وَإِذْ قَالَ مُوسَىٰ لِقَوْمِهِۦ يَٰقَوْمِ إِنَّكُمْ ظَلَمْتُمْ أَنفُسَكُم بِٱتِّخَاذِكُمُ ٱلْعِجْلَ فَتُوبُوٓا۟ إِلَىٰ بَارِئِكُمْ فَٱقْتُلُوٓا۟ أَنفُسَكُمْ ذَٰلِكُمْ خَيْرٌ لَّكُمْ عِندَ بَارِئِكُمْ فَتَابَ عَلَيْكُمْ إِنَّهُۥ هُوَ ٱلتَّوَّابُ ٱلرَّحِيمُ
Kannada Translation - Hamza Buturಮೂಸಾ ತಮ್ಮ ಜನರೊಡನೆ ಹೇಳಿದ ಸಂದರ್ಭ: “ನನ್ನ ಜನರೇ! ಕರುವನ್ನು ದೇವರಾಗಿ ಮಾಡಿಕೊಳ್ಳುವ ಮೂಲಕ ನಿಶ್ಚಯವಾಗಿಯೂ ನೀವು ನಿಮ್ಮ ಮೇಲೆಯೇ ಅಕ್ರಮವೆಸಗಿದ್ದೀರಿ. ಆದ್ದರಿಂದ, ನೀವು ಪಶ್ಚಾತ್ತಾಪಪಟ್ಟು ನಿಮ್ಮ ಸೃಷ್ಟಿಕರ್ತನ ಕಡೆಗೆ ಮರಳಿರಿ; ನಿಮ್ಮನ್ನು ನೀವೇ ಕೊಲ್ಲಿರಿ.[1] ನಿಮ್ಮ ಸೃಷ್ಟಿಕರ್ತನ ದೃಷ್ಟಿಯಲ್ಲಿ ಅದೇ ನಿಮಗೆ ಶ್ರೇಷ್ಠವಾಗಿದೆ.” ಆಗ ಅಲ್ಲಾಹು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿದನು. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.