يَسْـَٔلُونَكَ عَنِ ٱلشَّهْرِ ٱلْحَرَامِ قِتَالٍ فِيهِ قُلْ قِتَالٌ فِيهِ كَبِيرٌ وَصَدٌّ عَن سَبِيلِ ٱللَّهِ وَكُفْرٌۢ بِهِۦ وَٱلْمَسْجِدِ ٱلْحَرَامِ وَإِخْرَاجُ أَهْلِهِۦ مِنْهُ أَكْبَرُ عِندَ ٱللَّهِ وَٱلْفِتْنَةُ أَكْبَرُ مِنَ ٱلْقَتْلِ وَلَا يَزَالُونَ يُقَٰتِلُونَكُمْ حَتَّىٰ يَرُدُّوكُمْ عَن دِينِكُمْ إِنِ ٱسْتَطَٰعُوا۟ وَمَن يَرْتَدِدْ مِنكُمْ عَن دِينِهِۦ فَيَمُتْ وَهُوَ كَافِرٌ فَأُو۟لَٰٓئِكَ حَبِطَتْ أَعْمَٰلُهُمْ فِى ٱلدُّنْيَا وَٱلْـَٔاخِرَةِ وَأُو۟لَٰٓئِكَ أَصْحَٰبُ ٱلنَّارِ هُمْ فِيهَا خَٰلِدُونَ
Kannada Translation - Hamza Buturನಿಷೇಧಿತ ತಿಂಗಳಲ್ಲಿ ಯುದ್ಧ ಮಾಡುವುದರ ಕುರಿತು ಅವರು ನಿಮ್ಮಲ್ಲಿ ವಿಚಾರಿಸುತ್ತಾರೆ. ಹೇಳಿರಿ: “ಅದರಲ್ಲಿ ಯುದ್ಧ ಮಾಡುವುದು ಮಹಾ ಅಪರಾಧವಾಗಿದೆ.” ಆದರೆ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆಯುವುದು, ಅವನನ್ನು ನಿಷೇಧಿಸುವುದು, ಮಸ್ಜಿದುಲ್ ಹರಾಮ್‍ನಿಂದ (ಜನರನ್ನು) ತಡೆಯುವುದು ಮತ್ತು ಅದರ ನಿವಾಸಿಗಳನ್ನು ಅಲ್ಲಿಂದ ಹೊರಹಾಕುವುದು ಅಲ್ಲಾಹನ ದೃಷ್ಟಿಯಲ್ಲಿ ಅದಕ್ಕಿಂತಲೂ ಗಂಭೀರ ಅಪರಾಧಗಳಾಗಿವೆ. ಕ್ಷೋಭೆಯು ಕೊಲೆಗಿಂತಲೂ ಘೋರವಾಗಿದೆ. ಅವರಿಗೆ ಸಾಧ್ಯವಾಗುವುದಾದರೆ ಅವರು ನಿಮ್ಮನ್ನು ನಿಮ್ಮ ಧರ್ಮದಿಂದ ಹಿಂದಿರುಗುವಂತೆ ಮಾಡುವವರೆಗೂ ನಿಮ್ಮೊಂದಿಗೆ ಯುದ್ಧ ಮಾಡುತ್ತಲೇ ಇರುವರು. ನಿಮ್ಮಲ್ಲಿ ಯಾರಾದರೂ ತನ್ನ ಧರ್ಮವನ್ನು ತ್ಯಜಿಸಿ, ನಂತರ ಸತ್ಯನಿಷೇಧಿಯಾಗಿ ಸಾಯುವುದಾದರೆ, ಅವರ ಕರ್ಮಗಳು ಇಹಲೋಕದಲ್ಲೂ ಪರಲೋಕದಲ್ಲೂ ನಿಷ್ಫಲವಾಗುತ್ತವೆ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.