caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 22

ಮದೀನಾ · ಅವತರಣ ಕ್ರಮ 102 · 24:22

وَلَا يَأْتَلِ أُو۟لُوا۟ ٱلْفَضْلِ مِنكُمْ وَٱلسَّعَةِ أَن يُؤْتُوٓا۟ أُو۟لِى ٱلْقُرْبَىٰ وَٱلْمَسَٰكِينَ وَٱلْمُهَٰجِرِينَ فِى سَبِيلِ ٱللَّهِ وَلْيَعْفُوا۟ وَلْيَصْفَحُوٓا۟ أَلَا تُحِبُّونَ أَن يَغْفِرَ ٱللَّهُ لَكُمْ وَٱللَّهُ غَفُورٌ رَّحِيمٌ

Kannada Translation - Hamza Buturನಿಮ್ಮಲ್ಲಿರುವ ಶ್ರೇಷ್ಠರು ಮತ್ತು ಸಂಪನ್ನರು ತಮ್ಮ ಸಂಬಂಧಿಕರಿಗೆ, ಬಡವರಿಗೆ ಮತ್ತು ಅಲ್ಲಾಹನ ಮಾರ್ಗದಲ್ಲಿ ವಲಸೆ (ಹಿಜ್ರ) ಮಾಡಿದವರಿಗೆ ಏನೂ ಕೊಡುವುದಿಲ್ಲವೆಂದು ಪ್ರತಿಜ್ಞೆ ಮಾಡದಿರಲಿ.[1] ಅವರು ಅವರನ್ನು ಮನ್ನಿಸಲಿ ಮತ್ತು (ಅವರ ತಪ್ಪುಗಳನ್ನು) ನಿರ್ಲಕ್ಷಿಸಲಿ. ಅಲ್ಲಾಹು ನಿಮ್ಮನ್ನು ಕ್ಷಮಿಸಬೇಕೆಂದು ನೀವು ಆಸೆ ಪಡುವುದಿಲ್ಲವೇ? ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70