وَٱعْتَصِمُوا۟ بِحَبْلِ ٱللَّهِ جَمِيعًا وَلَا تَفَرَّقُوا۟ وَٱذْكُرُوا۟ نِعْمَتَ ٱللَّهِ عَلَيْكُمْ إِذْ كُنتُمْ أَعْدَآءً فَأَلَّفَ بَيْنَ قُلُوبِكُمْ فَأَصْبَحْتُم بِنِعْمَتِهِۦٓ إِخْوَٰنًا وَكُنتُمْ عَلَىٰ شَفَا حُفْرَةٍ مِّنَ ٱلنَّارِ فَأَنقَذَكُم مِّنْهَا كَذَٰلِكَ يُبَيِّنُ ٱللَّهُ لَكُمْ ءَايَٰتِهِۦ لَعَلَّكُمْ تَهْتَدُونَ
Kannada Translation - Hamza Buturನೀವೆಲ್ಲರೂ ಒಟ್ಟಾಗಿ ಅಲ್ಲಾಹನ ಹಗ್ಗವನ್ನು ಬಿಗಿಯಾಗಿ ಹಿಡಿಯಿರಿ. ವಿಭಿನ್ನ ಪಂಗಡಗಳಾಗಿ ಬೇರ್ಪಡಬೇಡಿ. ನೀವು ವೈರಿಗಳಾಗಿದ್ದಾಗ ಅಲ್ಲಾಹು ನಿಮಗೆ ದಯಪಾಲಿಸಿದ ಅನುಗ್ರಹವನ್ನು ಸ್ಮರಿಸಿರಿ. ಅವನು ನಿಮ್ಮ ಹೃದಯಗಳನ್ನು ಬೆಸೆದು, ಅವನ ಅನುಗ್ರಹದ ನಿಮಿತ್ತ ನೀವು ಪರಸ್ಪರ ಸಹೋದರರಾದಿರಿ. ನೀವು ಅಗ್ನಿಕುಂಡದ ಅಂಚಿನಲ್ಲಿದ್ದಿರಿ. ಆಗ ಅವನು ನಿಮ್ಮನ್ನು ಅದರಿಂದ ರಕ್ಷಿಸಿದನು. ಈ ರೀತಿ ಅಲ್ಲಾಹು ಅವನ ದೃಷ್ಟಾಂತಗಳನ್ನು ನಿಮಗೆ ವಿವರಿಸಿಕೊಡುತ್ತಾನೆ. ನೀವು ಸನ್ಮಾರ್ಗ ಪಡೆಯುವುದಕ್ಕಾಗಿ.