caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 247

ಮದೀನಾ · ಅವತರಣ ಕ್ರಮ 87 · 2:247

وَقَالَ لَهُمْ نَبِيُّهُمْ إِنَّ ٱللَّهَ قَدْ بَعَثَ لَكُمْ طَالُوتَ مَلِكًا قَالُوٓا۟ أَنَّىٰ يَكُونُ لَهُ ٱلْمُلْكُ عَلَيْنَا وَنَحْنُ أَحَقُّ بِٱلْمُلْكِ مِنْهُ وَلَمْ يُؤْتَ سَعَةً مِّنَ ٱلْمَالِ قَالَ إِنَّ ٱللَّهَ ٱصْطَفَىٰهُ عَلَيْكُمْ وَزَادَهُۥ بَسْطَةً فِى ٱلْعِلْمِ وَٱلْجِسْمِ وَٱللَّهُ يُؤْتِى مُلْكَهُۥ مَن يَشَآءُ وَٱللَّهُ وَٰسِعٌ عَلِيمٌ

Kannada Translation - Hamza Buturಅವರೊಡನೆ ಅವರ ಪ್ರವಾದಿ ಹೇಳಿದರು: "ಅಲ್ಲಾಹು ನಿಮಗೆ ತಾಲೂತ‌ರನ್ನು (ಸೌಲ್) ರಾಜನಾಗಿ ನೇಮಿಸಿದ್ದಾನೆ." ಅವರು ಹೇಳಿದರು: "ಅವರು ನಮಗೆ ರಾಜನಾಗಲು ಹೇಗೆ ಸಾಧ್ಯ? ರಾಜ ಪದವಿಗೆ ಅವರಿಗಿಂತಲೂ ಹೆಚ್ಚು ಅರ್ಹತೆ ನಮಗಿದೆ. ಅವರಿಗೆ ಹೇರಳ ಆಸ್ತಿಪಾಸ್ತಿಯನ್ನೂ ನೀಡಲಾಗಿಲ್ಲ." ಅವರು (ಪ್ರವಾದಿ) ಹೇಳಿದರು: "ಅಲ್ಲಾಹು ನಿಮಗಿಂತ ಅವರನ್ನೇ ಆಯ್ಕೆ ಮಾಡಿದ್ದಾನೆ ಮತ್ತು ಅವರಿಗೆ ಬೌದ್ಧಿಕ ಹಾಗೂ ದೈಹಿಕ ಶ್ರೇಷ್ಠತೆಯನ್ನು ನೀಡಿದ್ದಾನೆ. ಅಲ್ಲಾಹು ಅವನು ಇಚ್ಛಿಸುವವರಿಗೆ ಅವನ ರಾಜ ಪದವಿ ನೀಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70