وَرَسُولًا إِلَىٰ بَنِىٓ إِسْرَٰٓءِيلَ أَنِّى قَدْ جِئْتُكُم بِـَٔايَةٍ مِّن رَّبِّكُمْ أَنِّىٓ أَخْلُقُ لَكُم مِّنَ ٱلطِّينِ كَهَيْـَٔةِ ٱلطَّيْرِ فَأَنفُخُ فِيهِ فَيَكُونُ طَيْرًۢا بِإِذْنِ ٱللَّهِ وَأُبْرِئُ ٱلْأَكْمَهَ وَٱلْأَبْرَصَ وَأُحْىِ ٱلْمَوْتَىٰ بِإِذْنِ ٱللَّهِ وَأُنَبِّئُكُم بِمَا تَأْكُلُونَ وَمَا تَدَّخِرُونَ فِى بُيُوتِكُمْ إِنَّ فِى ذَٰلِكَ لَـَٔايَةً لَّكُمْ إِن كُنتُم مُّؤْمِنِينَ
Kannada Translation - Hamza Buturಅವರನ್ನು ಇಸ್ರಾಯೇಲ್ ಮಕ್ಕಳ ಬಳಿಗೆ ಸಂದೇಶವಾಹಕರಾಗಿ ಕಳುಹಿಸುವನು. (ಅವರು ಹೇಳುವರು:) “ನಾನು ನಿಮ್ಮ ಪರಿಪಾಲಕನ (ಅಲ್ಲಾಹನ) ವಚನದೊಂದಿಗೆ ನಿಮ್ಮ ಬಳಿಗೆ ಬಂದಿದ್ದೇನೆ. ನಾನು ನಿಮಗೆ ಜೇಡಿಮಣ್ಣಿನಿಂದ ಹಕ್ಕಿಯ ಆಕೃತಿಯನ್ನು ರಚಿಸುತ್ತೇನೆ. ನಂತರ ನಾನು ಅದರಲ್ಲಿ ಊದುತ್ತೇನೆ. ಆಗ ಅದು ಅಲ್ಲಾಹನ ಅಪ್ಪಣೆಯಿಂದ ಹಕ್ಕಿಯಾಗಿ ಮಾರ್ಪಡುತ್ತದೆ. ನಾನು ಅಲ್ಲಾಹನ ಅಪ್ಪಣೆಯಿಂದ ಹುಟ್ಟು ಕುರುಡನನ್ನು ಮತ್ತು ಕುಷ್ಠರೋಗಿಯನ್ನು ಗುಣಪಡಿಸುತ್ತೇನೆ ಹಾಗೂ ಸತ್ತವರಿಗೆ ಜೀವ ನೀಡುತ್ತೇನೆ. ನೀವು ತಿನ್ನುವುದನ್ನು ಮತ್ತು ನೀವು ನಿಮ್ಮ ಮನೆಗಳಲ್ಲಿ ಸಂಗ್ರಹಿಸಿಡುವುದನ್ನು ನಾನು ನಿಮಗೆ ತಿಳಿಸುತ್ತೇನೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ನಿಶ್ಚಯವಾಗಿಯೂ ಇದರಲ್ಲಿ ನಿಮಗೆ ದೃಷ್ಟಾಂತವಿದೆ.