caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 195

ಮದೀನಾ · ಅವತರಣ ಕ್ರಮ 89 · 3:195

فَٱسْتَجَابَ لَهُمْ رَبُّهُمْ أَنِّى لَآ أُضِيعُ عَمَلَ عَٰمِلٍ مِّنكُم مِّن ذَكَرٍ أَوْ أُنثَىٰ بَعْضُكُم مِّنۢ بَعْضٍ فَٱلَّذِينَ هَاجَرُوا۟ وَأُخْرِجُوا۟ مِن دِيَٰرِهِمْ وَأُوذُوا۟ فِى سَبِيلِى وَقَٰتَلُوا۟ وَقُتِلُوا۟ لَأُكَفِّرَنَّ عَنْهُمْ سَيِّـَٔاتِهِمْ وَلَأُدْخِلَنَّهُمْ جَنَّٰتٍ تَجْرِى مِن تَحْتِهَا ٱلْأَنْهَٰرُ ثَوَابًا مِّنْ عِندِ ٱللَّهِ وَٱللَّهُ عِندَهُۥ حُسْنُ ٱلثَّوَابِ

Kannada Translation - Hamza Buturಆಗ ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ಉತ್ತರಿಸಿದನು: “ಪುರುಷನಾಗಲಿ ಸ್ತ್ರೀಯಾಗಲಿ ನಿಮ್ಮಲ್ಲಿ ಕರ್ಮವೆಸಗಿದ ಯಾರ ಕರ್ಮವನ್ನೂ ನಾನು ನಿಷ್ಫಲಗೊಳಿಸುವುದಿಲ್ಲ. ನೀವು ಒಬ್ಬರು ಇನ್ನೊಬ್ಬರಿಂದ ಉಂಟಾದವರು. ಆದ್ದರಿಂದ ವಲಸೆ (ಹಿಜ್ರ) ಮಾಡಿದವರು, ತಮ್ಮ ಮನೆಗಳಿಂದ ಹೊರಹಾಕಲಾದವರು, ನನ್ನ ಮಾರ್ಗದಲ್ಲಿ ತೊಂದರೆಯನ್ನು ಅನುಭವಿಸಿದವರು, (ನನ್ನ ಮಾರ್ಗದಲ್ಲಿ) ಯುದ್ಧ ಮಾಡಿದವರು ಮತ್ತು ಕೊಲೆಯಾದವರು (ಹುತಾತ್ಮರು) ಯಾರೋ—ಅವರ ಪಾಪಗಳನ್ನು ನಾನು ಅಳಿಸುವೆನು ಮತ್ತು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಅವರನ್ನು ಪ್ರವೇಶ ಮಾಡಿಸುವೆನು. ಇದು ಅಲ್ಲಾಹನ ಕಡೆಯ ಪ್ರತಿಫಲವಾಗಿದೆ. ಅಲ್ಲಾಹನ ಬಳಿ ಅತ್ಯುತ್ತಮವಾದ ಪ್ರತಿಫಲವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70