هَٰٓأَنتُمْ أُو۟لَآءِ تُحِبُّونَهُمْ وَلَا يُحِبُّونَكُمْ وَتُؤْمِنُونَ بِٱلْكِتَٰبِ كُلِّهِۦ وَإِذَا لَقُوكُمْ قَالُوٓا۟ ءَامَنَّا وَإِذَا خَلَوْا۟ عَضُّوا۟ عَلَيْكُمُ ٱلْأَنَامِلَ مِنَ ٱلْغَيْظِ قُلْ مُوتُوا۟ بِغَيْظِكُمْ إِنَّ ٱللَّهَ عَلِيمٌۢ بِذَاتِ ٱلصُّدُورِ
Kannada Translation - Hamza Buturನೀವು ಅವರನ್ನು ಪ್ರೀತಿಸುತ್ತೀರಿ. ಆದರೆ ಅವರು ನಿಮ್ಮನ್ನು ಪ್ರೀತಿಸುವುದಿಲ್ಲ. ನೀವು ಎಲ್ಲಾ ಗ್ರಂಥಗಳಲ್ಲೂ ವಿಶ್ವಾಸವಿಡುತ್ತೀರಿ. ನಿಮ್ಮನ್ನು ಭೇಟಿಯಾಗುವಾಗ, “ನಾವು ವಿಶ್ವಾಸವಿಟ್ಟಿದ್ದೇವೆ” ಎಂದು ಅವರು ಹೇಳುತ್ತಾರೆ. ಆದರೆ ಅವರು ಏಕಾಂತದಲ್ಲಿರುವಾಗ ನಿಮ್ಮ ಮೇಲಿನ ಕೋಪದಿಂದ ಬೆರಳುಗಳನ್ನು ಕಚ್ಚುತ್ತಾರೆ. ಹೇಳಿರಿ: “ನಿಮ್ಮ ಕೋಪದೊಂದಿಗೇ ನೀವು ಪ್ರಾಣವನ್ನು ತ್ಯಜಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ.”