caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan الفرقان

77 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 42

بِسْمِ ٱللَّهِ ٱلرَّحْمَٰنِ ٱلرَّحِيمِ تَبَارَكَ ٱلَّذِى نَزَّلَ ٱلْفُرْقَانَ عَلَىٰ عَبْدِهِۦ لِيَكُونَ لِلْعَٰلَمِينَ نَذِيرًا

Kannada Translation - Hamza Buturಸತ್ಯಾಸತ್ಯ ವಿವೇಚಕ ಗ್ರಂಥವನ್ನು (ಕುರ್‌ಆನನ್ನು) ತನ್ನ ದಾಸನಿಗೆ (ಪ್ರವಾದಿಗೆ)—ಅವರು ಸರ್ವಲೋಕದವರಿಗೆ ಒಬ್ಬ ಮುನ್ನೆಚ್ಚರಿಕೆಗಾರನಾಗಲೆಂದು—ಅವತೀರ್ಣಗೊಳಿಸಿದ ಅಲ್ಲಾಹು ಸಮೃದ್ಧಪೂರ್ಣನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلَّذِى لَهُۥ مُلْكُ ٱلسَّمَٰوَٰتِ وَٱلْأَرْضِ وَلَمْ يَتَّخِذْ وَلَدًا وَلَمْ يَكُن لَّهُۥ شَرِيكٌ فِى ٱلْمُلْكِ وَخَلَقَ كُلَّ شَىْءٍ فَقَدَّرَهُۥ تَقْدِيرًا

Kannada Translation - Hamza Buturಅಂದರೆ ಭೂಮ್ಯಾಕಾಶಗಳ ಸಾರ್ವಭೌಮತ್ವವು ಯಾರಿಗೆ ಸೇರಿದೆಯೋ ಅವನು. ಅವನಿಗೆ ಯಾವುದೇ ಮಕ್ಕಳಿಲ್ಲ. ಸಾರ್ವಭೌಮತ್ವದಲ್ಲಿ ಅವನೊಂದಿಗೆ ಯಾವುದೇ ಸಹಭಾಗಿಗಳಿಲ್ಲ. ಅವನು ಎಲ್ಲಾ ವಸ್ತುಗಳನ್ನೂ ಸೃಷ್ಟಿಸಿ ಅದಕ್ಕೆ ನಿಖರವಾದ ನಿರ್ಣಯವನ್ನು ನಿಶ್ಚಯಿಸಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱتَّخَذُوا۟ مِن دُونِهِۦٓ ءَالِهَةً لَّا يَخْلُقُونَ شَيْـًٔا وَهُمْ يُخْلَقُونَ وَلَا يَمْلِكُونَ لِأَنفُسِهِمْ ضَرًّا وَلَا نَفْعًا وَلَا يَمْلِكُونَ مَوْتًا وَلَا حَيَوٰةً وَلَا نُشُورًا

Kannada Translation - Hamza Buturಅವರು ಅವನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಆದರೆ, ಆ ದೇವರುಗಳು ಯಾವುದೇ ವಸ್ತುವನ್ನು ಸೃಷ್ಟಿಸುವುದಿಲ್ಲ. ವಾಸ್ತವವಾಗಿ ಅವರೇ ಸೃಷ್ಟಿಗಳು. ಸ್ವಯಂ ತಮಗೂ ಕೂಡ ಯಾವುದೇ ತೊಂದರೆ ಅಥವಾ ಉಪಕಾರವನ್ನು ಮಾಡುವ ಸಾಮರ್ಥ್ಯವನ್ನು ಅವರು ಹೊಂದಿಲ್ಲ. ಮರಣ, ಜೀವನ, ಪುನರುತ್ಥಾನ ಮುಂತಾದ ಯಾವುದೂ ಅವರ ವಶದಲ್ಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالَ ٱلَّذِينَ كَفَرُوٓا۟ إِنْ هَٰذَآ إِلَّآ إِفْكٌ ٱفْتَرَىٰهُ وَأَعَانَهُۥ عَلَيْهِ قَوْمٌ ءَاخَرُونَ فَقَدْ جَآءُو ظُلْمًا وَزُورًا

Kannada Translation - Hamza Buturಸತ್ಯನಿಷೇಧಿಗಳು ಹೇಳಿದರು: “ಈ ಕುರ್‌ಆನ್ ಸುಳ್ಳಿನ ಕಂತೆಯಾಗಿದೆ. ಅವನು (ಪ್ರವಾದಿ) ಇದನ್ನು ಸ್ವಯಂ ರಚಿಸಿದ್ದಾನೆ. ಬೇರೆ ಕೆಲವರು ಕೂಡ ಅದಕ್ಕೆ ಸಹಾಯ ಮಾಡಿದ್ದಾರೆ.” ಇವರು ಮಹಾ ಅನ್ಯಾಯವನ್ನು ಮತ್ತು ಸುಳ್ಳಾರೋಪವನ್ನು ಮಾಡಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالُوٓا۟ أَسَٰطِيرُ ٱلْأَوَّلِينَ ٱكْتَتَبَهَا فَهِىَ تُمْلَىٰ عَلَيْهِ بُكْرَةً وَأَصِيلًا

Kannada Translation - Hamza Buturಅವರು ಹೇಳಿದರು: “ಇದು ಪ್ರಾಚೀನ ಕಾಲದ ಜನರ ಪುರಾಣಗಳು. ಅವನು (ಪ್ರವಾದಿ) ಇದನ್ನು ಸ್ವಯಂ ಬರೆಯುತ್ತಿದ್ದಾನೆ. ಮುಂಜಾನೆ ಮತ್ತು ಸಂಜೆ ಅವನಿಗೆ ಇದನ್ನು ಓದಿಕೊಡಲಾಗುತ್ತಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ أَنزَلَهُ ٱلَّذِى يَعْلَمُ ٱلسِّرَّ فِى ٱلسَّمَٰوَٰتِ وَٱلْأَرْضِ إِنَّهُۥ كَانَ غَفُورًا رَّحِيمًا

Kannada Translation - Hamza Buturಹೇಳಿರಿ: “ಭೂಮ್ಯಾಕಾಶಗಳಲ್ಲಿರುವ ರಹಸ್ಯಗಳನ್ನು ತಿಳಿದವನೇ ಇದನ್ನು ಅವತೀರ್ಣಗೊಳಿಸಿದ್ದಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالُوا۟ مَالِ هَٰذَا ٱلرَّسُولِ يَأْكُلُ ٱلطَّعَامَ وَيَمْشِى فِى ٱلْأَسْوَاقِ لَوْلَآ أُنزِلَ إِلَيْهِ مَلَكٌ فَيَكُونَ مَعَهُۥ نَذِيرًا

Kannada Translation - Hamza Buturಅವರು ಹೇಳುತ್ತಾರೆ: “ಇವನೆಂತಹ ಪ್ರವಾದಿ? ಇವನು ಆಹಾರ ಸೇವಿಸುತ್ತಾನೆ ಮತ್ತು ಪೇಟೆಗಳಲ್ಲಿ ಸಂಚರಿಸುತ್ತಾನೆ. ಇವನ ಜೊತೆಗೆ ಒಬ್ಬ ದೇವದೂತನನ್ನು ಏಕೆ ಕಳುಹಿಸಲಾಗಿಲ್ಲ? ಅವನು ಕೂಡ ಇವನ ಜೊತೆಗೆ ಸೇರಿ ಮುನ್ನೆಚ್ಚರಿಕೆ ನೀಡಬಹುದಿತ್ತಲ್ಲವೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوْ يُلْقَىٰٓ إِلَيْهِ كَنزٌ أَوْ تَكُونُ لَهُۥ جَنَّةٌ يَأْكُلُ مِنْهَا وَقَالَ ٱلظَّٰلِمُونَ إِن تَتَّبِعُونَ إِلَّا رَجُلًا مَّسْحُورًا

Kannada Translation - Hamza Buturಅಥವಾ ಇವನ ಬಳಿ ಒಂದು ನಿಧಿಯನ್ನು ಏಕೆ ಹಾಕಿಲ್ಲ? ಅಥವಾ ಇವನಿಗೆ ಹಣ್ಣುಗಳನ್ನು ತಿನ್ನಲು ಒಂದು ತೋಟವನ್ನು ಏಕೆ ಕೊಡಲಾಗಿಲ್ಲ?” ಆ ಅಕ್ರಮಿಗಳು ಹೇಳಿದರು: “ನೀವು ಮಾಟ ಮಾಡಲಾದ ವ್ಯಕ್ತಿಯನ್ನೇ ಅನುಸರಿಸುತ್ತಿದ್ದೀರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱنظُرْ كَيْفَ ضَرَبُوا۟ لَكَ ٱلْأَمْثَٰلَ فَضَلُّوا۟ فَلَا يَسْتَطِيعُونَ سَبِيلًا

Kannada Translation - Hamza Buturನೋಡಿ! ಅವರು ನಿಮ್ಮ ಬಗ್ಗೆ ಹೇಗೆಲ್ಲಾ ಮಾತನಾಡುತ್ತಿದ್ದಾರೆಂದು. Fದರಿಂದ ಸ್ವತಃ ಅವರೇ ದಾರಿತಪ್ಪುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯಲ್ಲೂ ಸರಿದಾರಿಗೆ ಬರಲು ಸಾಧ್ಯವಾಗುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

تَبَارَكَ ٱلَّذِىٓ إِن شَآءَ جَعَلَ لَكَ خَيْرًا مِّن ذَٰلِكَ جَنَّٰتٍ تَجْرِى مِن تَحْتِهَا ٱلْأَنْهَٰرُ وَيَجْعَل لَّكَ قُصُورًۢا

Kannada Translation - Hamza Buturಅಲ್ಲಾಹು ಸಮೃದ್ಧಪೂರ್ಣನು. ಅವನು ಇಚ್ಛಿಸಿದರೆ ನಿಮಗೆ ಅವರು ಹೇಳುವುದಕ್ಕಿಂತಲೂ ಶ್ರೇಷ್ಠವಾದುದನ್ನು, ಅಂದರೆ ತಳಭಾಗದಲ್ಲಿ ನದಿಗಳು ಹರಿಯುವ ತೋಟಗಳನ್ನು ದಯಪಾಲಿಸುವನು ಮತ್ತು ನಿಮಗೆ ಮಹಾ ಸೌಧಗಳನ್ನು ದಯಪಾಲಿಸುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

بَلْ كَذَّبُوا۟ بِٱلسَّاعَةِ وَأَعْتَدْنَا لِمَن كَذَّبَ بِٱلسَّاعَةِ سَعِيرًا

Kannada Translation - Hamza Buturಆದರೆ, ಅವರು ಅಂತ್ಯಸಮಯವನ್ನು ನಿಷೇಧಿಸಿದರು. ಅಂತ್ಯಸಮಯವನ್ನು ನಿಷೇಧಿಸಿದವರಿಗೆ ನಾವು ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِذَا رَأَتْهُم مِّن مَّكَانٍۭ بَعِيدٍ سَمِعُوا۟ لَهَا تَغَيُّظًا وَزَفِيرًا

Kannada Translation - Hamza Buturಅದು ಅವರನ್ನು ವಿದೂರ ಸ್ಥಳದಿಂದ ನೋಡುವಾಗಲೇ, ಅದು ರೋಷಾವೇಶದಿಂದ ಆರ್ಭಟಿಸುವುದನ್ನು ಅವರು ಕೇಳುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَآ أُلْقُوا۟ مِنْهَا مَكَانًا ضَيِّقًا مُّقَرَّنِينَ دَعَوْا۟ هُنَالِكَ ثُبُورًا

Kannada Translation - Hamza Buturಅವರನ್ನು ಸಂಕೋಲೆಗಳಿಂದ ಬಂಧಿಸಿ ನರಕದ ಒಂದು ಇಕ್ಕಟ್ಟಾದ ಸ್ಥಳದಲ್ಲಿ ಎಸೆಯಲಾದರೆ ಅವರು ಅಲ್ಲಿ ವಿನಾಶವನ್ನು ಕೂಗಿ ಕರೆಯುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَّا تَدْعُوا۟ ٱلْيَوْمَ ثُبُورًا وَٰحِدًا وَٱدْعُوا۟ ثُبُورًا كَثِيرًا

Kannada Translation - Hamza Butur(ಅವರೊಡನೆ ಹೇಳಲಾಗುವುದು).“ಇಂದು ನೀವು ಒಂದು ವಿನಾಶವನ್ನು ಕೂಗಿ ಕರೆಯಬೇಡಿ. ಹಲವಾರು ವಿನಾಶಗಳನ್ನು ಕೂಗಿ ಕರೆಯಿರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ أَذَٰلِكَ خَيْرٌ أَمْ جَنَّةُ ٱلْخُلْدِ ٱلَّتِى وُعِدَ ٱلْمُتَّقُونَ كَانَتْ لَهُمْ جَزَآءً وَمَصِيرًا

Kannada Translation - Hamza Buturಹೇಳಿರಿ: “ಅದು ಶ್ರೇಷ್ಠವೇ? ಅಥವಾ ದೇವಭಯವುಳ್ಳವರಿಗೆ ವಾಗ್ದಾನ ಮಾಡಲಾದ ಶಾಶ್ವತ ಸ್ವರ್ಗವು ಶ್ರೇಷ್ಠವೇ?” ಅದು ಅವರಿಗೆ ನೀಡಲಾಗುವ ಪ್ರತಿಫಲ ಮತ್ತು ಅವರ ಗಮ್ಯಸ್ಥಾನವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَّهُمْ فِيهَا مَا يَشَآءُونَ خَٰلِدِينَ كَانَ عَلَىٰ رَبِّكَ وَعْدًا مَّسْـُٔولًا

Kannada Translation - Hamza Buturಅವರಿಗೆ ಅಲ್ಲಿ ಅವರು ಇಚ್ಛಿಸುವುದೆಲ್ಲವೂ ದೊರೆಯುತ್ತದೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಉತ್ತರದಾಯಿತ್ವವಿರುವ ವಾಗ್ದಾನವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَوْمَ يَحْشُرُهُمْ وَمَا يَعْبُدُونَ مِن دُونِ ٱللَّهِ فَيَقُولُ ءَأَنتُمْ أَضْلَلْتُمْ عِبَادِى هَٰٓؤُلَآءِ أَمْ هُمْ ضَلُّوا۟ ٱلسَّبِيلَ

Kannada Translation - Hamza Buturಅವನು ಅವರನ್ನು ಮತ್ತು ಅಲ್ಲಾಹನನ್ನು ಬಿಟ್ಟು ಅವರು ಆರಾಧಿಸುತ್ತಿದ್ದ ದೇವರುಗಳನ್ನು ಒಟ್ಟುಗೂಡಿಸುವ ದಿನ! ಅವನು (ಆ ದೇವರುಗಳೊಡನೆ) ಕೇಳುವನು: “ನನ್ನ ಈ ದಾಸರನ್ನು ದಾರಿತಪ್ಪಿಸಿದ್ದು ನೀವೋ? ಅಥವಾ ಸ್ವತಃ ಅವರೇ ದಾರಿತಪ್ಪಿದರೋ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَالُوا۟ سُبْحَٰنَكَ مَا كَانَ يَنۢبَغِى لَنَآ أَن نَّتَّخِذَ مِن دُونِكَ مِنْ أَوْلِيَآءَ وَلَٰكِن مَّتَّعْتَهُمْ وَءَابَآءَهُمْ حَتَّىٰ نَسُوا۟ ٱلذِّكْرَ وَكَانُوا۟ قَوْمًۢا بُورًا

Kannada Translation - Hamza Buturಅವರು (ದೇವರುಗಳು) ಹೇಳುವರು: “ನೀನು ಪರಿಶುದ್ಧನು! ನಿನ್ನನ್ನು ಬಿಟ್ಟು ಬೇರೆಯವರನ್ನು ರಕ್ಷಕರಾಗಿ ಸ್ವೀಕರಿಸುವುದು ನಮಗೆ ಯೋಗ್ಯವಲ್ಲ. ಆದರೆ ನೀನು ಅವರಿಗೆ ಮತ್ತು ಅವರ ಪೂರ್ವಜರಿಗೆ ಸವಲತ್ತುಗಳನ್ನು ದಯಪಾಲಿಸಿದೆ. ಎಲ್ಲಿಯವರೆಗೆಂದರೆ ಅವರು ಉಪದೇಶವನ್ನು ಸಂಪೂರ್ಣ ಮರೆತು, ನಾಶವಾಗಿ ಹೋದ ಒಂದು ಜನತೆಯಾಗಿ ಮಾರ್ಪಡುವ ತನಕ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَقَدْ كَذَّبُوكُم بِمَا تَقُولُونَ فَمَا تَسْتَطِيعُونَ صَرْفًا وَلَا نَصْرًا وَمَن يَظْلِم مِّنكُمْ نُذِقْهُ عَذَابًا كَبِيرًا

Kannada Translation - Hamza Butur(ಅಲ್ಲಾಹು ಬಹುದೇವಾರಾಧಕರೊಡನೆ ಹೇಳುವನು): “ನೀವು ಏನು ಹೇಳುತ್ತಿದ್ದಿರೋ ಅದನ್ನು ಅವರು (ದೇವರುಗಳು) ನಿಷೇಧಿಸಿದ್ದಾರೆ. ಇನ್ನು ಶಿಕ್ಷೆಯನ್ನು ದೂರೀಕರಿಸಲು ಅಥವಾ ಯಾವುದೇ ಸಹಾಯ ಪಡೆಯಲು ನಿಮಗೆ ಸಾಧ್ಯವಿಲ್ಲ. ನಿಮ್ಮಲ್ಲಿ ಅಕ್ರಮವೆಸಗಿದವನು[1] ಯಾರೋ ಅವನಿಗೆ ನಾವು ಮಹಾ ಶಿಕ್ಷೆಯ ರುಚಿಯನ್ನು ತೋರಿಸುವೆವು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَآ أَرْسَلْنَا قَبْلَكَ مِنَ ٱلْمُرْسَلِينَ إِلَّآ إِنَّهُمْ لَيَأْكُلُونَ ٱلطَّعَامَ وَيَمْشُونَ فِى ٱلْأَسْوَاقِ وَجَعَلْنَا بَعْضَكُمْ لِبَعْضٍ فِتْنَةً أَتَصْبِرُونَ وَكَانَ رَبُّكَ بَصِيرًا

Kannada Translation - Hamza Butur(ಪ್ರವಾದಿಯವರೇ) ನಾವು ನಿಮಗಿಂತ ಮೊದಲು ಕಳುಹಿಸಿದ ಸಂದೇಶವಾಹಕರೆಲ್ಲರೂ ಆಹಾರವನ್ನು ಸೇವಿಸುತ್ತಿದ್ದರು ಮತ್ತು ಪೇಟೆಗಳಲ್ಲಿ ಸಂಚರಿಸುತ್ತಿದ್ದರು. ನಾವು ನಿಮ್ಮಲ್ಲಿ ಒಬ್ಬರನ್ನು ಇನ್ನೊಬ್ಬರಿಗೆ ಪರೀಕ್ಷೆಯನ್ನಾಗಿ ಮಾಡಿದ್ದೇವೆ. ನೀವು ತಾಳ್ಮೆಯಿಂದಿರುತ್ತೀರೋ ಎಂದು ನೋಡಲು. ನಿಮ್ಮ ಪರಿಪಾಲಕನು ಎಲ್ಲವನ್ನೂ ನೋಡುವವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالَ ٱلَّذِينَ لَا يَرْجُونَ لِقَآءَنَا لَوْلَآ أُنزِلَ عَلَيْنَا ٱلْمَلَٰٓئِكَةُ أَوْ نَرَىٰ رَبَّنَا لَقَدِ ٱسْتَكْبَرُوا۟ فِىٓ أَنفُسِهِمْ وَعَتَوْ عُتُوًّا كَبِيرًا

Kannada Translation - Hamza Buturನಮ್ಮನ್ನು ಭೇಟಿಯಾಗುವ ನಿರೀಕ್ಷೆಯಿಲ್ಲದವರು ಹೇಳಿದರು: “ನಮ್ಮ ಮೇಲೆ ದೇವದೂತರುಗಳನ್ನು ಏಕೆ ಇಳಿಸಲಾಗುವುದಿಲ್ಲ? ಅಥವಾ ನಮಗೇಕೆ ನಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ನೇರವಾಗಿ ನೋಡಲಾಗುವುದಿಲ್ಲ?” ಅವರು ಸ್ವಯಂ ಅವರ ಬಗ್ಗೆಯೇ ಅಹಂಕಾರಪಡುತ್ತಿದ್ದಾರೆ ಮತ್ತು ಕಡು ಧಿಕ್ಕಾರದಿಂದ ವರ್ತಿಸುತ್ತಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَوْمَ يَرَوْنَ ٱلْمَلَٰٓئِكَةَ لَا بُشْرَىٰ يَوْمَئِذٍ لِّلْمُجْرِمِينَ وَيَقُولُونَ حِجْرًا مَّحْجُورًا

Kannada Translation - Hamza Buturಅವರು ದೇವದೂತರುಗಳನ್ನು ನೋಡುವ ದಿನ![1] ಅಂದು ಅಪರಾಧಿಗಳಿಗೆ ಯಾವುದೇ ಸಿಹಿ ಸುದ್ದಿಯಿರುವುದಿಲ್ಲ. ಅವರು (ದೇವದೂತರುಗಳು) ಹೇಳುವರು: “ನಿಷಿದ್ಧವಾಗಿದೆ! ನಿಮಗೆ ಎಲ್ಲವನ್ನೂ ನಿಷೇಧಿಸಲಾಗಿದೆ!”[2]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَدِمْنَآ إِلَىٰ مَا عَمِلُوا۟ مِنْ عَمَلٍ فَجَعَلْنَٰهُ هَبَآءً مَّنثُورًا

Kannada Translation - Hamza Buturಅವರು ಮಾಡಿದ ಕರ್ಮಗಳ ಬಳಿಗೆ ತೆರಳಿ ನಾವು ಅವುಗಳನ್ನು ಚದುರಿದ ಧೂಳಿಯಂತೆ ಮಾಡುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَصْحَٰبُ ٱلْجَنَّةِ يَوْمَئِذٍ خَيْرٌ مُّسْتَقَرًّا وَأَحْسَنُ مَقِيلًا

Kannada Translation - Hamza Buturಅಂದು ಸ್ವರ್ಗವಾಸಿಗಳು ಅತ್ಯುತ್ತಮ ವಾಸಸ್ಥಳಗಳನ್ನು ಮತ್ತು ಅತ್ಯುತ್ತಮ ವಿಶ್ರಾಂತಿಧಾಮಗಳನ್ನು ಹೊಂದಿರುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَوْمَ تَشَقَّقُ ٱلسَّمَآءُ بِٱلْغَمَٰمِ وَنُزِّلَ ٱلْمَلَٰٓئِكَةُ تَنزِيلًا

Kannada Translation - Hamza Buturಆಕಾಶವು ಮೋಡಗಳ ಸಹಿತ ಒಡೆದು ಛಿದ್ರವಾಗುವ ಮತ್ತು ದೇವದೂತರುಗಳನ್ನು ನಿರಂತರವಾಗಿ ಇಳಿಸಲಾಗುವ ದಿನ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلْمُلْكُ يَوْمَئِذٍ ٱلْحَقُّ لِلرَّحْمَٰنِ وَكَانَ يَوْمًا عَلَى ٱلْكَٰفِرِينَ عَسِيرًا

Kannada Translation - Hamza Buturಅಂದು ನಿಜವಾದ ಸಾರ್ವಭೌಮತ್ವವು ಪರಮ ದಯಾಳುವಾದ ಅಲ್ಲಾಹನಿಗೆ ಮಾತ್ರ. ಅದು ಸತ್ಯನಿಷೇಧಿಗಳಿಗೆ ಸಂಬಂಧಿಸಿದಂತೆ ಅತ್ಯಂತ ದುಷ್ಕರ ದಿನವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَوْمَ يَعَضُّ ٱلظَّالِمُ عَلَىٰ يَدَيْهِ يَقُولُ يَٰلَيْتَنِى ٱتَّخَذْتُ مَعَ ٱلرَّسُولِ سَبِيلًا

Kannada Translation - Hamza Buturಅಂದು ಅಕ್ರಮವೆಸಗಿದವನು ತನ್ನ ಕೈಗಳನ್ನು ಕಚ್ಚುತ್ತಾ ಹೇಳುವನು: “ನಾನು ಸಂದೇಶವಾಹಕರ ಮಾರ್ಗವನ್ನು ಆರಿಸುತ್ತಿದ್ದರೆ ಎಷ್ಟು ಚೆನ್ನಾಗಿತ್ತು!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَٰوَيْلَتَىٰ لَيْتَنِى لَمْ أَتَّخِذْ فُلَانًا خَلِيلًا

Kannada Translation - Hamza Buturಅಯ್ಯೋ ನನ್ನ ದುರ್ಗತಿಯೇ! ನಾನು ಇವನನ್ನು ಮಿತ್ರನಾಗಿ ಸ್ವೀಕರಿಸದಿದ್ದರೆ ಎಷ್ಟು ಚೆನ್ನಾಗಿತ್ತು!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَّقَدْ أَضَلَّنِى عَنِ ٱلذِّكْرِ بَعْدَ إِذْ جَآءَنِى وَكَانَ ٱلشَّيْطَٰنُ لِلْإِنسَٰنِ خَذُولًا

Kannada Translation - Hamza Buturನನ್ನ ಬಳಿಗೆ ಉಪದೇಶವು ಬಂದ ಬಳಿಕವೂ ಅವನು ನನ್ನನ್ನು ಅದರಿಂದ ತಪ್ಪಿಸಿದನು.” ಶೈತಾನನು ಮಾನವನಿಗೆ ದ್ರೋಹವೆಸಗುವವನೇ ಆಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالَ ٱلرَّسُولُ يَٰرَبِّ إِنَّ قَوْمِى ٱتَّخَذُوا۟ هَٰذَا ٱلْقُرْءَانَ مَهْجُورًا

Kannada Translation - Hamza Buturಸಂದೇಶವಾಹಕರು ಹೇಳುವರು: “ನನ್ನ ಪರಿಪಾಲಕನೇ, ನಿಶ್ಚಯವಾಗಿಯೂ ನನ್ನ ಸಮುದಾಯವು ಈ ಕುರ್‌ಆನನ್ನು ತೊರೆದು ಬಿಟ್ಟಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكَذَٰلِكَ جَعَلْنَا لِكُلِّ نَبِىٍّ عَدُوًّا مِّنَ ٱلْمُجْرِمِينَ وَكَفَىٰ بِرَبِّكَ هَادِيًا وَنَصِيرًا

Kannada Translation - Hamza Buturಈ ರೀತಿ ನಾವುಎಲ್ಲಾ ಸಂದೇಶವಾಹಕರಿಗೂ ಕೆಲವು ಅಪರಾಧಿಗಳನ್ನು ಶತ್ರುಗಳಾಗಿ ಮಾಡಿದ್ದೇವೆ. ಸನ್ಮಾರ್ಗ ತೋರಿಸಲು ಮತ್ತು ಸಹಾಯ ಮಾಡಲು ನಿಮ್ಮ ಪರಿಪಾಲಕನೇ (ಅಲ್ಲಾಹನೇ) ಸಾಕು!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالَ ٱلَّذِينَ كَفَرُوا۟ لَوْلَا نُزِّلَ عَلَيْهِ ٱلْقُرْءَانُ جُمْلَةً وَٰحِدَةً كَذَٰلِكَ لِنُثَبِّتَ بِهِۦ فُؤَادَكَ وَرَتَّلْنَٰهُ تَرْتِيلًا

Kannada Translation - Hamza Buturಸತ್ಯನಿಷೇಧಿಗಳು ಕೇಳಿದರು: “ಕುರ್‌ಆನನ್ನು ಒಮ್ಮೆಲೇ ಸಂಪೂರ್ಣವಾಗಿ ಏಕೆ ಇಳಿಸಲಾಗಿಲ್ಲ?” ನಾವು ಈ ರೀತಿಯಲ್ಲಿ (ಹಂತ ಹಂತವಾಗಿ ಇಳಿಸಿದ್ದು ಏಕೆಂದರೆ) ಅದರ ಮೂಲಕ ನಿಮ್ಮ ಹೃದಯವನ್ನು ದೃಢವಾಗಿ ನಿಲ್ಲಿಸಲು. ನಾವು ಅದನ್ನು ಸ್ವಲ್ಪ ಸ್ವಲ್ಪವಾಗಿಯೇ ಪಠಿಸಿಕೊಡುತ್ತೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا يَأْتُونَكَ بِمَثَلٍ إِلَّا جِئْنَٰكَ بِٱلْحَقِّ وَأَحْسَنَ تَفْسِيرًا

Kannada Translation - Hamza Buturಅವರು ನಿಮ್ಮ ಬಳಿಗೆ ಯಾವುದೇ ಉದಾಹರಣೆಯನ್ನು ತಂದರೂ, ನಾವು ಅದರ ನಿಜವಾದ ಉತ್ತರವನ್ನು ಮತ್ತು ಅತ್ಯುತ್ತಮ ವಿವರಣೆಯನ್ನು ಖಂಡಿತ ತರುವೆವು.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلَّذِينَ يُحْشَرُونَ عَلَىٰ وُجُوهِهِمْ إِلَىٰ جَهَنَّمَ أُو۟لَٰٓئِكَ شَرٌّ مَّكَانًا وَأَضَلُّ سَبِيلًا

Kannada Translation - Hamza Buturಯಾರನ್ನು ಮುಖಗಳ ಮೇಲೆ ನರಕಕ್ಕೆ ಒಟ್ಟುಗೂಡಿಸಲಾಗುತ್ತದೋ ಅವರೇ ಅತಿ ನಿಕೃಷ್ಟ ಸ್ಥಳದಲ್ಲಿರುವವರು ಮತ್ತು ಅತ್ಯಧಿಕ ದಾರಿತಪ್ಪಿದವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ ءَاتَيْنَا مُوسَى ٱلْكِتَٰبَ وَجَعَلْنَا مَعَهُۥٓ أَخَاهُ هَٰرُونَ وَزِيرًا

Kannada Translation - Hamza Buturನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು ಮತ್ತು ಅವರ ಸಹೋದರ ಹಾರೂನರನ್ನು ಅವರ ಸಹಾಯಕರನ್ನಾಗಿ ಮಾಡಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَقُلْنَا ٱذْهَبَآ إِلَى ٱلْقَوْمِ ٱلَّذِينَ كَذَّبُوا۟ بِـَٔايَٰتِنَا فَدَمَّرْنَٰهُمْ تَدْمِيرًا

Kannada Translation - Hamza Buturನಂತರ ನಾವು ಹೇಳಿದೆವು: “ನಮ್ಮ ವಚನಗಳನ್ನು ನಿಷೇಧಿಸಿದ ಜನರ ಬಳಿಗೆ ಹೋಗಿರಿ.” ನಂತರ ನಾವು ಅವರನ್ನು ಸಂಪೂರ್ಣ ನಾಶ ಮಾಡಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَوْمَ نُوحٍ لَّمَّا كَذَّبُوا۟ ٱلرُّسُلَ أَغْرَقْنَٰهُمْ وَجَعَلْنَٰهُمْ لِلنَّاسِ ءَايَةً وَأَعْتَدْنَا لِلظَّٰلِمِينَ عَذَابًا أَلِيمًا

Kannada Translation - Hamza Buturನೂಹರ ಜನರನ್ನು ಕೂಡ. ಅವರು ಸಂದೇಶವಾಹಕರನ್ನು ನಿಷೇಧಿಸಿದಾಗ ನಾವು ಅವರನ್ನು ಮುಳುಗಿಸಿ ನಾಶ ಮಾಡಿದೆವು ಮತ್ತು ಅವರನ್ನು ಜನರಿಗೆ ದೃಷ್ಟಾಂತವನ್ನಾಗಿ ಮಾಡಿದೆವು. ನಾವು ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَعَادًا وَثَمُودَا۟ وَأَصْحَٰبَ ٱلرَّسِّ وَقُرُونًۢا بَيْنَ ذَٰلِكَ كَثِيرًا

Kannada Translation - Hamza Buturಆದ್ ಗೋತ್ರವನ್ನು, ಸಮೂದ್ ಗೋತ್ರವನ್ನು, ಬಾವಿಗಳ ಜನರನ್ನು[1] ಮತ್ತು ಅದರ ಮಧ್ಯೆ ಬದುಕಿದ ಅನೇಕ ತಲೆಮಾರುಗಳನ್ನು ಕೂಡ (ನಾಶ ಮಾಡಿದೆವು).

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكُلًّا ضَرَبْنَا لَهُ ٱلْأَمْثَٰلَ وَكُلًّا تَبَّرْنَا تَتْبِيرًا

Kannada Translation - Hamza Buturನಾವು ಅವರೆಲ್ಲರಿಗೂ ಉದಾಹರಣೆಗಳನ್ನು ವಿವರಿಸಿಕೊಟ್ಟಿದ್ದೆವು. ನಂತರ ಅವರೆಲ್ಲರನ್ನೂ ನಾವು ಸರ್ವನಾಶ ಮಾಡಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ أَتَوْا۟ عَلَى ٱلْقَرْيَةِ ٱلَّتِىٓ أُمْطِرَتْ مَطَرَ ٱلسَّوْءِ أَفَلَمْ يَكُونُوا۟ يَرَوْنَهَا بَلْ كَانُوا۟ لَا يَرْجُونَ نُشُورًا

Kannada Translation - Hamza Buturಕೆಟ್ಟ ಮಳೆಯನ್ನು ಸುರಿಸಲಾದ ಆ ಊರಿನ ಮೂಲಕ ಇವರು (ಮಕ್ಕಾದ ಬಹುದೇವಾರಾಧಕರು) ಹಾದುಹೋಗುತ್ತಿದ್ದಾರೆ.[1] ಆದರೂ ಅವರು ಅದನ್ನು ನೋಡುವುದಿಲ್ಲವೇ? ವಾಸ್ತವವೇನೆಂದರೆ, ಇವರಿಗೆ ಪುನರುತ್ಥಾನದಲ್ಲಿ ಭರವಸೆಯೇ ಇಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا رَأَوْكَ إِن يَتَّخِذُونَكَ إِلَّا هُزُوًا أَهَٰذَا ٱلَّذِى بَعَثَ ٱللَّهُ رَسُولًا

Kannada Translation - Hamza Buturಅವರು ನಿಮ್ಮನ್ನು ಕಾಣುವಾಗ ನಿಮ್ಮನ್ನು ಒಂದು ತಮಾಷೆಯ ವಸ್ತುವನ್ನಾಗಿ ಮಾಡುತ್ತಾ ಕೇಳುತ್ತಾರೆ: “ಅಲ್ಲಾಹು ಸಂದೇಶವಾಹಕನಾಗಿ ಕಳುಹಿಸಿದ್ದು ಇವನನ್ನೋ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِن كَادَ لَيُضِلُّنَا عَنْ ءَالِهَتِنَا لَوْلَآ أَن صَبَرْنَا عَلَيْهَا وَسَوْفَ يَعْلَمُونَ حِينَ يَرَوْنَ ٱلْعَذَابَ مَنْ أَضَلُّ سَبِيلًا

Kannada Translation - Hamza Buturನಾವು ನಮ್ಮ ದೇವರುಗಳ ವಿಷಯದಲ್ಲಿ ಮನಸ್ಸು ಗಟ್ಟಿ ಮಾಡಿ ನಿಲ್ಲದಿರುತ್ತಿದ್ದರೆ ಇವನು ನಮ್ಮನ್ನು ಅವುಗಳಿಂದ ತಪ್ಪಿಸಿಬಿಡುತ್ತಿದ್ದನು.” ಅವರು ಶಿಕ್ಷೆಯನ್ನು ನೋಡುವಾಗ ಯಾರು ಹೆಚ್ಚು ದಾರಿತಪ್ಪಿದವರೆಂದು ಸ್ಪಷ್ಟವಾಗಿ ತಿಳಿದುಕೊಳ್ಳುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَرَءَيْتَ مَنِ ٱتَّخَذَ إِلَٰهَهُۥ هَوَىٰهُ أَفَأَنتَ تَكُونُ عَلَيْهِ وَكِيلًا

Kannada Translation - Hamza Buturತನ್ನ ಸ್ವೇಚ್ಛೆಯನ್ನೇ ದೇವರಾಗಿ ಸ್ವೀಕರಿಸಿದವನನ್ನು[1] ನೀವು ನೋಡಿಲ್ಲವೇ? ನೀವೇನು ಅವನ ಹೊಣೆ ವಹಿಸುತ್ತೀರಾ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَمْ تَحْسَبُ أَنَّ أَكْثَرَهُمْ يَسْمَعُونَ أَوْ يَعْقِلُونَ إِنْ هُمْ إِلَّا كَٱلْأَنْعَٰمِ بَلْ هُمْ أَضَلُّ سَبِيلًا

Kannada Translation - Hamza Buturಅವರಲ್ಲಿ ಹೆಚ್ಚಿನವರು ಕಿವಿಗೊಡುತ್ತಾರೆ ಮತ್ತು ಆಲೋಚಿಸುತ್ತಾರೆಂದು ನೀವು ಭಾವಿಸಿದ್ದೀರಾ? ಅವರು ಕೇವಲ ಜಾನುವಾರುಗಳಂತೆ. ಅಲ್ಲ, ಅವರು ಅವುಗಳಿಗಿಂತಲೂ ಹೆಚ್ಚು ದಾರಿತಪ್ಪಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَلَمْ تَرَ إِلَىٰ رَبِّكَ كَيْفَ مَدَّ ٱلظِّلَّ وَلَوْ شَآءَ لَجَعَلَهُۥ سَاكِنًا ثُمَّ جَعَلْنَا ٱلشَّمْسَ عَلَيْهِ دَلِيلًا

Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ನೆರಳನ್ನು ಹೇಗೆ ವಿಸ್ತರಿಸುತ್ತಿದ್ದಾನೆಂದು ನೀವು ನೋಡಿಲ್ಲವೇ? ಅವನು ಇಚ್ಛಿಸುತ್ತಿದ್ದರೆ ಅದನ್ನು ನಿಶ್ಚಲಗೊಳಿಸುತ್ತಿದ್ದನು. ನಂತರ ನಾವು ಸೂರ್ಯನನ್ನು ಅದಕ್ಕೆ ಮಾರ್ಗದರ್ಶಿಯಾಗಿ ಮಾಡಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ قَبَضْنَٰهُ إِلَيْنَا قَبْضًا يَسِيرًا

Kannada Translation - Hamza Buturನಂತರ ನಾವು ಅದನ್ನು ಸ್ವಲ್ಪ ಸ್ವಲ್ಪವಾಗಿ ನಮ್ಮ ಕಡೆಗೆ ಎಳೆದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَهُوَ ٱلَّذِى جَعَلَ لَكُمُ ٱلَّيْلَ لِبَاسًا وَٱلنَّوْمَ سُبَاتًا وَجَعَلَ ٱلنَّهَارَ نُشُورًا

Kannada Translation - Hamza Buturಅವನೇ ನಿಮಗೆ ರಾತ್ರಿಯನ್ನು ಉಡುಪನ್ನಾಗಿ ಮತ್ತು ನಿದ್ದೆಯನ್ನು ವಿಶ್ರಾಂತಿಯನ್ನಾಗಿ ಮಾಡಿಕೊಟ್ಟವನು. ಅವನು ಹಗಲನ್ನು ಎಚ್ಚರವಾಗಿರುವ ಸಮಯವಾಗಿ ಮಾಡಿದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَهُوَ ٱلَّذِىٓ أَرْسَلَ ٱلرِّيَٰحَ بُشْرًۢا بَيْنَ يَدَىْ رَحْمَتِهِۦ وَأَنزَلْنَا مِنَ ٱلسَّمَآءِ مَآءً طَهُورًا

Kannada Translation - Hamza Buturತನ್ನ ದಯೆಗೆ (ಮಳೆಗೆ) ಮೊದಲು ಸುವಾರ್ತೆಯಾಗಿ ಗಾಳಿಗಳನ್ನು ಕಳುಹಿಸುವವನು ಅವನೇ. ನಾವು ಆಕಾಶದಿಂದ ಶುದ್ಧ ನೀರನ್ನು ಇಳಿಸುತ್ತೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لِّنُحْـِۧىَ بِهِۦ بَلْدَةً مَّيْتًا وَنُسْقِيَهُۥ مِمَّا خَلَقْنَآ أَنْعَٰمًا وَأَنَاسِىَّ كَثِيرًا

Kannada Translation - Hamza Buturನಿರ್ಜೀವ ಸ್ಥಿತಿಯಲ್ಲಿರುವ ಊರಿಗೆ ಅದರ ಮೂಲಕ ಜೀವ ನೀಡಲು. ನಾವು ಅದನ್ನು ನಮ್ಮ ಸೃಷ್ಟಿಗಳಲ್ಲಿ ಸೇರಿದ ಅಸಂಖ್ಯ ಜಾನುವಾರುಗಳು ಮತ್ತು ಮನುಷ್ಯರಿಗೆ ಕುಡಿಸುತ್ತೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ صَرَّفْنَٰهُ بَيْنَهُمْ لِيَذَّكَّرُوا۟ فَأَبَىٰٓ أَكْثَرُ ٱلنَّاسِ إِلَّا كُفُورًا

Kannada Translation - Hamza Buturಅವರು ಉಪದೇಶ ಪಡೆಯಲೆಂದು ನಾವು ಅದನ್ನು (ಮಳೆನೀರನ್ನು) ಅವರ ಮಧ್ಯೆ ವಿತರಣೆ ಮಾಡುತ್ತೇವೆ. ಆದರೆ ಜನರಲ್ಲಿ ಹೆಚ್ಚಿನವರು ನಿಷೇಧಿಸಲು ಮಾತ್ರ ಮುಂದಾಗುತ್ತಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَوْ شِئْنَا لَبَعَثْنَا فِى كُلِّ قَرْيَةٍ نَّذِيرًا

Kannada Translation - Hamza Buturನಾವು ಇಚ್ಛಿಸುತ್ತಿದ್ದರೆ ಎಲ್ಲ ಊರುಗಳಿಗೂ ಒಬ್ಬೊಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸುತ್ತಿದ್ದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَا تُطِعِ ٱلْكَٰفِرِينَ وَجَٰهِدْهُم بِهِۦ جِهَادًا كَبِيرًا

Kannada Translation - Hamza Buturಆದ್ದರಿಂದ ನೀವು ಸತ್ಯನಿಷೇಧಿಗಳನ್ನು ಅನುಸರಿಸಬೇಡಿ. ಇದರ (ಕುರ್‌ಆನ್‍ನ) ಮೂಲಕ ಅವರ ವಿರುದ್ಧ ಮಹಾ ಹೋರಾಟ ಮಾಡಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَهُوَ ٱلَّذِى مَرَجَ ٱلْبَحْرَيْنِ هَٰذَا عَذْبٌ فُرَاتٌ وَهَٰذَا مِلْحٌ أُجَاجٌ وَجَعَلَ بَيْنَهُمَا بَرْزَخًا وَحِجْرًا مَّحْجُورًا

Kannada Translation - Hamza Buturಅವನೇ ಎರಡು ಸಮುದ್ರಗಳನ್ನು ಬೆರೆಯಲು ಬಿಟ್ಟವನು. ಒಂದರಲ್ಲಿ ತಾಜಾ ಸಿಹಿನೀರು ಮತ್ತು ಇನ್ನೊಂದರಲ್ಲಿ ಕಹಿ ಉಪ್ಪು ನೀರು. ಅವನು ಅವೆರಡರ ಮಧ್ಯೆ ಒಂದು ಪರದೆಯನ್ನು ಮತ್ತು ಬಲಿಷ್ಠ ತಡೆಯನ್ನು ನಿರ್ಮಸಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَهُوَ ٱلَّذِى خَلَقَ مِنَ ٱلْمَآءِ بَشَرًا فَجَعَلَهُۥ نَسَبًا وَصِهْرًا وَكَانَ رَبُّكَ قَدِيرًا

Kannada Translation - Hamza Buturಅವನೇ ಮನುಷ್ಯನನ್ನು ನೀರಿನಿಂದ ಸೃಷ್ಟಿಸಿದವನು. ನಂತರ ಅವನಿಗೆ ವಂಶಾವಳಿಯನ್ನು ಮತ್ತು ವೈವಾಹಿಕ ಸಂಬಂಧಿಗಳನ್ನು ಮಾಡಿಕೊಟ್ಟನು. ನಿಮ್ಮ ಪರಿಪಾಲಕನು (ಅಲ್ಲಾಹು) ಸರ್ವಶಕ್ತನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَعْبُدُونَ مِن دُونِ ٱللَّهِ مَا لَا يَنفَعُهُمْ وَلَا يَضُرُّهُمْ وَكَانَ ٱلْكَافِرُ عَلَىٰ رَبِّهِۦ ظَهِيرًا

Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಅವರಿಗೆ ಉಪಕಾರ ಅಥವಾ ತೊಂದರೆ ಮಾಡದವರನ್ನು ಆರಾಧಿಸುತ್ತಿದ್ದಾರೆ. ಸತ್ಯನಿಷೇಧಿಯು ತನ್ನ ಪರಿಪಾಲಕನ ವಿರುದ್ಧ (ಶೈತಾನನಿಗೆ) ಬೆಂಬಲಿಗನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَآ أَرْسَلْنَٰكَ إِلَّا مُبَشِّرًا وَنَذِيرًا

Kannada Translation - Hamza Butur(ಪ್ರವಾದಿಯವರೇ) ನಾವು ನಿಮ್ಮನ್ನು ಸುವಾರ್ತೆ ತಿಳಿಸುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿಯೇ ಕಳುಹಿಸಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ مَآ أَسْـَٔلُكُمْ عَلَيْهِ مِنْ أَجْرٍ إِلَّا مَن شَآءَ أَن يَتَّخِذَ إِلَىٰ رَبِّهِۦ سَبِيلًا

Kannada Translation - Hamza Buturಹೇಳಿರಿ: “ನಾನು ಇದಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಆದರೆ ಯಾರು ತನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ಮಾರ್ಗವನ್ನು ಸ್ವೀಕರಿಸಲು ಇಚ್ಛಿಸುತ್ತಾನೋ (ಅವನು ಅದನ್ನು ಸ್ವೀಕರಿಸಬೇಕು ಎಂಬುದರ) ಹೊರತು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَتَوَكَّلْ عَلَى ٱلْحَىِّ ٱلَّذِى لَا يَمُوتُ وَسَبِّحْ بِحَمْدِهِۦ وَكَفَىٰ بِهِۦ بِذُنُوبِ عِبَادِهِۦ خَبِيرًا

Kannada Translation - Hamza Buturಎಂದಿಗೂ ಸಾಯದೆ ನಿರಂತರ ಬದುಕಿರುವವನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡಿ. ಅವನ ಸ್ತುತಿಯೊಂದಿಗೆ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. ಅವನ ದಾಸರು ಮಾಡುವ ಪಾಪಗಳನ್ನು ಸೂಕ್ಷ್ಮವಾಗಿ ತಿಳಿಯಲು ಅವನೇ ಸಾಕು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلَّذِى خَلَقَ ٱلسَّمَٰوَٰتِ وَٱلْأَرْضَ وَمَا بَيْنَهُمَا فِى سِتَّةِ أَيَّامٍ ثُمَّ ٱسْتَوَىٰ عَلَى ٱلْعَرْشِ ٱلرَّحْمَٰنُ فَسْـَٔلْ بِهِۦ خَبِيرًا

Kannada Translation - Hamza Buturಅವನು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಪರಮ ದಯಾಳು. ನೀವು ಅವನ ಬಗ್ಗೆ ಸೂಕ್ಷ್ಮವಾಗಿ ತಿಳಿದವನೊಡನೆ (ಪ್ರವಾದಿಯೊಡನೆ) ಕೇಳಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا قِيلَ لَهُمُ ٱسْجُدُوا۟ لِلرَّحْمَٰنِ قَالُوا۟ وَمَا ٱلرَّحْمَٰنُ أَنَسْجُدُ لِمَا تَأْمُرُنَا وَزَادَهُمْ نُفُورًا

Kannada Translation - Hamza Butur“ಪರಮ ದಯಾಳುವಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡಿರಿ” ಎಂದು ಅವರೊಡನೆ ಹೇಳಲಾದರೆ ಅವರು ಕೇಳುತ್ತಾರೆ: “ಪರಮ ದಯಾಳು ಎಂದರೇನು?[1] ನೀನು ಆಜ್ಞಾಪಿಸುವವನಿಗೆ ನಾವು ಸಾಷ್ಟಾಂಗ ಮಾಡಬೇಕೇ?” ಇದು ಅವರಿಗೆ ದ್ವೇಷವನ್ನು ಇನ್ನಷ್ಟು ಹೆಚ್ಚಿಸಿಬಿಟ್ಟಿತು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

تَبَارَكَ ٱلَّذِى جَعَلَ فِى ٱلسَّمَآءِ بُرُوجًا وَجَعَلَ فِيهَا سِرَٰجًا وَقَمَرًا مُّنِيرًا

Kannada Translation - Hamza Buturಆಕಾಶದಲ್ಲಿ ನಕ್ಷತ್ರಪುಂಜಗಳನ್ನು ಸ್ಥಾಪಿಸಿದವನು (ಅಲ್ಲಾಹು) ಸಮೃದ್ಧಪೂರ್ಣನು. ಅವನು ಅದರಲ್ಲಿ ಒಂದು ದೀಪವನ್ನು (ಸೂರ್ಯನನ್ನು) ಮತ್ತು ಬೆಳಗುವ ಚಂದ್ರನನ್ನು ಉಂಟುಮಾಡಿದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَهُوَ ٱلَّذِى جَعَلَ ٱلَّيْلَ وَٱلنَّهَارَ خِلْفَةً لِّمَنْ أَرَادَ أَن يَذَّكَّرَ أَوْ أَرَادَ شُكُورًا

Kannada Translation - Hamza Buturಅವನೇ ರಾತ್ರಿ-ಹಗಲುಗಳನ್ನು ಒಂದರ ಹಿಂದೆ ಇನ್ನೊಂದು ಬರುವಂತೆ ಮಾಡಿದವನು. ಉಪದೇಶ ಸ್ವೀಕರಿಸಲು ಬಯಸುವವರಿಗೆ ಅಥವಾ ಕೃತಜ್ಞರಾಗಲು ಬಯಸುವವರಿಗೆ (ಒಂದು ದೃಷ್ಟಾಂತವೆಂಬಂತೆ).

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَعِبَادُ ٱلرَّحْمَٰنِ ٱلَّذِينَ يَمْشُونَ عَلَى ٱلْأَرْضِ هَوْنًا وَإِذَا خَاطَبَهُمُ ٱلْجَٰهِلُونَ قَالُوا۟ سَلَٰمًا

Kannada Translation - Hamza Buturಪರಮ ದಯಾಳುವಿನ (ಅಲ್ಲಾಹನ) ದಾಸರು ಭೂಮಿಯಲ್ಲಿ ವಿನಯದಿಂದ ನಡೆಯುವವರಾಗಿದ್ದಾರೆ. ಅವಿವೇಕಿಗಳು ಅವರೊಡನೆ ಮಾತನಾಡಿದರೆ ಅವರು ಶಾಂತಿ-ಸಮಾಧಾನದ ಮಾತುಗಳನ್ನು ಹೇಳುತ್ತಾರೆ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ يَبِيتُونَ لِرَبِّهِمْ سُجَّدًا وَقِيَٰمًا

Kannada Translation - Hamza Buturಅವರು (ಅಲ್ಲಾಹನ ದಾಸರು) ಯಾರೆಂದರೆ, ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡುತ್ತಾ ಮತ್ತು ನಿಂತು ನಮಾಝ್ ಮಾಡುತ್ತಾ ರಾತ್ರಿಯನ್ನು ಕಳೆಯುವವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ يَقُولُونَ رَبَّنَا ٱصْرِفْ عَنَّا عَذَابَ جَهَنَّمَ إِنَّ عَذَابَهَا كَانَ غَرَامًا

Kannada Translation - Hamza Buturಅವರು ಹೇಳುತ್ತಾರೆ: “ನಮ್ಮ ಪರಿಪಾಲಕನೇ! ನಮ್ಮಿಂದ ನರಕ ಶಿಕ್ಷೆಯನ್ನು ದೂರೀಕರಿಸು. ನಿಜಕ್ಕೂ ಅದರ ಶಿಕ್ಷೆಯು ಸದಾ ಅಂಟಿಕೊಂಡಿರುತ್ತದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّهَا سَآءَتْ مُسْتَقَرًّا وَمُقَامًا

Kannada Translation - Hamza Buturನಿಶ್ಚಯವಾಗಿಯೂ ಅದು ಬಹಳ ನಿಕೃಷ್ಟ ವಾಸಸ್ಥಳ ಮತ್ತು ವಾಸ್ತವ್ಯವಾಗಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ إِذَآ أَنفَقُوا۟ لَمْ يُسْرِفُوا۟ وَلَمْ يَقْتُرُوا۟ وَكَانَ بَيْنَ ذَٰلِكَ قَوَامًا

Kannada Translation - Hamza Buturಅವರು ಖರ್ಚು ಮಾಡುವಾಗ ಅತಿಯಾಗಿ ಖರ್ಚು ಮಾಡುವುದಿಲ್ಲ ಮತ್ತು ಜಿಪುಣತನ ತೋರುವುದೂ ಇಲ್ಲ. ಬದಲಿಗೆ, ಅವೆರಡರ ನಡುವಿನ ಮಧ್ಯಮ ಮಾರ್ಗವನ್ನು ಸ್ವೀಕರಿಸುತ್ತಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ لَا يَدْعُونَ مَعَ ٱللَّهِ إِلَٰهًا ءَاخَرَ وَلَا يَقْتُلُونَ ٱلنَّفْسَ ٱلَّتِى حَرَّمَ ٱللَّهُ إِلَّا بِٱلْحَقِّ وَلَا يَزْنُونَ وَمَن يَفْعَلْ ذَٰلِكَ يَلْقَ أَثَامًا

Kannada Translation - Hamza Buturಅವರು ಅಲ್ಲಾಹನ ಜೊತೆಗೆ ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸುವುದಿಲ್ಲ, ಕಾನೂನುಬದ್ಧ ರೀತಿಯಲ್ಲೇ ಹೊರತು ಅಲ್ಲಾಹು (ಕೊಲ್ಲುವುದನ್ನು) ನಿಷೇಧಿಸಿದ ಜೀವವನ್ನು ಕೊಲ್ಲುವುದಿಲ್ಲ ಮತ್ತು ವ್ಯಭಿಚಾರ ಮಾಡುವುದಿಲ್ಲ. ಯಾರು ಇವುಗಳನ್ನು ಮಾಡುತ್ತಾನೋ ಅವನು ಶಿಕ್ಷೆಯನ್ನು ಪಡೆಯುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يُضَٰعَفْ لَهُ ٱلْعَذَابُ يَوْمَ ٱلْقِيَٰمَةِ وَيَخْلُدْ فِيهِۦ مُهَانًا

Kannada Translation - Hamza Buturಪುನರುತ್ಥಾನ ದಿನದಂದು ಅವನಿಗೆ ಇಮ್ಮಡಿ ಶಿಕ್ಷೆ ನೀಡಲಾಗುವುದು. ಅವನು ಅವಮಾನವನ್ನು ಸಹಿಸುತ್ತಾ ಸದಾಕಾಲ ಅದರಲ್ಲಿ ವಾಸಿಸುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِلَّا مَن تَابَ وَءَامَنَ وَعَمِلَ عَمَلًا صَٰلِحًا فَأُو۟لَٰٓئِكَ يُبَدِّلُ ٱللَّهُ سَيِّـَٔاتِهِمْ حَسَنَٰتٍ وَكَانَ ٱللَّهُ غَفُورًا رَّحِيمًا

Kannada Translation - Hamza Buturಆದರೆ ಪಶ್ಚಾತ್ತಾಪಪಟ್ಟವರು, ಸತ್ಯವಿಶ್ವಾಸಿಗಳಾದವರು ಮತ್ತು ಸತ್ಕರ್ಮವೆಸಗಿದವರು ಇದಕ್ಕೆ ಹೊರತಾಗಿದ್ದಾರೆ. ಅಲ್ಲಾಹು ಅವರ ದುಷ್ಕೃತ್ಯಗಳನ್ನು ಸತ್ಕರ್ಮಗಳಾಗಿ ಬದಲಾಯಿಸುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَن تَابَ وَعَمِلَ صَٰلِحًا فَإِنَّهُۥ يَتُوبُ إِلَى ٱللَّهِ مَتَابًا

Kannada Translation - Hamza Buturಯಾರು ಪಶ್ಚಾತ್ತಾಪಪಟ್ಟು ಸತ್ಕರ್ಮವೆಸಗುತ್ತಾನೋ ಅವನು ಅಲ್ಲಾಹನ ಕಡೆಗೆ ಪ್ರಾಮಾಣಿಕವಾಗಿ ಮರಳಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ لَا يَشْهَدُونَ ٱلزُّورَ وَإِذَا مَرُّوا۟ بِٱللَّغْوِ مَرُّوا۟ كِرَامًا

Kannada Translation - Hamza Buturಅವರು ಸುಳ್ಳು ಸಾಕ್ಷ್ಯ ಹೇಳದವರು ಮತ್ತು ಅನಗತ್ಯ ಸಂಗತಿಗಳ ಬಳಿಯಿಂದ ನಡೆಯಬೇಕಾಗಿ ಬಂದರೆ ಸಭ್ಯತೆಯಿಂದ ನಡೆಯುವವರಾಗಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ إِذَا ذُكِّرُوا۟ بِـَٔايَٰتِ رَبِّهِمْ لَمْ يَخِرُّوا۟ عَلَيْهَا صُمًّا وَعُمْيَانًا

Kannada Translation - Hamza Buturಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ವಚನಗಳ ಮೂಲಕ ಉಪದೇಶ ನೀಡಲಾದರೆ ಅವರು ಕಿವುಡರು ಮತ್ತು ಕುರುಡರಾಗಿ ಬಿಡುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ يَقُولُونَ رَبَّنَا هَبْ لَنَا مِنْ أَزْوَٰجِنَا وَذُرِّيَّٰتِنَا قُرَّةَ أَعْيُنٍ وَٱجْعَلْنَا لِلْمُتَّقِينَ إِمَامًا

Kannada Translation - Hamza Buturಅವರು ಪ್ರಾರ್ಥಿಸುತ್ತಾರೆ: “ನಮ್ಮ ಪರಿಪಾಲಕನೇ! ನಮ್ಮ ಪತ್ನಿಯರಲ್ಲಿ ಮತ್ತು ನಮ್ಮ ಮಕ್ಕಳಲ್ಲಿ ನಮಗೆ ಕಣ್ತಂಪನ್ನು ನೀಡು. ದೇವಭಯವುಳ್ಳವರಿಗೆ ನಮ್ಮನ್ನು ಮುಂದಾಳುಗಳನ್ನಾಗಿ ಮಾಡು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أُو۟لَٰٓئِكَ يُجْزَوْنَ ٱلْغُرْفَةَ بِمَا صَبَرُوا۟ وَيُلَقَّوْنَ فِيهَا تَحِيَّةً وَسَلَٰمًا

Kannada Translation - Hamza Buturಅವರು ತಾಳ್ಮೆ ತೋರಿದ್ದಕ್ಕೆ ಪ್ರತಿಫಲವಾಗಿ ಅವರಿಗೆ ಸ್ವರ್ಗದ ಉನ್ನತ ಮಹಲುಗಳನ್ನು ನೀಡಲಾಗುವುದು. ಅಲ್ಲಿ ಅವರು ಅಭಿವಂದನೆಗಳನ್ನು ಮತ್ತು ಶಾಂತಿಯ ಹಾರೈಕೆಗಳನ್ನು ಪಡೆಯುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

خَٰلِدِينَ فِيهَا حَسُنَتْ مُسْتَقَرًّا وَمُقَامًا

Kannada Translation - Hamza Buturಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಆ ವಾಸಸ್ಥಳ ಮತ್ತು ಸ್ಥಾನಮಾನವು ಬಹಳ ಉತ್ತಮವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ مَا يَعْبَؤُا۟ بِكُمْ رَبِّى لَوْلَا دُعَآؤُكُمْ فَقَدْ كَذَّبْتُمْ فَسَوْفَ يَكُونُ لِزَامًۢا

Kannada Translation - Hamza Buturಹೇಳಿರಿ: “ನಿಮ್ಮ ಪ್ರಾರ್ಥನೆಗಳು ಇಲ್ಲದಿರುತ್ತಿದ್ದರೆ ನನ್ನ ಪರಿಪಾಲಕನು (ಅಲ್ಲಾಹು) ನಿಮ್ಮನ್ನು ಪರಿಗಣಿಸುತ್ತಲೇ ಇರಲಿಲ್ಲ.” ಆದರೆ ನೀವು ನಿಷೇಧಿಸಿದ್ದೀರಿ. ಆದ್ದರಿಂದ ಅದಕ್ಕಿರುವ ಶಿಕ್ಷೆಯು ಸದ್ಯವೇ ನಿಮ್ಮನ್ನು ಅಂಟಿಕೊಳ್ಳಲಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70