وَقَرْنَ فِى بُيُوتِكُنَّ وَلَا تَبَرَّجْنَ تَبَرُّجَ ٱلْجَٰهِلِيَّةِ ٱلْأُولَىٰ وَأَقِمْنَ ٱلصَّلَوٰةَ وَءَاتِينَ ٱلزَّكَوٰةَ وَأَطِعْنَ ٱللَّهَ وَرَسُولَهُۥٓ إِنَّمَا يُرِيدُ ٱللَّهُ لِيُذْهِبَ عَنكُمُ ٱلرِّجْسَ أَهْلَ ٱلْبَيْتِ وَيُطَهِّرَكُمْ تَطْهِيرًا
Kannada Translation - Hamza Buturನೀವು ನಿಮ್ಮ ಮನೆಗಳಲ್ಲೇ ಇರಿ. ಹಿಂದಿನ ಅಜ್ಞಾನಕಾಲದಂತೆ ನಿಮ್ಮ ಸೌಂದರ್ಯ ಪ್ರದರ್ಶನ ಮಾಡಬೇಡಿ. ನಮಾಝನ್ನು ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ. ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞಾಪಾಲನೆ ಮಾಡಿರಿ. ಓ ಪ್ರವಾದಿಯ ಮನೆಯವರೇ! ಅಲ್ಲಾಹು ನಿಮ್ಮಿಂದ ಕೊಳೆಯನ್ನು ನಿವಾರಿಸಲು ಮತ್ತು ನಿಮ್ಮನ್ನು ಸಂಪೂರ್ಣ ಶುದ್ಧೀಕರಿಸಲು ಬಯಸುತ್ತಾನೆ.