فَلَمَّا وَضَعَتْهَا قَالَتْ رَبِّ إِنِّى وَضَعْتُهَآ أُنثَىٰ وَٱللَّهُ أَعْلَمُ بِمَا وَضَعَتْ وَلَيْسَ ٱلذَّكَرُ كَٱلْأُنثَىٰ وَإِنِّى سَمَّيْتُهَا مَرْيَمَ وَإِنِّىٓ أُعِيذُهَا بِكَ وَذُرِّيَّتَهَا مِنَ ٱلشَّيْطَٰنِ ٱلرَّجِيمِ
Kannada Translation - Hamza Buturನಂತರ ಆಕೆ ಮಗುವಿಗೆ ಜನ್ಮ ನೀಡಿದಾಗ ಹೇಳಿದಳು: “ಓ ನನ್ನ ಪರಿಪಾಲಕನೇ! ನಾನು ಹೆಣ್ಣು ಮಗುವಿಗೆ ಜನ್ಮ ನೀಡಿದ್ದೇನೆ!” ಅವಳು ಯಾರಿಗೆ ಜನ್ಮ ನೀಡಿದ್ದಾಳೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ. ಗಂಡು ಹೆಣ್ಣಿನಂತಲ್ಲ! “ನಾನು ಅವಳಿಗೆ ಮರ್ಯಮ್ ಎಂದು ಹೆಸರಿಟ್ಟಿದ್ದೇನೆ; ಅವಳನ್ನು ಮತ್ತು ಅವಳ ಸಂತಾನವನ್ನು ಬಹಿಷ್ಕೃತ ಶೈತಾನನಿಂದ ಕಾಪಾಡಲು ನಿನ್ನ ರಕ್ಷಣೆಗೆ ಒಪ್ಪಿಸುತ್ತೇನೆ.”