿಸುವುದು ಮಗುವಿನ ತಂದೆಯ ಕರ್ತವ್ಯವಾಗಿದೆ. ಯಾರ ಮೇಲೂ ಅವನ ಸಾಮರ್ಥ್ಯಕ್ಕಿಂತ ಮಿಗಿಲಾದುದನ್ನು ಹೊರಿಸಲಾಗುವುದಿಲ್ಲ. ಮಗುವಿನ ಕಾರಣದಿಂದ ತಾಯಿಗೆ ತೊಂದರೆಯಾಗಬಾರದು ಮತ್ತು ಮಗುವಿನ ಕಾರಣದಿಂದ ತಂದೆಗೂ ತೊಂದರೆಯಾಗಬಾರದು. ವಾರಿಸುದಾರರಿಗೂ ಇದೇ ರೀತಿಯ ಕರ್ತವ್ಯಗಳಿವೆ. ಅವರಿಬ್ಬರು ಸಂತೃಪ್ತಿಯಿಂದ ಮತ್ತು ಸಮಾಲೋಚನೆಯಿಂದ ಮಗುವಿನ ಸ್ತನಪಾನವನ್ನು ನಿಲ್ಲಿಸಲು ಬಯಸಿದರೆ ಅವರಿಬ್ಬರ ಮೇಲೂ ದೋಷವಿಲ್ಲ. ನಿಮ್ಮ ಮಕ್ಕಳಿಗೆ ಬೇರೊಬ್ಬರಿಂದ ಸ್ತನಪಾನ ಮಾಡಿಸಲು ನೀವು ಬಯಸುವುದಾದರೆ, ಅದರಲ್ಲೂ ನಿಮಗೆ ದೋಷವಿಲ್ಲ—ಸ್ವೀಕಾರಾರ್ಹ ರೀತಿಯಲ್ಲಿ ಅವರಿಗೆ ಅವರ ವೇತನವನ್ನು ಕೊಡುವುದಾದರೆ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ನೀವು ಮಾಡುವ ಕರ್ಮಗಳನ್ನು ಅಲ್ಲಾಹು ನೋಡುತ್ತಿದ್ದಾನೆ.
Kannada Translation - Hamza Buturನಿಮ್ಮಲ್ಲಿ ಯಾರಾದರೂ ತಮ್ಮ ಪತ್ನಿಯರನ್ನು ಬಿಟ್ಟು ನಿಧನರಾದರೆ, ಅವರು (ಪತ್ನಿಯರು) ಸ್ವಯಂ ನಾಲ್ಕು ತಿಂಗಳು ಮತ್ತು ಹತ್ತು ದಿನ ದೀಕ್ಷಾಕಾಲ (ಇದ್ದ) ಆಚರಿಸಬೇಕು. ನಂತರ ಅವರ (ದೀಕ್ಷಾಕಾಲದ) ಅವಧಿ ಪೂರ್ಣವಾದರೆ, ಸ್ವೀಕಾರಾರ್ಹ ರೀತಿಯಲ್ಲಿ ಅವರೇನು ಮಾಡುತ್ತಾರೋ ಅದರಲ್ಲಿ ನಿಮಗೆ ದೋಷವಿಲ್ಲ. ನೀವು ಮಾಡುವ ಕರ್ಮಗಳನ್ನು ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಿದ್ದಾನೆ.
Kannada Translation - Hamza Buturನೀವು ಆ ಮಹಿಳೆಯರನ್ನು ವಿವಾಹವಾಗಲು ಬಯಸುತ್ತೀರೆಂದು ಸೂಚ್ಯವಾಗಿ ತಿಳಿಸಿದರೆ ಅಥವಾ ಅದನ್ನು ಮನಸ್ಸಿನೊಳಗೆ ಬಚ್ಚಿಟ್ಟರೆ ಅದರಲ್ಲಿ ನಿಮಗೇನೂ ದೋಷವಿಲ್ಲ.[1] ನೀವು ಅವರ ಬಗ್ಗೆ ಯೋಚಿಸುತ್ತೀರೆಂದು ಅಲ್ಲಾಹನಿಗೆ ತಿಳಿದಿದೆ. ಆದರೆ ರಹಸ್ಯವಾಗಿ ಅವರಿಗೆ ಯಾವುದೇ ಭರವಸೆ ನೀಡಬೇಡಿ. ನೀವು ಅವರೊಡನೆ ಉತ್ತಮ ಮಾತುಗಳನ್ನಾಡಬಹುದು. ಅವರ (ದೀಕ್ಷಾಕಾಲದ) ಅವಧಿ ಪೂರ್ಣವಾಗುವ ತನಕ ವಿವಾಹ ಕರಾರು ಮಾಡಿಕೊಳ್ಳಲು ದೃಢನಿರ್ಧಾರ ತೆಗೆದುಕೊಳ್ಳಬೇಡಿ. ತಿಳಿಯಿರಿ! ನಿಮ್ಮ ಮನಸ್ಸಿನಲ್ಲಿರುವುದನ್ನು ಅಲ್ಲಾಹು ತಿಳಿಯುತ್ತಾನೆ. ಆದ್ದರಿಂದ ಅವನನ್ನು ಭಯಪಡಿರಿ. ತಿಳಿಯಿರಿ! ಅಲ್ಲಾಹು ಕ್ಷಮಿಸುವವನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ.
Kannada Translation - Hamza Buturನೀವು ನಿಮ್ಮ ಪತ್ನಿಯರನ್ನು ಸೇರುವುದಕ್ಕೆ ಮೊದಲು ಅಥವಾ ಅವರಿಗೆ ವಧುದಕ್ಷಿಣೆಯನ್ನು ನಿಶ್ಚಯಿಸುವುದಕ್ಕೆ ಮೊದಲು ವಿಚ್ಛೇದನ ನೀಡಿದರೆ, ಅದರಲ್ಲಿ ನಿಮಗೇನೂ ದೋಷವಿಲ್ಲ. ಆದರೆ ಅವರಿಗೆ ಏನಾದರೂ ಪರಿಹಾರವನ್ನು ನೀಡಿರಿ. ಶ್ರೀಮಂತನು ತನ್ನ ಶಕ್ತಿಗೆ ಅನುಗುಣವಾಗಿ ಮತ್ತು ಬಡವನು ತನ್ನ ಶಕ್ತಿಗೆ ಅನುಗುಣವಾಗಿ ಸ್ವೀಕಾರಾರ್ಹ ರೀತಿಯಲ್ಲಿ ಏನಾದರೂ ನೀಡಲಿ. ಇದು ಒಳಿತು ಮಾಡುವವರ ಕರ್ತವ್ಯವಾಗಿದೆ.
Kannada Translation - Hamza Buturನೀವು ನಿಮ್ಮ ಪತ್ನಿಯರನ್ನು ಸೇರುವುದಕ್ಕೆ ಮೊದಲು ಅವರಿಗೆ ವಿಚ್ಛೇದನ ನೀಡಿದರೆ, ಮತ್ತು ಈಗಾಗಲೇ ನೀವು ಅವರಿಗೆ ವಧುದಕ್ಷಿಣೆಯನ್ನು ನಿಶ್ಚಯಿಸಿದ್ದರೆ, ನಿಶ್ಚಯಿಸಿದ ವಧುದಕ್ಷಿಣೆಯ ಅರ್ಧವನ್ನು ಅವರಿಗೆ ಕೊಟ್ಟುಬಿಡಿ. ಆದರೆ, ಅವರು ಮಾಫಿ ಮಾಡಿದರೆ ಹೊರತು.[1] ಅಥವಾ ವಿವಾಹ ಕರಾರು ಯಾರ ಕೈಯಲ್ಲಿದೆಯೋ ಅವನು ಮಾಫಿ ಮಾಡಿದರೆ ಹೊರತು.[2] ನೀವು ಮಾಫಿ ಮಾಡುವುದು ದೇವಭಯಕ್ಕೆ ಹೆಚ್ಚು ನಿಕಟವಾಗಿದೆ. ನೀವು ನಿಮ್ಮ ನಡುವಿನ ಸೌಜನ್ಯವನ್ನು ಮರೆಯಬೇಡಿ. ನಿಶ್ಚಯವಾಗಿಯೂ ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.
Kannada Translation - Hamza Buturನಿಮಗೆ ಭಯವಿದ್ದರೆ ನಡೆಯುತ್ತಾ ಅಥವಾ ಸವಾರಿ ಮಾಡುತ್ತಾ (ನಮಾಝ್ ನಿರ್ವಹಿಸಿರಿ). ನೀವು ಭಯಮುಕ್ತರಾದರೆ ನಿಮಗೆ ತಿಳಿಯದಿರುವುದನ್ನು ಅಲ್ಲಾಹು ನಿಮಗೆ ಕಲಿಸಿಕೊಟ್ಟಂತೆ ಅವನನ್ನು ಸ್ಮರಿಸಿರಿ.
Kannada Translation - Hamza Buturನಿಮ್ಮಲ್ಲಿ ಯಾರಾದರೂ ತಮ್ಮ ಪತ್ನಿಯರನ್ನು ಬಿಟ್ಟು ನಿಧನರಾದರೆ, ಪತ್ನಿಯರನ್ನು ಒಂದು ವರ್ಷದ ತನಕ ಹೊರ ಕಳುಹಿಸದೆ ಅವರನ್ನು ನೋಡಿಕೊಳ್ಳಲು ಉಯಿಲು ಮಾಡಬೇಕು. ಅವರೇನಾದರೂ (ಸ್ವಯಂ) ಹೊರಟುಹೋದರೆ, ಸ್ವೀಕಾರಾರ್ಹ ರೀತಿಯಲ್ಲಿ ಅವರೇನು ಮಾಡುತ್ತಾರೋ ಅದರಲ್ಲಿ ನಿಮಗೆ ದೋಷವಿಲ್ಲ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Kannada Translation - Hamza Buturಸಹಸ್ರಾರು ಸಂಖ್ಯೆಯ ಜನರು ಸಾವಿನ ಭಯದಿಂದ ತಮ್ಮ ಮನೆಗಳನ್ನು ಬಿಟ್ಟು ಓಡಿದ್ದನ್ನು ನೀವು ನೋಡಿಲ್ಲವೇ?[1] ಆಗ ಅಲ್ಲಾಹು ಅವರೊಡನೆ, "ಸಾಯಿರಿ" ಎಂದು ಹೇಳಿದನು. ನಂತರ ಅವನು ಅವರಿಗೆ ಜೀವ ನೀಡಿದನು. ನಿಶ್ಚಯವಾಗಿಯೂ ಅಲ್ಲಾಹನಿಗೆ ಜನರ ಮೇಲೆ ಬಹಳ ಔದಾರ್ಯವಿದೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ.
Kannada Translation - Hamza Buturಅಲ್ಲಾಹನಿಗೆ ಒಳ್ಳೆಯ ಸಾಲವನ್ನು ಕೊಡುವವರು ಯಾರು?[1] ಹಾಗಾದರೆ, ಅಲ್ಲಾಹು ಅವನಿಗೆ ಅದನ್ನು ಹಲವಾರು ಪಟ್ಟು ಹೆಚ್ಚಿಸಿಕೊಡುವನು. ಅಲ್ಲಾಹನೇ ಇಕ್ಕಟ್ಟು ಮತ್ತು ವಿಶಾಲತೆಯನ್ನು ನೀಡುವವನು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುತ್ತದೆ.
Kannada Translation - Hamza Buturಮೂಸಾರ ಕಾಲಾನಂತರ ಇಸ್ರಾಯೇಲ್ ಮಕ್ಕಳಲ್ಲಿ ಸೇರಿದ ಕೆಲವು ಮುಖಂಡರನ್ನು ನೀವು ನೋಡಿಲ್ಲವೇ? ಅವರು ತಮ್ಮ ಪ್ರವಾದಿಯೊಂದಿಗೆ, "ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲು ನಮಗೆ ಒಬ್ಬ ರಾಜನನ್ನು ನೇಮಿಸಿಕೊಡಿ" ಎಂದು ಹೇಳಿದ ಸಂದರ್ಭ. ಅವರು (ಪ್ರವಾದಿ) ಹೇಳಿದರು: "ನಿಮ್ಮ ಮೇಲೆ ಯುದ್ಧವು ಕಡ್ಡಾಯವಾದ ನಂತರ ನೀವೇನಾದರೂ ಯುದ್ಧ ಮಾಡದವರಾಗಿ ಬಿಟ್ಟರೆ?" ಅವರು ಹೇಳಿದರು: "ನಮ್ಮನ್ನು ನಮ್ಮ ಮನೆಗಳಿಂದ ಓಡಿಸಲಾಗಿರುವ ಮತ್ತು ನಮ್ಮಿಂದ ನಮ್ಮ ಮಕ್ಕಳನ್ನು ಬೇರ್ಪಡಿಸಲಾಗಿರುವ ಈ ಸ್ಥಿತಿಯಲ್ಲಿ ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ಸಾಧ್ಯವೇ?" ಆದರೆ ಅವರ ಮೇಲೆ ಯುದ್ಧವು ಕಡ್ಡಾಯವಾದಾಗ ಅವರಲ್ಲಿ ಕೆಲವರ ಹೊರತು ಉಳಿದವರೆಲ್ಲರೂ ಮುಖ ತಿರುಗಿಸಿ ನಡೆದರು. ಅಲ್ಲಾಹನಿಗೆ ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದೆ.
Kannada Translation - Hamza Buturಅವರೊಡನೆ ಅವರ ಪ್ರವಾದಿ ಹೇಳಿದರು: "ಅಲ್ಲಾಹು ನಿಮಗೆ ತಾಲೂತರನ್ನು (ಸೌಲ್) ರಾಜನಾಗಿ ನೇಮಿಸಿದ್ದಾನೆ." ಅವರು ಹೇಳಿದರು: "ಅವರು ನಮಗೆ ರಾಜನಾಗಲು ಹೇಗೆ ಸಾಧ್ಯ? ರಾಜ ಪದವಿಗೆ ಅವರಿಗಿಂತಲೂ ಹೆಚ್ಚು ಅರ್ಹತೆ ನಮಗಿದೆ. ಅವರಿಗೆ ಹೇರಳ ಆಸ್ತಿಪಾಸ್ತಿಯನ್ನೂ ನೀಡಲಾಗಿಲ್ಲ." ಅವರು (ಪ್ರವಾದಿ) ಹೇಳಿದರು: "ಅಲ್ಲಾಹು ನಿಮಗಿಂತ ಅವರನ್ನೇ ಆಯ್ಕೆ ಮಾಡಿದ್ದಾನೆ ಮತ್ತು ಅವರಿಗೆ ಬೌದ್ಧಿಕ ಹಾಗೂ ದೈಹಿಕ ಶ್ರೇಷ್ಠತೆಯನ್ನು ನೀಡಿದ್ದಾನೆ. ಅಲ್ಲಾಹು ಅವನು ಇಚ್ಛಿಸುವವರಿಗೆ ಅವನ ರಾಜ ಪದವಿ ನೀಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.”
Kannada Translation - Hamza Buturಅವರೊಡನೆ ಅವರ ಪ್ರವಾದಿ ಹೇಳಿದರು: "ಆ ಪೆಟ್ಟಿಗೆ ನಿಮ್ಮ ಬಳಿಗೆ ಬರುವುದು ಅವರ ರಾಜ ಪದವಿಯ ಸಂಕೇತವಾಗಿದೆ. ಅದರಲ್ಲಿ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಮನಃಶಾಂತಿ ಮತ್ತು ಮೂಸಾ ಹಾಗೂ ಹಾರೂನರ ಕುಟುಂಬಗಳು ಬಿಟ್ಟು ಹೋದ ಅವಶೇಷಗಳಿವೆ. ಅದನ್ನು ದೇವದೂತರು ವಹಿಸಿಕೊಂಡು ಬರುತ್ತಾರೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ನಿಶ್ಚಯವಾಗಿಯೂ ನಿಮಗೆ ಅದರಲ್ಲಿ ಸ್ಪಷ್ಟ ದೃಷ್ಟಾಂತವಿದೆ."
Kannada Translation - Hamza Buturನಂತರ ತಾಲೂತ್ (ಸೌಲ್) ಸೈನ್ಯದೊಂದಿಗೆ ಹೊರಟಾಗ ಹೇಳಿದರು: "ನಿಶ್ಚಯವಾಗಿಯೂ ಅಲ್ಲಾಹು ಒಂದು ನದಿಯ ಮೂಲಕ ನಿಮ್ಮನ್ನು ಪರೀಕ್ಷಿಸುವನು. ಯಾರು ಅದರ ನೀರನ್ನು ಕುಡಿಯುತ್ತಾನೋ ಅವನು ನನ್ನವನಲ್ಲ. ಯಾರು ಅದರ ರುಚಿ ನೋಡುವುದಿಲ್ಲವೋ ಅವನು ನನ್ನವನು; ಆದರೆ ತನ್ನ ಕೈಯಿಂದ ಒಂದು ಬೊಗಸೆ ಮಾತ್ರ ತೆಗೆದುಕೊಂಡವನ ಹೊರತು." ಆದರೆ ಅವರಲ್ಲಿ ಕೆಲವರ ಹೊರತು ಉಳಿದವರೆಲ್ಲರೂ ಅದರ ನೀರನ್ನು ಕುಡಿದರು. ನಂತರ ತಾಲೂತ್ ಮತ್ತು ಅವರ ಜೊತೆಗಿರುವ ಸತ್ಯವಿಶ್ವಾಸಿಗಳು ಆ ನದಿಯನ್ನು ದಾಟಿದಾಗ ಅವರು ಹೇಳಿದರು: "ಇಂದು ನಮಗೆ ಜಾಲೂತ್ (ಗೋಲಿಯತ್) ಮತ್ತು ಅವನ ಸೈನ್ಯದೊಡನೆ ಹೋರಾಡುವ ಶಕ್ತಿಯಿಲ್ಲ." ಆದರೆ ನಾವು ಅಲ್ಲಾಹನನ್ನು ಭೇಟಿಯಾಗಲಿದ್ದೇವೆ ಎಂಬ ದೃಢವಿಶ್ವಾಸವಿದ್ದವರು ಹೇಳಿದರು: "ಎಷ್ಟೆಷ್ಟು ಚಿಕ್ಕ ಸೈನ್ಯಗಳು ಅಲ್ಲಾಹನ ಅಪ್ಪಣೆಯೊಂದಿಗೆ ಎಷ್ಟೆಷ್ಟು ದೊಡ್ಡ ಸೈನ್ಯಗಳನ್ನು ಸೋಲಿಸಿವೆ! ಅಲ್ಲಾಹು ತಾಳ್ಮೆಯುಳ್ಳವರ ಜೊತೆಗಿದ್ದಾನೆ."
Kannada Translation - Hamza Buturನಂತರ ಜಾಲೂತ್ (ಗೋಲಿಯತ್) ಮತ್ತು ಅವನ ಸೈನ್ಯಕ್ಕೆ ಮುಖಾಮುಖಿಯಾಗಿ ನಿಂತಾಗ ಅವರು ಹೀಗೆ ಪ್ರಾರ್ಥಿಸಿದರು: "ಓ ನಮ್ಮ ಪರಿಪಾಲಕನೇ! ನಮಗೆ ಸ್ಥೈರ್ಯವನ್ನು ದಯಪಾಲಿಸು, ನಮ್ಮ ಪಾದಗಳನ್ನು ದೃಢವಾಗಿ ನಿಲ್ಲಿಸು ಮತ್ತು ಸತ್ಯನಿಷೇಧಿಗಳಾದ ಜನರ ವಿರುದ್ಧ ನಮಗೆ ಸಹಾಯ ಮಾಡು."
Kannada Translation - Hamza Buturನಂತರ ಅಲ್ಲಾಹನ ಅಪ್ಪಣೆಯಿಂದ ಅವರು ಅವರನ್ನು (ವೈರಿಗಳನ್ನು) ಸೋಲಿಸಿದರು. ದಾವೂದ್ ಜಾಲೂತನನ್ನು ಕೊಂದರು. ಅಲ್ಲಾಹು ಅವರಿಗೆ (ದಾವೂದರಿಗೆ) ಸಾಮ್ರಾಜ್ಯವನ್ನು ಮತ್ತು ವಿವೇಕವನ್ನು ದಯಪಾಲಿಸಿದನು ಹಾಗೂ ಅವನು ಇಚ್ಛಿಸಿದಷ್ಟು ವಿಷಯಗಳನ್ನು ಅವರಿಗೆ ಕಲಿಸಿಕೊಟ್ಟನು. ಅಲ್ಲಾಹು ಕೆಲವು ಜನರಿಗೆ ಇತರ ಕೆಲವರ ಮೂಲಕ ತಡೆಯೊಡ್ಡದಿರುತ್ತಿದ್ದರೆ ಭೂಲೋಕದಲ್ಲಿ ಅರಾಜಕತೆ ತಾಂಡವವಾಡುತ್ತಿತ್ತು. ಅದರೆ ಅಲ್ಲಾಹು ಸರ್ವಲೋಕದವರ ಮೇಲೆ ಬಹಳ ಔದಾರ್ಯವುಳ್ಳವನಾಗಿದ್ದಾನೆ.
Kannada Translation - Hamza Buturಇವೆಲ್ಲವೂ ಅಲ್ಲಾಹನ ವಚನಗಳಾಗಿವೆ. ನಾವು ಇವುಗಳನ್ನು ಸತ್ಯ ಸಮೇತ ನಿಮಗೆ ಓದಿಕೊಡುತ್ತಿದ್ದೇವೆ. ನಿಶ್ಚಯವಾಗಿಯೂ ನೀವು ಸಂದೇಶವಾಹಕರಲ್ಲಿ ಒಬ್ಬರಾಗಿದ್ದೀರಿ.
Kannada Translation - Hamza Buturಆ ಸಂದೇಶವಾಹಕರಲ್ಲಿ ಕೆಲವರನ್ನು ನಾವು ಇತರ ಕೆಲವರಿಗಿಂತ ಶ್ರೇಷ್ಠಗೊಳಿಸಿದ್ದೇವೆ. ಅವರಲ್ಲಿ ಅಲ್ಲಾಹು (ನೇರವಾಗಿ) ಮಾತನಾಡಿದವರಿದ್ದಾರೆ. ಅವರಲ್ಲಿ ಕೆಲವರ ಪದವಿಗಳನ್ನು ಅವನು ಎತ್ತರಿಸಿದ್ದಾನೆ. ಮರ್ಯಮರ ಮಗ ಈಸಾರಿಗೆ ನಾವು ಪವಾಡಗಳನ್ನು ನೀಡಿದ್ದೇವೆ ಮತ್ತು ಪವಿತ್ರಾತ್ಮನ ಮೂಲಕ ಅವರನ್ನು ಬೆಂಬಲಿಸಿದ್ದೇವೆ. ಅಲ್ಲಾಹು ಇಚ್ಛಿಸುತ್ತಿದ್ದರೆ ಅವರ ನಂತರದವರು ಅವರಿಗೆ ಸ್ಪಷ್ಟ ಸಾಕ್ಷ್ಯಾಧಾರಗಳು ಬಂದ ಬಳಿಕವೂ ಪರಸ್ಪರ ಹೊಡೆದಾಡುತ್ತಿರಲಿಲ್ಲ. ಆದರೆ ಅವರು ಭಿನ್ನಮತ ತಳೆದರು. ಅವರಲ್ಲಿ ಕೆಲವರು ಸತ್ಯವಿಶ್ವಾಸಿಗಳಾದರು ಮತ್ತು ಕೆಲವರು ಸತ್ಯನಿಷೇಧಿಗಳಾದರು. ಅಲ್ಲಾಹು ಇಚ್ಛಿಸುತ್ತಿದ್ದರೆ ಅವರು ಪರಸ್ಪರ ಹೊಡೆದಾಡುತ್ತಿರಲಿಲ್ಲ. ಆದರೆ ಅಲ್ಲಾಹು ಅವನು ಬಯಸುವುದನ್ನು ಮಾಡುತ್ತಾನೆ.
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಯಾವುದೇ ವ್ಯವಹಾರ, ಗೆಳೆತನ ಅಥವಾ ಶಿಫಾರಸು ಇಲ್ಲದ ಒಂದು ದಿನ ಬರುವುದಕ್ಕೆ ಮೊದಲೇ ನಾವು ನಿಮಗೆ ಒದಗಿಸಿದ ಧನದಿಂದ ಖರ್ಚು ಮಾಡಿರಿ. ಸತ್ಯನಿಷೇಧಿಗಳೇ ಅಕ್ರಮಿಗಳು.
Kannada Translation - Hamza Buturಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ನಿರಂತರ ಜೀವಿಸುವವನು ಮತ್ತು ಎಲ್ಲರನ್ನೂ ಸಂರಕ್ಷಿಸಿ ನಿಯಂತ್ರಿಸುವವನಾಗಿದ್ದಾನೆ. ತೂಕಡಿಕೆ ಅಥವಾ ನಿದ್ದೆ ಅವನನ್ನು ವಶಪಡಿಸುವುದಿಲ್ಲ. ಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅವನಿಗೆ ಸೇರಿದ್ದು. ಅವನ ಅಪ್ಪಣೆಯಿಲ್ಲದೆ ಅವನ ಬಳಿ ಶಿಫಾರಸು ಮಾಡುವವನು ಯಾರು? ಅವರ ಮುಂದಿರುವುದನ್ನು ಮತ್ತು ಅವರ ಹಿಂದಿರುವುದನ್ನು ಅವನು ತಿಳಿಯುತ್ತಾನೆ. ಅವನ ಜ್ಞಾನದಿಂದ ಅವನು ಇಚ್ಛಿಸುವಷ್ಟನ್ನಲ್ಲದೆ (ಬೇರೇನನ್ನೂ) ತಿಳಿದುಕೊಳ್ಳಲು ಅವರಿಗೆ ಸಾಧ್ಯವಿಲ್ಲ. ಅವನ ಕುರ್ಸೀ ಭೂಮ್ಯಾಕಾಶಗಳನ್ನು ವ್ಯಾಪಿಸಿಕೊಂಡಿದೆ. ಅವುಗಳ ಸಂರಕ್ಷಣೆಯು ಅವನನ್ನು ಆಯಾಸಗೊಳಿಸುವುದಿಲ್ಲ. ಅವನು ಅತ್ಯುನ್ನತನು ಮತ್ತು ಮಹಾನನಾಗಿದ್ದಾನೆ .[1]
Kannada Translation - Hamza Buturಧರ್ಮದ ವಿಷಯದಲ್ಲಿ ಯಾವುದೇ ಬಲಾತ್ಕಾರವಿಲ್ಲ. ಸನ್ಮಾರ್ಗವು ದುರ್ಮಾರ್ಗದಿಂದ ಸ್ಪಷ್ಟವಾಗಿ ಬೇರ್ಪಟ್ಟಿದೆ. ಆದ್ದರಿಂದ ಯಾರು ಅಲ್ಲಾಹನ ಹೊರತಾದ ದೇವರುಗಳನ್ನು ನಿಷೇಧಿಸಿ ಅಲ್ಲಾಹನಲ್ಲಿ ಮಾತ್ರ ವಿಶ್ವಾಸವಿಡುತ್ತಾನೋ ಅವನು ಅತ್ಯಂತ ಬಲಿಷ್ಠ ಹಗ್ಗವನ್ನು ಹಿಡಿದುಕೊಂಡನು. ಅದು ಎಂದಿಗೂ ಕಡಿದು ಹೋಗುವುದಿಲ್ಲ. ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Kannada Translation - Hamza Buturಅಲ್ಲಾಹು ಸತ್ಯವಿಶ್ವಾಸಿಗಳ ರಕ್ಷಕನು. ಅವನು ಅವರನ್ನು ಅಂಧಕಾರಗಳಿಂದ ಬೆಳಕಿಗೆ ತರುತ್ತಾನೆ. ಅಲ್ಲಾಹನ ಹೊರತಾದ ದೇವರುಗಳು ಸತ್ಯನಿಷೇಧಿಗಳ ಸಂರಕ್ಷಕರಾಗಿದ್ದಾರೆ. ಅವರು ಅವರನ್ನು ಬೆಳಕಿನಿಂದ ಅಂಧಕಾರಗಳಿಗೆ ಸಾಗಿಸುತ್ತಾರೆ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.
Kannada Translation - Hamza Buturಇಬ್ರಾಹೀಮರೊಡನೆ ಅವರ ಪರಿಪಾಲಕನ (ಅಲ್ಲಾಹನ) ವಿಷಯದಲ್ಲಿ ತರ್ಕಿಸಿದವನನ್ನು ನೀವು ನೋಡಿಲ್ಲವೇ? ಅಲ್ಲಾಹು ಅವನಿಗೆ ಸಾಮ್ರಾಜ್ಯವನ್ನು ದಯಪಾಲಿಸಿದ್ದನು. "ನನ್ನ ಪರಿಪಾಲಕನು (ಅಲ್ಲಾಹು) ಜೀವ ಮತ್ತು ಮರಣವನ್ನು ನೀಡುತ್ತಾನೆ" ಎಂದು ಇಬ್ರಾಹೀಂ ಹೇಳಿದಾಗ, "ನಾನು ಕೂಡ ಜೀವ ಮತ್ತು ಮರಣವನ್ನು ನೀಡುತ್ತೇನೆ" ಎಂದು ಅವನು ಹೇಳಿದನು. ಇಬ್ರಾಹೀಂ ಹೇಳಿದರು: "ಅಲ್ಲಾಹು ಸೂರ್ಯನನ್ನು ಪೂರ್ವದಿಂದ ತರುತ್ತಾನೆ; ನೀವು ಅದನ್ನು ಪಶ್ಚಿಮದಿಂದ ತನ್ನಿರಿ!" ಆಗ ಆ ಸತ್ಯನಿಷೇಧಿ ಮೂಕವಿಸ್ಮಿತನಾದನು. ಅಕ್ರಮವೆಸಗುವ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
Kannada Translation - Hamza Buturಅಥವಾ ಛಾವಣಿಗಳೊಂದಿಗೆ ಕುಸಿದುಬಿದ್ದ ಒಂದು ಊರಿನ ಬಳಿಯಿಂದ ಸಂಚರಿಸುತ್ತಿದ್ದ ಒಬ್ಬ ವ್ಯಕ್ತಿಯಂತೆ. ಅವರು ಕೇಳಿದರು: “ನಿರ್ಜೀವವಾದ ಬಳಿಕ ಅಲ್ಲಾಹು ಇದಕ್ಕೆ ಜೀವ ನೀಡುವುದು ಹೇಗೆ?” ಆಗ ಅಲ್ಲಾಹು ಅವರನ್ನು ನೂರು ವರ್ಷಗಳ ಕಾಲ ಮೃತ್ಯುವಶಗೊಳಿಸಿದನು. ನಂತರ ಅವರಿಗೆ ಜೀವ ನೀಡಿ ಎಬ್ಬಿಸಿ ಕೇಳಿದನು: “ನೀವು ಎಷ್ಟು ವರ್ಷ ಕಳೆದಿರಿ?” ಅವರು ಉತ್ತರಿಸಿದರು: “ಒಂದು ದಿನ ಅಥವಾ ದಿನದ ಕೆಲವು ತಾಸುಗಳು.” ಅಲ್ಲಾಹು ಹೇಳಿದನು: “ಅಲ್ಲ, ವಾಸ್ತವವಾಗಿ ನೀವು ನೂರು ವರ್ಷ ಕಳೆದಿದ್ದೀರಿ. ನೀವು ನಿಮ್ಮ ಆಹಾರ-ಪಾನೀಯಗಳನ್ನು ನೋಡಿರಿ. ಅವು ಹಾಳಾಗಿಲ್ಲ. ನಿಮ್ಮ ಕತ್ತೆಯನ್ನು ನೋಡಿರಿ. ನಾವು ನಿಮ್ಮನ್ನು ಜನರಿಗೊಂದು ದೃಷ್ಟಾಂತವಾಗಿ ಮಾಡುತ್ತೇವೆ. ನಾವು ಆ ಮೂಳೆಗಳನ್ನು ಹೇಗೆ ಜೋಡಿಸುತ್ತೇವೆ ಮತ್ತು ಅವುಗಳಿಗೆ ಹೇಗೆ ಮಾಂಸವನ್ನು ಹೊದಿಯುತ್ತೇವೆಂದು ನೋಡಿರಿ.” ಅವರಿಗೆ ವಿಷಯವು ಸ್ಪಷ್ಟವಾದಾಗ ಅವರು ಹೇಳಿದರು: “ನಿಶ್ಚಯವಾಗಿಯೂ ಅಲ್ಲಾಹನಿಗೆ ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವಿದೆಯೆಂದು ನನಗೆ ತಿಳಿದಿದೆ.”
Kannada Translation - Hamza Buturಇಬ್ರಾಹೀಮ್ ಹೇಳಿದ ಸಂದರ್ಭ: "ಓ ನನ್ನ ಪರಿಪಾಲಕನೇ! ನೀನು ಸತ್ತವರಿಗೆ ಹೇಗೆ ಜೀವ ನೀಡುತ್ತೀ ಎಂದು ನನಗೆ ತೋರಿಸಿಕೊಡು." ಅಲ್ಲಾಹು ಕೇಳಿದನು: "ನಿಮಗೆ ನಂಬಿಕೆಯಿಲ್ಲವೇ?" ಅವರು ಹೇಳಿದರು: "ನಂಬಿಕೆಯಿದೆ. ಆದರೆ ನನ್ನ ಹೃದಯದ ಸಮಾಧಾನಕ್ಕಾಗಿ." ಅಲ್ಲಾಹು ಹೇಳಿದನು: "ನೀವು ನಾಲ್ಕು ಹಕ್ಕಿಗಳನ್ನು ಹಿಡಿದು ಅವುಗಳನ್ನು ನಿಮ್ಮ ಬಳಿಗೆ ಸೇರಿಸಿಕೊಳ್ಳಿ. ನಂತರ ಅವುಗಳನ್ನು (ತುಂಡುಗಳಾಗಿ ಕತ್ತರಿಸಿ) ಒಂದೊಂದು ಭಾಗವನ್ನು ಒಂದೊಂದು ಬೆಟ್ಟದ ಮೇಲಿಡಿ. ನಂತರ ಅವುಗಳನ್ನು ಕೂಗಿ ಕರೆಯಿರಿ. ಅವು ತಕ್ಷಣ ನಿಮ್ಮ ಬಳಿಗೆ ಓಡಿ ಬರುವುವು. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Kannada Translation - Hamza Buturಅಲ್ಲಾಹನ ಮಾರ್ಗದಲ್ಲಿ ತಮ್ಮ ಧನವನ್ನು ಖರ್ಚು ಮಾಡುವವರ ಉದಾಹರಣೆಯು ಒಂದು ಧಾನ್ಯದಂತೆ. ಅದು ಏಳು ತೆನೆಗಳನ್ನು ಉತ್ಪಾದಿಸಿತು. ಪ್ರತಿಯೊಂದು ತೆನೆಯಲ್ಲೂ ನೂರು ಧಾನ್ಯಗಳಿವೆ. ಅಲ್ಲಾಹು ಅವನು ಇಚ್ಛಿಸುವವರಿಗೆ ಇಮ್ಮಡಿಗೊಳಿಸಿಕೊಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.
Kannada Translation - Hamza Buturಅಲ್ಲಾಹನ ಮಾರ್ಗದಲ್ಲಿ ತಮ್ಮ ಧನವನ್ನು ಖರ್ಚು ಮಾಡುವವರು ಮತ್ತು ನಂತರ ತಾವು ಖರ್ಚು ಮಾಡಿದ್ದಕ್ಕಾಗಿ ಉಪಕಾರ ಸ್ಮರಣೆ ಬಯಸದವರು ಮತ್ತು ತೊಂದರೆ ಕೊಡದವರು ಯಾರೋ—ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಅವರ ಪ್ರತಿಫಲವಿದೆ. ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.
Kannada Translation - Hamza Buturಕೊಟ್ಟ ನಂತರ ತೊಂದರೆ ನೀಡುವ ದಾನಕ್ಕಿಂತ ಉತ್ತಮವಾದ ಮಾತು ಮತ್ತು ಕ್ಷಮೆಯು ಶ್ರೇಷ್ಠವಾಗಿದೆ. ಅಲ್ಲಾಹು ನಿರಪೇಕ್ಷನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ.
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಉಪಕಾರ ಸ್ಮರಣೆ ಬಯಸುವ ಮೂಲಕ ಮತ್ತು ತೊಂದರೆ ಕೊಡುವ ಮೂಲಕ ನಿಮ್ಮ ದಾನಗಳನ್ನು ವ್ಯರ್ಥಗೊಳಿಸಬೇಡಿ. ಅಲ್ಲಾಹನಲ್ಲಿ ಮತ್ತು ಪರಲೋಕದಲ್ಲಿ ವಿಶ್ವಾಸವಿಡದೆ ಕೇವಲ ಜನರು ನೋಡುವುದಕ್ಕಾಗಿ ಖರ್ಚು ಮಾಡುವ ವ್ಯಕ್ತಿಯಂತೆ ನೀವಾಗಬೇಡಿ. ಅವನ ಉದಾಹರಣೆಯು ನುಣುಪಾದ ಒಂದು ಬಂಡೆಯಂತೆ. ಅದರ ಮೇಲೆ ಸ್ವಲ್ಪ ಮಣ್ಣಿದೆ. ಅದಕ್ಕೆ ಜಡಿಮಳೆ ಸುರಿದು ಅದು ಅದನ್ನು ಬೋಳು ಮಾಡಿಬಿಟ್ಟಿತು. ಅವರಿಗೆ ಅವರು ಸಂಪಾದಿಸಿದ ಯಾವುದನ್ನೂ ವಶದಲ್ಲಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ಸತ್ಯನಿಷೇಧಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
Kannada Translation - Hamza Buturಅಲ್ಲಾಹನ ಸಂಪ್ರೀತಿಯನ್ನು ಹುಡುಕುತ್ತಾ ದೃಢಮನಸ್ಸಿನಿಂದ ಮತ್ತು ಮನಸ್ಸಂತೃಪ್ತಿಯಿಂದ ತಮ್ಮ ಧನವನ್ನು ಖರ್ಚು ಮಾಡುವವರ ಉದಾಹರಣೆಯು ಎತ್ತರದ ಸ್ಥಳದಲ್ಲಿರುವ ಒಂದು ತೋಟದಂತೆ. ಅದಕ್ಕೆ ಜಡಿಮಳೆಯು ಸುರಿದಾಗ ಅದು ಇಮ್ಮಡಿ ಫಲವನ್ನು ನೀಡುತ್ತದೆ. ಅದಕ್ಕೆ ಜಡಿಮಳೆ ಸುರಿಯದಿದ್ದರೂ ತುಂತುರು ಮಳೆ ಸಾಕಾಗುತ್ತದೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.
Kannada Translation - Hamza Buturನಿಮ್ಮಲ್ಲೊಬ್ಬನಿಗೆ ತಳಭಾಗದಿಂದ ನದಿಗಳು ಹರಿಯುವ, ಖರ್ಜೂರ ಮತ್ತು ದ್ರಾಕ್ಷಿಯ ಹಾಗೂ ಎಲ್ಲಾ ರೀತಿಯ ಹಣ್ಣು-ಹಂಪಲುಗಳಿರುವ ಒಂದು ತೋಟವಿದ್ದು, ಅವನು ವೃದ್ಧನಾಗಿದ್ದು ಬಲಹೀನರಾದ ಮಕ್ಕಳೂ ಇರುವ ಸ್ಥಿತಿಯಲ್ಲಿ ಆ ತೋಟಕ್ಕೆ ಬೆಂಕಿಯ ಬಿರುಗಾಳಿ ಬೀಸಿ ಅದರಿಂದ ಆ ತೋಟವು ಸುಟ್ಟು ಕರಕಲಾಗುವುದನ್ನು ನೀವು ಬಯಸುತ್ತೀರಾ? ಈ ರೀತಿ ಅಲ್ಲಾಹು ತನ್ನ ವಚನಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ. ನೀವು ಆಲೋಚಿಸುವುದಕ್ಕಾಗಿ.
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಸಂಪಾದಿಸಿದ ಉತ್ತಮ ವಸ್ತುಗಳಿಂದ ಮತ್ತು ನಾವು ನಿಮಗೆ ಭೂಮಿಯಿಂದ ಉತ್ಪಾದಿಸಿಕೊಟ್ಟ ವಸ್ತುಗಳಿಂದ ಖರ್ಚು (ದಾನ) ಮಾಡಿರಿ. ನೀವು ಕಣ್ಣು ಮುಚ್ಚಿಕೊಂಡಲ್ಲದೆ ಸ್ವೀಕರಿಸದ ಕೆಟ್ಟ ವಸ್ತುಗಳನ್ನು ಖರ್ಚು (ದಾನ) ಮಾಡಲು ಮುಂದಾಗಬೇಡಿ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.
Kannada Translation - Hamza Buturಶೈತಾನನು ನಿಮಗೆ ಬಡತನದ ಬಗ್ಗೆ ಬೆದರಿಸುತ್ತಾನೆ ಮತ್ತು ಅಶ್ಲೀಲತೆಯನ್ನು ಆದೇಶಿಸುತ್ತಾನೆ. ಅಲ್ಲಾಹು ನಿಮಗೆ ಅವನ ಕ್ಷಮೆ ಮತ್ತು ಔದಾರ್ಯದ ಬಗ್ಗೆ ವಾಗ್ದಾನ ಮಾಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.
Kannada Translation - Hamza Buturಅವನು ಇಚ್ಛಿಸುವವರಿಗೆ ಅವನು ವಿವೇಕವನ್ನು ದಯಪಾಲಿಸುತ್ತಾನೆ. ಯಾರಿಗೆ ವಿವೇಕವನ್ನು ದಯಪಾಲಿಸಲಾಗಿದೆಯೋ ಅವನಿಗೆ ಅತ್ಯಧಿಕ ಒಳಿತುಗಳನ್ನು ದಯಪಾಲಿಸಲಾಗಿದೆ. ಬುದ್ಧಿವಂತರ ಹೊರತು ಇನ್ನಾರೂ ಉಪದೇಶವನ್ನು ಸ್ವೀಕರಿಸುವುದಿಲ್ಲ.
Kannada Translation - Hamza Buturನೀವು ಯಾವುದೇ ವಸ್ತುವನ್ನು ಖರ್ಚು (ದಾನ) ಮಾಡಿದರೂ ಅಥವಾ ಹರಕೆ ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ. ಅಕ್ರಮಿಗಳಿಗೆ ಸಹಾಯ ಮಾಡುವವರು ಯಾರೂ ಇಲ್ಲ.
Kannada Translation - Hamza Buturನೀವು ದಾನ ಮಾಡಿದ್ದನ್ನು ಬಹಿರಂಗಪಡಿಸಿದರೆ ಅದು ಒಳ್ಳೆಯದೇ. ಆದರೆ ನೀವು ಅದನ್ನು ಗೋಪ್ಯವಾಗಿಟ್ಟು ಬಡವರಿಗೆ ನೀಡಿದರೆ ಅದು ನಿಮಗೆ ಶ್ರೇಷ್ಠವಾಗಿದೆ. ಅಲ್ಲಾಹು ನಿಮ್ಮ ಪಾಪಗಳನ್ನು ಅಳಿಸುವನು. ನೀವು ಮಾಡುವ ಕರ್ಮಗಳ ಬಗ್ಗೆ ಅಲ್ಲಾಹು ಸೂಕ್ಷ್ಮವಾಗಿ ತಿಳಿದಿದ್ದಾನೆ.
Kannada Translation - Hamza Buturನಿಮಗೆ ಅವರನ್ನು ಸನ್ಮಾರ್ಗದಲ್ಲಿ ಸೇರಿಸುವ ಹೊಣೆಗಾರಿಕೆಯಿಲ್ಲ. ಬದಲಿಗೆ, ಅಲ್ಲಾಹು ಅವನು ಇಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೆ. ನೀವು ಏನು ಖರ್ಚು (ದಾನ) ಮಾಡಿದರೂ ಅದರ ಲಾಭವು ನಿಮಗೇ ಆಗಿದೆ. ಅಲ್ಲಾಹನ ಸಂಪ್ರೀತಿಯನ್ನು ಬಯಸಿಯೇ ವಿನಾ ನೀವು ಖರ್ಚು (ದಾನ) ಮಾಡಬಾರದು. ನೀವು ಏನು ಖರ್ಚು (ದಾನ) ಮಾಡಿದರೂ ಅದರ ಪೂರ್ಣ ಪ್ರತಿಫಲವನ್ನು ನಿಮಗೆ ನೀಡಲಾಗುವುದು. ನಿಮಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ.
Kannada Translation - Hamza Buturಭೂಮಿಯಲ್ಲಿ ಓಡಾಡಲು ಸಾಧ್ಯವಾಗದಂತೆ ಅಲ್ಲಾಹನ ಮಾರ್ಗದಲ್ಲಿ ಬಂಧನದಲ್ಲಿರುವ ಬಡವರಿಗೆ (ಖರ್ಚು ಮಾಡಿರಿ).[1] ಅವರಿಗೆ ಆತ್ಮಸಂಯಮವಿರುವ ಕಾರಣ (ಇತರರ ಮುಂದೆ ಕೈ ಚಾಚಿ ಬೇಡದ ಕಾರಣ) ಅವಿವೇಕಿಗಳು ಅವರನ್ನು ಶ್ರೀಮಂತರೆಂದು ಭಾವಿಸುತ್ತಾರೆ. ನಿಮಗೆ ಅವರನ್ನು ಅವರ ಹಾವಭಾವಗಳಿಂದ ಗುರುತಿಸಬಹುದು. ಅವರು ಜನರೊಡನೆ ಕಾಡಿ ಬೇಡುವುದಿಲ್ಲ. ನೀವು (ಅಲ್ಲಾಹನ ಮಾರ್ಗದಲ್ಲಿ) ಯಾವುದೇ ಸಂಪತ್ತನ್ನು ಖರ್ಚು (ದಾನ) ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.
Kannada Translation - Hamza Buturರಾತ್ರಿ ಮತ್ತು ಹಗಲು ರಹಸ್ಯವಾಗಿ ಮತ್ತು ಬಹಿರಂಗವಾಗಿ ತಮ್ಮ ಧನವನ್ನು ಖರ್ಚು ಮಾಡುವವರು ಯಾರೋ—ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಅವರ ಪ್ರತಿಫಲವಿದೆ. ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.
Kannada Translation - Hamza Buturಬಡ್ಡಿ ತಿನ್ನುವವರು ಯಾರೋ ಅವರು ಶೈತಾನನ ಸ್ಪರ್ಶದಿಂದ ಹುಚ್ಚು ಹಿಡಿದವನು ಎದ್ದೇಳುವಂತೆಯೇ ವಿನಾ ಎದ್ದೇಳುವುದಿಲ್ಲ. ನಿಶ್ಚಯವಾಗಿಯೂ ವ್ಯಾಪಾರವು ಬಡ್ಡಿಯಂತೆ ಎಂದು ಅವರು ಹೇಳಿದ್ದೇ ಅದಕ್ಕೆ ಕಾರಣ. ಆದರೆ ಅಲ್ಲಾಹು ವ್ಯಾಪಾರವನ್ನು ಅನುಮತಿಸಿದ್ದಾನೆ ಮತ್ತು ಬಡ್ಡಿಯನ್ನು ನಿಷೇಧಿಸಿದ್ದಾನೆ. ಆದ್ದರಿಂದ, ಯಾರು ಅಲ್ಲಾಹನ ಕಡೆಯಿಂದ ಬಂದ ಉಪದೇಶವನ್ನು ಕೇಳಿದ ನಂತರ ಬಡ್ಡಿ ವ್ಯವಹಾರವನ್ನು ನಿಲ್ಲಿಸುತ್ತಾನೋ ಅವನಿಗೆ ಹಿಂದೆ ಪಡೆದುದರಲ್ಲಿ ದೋಷವಿಲ್ಲ; ಅವನ ವಿಚಾರಣೆಯು ಅಲ್ಲಾಹನಿಗೆ ಬಿಟ್ಟದ್ದು. ಆದರೆ ಯಾರು ಪುನಃ ಬಡ್ಡಿ ವ್ಯವಹಾರಕ್ಕೆ ಮರಳುತ್ತಾರೋ ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.
Kannada Translation - Hamza Buturಅಲ್ಲಾಹು ಬಡ್ಡಿಯನ್ನು ಅಳಿಸುತ್ತಾನೆ ಮತ್ತು ದಾನ ಧರ್ಮಗಳನ್ನು ಪೋಷಿಸುತ್ತಾನೆ. ಕೃತಘ್ನ ಮತ್ತು ಪಾಪಿಯಾದ ಯಾರನ್ನೂ ಅಲ್ಲಾಹು ಇಷ್ಟಪಡುವುದಿಲ್ಲ.
Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಸತ್ಕರ್ಮವೆಸಗುವವರು, ನಮಾಝ್ ಸಂಸ್ಥಾಪಿಸುವವರು ಮತ್ತು ಝಕಾತ್ ನೀಡುವವರು ಯಾರೋ—ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಅವರ ಪ್ರತಿಫಲವಿದೆ. ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.
Kannada Translation - Hamza Buturನೀವು ಅದನ್ನು ಮಾಡದಿದ್ದರೆ, ಅಲ್ಲಾಹನೊಡನೆ ಮತ್ತು ಅವನ ಸಂದೇಶವಾಹಕರೊಡನೆ ಹೋರಾಡಲು ಸಿದ್ಧರಾಗಿರಿ. ನೀವು ಪಶ್ಚಾತ್ತಾಪಪಟ್ಟರೆ ನಿಮ್ಮ ಬಂಡವಾಳವನ್ನು ನೀವಿಟ್ಟುಕೊಳ್ಳಬಹುದು. ನೀವು ಅನ್ಯಾಯ ಮಾಡಬಾರದು ಮತ್ತು ನಿಮಗೂ ಅನ್ಯಾಯವಾಗಬಾರದು.
Kannada Translation - Hamza Butur(ಸಾಲ ಪಡೆದವನು) ಕಷ್ಟದಲ್ಲಿದ್ದರೆ (ಅವನಿಗೆ) ನಿರಾಳತೆ ದೊರಕುವ ತನಕ ಕಾಲಾವಕಾಶ ನೀಡಿ. ನೀವು ಅದನ್ನು ದಾನವಾಗಿ ಬಿಟ್ಟುಬಿಟ್ಟರೆ ಅದು ನಿಮಗೆ ಅತ್ಯುತ್ತಮವಾಗಿದೆ. ನೀವು ತಿಳಿದವರಾಗಿದ್ದರೆ.
Kannada Translation - Hamza Buturನಿಮ್ಮನ್ನು ಅಲ್ಲಾಹನ ಬಳಿಗೆ ಮರಳಿಸಲಾಗುವ ಒಂದು ದಿನವನ್ನು ಭಯಪಡಿರಿ. ನಂತರ ಪ್ರತಿಯೊಬ್ಬರಿಗೂ ಅವರು ಮಾಡಿದ ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗುವುದು. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಪರಸ್ಪರ ಅವಧಿಯನ್ನು ನಿಶ್ಚಯಿಸಿ ಸಾಲ ವ್ಯವಹಾರ ಮಾಡುವುದಾದರೆ ಅದನ್ನು ಬರೆದಿಟ್ಟುಕೊಳ್ಳಿ. ನಿಮ್ಮ ನಡುವೆ ಒಬ್ಬ ಬರಹಗಾರನು ನ್ಯಾಯಯುತವಾಗಿ ಬರೆಯಲಿ. ಅಲ್ಲಾಹು ಕಲಿಸಿಕೊಟ್ಟ ರೀತಿಯಲ್ಲಿ ಬರೆಯಲು ಬರಹಗಾರನು ನಿರಾಕರಿಸಬಾರದು. ಆದ್ದರಿಂದ ಅವನು ಬರೆಯಲಿ ಮತ್ತು ಸಾಲದ ಹೊಣೆ ಹೊತ್ತವನು ಏನು ಬರೆಯಬೇಕೆಂದು ಹೇಳಿಕೊಡಲಿ. ಅವನು ತನ್ನ ಪರಿಪಾಲಕನಾದ ಅಲ್ಲಾಹನನ್ನು ಭಯಪಡಲಿ ಮತ್ತು ಹೊಣೆಯಿಂದ ಏನೂ ಕಡಿಮೆಗೊಳಿಸದಿರಲಿ. ಸಾಲದ ಹೊಣೆ ಹೊತ್ತವನು ಅವಿವೇಕಿಯಾಗಿದ್ದರೆ, ಅಥವಾ ಬಲಹೀನನಾಗಿದ್ದರೆ, ಅಥವಾ ಹೇಳಿಕೊಡಲು ಅಸಮರ್ಥನಾಗಿದ್ದರೆ ಅವನ ಪೋಷಕರು ನ್ಯಾಯಯುತವಾಗಿ ಹೇಳಿಕೊಡಲಿ. ನಿಮ್ಮ ಪೈಕಿ ಇಬ್ಬರು ಪುರುಷರನ್ನು ಸಾಕ್ಷಿ ನಿಲ್ಲಿಸಿರಿ. ಇಬ್ಬರು ಪುರುಷರಿಲ್ಲದಿದ್ದರೆ ಸಾಕ್ಷಿ ನಿಲ್ಲುವವರ ಪೈಕಿ ನಿಮಗೆ ತೃಪ್ತಿಯಾಗುವ ಒಬ್ಬ ಪುರುಷ ಮತ್ತು ಇಬ್ಬರು ಮಹಿಳೆಯರು ಸಾಕ್ಷಿ ನಿಲ್ಲಲಿ. ಅವರಲ್ಲಿ ಒಬ್ಬಳು ಮರೆತುಬಿಟ್ಟರೆ ಇನ್ನೊಬ್ಬಳು ನೆನಪಿಸುವುದಕ್ಕಾಗಿ. ಸಾಕ್ಷಿಗಳನ್ನು ಕರೆದಾಗ ಅವರು ಬರಲು ಅಸಮ್ಮತಿ ಸೂಚಿಸಬಾರದು. ಸಾಲವನ್ನು ಅದು ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ ಅದರ ನಿಶ್ಚಿತ ಅವಧಿಗೆ ಬರೆಯಲು ಆಲಸ್ಯ ಮಾಡಬೇಡಿ. ಇದು ಅಲ್ಲಾಹನ ಬಳಿ ಅತ್ಯಂತ ನ್ಯಾಯಸಮ್ಮತವಾಗಿದೆ, ಸಾಕ್ಷಿಯನ್ನು ಹೆಚ್ಚು ಸರಿಯಾಗಿಡುತ್ತದೆ ಮತ್ತು ನೀವು ಸಂಶಯಪಡದಂತೆ ಮಾಡುತ್ತದೆ. ಆದರೆ ಅದು ನೀವು ಪರಸ್ಪರ ನಡೆಸುವ ನಗದು ವ್ಯಾಪಾರದ ರೂಪದಲ್ಲಿದ್ದರೆ ಅದನ್ನು ಬರೆಯದಿದ್ದರೆ ನಿಮಗೆ ದೋಷವಿಲ್ಲ. ಆದರೆ ನೀವು ಕ್ರಯ-ವಿಕ್ರಯ ಮಾಡುವಾಗ ಸಾಕ್ಷಿಗಳನ್ನು ನಿಲ್ಲಿಸಿರಿ. ಬರಹಗಾರನಿಗೆ ಅಥವಾ ಸಾಕ್ಷಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ನೀವೇನಾದರೂ ತೊಂದರೆಯಾಗುವಂತೆ ಮಾಡಿದರೆ ಅದು ನಿಮ್ಮ ದುಷ್ಕರ್ಮವೆಂದು ಪರಿಗಣಿಸಲಾಗುವುದು. ಅಲ್ಲಾಹನನ್ನು ಭಯಪಡಿರಿ. ಅಲ್ಲಾಹು ನಿಮಗೆ ಕಲಿಸಿಕೊಡುತ್ತಿದ್ದಾನೆ. ಅಲ್ಲಾಹು ಎಲ್ಲಾ ವಿಷಯಗಳನ್ನೂ ತಿಳಿದವನಾಗಿದ್ದಾನೆ.
Kannada Translation - Hamza Buturನೀವು ಪ್ರಯಾಣದಲ್ಲಿದ್ದು ನಿಮಗೆ ಬರಹಗಾರನು ಸಿಗದಿದ್ದರೆ, ಅಡಮಾನವನ್ನು ಸ್ವಾಧೀನದಲ್ಲಿರಿಸಿಕೊಳ್ಳಿರಿ. ನೀವು ಪರಸ್ಪರ ವಿಶ್ವಾಸವನ್ನು ಹೊಂದಿದ್ದರೆ ವಿಶ್ವಾಸವಿಡಲಾದವನು (ಸಾಲ ಪಡೆದವನು) ತನ್ನ ವಿಶ್ವಸ್ತತೆಯನ್ನು ನೆರವೇರಿಸಲಿ ಮತ್ತು ತನ್ನ ಪರಿಪಾಲಕನಾದ ಅಲ್ಲಾಹನನ್ನು ಭಯಪಡಲಿ.[1] ನೀವು ಸಾಕ್ಷ್ಯವನ್ನು ಬಚ್ಚಿಡಬೇಡಿ. ಯಾರು ಅದನ್ನು ಬಚ್ಚಿಡುತ್ತಾನೋ ಅವನು ಪಾಪಭರಿತ ಹೃದಯದವನಾಗಿದ್ದಾನೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.
Kannada Translation - Hamza Buturಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ನೀವು ನಿಮ್ಮ ಮನಸ್ಸಿನಲ್ಲಿರುವುದನ್ನು ಬಹಿರಂಗಪಡಿಸಿದರೂ ಅಥವಾ ಮುಚ್ಚಿಟ್ಟರೂ ಅಲ್ಲಾಹು ಅದರ ಬಗ್ಗೆ ನಿಮ್ಮನ್ನು ವಿಚಾರಣೆ ಮಾಡುವನು. ನಂತರ ಅವನು ಇಚ್ಛಿಸಿದವರಿಗೆ ಅವನು ಕ್ಷಮಿಸುವನು ಮತ್ತು ಅವನು ಇಚ್ಛಿಸಿದವರನ್ನು ಶಿಕ್ಷಿಸುವನು. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
Kannada Translation - Hamza Buturತಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶದಲ್ಲಿ ಸಂದೇಶವಾಹಕರು ವಿಶ್ವಾಸವಿಟ್ಟಿದ್ದಾರೆ; ಸತ್ಯವಿಶ್ವಾಸಿಗಳು ಕೂಡ ವಿಶ್ವಾಸವಿಟ್ಟಿದ್ದಾರೆ. ಅವರೆಲ್ಲರೂ ಅಲ್ಲಾಹನಲ್ಲಿ, ಅವನ ದೇವದೂತರುಗಳಲ್ಲಿ, ಅವನ ಗ್ರಂಥಗಳಲ್ಲಿ ಮತ್ತು ಅವನ ಸಂದೇಶವಾಹಕರುಗಳಲ್ಲಿ ವಿಶ್ವಾಸವಿಟ್ಟಿದ್ದಾರೆ. ಅವನ ಸಂದೇಶವಾಹಕರುಗಳಲ್ಲಿ ಯಾರ ನಡುವೆಯೂ ನಾವು ಬೇಧ ಮಾಡುವುದಿಲ್ಲ. ಅವರು ಹೇಳುತ್ತಾರೆ: "ನಾವು ಕೇಳಿದ್ದೇವೆ ಮತ್ತು ವಿಧೇಯರಾಗಿದ್ದೇವೆ. ಓ ನಮ್ಮ ಪರಿಪಾಲಕನೇ! ನಮ್ಮನ್ನು ಕ್ಷಮಿಸು. ನಮಗೆ ನಿನ್ನ ಬಳಿಗೇ ಮರಳಬೇಕಾಗಿದೆ."
Kannada Translation - Hamza Buturಅಲ್ಲಾಹು ಯಾವುದೇ ವ್ಯಕ್ತಿಯ ಮೇಲೂ ಅವನ ಸಾಮರ್ಥ್ಯಕ್ಕೆ ಮೀರಿದ್ದನ್ನು ಹೊರಿಸುವುದಿಲ್ಲ. ಅವನು ಮಾಡಿದ ಒಳಿತು ಅವನಿಗೆ ಮತ್ತು ಅವನು ಮಾಡಿದ ಕೆಡುಕು ಅವನಿಗೆ. “ಓ ನಮ್ಮ ಪರಿಪಾಲಕನೇ! ನಾವು ಮರೆತುಬಿಟ್ಟರೆ ಅಥವಾ ತಪ್ಪು ಮಾಡಿದರೆ ನಮ್ಮನ್ನು ಹಿಡಿದು ಶಿಕ್ಷಿಸಬೇಡ. ಓ ನಮ್ಮ ಪರಿಪಾಲಕನೇ! ನಮಗಿಂತ ಮೊದಲಿನವರ ಮೇಲೆ ನೀನು ಹೊರಿಸಿದಂತಹ ಹೊರೆಯನ್ನು ನಮ್ಮ ಮೇಲೆ ಹೊರಿಸಬೇಡ. ಓ ನಮ್ಮ ಪರಿಪಾಲಕನೇ! ನಮಗೆ ಹೊರಲು ಸಾಮರ್ಥ್ಯವಿಲ್ಲದ್ದನ್ನು ನಮ್ಮ ಮೇಲೆ ಹೊರಿಸಬೇಡ. ನಮ್ಮನ್ನು ಮನ್ನಿಸು, ನಮ್ಮನ್ನು ಕ್ಷಮಿಸು ಮತ್ತು ನಮಗೆ ದಯೆ ತೋರು. ನೀನೇ ನಮ್ಮ ಸಂರಕ್ಷಕ. ಸತ್ಯನಿಷೇಧಿಗಳಾದ ಜನರ ಮೇಲೆ ನಮಗೆ ಜಯವನ್ನು ದಯಪಾಲಿಸು.”