مَّا جَعَلَ ٱللَّهُ لِرَجُلٍ مِّن قَلْبَيْنِ فِى جَوْفِهِۦ وَمَا جَعَلَ أَزْوَٰجَكُمُ ٱلَّٰٓـِٔى تُظَٰهِرُونَ مِنْهُنَّ أُمَّهَٰتِكُمْ وَمَا جَعَلَ أَدْعِيَآءَكُمْ أَبْنَآءَكُمْ ذَٰلِكُمْ قَوْلُكُم بِأَفْوَٰهِكُمْ وَٱللَّهُ يَقُولُ ٱلْحَقَّ وَهُوَ يَهْدِى ٱلسَّبِيلَ
Kannada Translation - Hamza Buturಅಲ್ಲಾಹು ಯಾವುದೇ ವ್ಯಕ್ತಿಗೂ ಅವನ ದೇಹದೊಳಗೆ ಎರಡು ಹೃದಯಗಳನ್ನು ಉಂಟುಮಾಡಿಲ್ಲ.[1] ನೀವು ಝಿಹಾರ್ ಮಾಡುವ ನಿಮ್ಮ ಪತ್ನಿಯರನ್ನು ಅವನು ನಿಮಗೆ ತಾಯಿಯಾಗಿ ಮಾಡಿಲ್ಲ.[2] ನಿಮ್ಮ ದತ್ತುಪುತ್ರರನ್ನು ಅವನು ನಿಮಗೆ ಪುತ್ರರಾಗಿ ಮಾಡಿಲ್ಲ.[3] ಇವೆಲ್ಲವೂ ನೀವು ನಿಮ್ಮ ಬಾಯಿಯಿಂದ ಹೇಳುವ ಮಾತುಗಳಾಗಿವೆ. ಅಲ್ಲಾಹು ಸತ್ಯವನ್ನೇ ಹೇಳುತ್ತಾನೆ. ಅವನು ಸನ್ಮಾರ್ಗವನ್ನು ತೋರಿಸಿಕೊಡುತ್ತಾನೆ.