وَٱلْمُطَلَّقَٰتُ يَتَرَبَّصْنَ بِأَنفُسِهِنَّ ثَلَٰثَةَ قُرُوٓءٍ وَلَا يَحِلُّ لَهُنَّ أَن يَكْتُمْنَ مَا خَلَقَ ٱللَّهُ فِىٓ أَرْحَامِهِنَّ إِن كُنَّ يُؤْمِنَّ بِٱللَّهِ وَٱلْيَوْمِ ٱلْـَٔاخِرِ وَبُعُولَتُهُنَّ أَحَقُّ بِرَدِّهِنَّ فِى ذَٰلِكَ إِنْ أَرَادُوٓا۟ إِصْلَٰحًا وَلَهُنَّ مِثْلُ ٱلَّذِى عَلَيْهِنَّ بِٱلْمَعْرُوفِ وَلِلرِّجَالِ عَلَيْهِنَّ دَرَجَةٌ وَٱللَّهُ عَزِيزٌ حَكِيمٌ
Kannada Translation - Hamza Buturವಿಚ್ಛೇದಿತ ಮಹಿಳೆಯರು ಸ್ವಯಂ ಮೂರು ಋತುಸ್ರಾವಗಳ ತನಕ ಕಾಯಬೇಕು. ಅವರಿಗೆ ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿದ್ದರೆ ಅವರ ಗರ್ಭಗಳಲ್ಲಿ ಅಲ್ಲಾಹು ಸೃಷ್ಟಿಸಿರುವುದನ್ನು ಮುಚ್ಚಿಡುವುದು ಅವರಿಗೆ ಧರ್ಮಸಮ್ಮತವಲ್ಲ. ಅವರ ಗಂಡಂದಿರು ಅವರನ್ನು ಆ ಅವಧಿಯೊಳಗೆ ಮರಳಿ ಸ್ವೀಕರಿಸಲು ಪೂರ್ಣ ಹಕ್ಕುಳ್ಳವರಾಗಿದ್ದಾರೆ—ಅವರ (ಗಂಡಂದಿರ) ಉದ್ದೇಶವು ರಾಜಿ ಮಾಡುವುದಾಗಿದ್ದರೆ.[1] ಪುರುಷರಿಗೆ ಮಹಿಳೆಯರ ಮೇಲೆ ಹಕ್ಕುಗಳಿರುವಂತೆ ಮಹಿಳೆಯರಿಗೂ ಪುರುಷರ ಮೇಲೆ ಸ್ವೀಕಾರಾರ್ಹ ರೀತಿಯಲ್ಲಿರುವ ಹಕ್ಕುಗಳಿವೆ. ಆದರೆ ಪುರುಷರಿಗೆ ಮಹಿಳೆಯರಿಗಿಂತ ಹೆಚ್ಚಿನ ಒಂದು ಪದವಿಯಿದೆ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.