مَّا كَانَ ٱللَّهُ لِيَذَرَ ٱلْمُؤْمِنِينَ عَلَىٰ مَآ أَنتُمْ عَلَيْهِ حَتَّىٰ يَمِيزَ ٱلْخَبِيثَ مِنَ ٱلطَّيِّبِ وَمَا كَانَ ٱللَّهُ لِيُطْلِعَكُمْ عَلَى ٱلْغَيْبِ وَلَٰكِنَّ ٱللَّهَ يَجْتَبِى مِن رُّسُلِهِۦ مَن يَشَآءُ فَـَٔامِنُوا۟ بِٱللَّهِ وَرُسُلِهِۦ وَإِن تُؤْمِنُوا۟ وَتَتَّقُوا۟ فَلَكُمْ أَجْرٌ عَظِيمٌ
Kannada Translation - Hamza Buturಶುದ್ಧ ಮತ್ತು ಅಶುದ್ಧವನ್ನು ಬೇರ್ಪಡಿಸಿ ತೋರಿಸುವ ತನಕ ನೀವು ಯಾವ ಸ್ಥಿತಿಯಲ್ಲಿದ್ದೀರೋ ಅದೇ ಸ್ಥಿತಿಯಲ್ಲಿ ಅಲ್ಲಾಹು ಸತ್ಯವಿಶ್ವಾಸಿಗಳನ್ನು ಬಿಟ್ಟುಬಿಡುವುದಿಲ್ಲ. ಅಲ್ಲಾಹು ನಿಮಗೆ ಅದೃಶ್ಯ ಜ್ಞಾನವನ್ನು ತಿಳಿಸಿಕೊಡುವುದೂ ಇಲ್ಲ. ಆದರೆ ಅಲ್ಲಾಹು ಅವನ ಸಂದೇಶವಾಹಕರುಗಳಲ್ಲಿ ಅವನು ಇಚ್ಛಿಸುವವರನ್ನು ಆರಿಸುತ್ತಾನೆ. ಆದ್ದರಿಂದ ನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ. ನೀವು ವಿಶ್ವಾಸವಿಟ್ಟರೆ ಮತ್ತು ದೇವಭಯದಿಂದ ಜೀವಿಸಿದರೆ ನಿಮಗೆ ಮಹಾ ಪ್ರತಿಫಲವಿದೆ.