ذَٰلِكَ مِنْ أَنۢبَآءِ ٱلْغَيْبِ نُوحِيهِ إِلَيْكَ وَمَا كُنتَ لَدَيْهِمْ إِذْ يُلْقُونَ أَقْلَٰمَهُمْ أَيُّهُمْ يَكْفُلُ مَرْيَمَ وَمَا كُنتَ لَدَيْهِمْ إِذْ يَخْتَصِمُونَ
Kannada Translation - Hamza Buturಇವೆಲ್ಲವೂ ಅದೃಶ್ಯ ಸಮಾಚಾರಗಳಾಗಿದ್ದು ನಾವು ನಿಮಗೆ ಇದನ್ನು ದೇವವಾಣಿಯ ಮೂಲಕ ತಿಳಿಸುತ್ತಿದ್ದೇವೆ. ಮರ್ಯಮರ ಪಾಲನೆ-ಪೋಷಣೆಯನ್ನು ಯಾರು ವಹಿಸಿಕೊಳ್ಳಬೇಕೆಂದು ನಿರ್ಧರಿಸಲು ಅವರು ತಮ್ಮ ಲೇಖನಿಗಳನ್ನು ಎಸೆದ ಸಂದರ್ಭದಲ್ಲಿ ನೀವು ಅವರ ಬಳಿಯಿರಲಿಲ್ಲ. ಅವರು ತರ್ಕಿಸುತ್ತಿರುವಾಗಲೂ ನೀವು ಅವರ ಬಳಿಯಿರಲಿಲ್ಲ.