ಮುಖಪುಟ › ಸೂರಗಳು › ಸೂರ As-Saaffaat
ಸೂರ As-Saaffaat الصافات
182 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 56
بِسْمِ ٱللَّهِ ٱلرَّحْمَٰنِ ٱلرَّحِيمِ وَٱلصَّٰٓفَّٰتِ صَفًّا
Kannada Translation - Hamza Butur ಸಾಲುಗಟ್ಟಿ ನಿಂತ ದೇವದೂತರುಗಳ ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱلزَّٰجِرَٰتِ زَجْرًا
Kannada Translation - Hamza Butur ತೀಕ್ಷ್ಣವಾಗಿ ಗದರಿಸುವವರ ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱلتَّٰلِيَٰتِ ذِكْرًا
Kannada Translation - Hamza Butur ಉಪದೇಶವನ್ನು ಪಠಿಸುವವರ ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ إِلَٰهَكُمْ لَوَٰحِدٌ
Kannada Translation - Hamza Butur ಖಂಡಿತವಾಗಿಯೂ ನಿಮ್ಮ ದೇವನು ಏಕೈಕನಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
رَّبُّ ٱلسَّمَٰوَٰتِ وَٱلْأَرْضِ وَمَا بَيْنَهُمَا وَرَبُّ ٱلْمَشَٰرِقِ
Kannada Translation - Hamza Butur ಅವನು ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ ಹಾಗೂ ಉದಯ ಸ್ಥಾನಗಳ ಪರಿಪಾಲಕನಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّا زَيَّنَّا ٱلسَّمَآءَ ٱلدُّنْيَا بِزِينَةٍ ٱلْكَوَاكِبِ
Kannada Translation - Hamza Butur ನಿಶ್ಚಯವಾಗಿಯೂ ನಾವು ಸಮೀಪದ ಆಕಾಶವನ್ನು ನಕ್ಷತ್ರಗಳ ಶೃಂಗಾರದಿಂದ ಅಲಂಕರಿಸಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَحِفْظًا مِّن كُلِّ شَيْطَٰنٍ مَّارِدٍ
Kannada Translation - Hamza Butur ವಿದ್ರೋಹಿಗಳಾದ ಎಲ್ಲಾ ಶೈತಾನರಿಂದ ನಾವು ಅದನ್ನು ಭದ್ರಪಡಿಸಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَّا يَسَّمَّعُونَ إِلَى ٱلْمَلَإِ ٱلْأَعْلَىٰ وَيُقْذَفُونَ مِن كُلِّ جَانِبٍ
Kannada Translation - Hamza Butur ಉಪರಿಲೋಕದ ದೇವದೂತರುಗಳ ಮಾತುಗಳಿಗೆ ಕಿವಿಗೊಡಲು ಅವರಿಗೆ ಸಾಧ್ಯವಾಗುವುದಿಲ್ಲ. ಎಲ್ಲಾ ದಿಕ್ಕುಗಳಿಂದಲೂ ಅವರಿಗೆ ಎಸೆಯಲಾಗುತ್ತದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
دُحُورًا وَلَهُمْ عَذَابٌ وَاصِبٌ
Kannada Translation - Hamza Butur ಅವರನ್ನು ಓಡಿಸುವುದಕ್ಕಾಗಿ. ಅವರಿಗೆ ಶಾಶ್ವತ ಶಿಕ್ಷೆಯೂ ಇದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا مَنْ خَطِفَ ٱلْخَطْفَةَ فَأَتْبَعَهُۥ شِهَابٌ ثَاقِبٌ
Kannada Translation - Hamza Butur ಆದರೆ, ಅವರಲ್ಲಿ ಯಾರಾದರೂ (ದೇವದೂತರ) ಮಾತನ್ನು ಕದ್ದು ಕೇಳಿ ಓಡಿದರೆ, (ತಕ್ಷಣ) ಜ್ವಲಿಸುವ ಒಂದು ಜ್ವಾಲೆಯು ಅವನನ್ನು ಹಿಂಬಾಲಿಸುತ್ತದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱسْتَفْتِهِمْ أَهُمْ أَشَدُّ خَلْقًا أَم مَّنْ خَلَقْنَآ إِنَّا خَلَقْنَٰهُم مِّن طِينٍ لَّازِبٍۭ
Kannada Translation - Hamza Butur (ಪ್ರವಾದಿಯವರೇ) ಅವರೊಡನೆ ಕೇಳಿರಿ: “ಅವರನ್ನು ಸೃಷ್ಟಿಸುವುದು ಕಷ್ಟವೋ? ಅಥವಾ ನಾವು ಸೃಷ್ಟಿಸಿದ ಇತರ ಸೃಷ್ಟಿಗಳನ್ನೋ?” ನಿಶ್ಚಯವಾಗಿಯೂ ನಾವು ಅವರನ್ನು ಅಂಟಿಕೊಳ್ಳುವ ಜೇಡಿಮಣ್ಣಿನಿಂದ ಸೃಷ್ಟಿಸಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
بَلْ عَجِبْتَ وَيَسْخَرُونَ
Kannada Translation - Hamza Butur ಅಲ್ಲ, ನಿಮಗೆ ಅಚ್ಚರಿಯಾಗುತ್ತದೆ.[1] ಆದರೆ ಅವರು ತಮಾಷೆ ಮಾಡುತ್ತಾರೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِذَا ذُكِّرُوا۟ لَا يَذْكُرُونَ
Kannada Translation - Hamza Butur ಅವರಿಗೆ ಉಪದೇಶ ನೀಡಲಾದರೆ ಅವರು ಅದನ್ನು ಸ್ವೀಕರಿಸುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِذَا رَأَوْا۟ ءَايَةً يَسْتَسْخِرُونَ
Kannada Translation - Hamza Butur ಅವರು ಯಾವುದಾದರೂ ದೃಷ್ಟಾಂತವನ್ನು ಕಂಡರೆ ಲೇವಡಿ ಮಾಡುತ್ತಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَقَالُوٓا۟ إِنْ هَٰذَآ إِلَّا سِحْرٌ مُّبِينٌ
Kannada Translation - Hamza Butur ಅವರು ಹೇಳುತ್ತಾರೆ: “ಇದು ಸ್ಪಷ್ಟ ಮಾಟಗಾರಿಕೆಯಲ್ಲದೆ ಇನ್ನೇನಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَءِذَا مِتْنَا وَكُنَّا تُرَابًا وَعِظَٰمًا أَءِنَّا لَمَبْعُوثُونَ
Kannada Translation - Hamza Butur ನಾವು ಸತ್ತು ಮಣ್ಣು ಮತ್ತು ಮೂಳೆಗಳಾಗಿ ಬಿಟ್ಟ ಬಳಿಕ ನಮ್ಮನ್ನು ಪುನಃ ಜೀವ ನೀಡಿ ಎಬ್ಬಿಸಲಾಗುವುದೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَوَءَابَآؤُنَا ٱلْأَوَّلُونَ
Kannada Translation - Hamza Butur ಮತ್ತು ನಮ್ಮ ಪೂರ್ವಜರನ್ನು ಕೂಡ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قُلْ نَعَمْ وَأَنتُمْ دَٰخِرُونَ
Kannada Translation - Hamza Butur ಹೇಳಿರಿ: “ಹೌದು! ನೀವು ಅವಮಾನಿತರಾಗುವಿರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَإِنَّمَا هِىَ زَجْرَةٌ وَٰحِدَةٌ فَإِذَا هُمْ يَنظُرُونَ
Kannada Translation - Hamza Butur ಅದು ಒಂದು ತೀಕ್ಷ್ಣ ಗದರಿಕೆ ಮಾತ್ರವಾಗಿರುವುದು. ಆಗ ಅಗೋ! ಅವರು ನೋಡ ತೊಡಗುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَقَالُوا۟ يَٰوَيْلَنَا هَٰذَا يَوْمُ ٱلدِّينِ
Kannada Translation - Hamza Butur ಅವರು ಹೇಳುವರು: “ಅಯ್ಯೋ! ನಮ್ಮ ದುರ್ಗತಿಯೇ! ಇದು ಪ್ರತಿಫಲದ ದಿನ!”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
هَٰذَا يَوْمُ ٱلْفَصْلِ ٱلَّذِى كُنتُم بِهِۦ تُكَذِّبُونَ
Kannada Translation - Hamza Butur ಇದು ನೀವು ನಿಷೇಧಿಸುತ್ತಿದ್ದ ಅಂತಿಮ ತೀರ್ಪು ನೀಡುವ ದಿನವಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ٱحْشُرُوا۟ ٱلَّذِينَ ظَلَمُوا۟ وَأَزْوَٰجَهُمْ وَمَا كَانُوا۟ يَعْبُدُونَ
Kannada Translation - Hamza Butur (ಅಲ್ಲಾಹು ಆದೇಶಿಸುವನು): “ಅಕ್ರಮವೆಸಗಿದವರನ್ನು, ಅವರ ಸಹಚರರನ್ನು ಮತ್ತು ಅವರು ಆರಾಧಿಸುತ್ತಿದ್ದವುಗಳನ್ನು ಒಟ್ಟುಗೂಡಿಸಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مِن دُونِ ٱللَّهِ فَٱهْدُوهُمْ إِلَىٰ صِرَٰطِ ٱلْجَحِيمِ
Kannada Translation - Hamza Butur ಅಲ್ಲಾಹನನ್ನು ಬಿಟ್ಟು (ಆರಾಧಿಸುತ್ತಿದ್ದವುಗಳನ್ನು). ಅವರೆಲ್ಲರಿಗೂ ನರಕದ ದಾರಿಯನ್ನು ತೋರಿಸಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَقِفُوهُمْ إِنَّهُم مَّسْـُٔولُونَ
Kannada Translation - Hamza Butur ಅವರನ್ನು ನಿಲ್ಲಿಸಿ! ಅವರೊಡನೆ ಪ್ರಶ್ನಿಸಬೇಕಾಗಿದೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مَا لَكُمْ لَا تَنَاصَرُونَ
Kannada Translation - Hamza Butur (ಅವರೊಡನೆ ಕೇಳಲಾಗುವುದು): “ನಿಮಗೇನಾಗಿದೆ? ನೀವೇಕೆ ಪರಸ್ಪರ ಸಹಾಯ ಮಾಡುವುದಿಲ್ಲ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
بَلْ هُمُ ٱلْيَوْمَ مُسْتَسْلِمُونَ
Kannada Translation - Hamza Butur ಅಲ್ಲ, ವಾಸ್ತವವಾಗಿ ಇಂದು ಅವರು (ಸಂಪೂರ್ಣ) ಶರಣಾಗಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَقْبَلَ بَعْضُهُمْ عَلَىٰ بَعْضٍ يَتَسَآءَلُونَ
Kannada Translation - Hamza Butur ಅವರಲ್ಲಿ ಒಬ್ಬರು ಇನ್ನೊಬ್ಬರ ಕಡೆಗೆ ತಿರುಗಿ ಪ್ರಶ್ನಿಸುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالُوٓا۟ إِنَّكُمْ كُنتُمْ تَأْتُونَنَا عَنِ ٱلْيَمِينِ
Kannada Translation - Hamza Butur ಅವರು ಹೇಳುವರು: “ನಿಶ್ಚಯವಾಗಿಯೂ ನೀವು ನಮ್ಮ ಬಲಭಾಗದಿಂದ ನಮ್ಮ ಬಳಿಗೆ ಬರುತ್ತಿದ್ದಿರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالُوا۟ بَل لَّمْ تَكُونُوا۟ مُؤْمِنِينَ
Kannada Translation - Hamza Butur ಅವರು ಉತ್ತರಿಸುವರು: “ಅಲ್ಲ, ನೀವು ಸತ್ಯವಿಶ್ವಾಸಿಗಳಾಗಿರಲಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمَا كَانَ لَنَا عَلَيْكُم مِّن سُلْطَٰنٍۭ بَلْ كُنتُمْ قَوْمًا طَٰغِينَ
Kannada Translation - Hamza Butur ನಮಗೆ ನಿಮ್ಮ ಮೇಲೆ ಯಾವುದೇ ಅಧಿಕಾರವಿರಲಿಲ್ಲ. ಬದಲಿಗೆ, ನೀವು ಅತಿರೇಕಿಗಳಾದ ಜನರಾಗಿದ್ದಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَحَقَّ عَلَيْنَا قَوْلُ رَبِّنَآ إِنَّا لَذَآئِقُونَ
Kannada Translation - Hamza Butur ಆದ್ದರಿಂದ ನಮ್ಮ ಪರಿಪಾಲಕನ (ಅಲ್ಲಾಹನ) ವಚನವು ನಮ್ಮ ಮೇಲೆ ಖಾತ್ರಿಯಾಯಿತು. ನಿಶ್ಚಯವಾಗಿಯೂ ನಾವು ಶಿಕ್ಷೆಯ ರುಚಿಯನ್ನು ನೋಡುವೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَغْوَيْنَٰكُمْ إِنَّا كُنَّا غَٰوِينَ
Kannada Translation - Hamza Butur ನಾವು ನಿಮ್ಮನ್ನು ದಾರಿತಪ್ಪಿಸಿದೆವು. (ಏಕೆಂದರೆ) ನಾವು ಸ್ವತಃ ದಾರಿತಪ್ಪಿದ್ದೆವು.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَإِنَّهُمْ يَوْمَئِذٍ فِى ٱلْعَذَابِ مُشْتَرِكُونَ
Kannada Translation - Hamza Butur ಆದ್ದರಿಂದ ಆ ದಿನದಂದು ಅವರೆಲ್ಲರೂ ಶಿಕ್ಷೆಯಲ್ಲಿ ಪಾಲುದಾರರಾಗುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّا كَذَٰلِكَ نَفْعَلُ بِٱلْمُجْرِمِينَ
Kannada Translation - Hamza Butur ನಿಶ್ಚಯವಾಗಿಯೂ ನಾವು ಅಪರಾಧಿಗಳೊಡನೆ ಹೀಗೆಯೇ ವರ್ತಿಸುವೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّهُمْ كَانُوٓا۟ إِذَا قِيلَ لَهُمْ لَآ إِلَٰهَ إِلَّا ٱللَّهُ يَسْتَكْبِرُونَ
Kannada Translation - Hamza Butur ಅವರೊಡನೆ, “ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ” ಎಂದು ಹೇಳಲಾದರೆ ಅವರು ಅಹಂಕಾರ ತೋರುತ್ತಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَيَقُولُونَ أَئِنَّا لَتَارِكُوٓا۟ ءَالِهَتِنَا لِشَاعِرٍ مَّجْنُونٍۭ
Kannada Translation - Hamza Butur ಅವರು ಹೇಳುತ್ತಿದ್ದರು: “ಒಬ್ಬ ಮಾನಸಿಕ ಅಸ್ವಸ್ಥ ಕವಿಯ ಮಾತು ಕೇಳಿ ನಾವು ನಮ್ಮ ದೇವರುಗಳನ್ನು ಬಿಟ್ಟುಬಿಡಬೇಕೇ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
بَلْ جَآءَ بِٱلْحَقِّ وَصَدَّقَ ٱلْمُرْسَلِينَ
Kannada Translation - Hamza Butur ಅಲ್ಲ, ವಾಸ್ತವವಾಗಿ ಅವರು (ಪ್ರವಾದಿ) ಸತ್ಯದೊಂದಿಗೆ ಬಂದಿದ್ದರು ಮತ್ತು ಅವರು (ಮೊದಲಿನ) ಪ್ರವಾದಿಗಳನ್ನು ದೃಢೀಕರಿಸಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّكُمْ لَذَآئِقُوا۟ ٱلْعَذَابِ ٱلْأَلِيمِ
Kannada Translation - Hamza Butur ನಿಶ್ಚಯವಾಗಿಯೂ ನೀವು ಯಾತನಾಮಯ ಶಿಕ್ಷೆಯ ರುಚಿಯನ್ನು ನೋಡುವಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمَا تُجْزَوْنَ إِلَّا مَا كُنتُمْ تَعْمَلُونَ
Kannada Translation - Hamza Butur ನೀವು ಮಾಡಿದ ಕರ್ಮಗಳ ಪ್ರತಿಫಲವನ್ನೇ ಹೊರತು ಬೇರೇನೂ ನಿಮಗೆ ನೀಡಲಾಗುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا عِبَادَ ٱللَّهِ ٱلْمُخْلَصِينَ
Kannada Translation - Hamza Butur ಆದರೆ, ಅಲ್ಲಾಹನ ನಿಷ್ಕಳಂಕ ದಾಸರು ಇದರಿಂದ ಹೊರತಾಗಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أُو۟لَٰٓئِكَ لَهُمْ رِزْقٌ مَّعْلُومٌ
Kannada Translation - Hamza Butur ಅವರಿಗೆ ನಿಶ್ಚಿತ ಉಪಜೀವನವಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَوَٰكِهُ وَهُم مُّكْرَمُونَ
Kannada Translation - Hamza Butur ಹಣ್ಣು-ಹಂಪಲುಗಳಿವೆ! ಅವರನ್ನು ಅಲ್ಲಿ ಗೌರವಿಸಲಾಗುವುದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فِى جَنَّٰتِ ٱلنَّعِيمِ
Kannada Translation - Hamza Butur ಸುಖಸಮೃದ್ಧವಾದ ಸ್ವರ್ಗೋದ್ಯಾನಗಳಲ್ಲಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
عَلَىٰ سُرُرٍ مُّتَقَٰبِلِينَ
Kannada Translation - Hamza Butur ಅವರು ಪರಸ್ಪರ ಎದುರು-ಬದುರಾಗಿ ಮಂಚಗಳಲ್ಲಿ ಕುಳಿತಿರುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يُطَافُ عَلَيْهِم بِكَأْسٍ مِّن مَّعِينٍۭ
Kannada Translation - Hamza Butur ಹರಿಯುವ ಚಿಲುಮೆಯ ನೀರು ತುಂಬಿದ ಲೋಟಗಳನ್ನು ಅವರ ಸುತ್ತಲೂ ತರಲಾಗುವುದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
بَيْضَآءَ لَذَّةٍ لِّلشَّٰرِبِينَ
Kannada Translation - Hamza Butur ಅದು ಬೆಳ್ಳಗಿದ್ದು ಕುಡಿಯುವವರಿಗೆ ಆಹ್ಲಾದಕರವಾಗಿರುವುದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَا فِيهَا غَوْلٌ وَلَا هُمْ عَنْهَا يُنزَفُونَ
Kannada Translation - Hamza Butur ಅದರಲ್ಲಿ ಯಾವುದೇ ಅಡ್ಡ ಪರಿಣಾಮವಿಲ್ಲ. ಅದರಿಂದ ನಶೆಯೂ ಉಂಟಾಗುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَعِندَهُمْ قَٰصِرَٰتُ ٱلطَّرْفِ عِينٌ
Kannada Translation - Hamza Butur ದೃಷ್ಟಿಯನ್ನು ನಿಯಂತ್ರಿಸುವ[1] ಮತ್ತು ಅರಳಿದ ನೇತ್ರಗಳುಳ್ಳ ಅಪ್ಸರೆಯರು ಅವರ ಬಳಿಯಿರುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَأَنَّهُنَّ بَيْضٌ مَّكْنُونٌ
Kannada Translation - Hamza Butur ಅವರು ಜೋಪಾನವಾಗಿಡಲಾದ ಮೊಟ್ಟೆಗಳಂತೆ ಇರುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَقْبَلَ بَعْضُهُمْ عَلَىٰ بَعْضٍ يَتَسَآءَلُونَ
Kannada Translation - Hamza Butur ಅವರು ಪರಸ್ಪರ ಒಬ್ಬರು ಇನ್ನೊಬ್ಬರ ಕಡೆಗೆ ತಿರುಗಿ ಪ್ರಶ್ನಿಸುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ قَآئِلٌ مِّنْهُمْ إِنِّى كَانَ لِى قَرِينٌ
Kannada Translation - Hamza Butur ಅವರಲ್ಲಿ ಒಬ್ಬನು ಹೇಳುವನು: “ನಿಜಕ್ಕೂ ನನಗೊಬ್ಬ ಗೆಳೆಯನಿದ್ದನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَقُولُ أَءِنَّكَ لَمِنَ ٱلْمُصَدِّقِينَ
Kannada Translation - Hamza Butur ಅವನು ಕೇಳುತ್ತಿದ್ದನು: ನೀನು (ಪರಲೋಕದಲ್ಲಿ) ವಿಶ್ವಾಸವಿಡುತ್ತೀಯಾ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَءِذَا مِتْنَا وَكُنَّا تُرَابًا وَعِظَٰمًا أَءِنَّا لَمَدِينُونَ
Kannada Translation - Hamza Butur ನಾವು ಸತ್ತು ಮಣ್ಣು ಮತ್ತು ಮೂಳೆಗಳಾಗಿ ಬಿಟ್ಟ ಬಳಿಕವೂ ನಮಗೆ ನಮ್ಮ ಕರ್ಮಫಲಗಳನ್ನು ನೀಡಲಾಗುತ್ತದೆಯೇ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ هَلْ أَنتُم مُّطَّلِعُونَ
Kannada Translation - Hamza Butur ಅವನು (ಅವನು ತನ್ನ ಬಳಿಯಿರುವವರೊಡನೆ) ಕೇಳುವನು: “ನೀವು ಅವನನ್ನು ನೋಡಲು ಬಯಸುತ್ತೀರಾ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱطَّلَعَ فَرَءَاهُ فِى سَوَآءِ ٱلْجَحِيمِ
Kannada Translation - Hamza Butur ಆಗ ಅವನು ಇಣುಕಿ ನೋಡಿದಾಗ ಆತ ನರಕದ ಮಧ್ಯಭಾಗದಲ್ಲಿರುವುದನ್ನು ಕಾಣುವನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ تَٱللَّهِ إِن كِدتَّ لَتُرْدِينِ
Kannada Translation - Hamza Butur ಅವನು ಹೇಳುವನು: “ಅಲ್ಲಾಹನಾಣೆ! ನೀನು ನನ್ನನ್ನು ಇನ್ನೇನು ನಾಶ ಮಾಡಿಯೇ ಬಿಡುತ್ತಿದ್ದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَوْلَا نِعْمَةُ رَبِّى لَكُنتُ مِنَ ٱلْمُحْضَرِينَ
Kannada Translation - Hamza Butur ನನ್ನ ಪರಿಪಾಲಕನ (ಅಲ್ಲಾಹನ) ಅನುಗ್ರಹವಿಲ್ಲದಿರುತ್ತಿದ್ದರೆ, ನಾನು ಕೂಡ (ನರಕಕ್ಕೆ) ಹಾಜರುಪಡಿಸಲಾಗುವವರಲ್ಲಿ ಸೇರಿರುತ್ತಿದ್ದೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَفَمَا نَحْنُ بِمَيِّتِينَ
Kannada Translation - Hamza Butur (ಸ್ವರ್ಗವಾಸಿಗಳು ಹೇಳುವರು): “ಇನ್ನು ನಾವು ಸಾಯುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا مَوْتَتَنَا ٱلْأُولَىٰ وَمَا نَحْنُ بِمُعَذَّبِينَ
Kannada Translation - Hamza Butur ನಮ್ಮ ಮೊದಲ ಸಾವಿನ ಹೊರತು. ಇನ್ನು ನಮಗೆ ಶಿಕ್ಷೆಯೂ ಇಲ್ಲ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ هَٰذَا لَهُوَ ٱلْفَوْزُ ٱلْعَظِيمُ
Kannada Translation - Hamza Butur ನಿಶ್ಚಯವಾಗಿಯೂ ಇದೇ ಮಹಾ ವಿಜಯ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لِمِثْلِ هَٰذَا فَلْيَعْمَلِ ٱلْعَٰمِلُونَ
Kannada Translation - Hamza Butur ಕರ್ಮವೆಸಗುವವರು ಇಂತಹ (ವಿಜಯಕ್ಕಾಗಿಯೇ) ಕರ್ಮವೆಸಗಲಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَذَٰلِكَ خَيْرٌ نُّزُلًا أَمْ شَجَرَةُ ٱلزَّقُّومِ
Kannada Translation - Hamza Butur ಈ ಆತಿಥ್ಯವು ಉತ್ತಮವೋ? ಅಥವಾ ಝಕ್ಕೂಮ್ ಮರವೋ?[1]
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّا جَعَلْنَٰهَا فِتْنَةً لِّلظَّٰلِمِينَ
Kannada Translation - Hamza Butur ನಿಶ್ಚಯವಾಗಿಯೂ ನಾವು ಅದನ್ನು ಅಕ್ರಮಿಗಳಿಗೆ ಪರೀಕ್ಷೆಯಾಗಿ ಮಾಡಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّهَا شَجَرَةٌ تَخْرُجُ فِىٓ أَصْلِ ٱلْجَحِيمِ
Kannada Translation - Hamza Butur ಅದು ನರಕಾಗ್ನಿಯ ತಳಭಾಗದಿಂದ ಹೊರಹೊಮ್ಮುವ ಮರವಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
طَلْعُهَا كَأَنَّهُۥ رُءُوسُ ٱلشَّيَٰطِينِ
Kannada Translation - Hamza Butur ಅದರ ಮೊಗ್ಗುಗಳು ಶೈತಾನರ ತಲೆ ಬುರುಡೆಗಳಂತಿವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَإِنَّهُمْ لَـَٔاكِلُونَ مِنْهَا فَمَالِـُٔونَ مِنْهَا ٱلْبُطُونَ
Kannada Translation - Hamza Butur ನಿಶ್ಚಯವಾಗಿಯೂ ಅವರು ಅದರಿಂದ ತಿನ್ನುವರು ಮತ್ತು ಹೊಟ್ಟೆ ತುಂಬಿಸುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ثُمَّ إِنَّ لَهُمْ عَلَيْهَا لَشَوْبًا مِّنْ حَمِيمٍ
Kannada Translation - Hamza Butur ನಂತರ ಅವರಿಗೆ ಮಿಶ್ರಣಗೊಂಡ ಕುದಿಯುವ ಪಾನೀಯವನ್ನು ನೀಡಲಾಗುವುದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ثُمَّ إِنَّ مَرْجِعَهُمْ لَإِلَى ٱلْجَحِيمِ
Kannada Translation - Hamza Butur ನಂತರ ಅವರೆಲ್ಲರೂ ಮರಳುವುದು ನರಕದ ಕಡೆಗಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّهُمْ أَلْفَوْا۟ ءَابَآءَهُمْ ضَآلِّينَ
Kannada Translation - Hamza Butur ನಿಶ್ಚಯವಾಗಿಯೂ ಅವರು ತಮ್ಮ ಪೂರ್ವಜರನ್ನು ದಾರಿತಪ್ಪಿದ್ದಾಗಿ ಕಂಡಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَهُمْ عَلَىٰٓ ءَاثَٰرِهِمْ يُهْرَعُونَ
Kannada Translation - Hamza Butur ಇವರು ಅವರ ಹೆಜ್ಜೆಗಳನ್ನು (ಹಿಂಬಾಲಿಸಿ) ಧಾವಿಸುತ್ತಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ ضَلَّ قَبْلَهُمْ أَكْثَرُ ٱلْأَوَّلِينَ
Kannada Translation - Hamza Butur ಇವರಿಗಿಂತ ಮೊದಲಿನ ಜನರಲ್ಲಿ ಹೆಚ್ಚಿನವರು ದಾರಿತಪ್ಪಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ أَرْسَلْنَا فِيهِم مُّنذِرِينَ
Kannada Translation - Hamza Butur ನಾವು ಅವರಿಗೆ ಮುನ್ನೆಚ್ಚರಿಕೆಗಾರರನ್ನು (ಪ್ರವಾದಿಗಳನ್ನು) ಕಳುಹಿಸಿದ್ದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱنظُرْ كَيْفَ كَانَ عَٰقِبَةُ ٱلْمُنذَرِينَ
Kannada Translation - Hamza Butur ಮುನ್ನೆಚ್ಚರಿಕೆ ನೀಡಲಾದವರ ಅಂತ್ಯವು ಹೇಗಿತ್ತೆಂದು ನೋಡಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا عِبَادَ ٱللَّهِ ٱلْمُخْلَصِينَ
Kannada Translation - Hamza Butur ಅಲ್ಲಾಹನ ನಿಷ್ಕಳಂಕ ದಾಸರು ಇದಕ್ಕೆ ಹೊರತಾಗಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ نَادَىٰنَا نُوحٌ فَلَنِعْمَ ٱلْمُجِيبُونَ
Kannada Translation - Hamza Butur ನೂಹ್ ನಮ್ಮನ್ನು ಕರೆದು ಪ್ರಾರ್ಥಿಸಿದ್ದರು. ನಾವು ಪ್ರಾರ್ಥನೆಗೆ ಎಷ್ಟು ಚೆನ್ನಾಗಿ ಉತ್ತರಿಸುತ್ತೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَنَجَّيْنَٰهُ وَأَهْلَهُۥ مِنَ ٱلْكَرْبِ ٱلْعَظِيمِ
Kannada Translation - Hamza Butur ನಾವು ಅವರನ್ನು ಮತ್ತು ಅವರ ಜನರನ್ನು ಮಹಾ ದುರಂತದಿಂದ ಪಾರು ಮಾಡಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَجَعَلْنَا ذُرِّيَّتَهُۥ هُمُ ٱلْبَاقِينَ
Kannada Translation - Hamza Butur ನಾವು ಅವರ ಸಂತಾನವನ್ನು (ಭೂಮಿಯಲ್ಲಿ) ಅವಶೇಷಿಸಿದವರನ್ನಾಗಿ ಮಾಡಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَتَرَكْنَا عَلَيْهِ فِى ٱلْـَٔاخِرِينَ
Kannada Translation - Hamza Butur ನಾವು ನಂತರದ ತಲೆಮಾರುಗಳಲ್ಲಿ ಅವರ (ಉತ್ತಮ ಹೆಸರನ್ನು) ಉಳಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
سَلَٰمٌ عَلَىٰ نُوحٍ فِى ٱلْعَٰلَمِينَ
Kannada Translation - Hamza Butur ಸರ್ವಲೋಕದವರಲ್ಲಿ ನೂಹರ ಮೇಲೆ ಶಾಂತಿಯಿರಲಿ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّا كَذَٰلِكَ نَجْزِى ٱلْمُحْسِنِينَ
Kannada Translation - Hamza Butur ನಿಶ್ಚಯವಾಗಿಯೂ ನಾವು ನೀತಿವಂತರಿಗೆ ಹೀಗೆಯೇ ಪ್ರತಿಫಲವನ್ನು ನೀಡುವೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّهُۥ مِنْ عِبَادِنَا ٱلْمُؤْمِنِينَ
Kannada Translation - Hamza Butur ನಿಶ್ಚಯವಾಗಿಯೂ ಅವರು ನಮ್ಮ ಸತ್ಯವಿಶ್ವಾಸಿ ದಾಸರಲ್ಲಿ ಸೇರಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ثُمَّ أَغْرَقْنَا ٱلْـَٔاخَرِينَ
Kannada Translation - Hamza Butur ನಂತರ ನಾವು ಉಳಿದವರನ್ನು ಮುಳುಗಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّ مِن شِيعَتِهِۦ لَإِبْرَٰهِيمَ
Kannada Translation - Hamza Butur ನಿಶ್ಚಯವಾಗಿಯೂ ಇಬ್ರಾಹೀಮ್ ಕೂಡ ಅವರ ಗುಂಪಿಗೆ ಸೇರಿದವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِذْ جَآءَ رَبَّهُۥ بِقَلْبٍ سَلِيمٍ
Kannada Translation - Hamza Butur ಅವರು ಅವರ ಪರಿಪಾಲಕನ (ಅಲ್ಲಾಹನ) ಬಳಿಗೆ ಸುರಕ್ಷಿತ ಹೃದಯದೊಂದಿಗೆ ಬಂದ ಸಂದರ್ಭ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِذْ قَالَ لِأَبِيهِ وَقَوْمِهِۦ مَاذَا تَعْبُدُونَ
Kannada Translation - Hamza Butur ಅವರು ತಮ್ಮ ತಂದೆ ಮತ್ತು ಊರ ಜನರೊಡನೆ ಕೇಳಿದರು: “ನೀವು ಏನು ಆರಾಧಿಸುತ್ತಿದ್ದೀರಿ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَئِفْكًا ءَالِهَةً دُونَ ٱللَّهِ تُرِيدُونَ
Kannada Translation - Hamza Butur ನೀವು ಅಲ್ಲಾಹನನ್ನು ಬಿಟ್ಟು ಮಿಥ್ಯ ದೇವರುಗಳನ್ನು ಬಯಸುತ್ತೀರಾ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَمَا ظَنُّكُم بِرَبِّ ٱلْعَٰلَمِينَ
Kannada Translation - Hamza Butur ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಬಗ್ಗೆ ನಿಮ್ಮ ಕಲ್ಪನೆಯೇನು?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَنَظَرَ نَظْرَةً فِى ٱلنُّجُومِ
Kannada Translation - Hamza Butur ನಂತರ ಅವರು ನಕ್ಷತ್ರಗಳ ಕಡೆಗೆ ಒಂದು ನೋಟವನ್ನು ಬೀರಿದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَقَالَ إِنِّى سَقِيمٌ
Kannada Translation - Hamza Butur ಅವರು ಹೇಳಿದರು: “ನಾನು ಅಸ್ವಸ್ಥನಾಗಿದ್ದೇನೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَتَوَلَّوْا۟ عَنْهُ مُدْبِرِينَ
Kannada Translation - Hamza Butur ಆಗ ಜನರು ಇಬ್ರಾಹೀಮರನ್ನು ಬಿಟ್ಟು ತಿರುಗಿ ನಡೆದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَرَاغَ إِلَىٰٓ ءَالِهَتِهِمْ فَقَالَ أَلَا تَأْكُلُونَ
Kannada Translation - Hamza Butur ಇಬ್ರಾಹೀಮ್ ಅವರ ದೇವರುಗಳ ಕಡೆಗೆ ತಿರುಗಿ ಕೇಳಿದರು: “ನೀವೇಕೆ ತಿನ್ನುವುದಿಲ್ಲ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مَا لَكُمْ لَا تَنطِقُونَ
Kannada Translation - Hamza Butur ನಿಮಗೇನಾಗಿದೆ? ನೀವೇಕೆ ಮಾತನಾಡುವುದಿಲ್ಲ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَرَاغَ عَلَيْهِمْ ضَرْبًۢا بِٱلْيَمِينِ
Kannada Translation - Hamza Butur ನಂತರ ಅವರು ಅವುಗಳ ಕಡೆಗೆ ತಿರುಗಿ ಬಲಗೈಯಿಂದ ಬಲವಾದ ಏಟು ಕೊಟ್ಟರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَقْبَلُوٓا۟ إِلَيْهِ يَزِفُّونَ
Kannada Translation - Hamza Butur ಜನರು ಅವರ ಬಳಿಗೆ ಓಡೋಡಿ ಬಂದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ أَتَعْبُدُونَ مَا تَنْحِتُونَ
Kannada Translation - Hamza Butur ಇಬ್ರಾಹೀಮ್ ಕೇಳಿದರು: “ನೀವೇ ಸ್ವತಃ ಕಡೆದು ನಿರ್ಮಿಸಿದ್ದನ್ನು ನೀವು ಆರಾಧಿಸುತ್ತಿದ್ದೀರಾ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱللَّهُ خَلَقَكُمْ وَمَا تَعْمَلُونَ
Kannada Translation - Hamza Butur ವಾಸ್ತವವಾಗಿ, ಅಲ್ಲಾಹನೇ ನಿಮ್ಮನ್ನು ಮತ್ತು ನೀವು ನಿರ್ಮಿಸುವುದನ್ನು ಸೃಷ್ಟಿಸಿದವನು.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالُوا۟ ٱبْنُوا۟ لَهُۥ بُنْيَٰنًا فَأَلْقُوهُ فِى ٱلْجَحِيمِ
Kannada Translation - Hamza Butur ಜನರು ಹೇಳಿದರು: “ನೀವು ಅವನಿಗೆ ಒಂದು ದೊಡ್ಡ ಅಗ್ನಿಕುಂಡವನ್ನು ನಿರ್ಮಿಸಿ, ಅವನನ್ನು ಜ್ವಲಿಸುವ ಅಗ್ನಿಗೆ ಎಸೆಯಿರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَرَادُوا۟ بِهِۦ كَيْدًا فَجَعَلْنَٰهُمُ ٱلْأَسْفَلِينَ
Kannada Translation - Hamza Butur ಅವರು ಇಬ್ರಾಹೀಮರನ್ನು ಕುತಂತ್ರದಿಂದ ನಾಶ ಮಾಡಲು ಬಯಸಿದ್ದರು. ಆದರೆ ನಾವು ಅವರನ್ನು ಅತ್ಯಂತ ಅಧಮರನ್ನಾಗಿ ಮಾಡಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَقَالَ إِنِّى ذَاهِبٌ إِلَىٰ رَبِّى سَيَهْدِينِ
Kannada Translation - Hamza Butur ಇಬ್ರಾಹೀಮ್ ಹೇಳಿದರು: “ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ತೆರಳುತ್ತೇನೆ. ಅವನು ನನಗೆ ದಾರಿ ತೋರಿಸುವನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
رَبِّ هَبْ لِى مِنَ ٱلصَّٰلِحِينَ
Kannada Translation - Hamza Butur ನನ್ನ ಪರಿಪಾಲಕನೇ! ನನಗೆ ನೀತಿವಂತರಲ್ಲಿ ಸೇರಿದ ಮಗುವನ್ನು ಕರುಣಿಸು.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَبَشَّرْنَٰهُ بِغُلَٰمٍ حَلِيمٍ
Kannada Translation - Hamza Butur ಆಗ ನಾವು ಅವರಿಗೆ ಸಹಿಷ್ಣುತೆಯುಳ್ಳ ಮಗು ಜನಿಸುವ ಬಗ್ಗೆ ಸುವಾರ್ತೆಯನ್ನು ತಿಳಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَلَمَّا بَلَغَ مَعَهُ ٱلسَّعْىَ قَالَ يَٰبُنَىَّ إِنِّىٓ أَرَىٰ فِى ٱلْمَنَامِ أَنِّىٓ أَذْبَحُكَ فَٱنظُرْ مَاذَا تَرَىٰ قَالَ يَٰٓأَبَتِ ٱفْعَلْ مَا تُؤْمَرُ سَتَجِدُنِىٓ إِن شَآءَ ٱللَّهُ مِنَ ٱلصَّٰبِرِينَ
Kannada Translation - Hamza Butur ನಂತರ ಅವನು (ಮಗು) ತಂದೆಯೊಂದಿಗೆ ಓಡಾಡುವ ಪ್ರಾಯಕ್ಕೆ ತಲುಪಿದಾಗ ಅವರು (ಇಬ್ರಾಹೀಂ) ಹೇಳಿದರು: “ಮಗೂ! ನಾನು ನಿನ್ನ ಕತ್ತು ಕೊಯ್ಯುತ್ತಿರುವಂತೆ ಕನಸು ಕಾಣುತ್ತಿದ್ದೇನೆ. ನಿನ್ನ ಅಭಿಪ್ರಾಯವೇನೆಂದು ಹೇಳು?” ಮಗ ಹೇಳಿದನು: “ಅಪ್ಪಾ! ನಿಮಗೆ ಆಜ್ಞಾಪಿಸಲಾಗಿರುವುದನ್ನು ನಿರ್ವಹಿಸಿರಿ. ಅಲ್ಲಾಹು ಬಯಸಿದರೆ ನಿಶ್ಚಯವಾಗಿಯೂ ನೀವು ನನ್ನನ್ನು ತಾಳ್ಮೆ ವಹಿಸುವವರಲ್ಲಿ ಕಾಣುವಿರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَلَمَّآ أَسْلَمَا وَتَلَّهُۥ لِلْجَبِينِ
Kannada Translation - Hamza Butur ನಂತರ ಅವರಿಬ್ಬರೂ (ಅಲ್ಲಾಹನ ಆಜ್ಞೆಗೆ) ಶರಣಾಗಿ, ಅವರು ಮಗನನ್ನು ಹಣೆಯ ಮೇಲೆ ಮಲಗಿಸಿದಾಗ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَنَٰدَيْنَٰهُ أَن يَٰٓإِبْرَٰهِيمُ
Kannada Translation - Hamza Butur ನಾವು ಅವರನ್ನು ಕರೆದು ಹೇಳಿದೆವು: “ಓ ಇಬ್ರಾಹೀಮ್!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَدْ صَدَّقْتَ ٱلرُّءْيَآ إِنَّا كَذَٰلِكَ نَجْزِى ٱلْمُحْسِنِينَ
Kannada Translation - Hamza Butur ನಿಶ್ಚಯವಾಗಿಯೂ ನೀವು ಕನಸನ್ನು ನಿಜಪಡಿಸಿದ್ದೀರಿ.” ನಿಶ್ಚಯವಾಗಿಯೂ ನಾವು ನೀತಿವಂತರಿಗೆ ಈ ರೀತಿ ಪ್ರತಿಫಲವನ್ನು ನೀಡುತ್ತೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ هَٰذَا لَهُوَ ٱلْبَلَٰٓؤُا۟ ٱلْمُبِينُ
Kannada Translation - Hamza Butur ನಿಶ್ಚಯವಾಗಿಯೂ ಇದು ಸ್ಪಷ್ಟ ಪರೀಕ್ಷೆಯಾಗಿತ್ತು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَفَدَيْنَٰهُ بِذِبْحٍ عَظِيمٍ
Kannada Translation - Hamza Butur ನಾವು ಅವರ (ಮಗನ) ಬದಲಿಗೆ ಬಲಿ ನೀಡಲು ಒಂದು ಮಹಾ ಬಲಿಮೃಗವನ್ನು ನೀಡಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَتَرَكْنَا عَلَيْهِ فِى ٱلْـَٔاخِرِينَ
Kannada Translation - Hamza Butur ನಾವು ಅವರ (ಇಬ್ರಾಹೀಮರ) ಕೀರ್ತಿಯನ್ನು ಅವರ ನಂತರದವರಲ್ಲಿ ಉಳಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
سَلَٰمٌ عَلَىٰٓ إِبْرَٰهِيمَ
Kannada Translation - Hamza Butur ಇಬ್ರಾಹೀಮರ ಮೇಲೆ ಶಾಂತಿಯಿರಲಿ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَذَٰلِكَ نَجْزِى ٱلْمُحْسِنِينَ
Kannada Translation - Hamza Butur ನಾವು ನೀತಿವಂತರಿಗೆ ಈ ರೀತಿ ಪ್ರತಿಫಲವನ್ನು ನೀಡುತ್ತೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّهُۥ مِنْ عِبَادِنَا ٱلْمُؤْمِنِينَ
Kannada Translation - Hamza Butur ನಿಶ್ಚಯವಾಗಿಯೂ ಅವರು ನಮ್ಮ ಸತ್ಯವಿಶ್ವಾಸಿ ದಾಸರಲ್ಲಿ ಸೇರಿದವರಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَبَشَّرْنَٰهُ بِإِسْحَٰقَ نَبِيًّا مِّنَ ٱلصَّٰلِحِينَ
Kannada Translation - Hamza Butur ನಾವು ಅವರಿಗೆ ಇಸ್‍ಹಾಕರ ಜನನದ ಬಗ್ಗೆ ಸುವಾರ್ತೆಯನ್ನು ತಿಳಿಸಿದೆವು. ಅವರು ಸಜ್ಜನರಲ್ಲಿ ಸೇರಿದ ಒಬ್ಬ ಪ್ರವಾದಿಯಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَبَٰرَكْنَا عَلَيْهِ وَعَلَىٰٓ إِسْحَٰقَ وَمِن ذُرِّيَّتِهِمَا مُحْسِنٌ وَظَالِمٌ لِّنَفْسِهِۦ مُبِينٌ
Kannada Translation - Hamza Butur ನಾವು ಅವರಿಗೆ ಮತ್ತು ಇಸ್‍ಹಾಕರಿಗೆ ಸಮೃದ್ಧಿಯನ್ನು ದಯಪಾಲಿಸಿದೆವು. ಅವರಿಬ್ಬರ ಸಂತಾನದಲ್ಲಿ ಒಳಿತು ಮಾಡುವವರಿದ್ದಾರೆ. ಸ್ವತಃ ಅವರೊಡನೆಯೇ ಸ್ಪಷ್ಟವಾಗಿ ಅಕ್ರಮವೆಸಗುವವರೂ ಇದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ مَنَنَّا عَلَىٰ مُوسَىٰ وَهَٰرُونَ
Kannada Translation - Hamza Butur ನಿಶ್ಚಯವಾಗಿಯೂ ನಾವು ಮೂಸಾ ಮತ್ತು ಹಾರೂನರಿಗೆ ಉಪಕಾರ ಮಾಡಿದ್ದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَنَجَّيْنَٰهُمَا وَقَوْمَهُمَا مِنَ ٱلْكَرْبِ ٱلْعَظِيمِ
Kannada Translation - Hamza Butur ನಾವು ಅವರನ್ನು ಮತ್ತು ಅವರ ಜನರನ್ನು ಮಹಾ ದುರಂತದಿಂದ ರಕ್ಷಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَنَصَرْنَٰهُمْ فَكَانُوا۟ هُمُ ٱلْغَٰلِبِينَ
Kannada Translation - Hamza Butur ನಾವು ಅವರಿಗೆ ಸಹಾಯ ಮಾಡಿದೆವು. ಆಗ ಅವರೇ ವಿಜಯಿಗಳಾದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَءَاتَيْنَٰهُمَا ٱلْكِتَٰبَ ٱلْمُسْتَبِينَ
Kannada Translation - Hamza Butur ನಾವು ಅವರಿಗೆ (ವಿಷಯಗಳನ್ನು) ಸ್ಪಷ್ಟಪಡಿಸುವ ಗ್ರಂಥವನ್ನು ನೀಡಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَهَدَيْنَٰهُمَا ٱلصِّرَٰطَ ٱلْمُسْتَقِيمَ
Kannada Translation - Hamza Butur ನಾವು ಅವರನ್ನು ನೇರ ಮಾರ್ಗದಲ್ಲಿ ದೃಢವಾಗಿ ನಿಲ್ಲಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَتَرَكْنَا عَلَيْهِمَا فِى ٱلْـَٔاخِرِينَ
Kannada Translation - Hamza Butur ನಾವು ಅವರ ಕೀರ್ತಿಯನ್ನು ನಂತರದ ತಲೆಮಾರುಗಳಲ್ಲಿ ಉಳಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
سَلَٰمٌ عَلَىٰ مُوسَىٰ وَهَٰرُونَ
Kannada Translation - Hamza Butur ಮೂಸಾ ಮತ್ತು ಹಾರೂನರ ಮೇಲೆ ಶಾಂತಿಯಿರಲಿ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّا كَذَٰلِكَ نَجْزِى ٱلْمُحْسِنِينَ
Kannada Translation - Hamza Butur ನಿಶ್ಚಯವಾಗಿಯೂ ನಾವು ನೀತಿವಂತರಿಗೆ ಈ ರೀತಿ ಪ್ರತಿಫಲವನ್ನು ನೀಡುತ್ತೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّهُمَا مِنْ عِبَادِنَا ٱلْمُؤْمِنِينَ
Kannada Translation - Hamza Butur ನಿಶ್ಚಯವಾಗಿಯೂ ಅವರಿಬ್ಬರು ನಮ್ಮ ಸತ್ಯವಿಶ್ವಾಸಿ ದಾಸರಲ್ಲಿ ಸೇರಿದವರಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّ إِلْيَاسَ لَمِنَ ٱلْمُرْسَلِينَ
Kannada Translation - Hamza Butur ನಿಶ್ಚಯವಾಗಿಯೂ ಇಲ್ಯಾಸ್ ಪ್ರವಾದಿಗಳಲ್ಲಿ ಒಬ್ಬರಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِذْ قَالَ لِقَوْمِهِۦٓ أَلَا تَتَّقُونَ
Kannada Translation - Hamza Butur ಅವರು ತಮ್ಮ ಜನರೊಡನೆ ಹೇಳಿದ ಸಂದರ್ಭ: “ನೀವು ಅಲ್ಲಾಹನನ್ನು ಭಯಪಡುವುದಿಲ್ಲವೇ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَتَدْعُونَ بَعْلًا وَتَذَرُونَ أَحْسَنَ ٱلْخَٰلِقِينَ
Kannada Translation - Hamza Butur ನೀವು ಬಾಲ್ (ವಿಗ್ರಹವನ್ನು) ಕರೆದು ಪ್ರಾರ್ಥಿಸುತ್ತೀರಾ? ಮತ್ತು ಅತ್ಯುತ್ತಮ ಸೃಷ್ಟಿಕರ್ತನನ್ನು ತೊರೆಯುತ್ತೀರಾ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ٱللَّهَ رَبَّكُمْ وَرَبَّ ءَابَآئِكُمُ ٱلْأَوَّلِينَ
Kannada Translation - Hamza Butur ಅಂದರೆ ನಿಮ್ಮ ಮತ್ತು ನಿಮ್ಮ ಪೂರ್ವಜರ ಪರಿಪಾಲಕನಾದ ಅಲ್ಲಾಹನನ್ನು?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَكَذَّبُوهُ فَإِنَّهُمْ لَمُحْضَرُونَ
Kannada Translation - Hamza Butur ಆದರೆ ಅವರು ಅವರನ್ನು ನಿಷೇಧಿಸಿದರು. ನಿಶ್ಚಯವಾಗಿಯೂ ಅವರನ್ನು (ಶಿಕ್ಷೆಗೆ) ಹಾಜರುಪಡಿಸಲಾಗುವುದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا عِبَادَ ٱللَّهِ ٱلْمُخْلَصِينَ
Kannada Translation - Hamza Butur ಅಲ್ಲಾಹನ ನಿಷ್ಕಳಂಕ ದಾಸರು ಇದಕ್ಕೆ ಹೊರತಾಗಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَتَرَكْنَا عَلَيْهِ فِى ٱلْـَٔاخِرِينَ
Kannada Translation - Hamza Butur ನಂತರದ ತಲೆಮಾರುಗಳಲ್ಲಿ ನಾವು ಅವರ ಕೀರ್ತಿಯನ್ನು ಉಳಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
سَلَٰمٌ عَلَىٰٓ إِلْ يَاسِينَ
Kannada Translation - Hamza Butur ಇಲ್ಯಾಸರ ಮೇಲೆ ಶಾಂತಿಯಿರಲಿ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّا كَذَٰلِكَ نَجْزِى ٱلْمُحْسِنِينَ
Kannada Translation - Hamza Butur ನಿಶ್ಚಯವಾಗಿಯೂ ನಾವು ನೀತಿವಂತರಿಗೆ ಈ ರೀತಿ ಪ್ರತಿಫಲವನ್ನು ನೀಡುತ್ತೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّهُۥ مِنْ عِبَادِنَا ٱلْمُؤْمِنِينَ
Kannada Translation - Hamza Butur ನಿಶ್ಚಯವಾಗಿಯೂ ಅವರು ನಮ್ಮ ಸತ್ಯವಿಶ್ವಾಸಿ ದಾಸರಲ್ಲಿ ಸೇರಿದವರಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّ لُوطًا لَّمِنَ ٱلْمُرْسَلِينَ
Kannada Translation - Hamza Butur ನಿಶ್ಚಯವಾಗಿಯೂ ಲೂತ್ ಸಂದೇಶವಾಹಕರಲ್ಲಿ ಸೇರಿದವರಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِذْ نَجَّيْنَٰهُ وَأَهْلَهُۥٓ أَجْمَعِينَ
Kannada Translation - Hamza Butur ನಾವು ಅವರನ್ನು ಮತ್ತು ಅವರ ಕುಟುಂಬವನ್ನು ಸಂಪೂರ್ಣವಾಗಿ ರಕ್ಷಿಸಿದ ಸಂದರ್ಭ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا عَجُوزًا فِى ٱلْغَٰبِرِينَ
Kannada Translation - Hamza Butur ಹಿಂದೆ ಉಳಿದವರಲ್ಲಿ ಸೇರಿದ ಒಬ್ಬ ವೃದ್ಧೆಯ ಹೊರತು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ثُمَّ دَمَّرْنَا ٱلْـَٔاخَرِينَ
Kannada Translation - Hamza Butur ನಂತರ ಇತರರನ್ನು ನಾವು ನಾಶ ಮಾಡಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّكُمْ لَتَمُرُّونَ عَلَيْهِم مُّصْبِحِينَ
Kannada Translation - Hamza Butur ನೀವು ಬೆಳಗಾಗುವಾಗ ಅವರ ಊರುಗಳ ಬಳಿಯಿಂದ ಸಾಗುತ್ತೀರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَبِٱلَّيْلِ أَفَلَا تَعْقِلُونَ
Kannada Translation - Hamza Butur ರಾತ್ರಿ ಕೂಡ. ಆದರೂ ನೀವು ಆಲೋಚಿಸುವುದಿಲ್ಲವೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّ يُونُسَ لَمِنَ ٱلْمُرْسَلِينَ
Kannada Translation - Hamza Butur ನಿಶ್ಚಯವಾಗಿಯೂ ಯೂನುಸ್ ಸಂದೇಶವಾಹಕರಲ್ಲಿ ಸೇರಿದವರಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِذْ أَبَقَ إِلَى ٱلْفُلْكِ ٱلْمَشْحُونِ
Kannada Translation - Hamza Butur ಅವರು ತುಂಬಿ ತುಳುಕುವ ನಾವೆಯ ಬಳಿಗೆ ಪಲಾಯನ ಮಾಡಿದ ಸಂದರ್ಭ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَسَاهَمَ فَكَانَ مِنَ ٱلْمُدْحَضِينَ
Kannada Translation - Hamza Butur ನಂತರ ಅಲ್ಲಿ ಚೀಟಿಯೆತ್ತಲಾದಾಗ ಅವರು ಪರಾಜಿತರಾದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱلْتَقَمَهُ ٱلْحُوتُ وَهُوَ مُلِيمٌ
Kannada Translation - Hamza Butur ನಂತರ ಅವರು ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದಾಗ ಮೀನು ಅವರನ್ನು ನುಂಗಿತು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَلَوْلَآ أَنَّهُۥ كَانَ مِنَ ٱلْمُسَبِّحِينَ
Kannada Translation - Hamza Butur ಆದರೆ ಅವರು ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುವವರಲ್ಲಿ ಸೇರದಿರುತ್ತಿದ್ದರೆ
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَلَبِثَ فِى بَطْنِهِۦٓ إِلَىٰ يَوْمِ يُبْعَثُونَ
Kannada Translation - Hamza Butur ಜನರಿಗೆ ಜೀವ ನೀಡಿ ಎಬ್ಬಿಸಲಾಗುವ ದಿನದವರೆಗೂ ಅವರು ಅದರ ಹೊಟ್ಟೆಯಲ್ಲೇ ಉಳಿಯುತ್ತಿದ್ದರು!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَنَبَذْنَٰهُ بِٱلْعَرَآءِ وَهُوَ سَقِيمٌ
Kannada Translation - Hamza Butur ನಂತರ ನಾವು ಅವರನ್ನು ಬಯಲು ಪ್ರದೇಶಕ್ಕೆ ಎಸೆದೆವು. ಆಗ ಅವರು ಅಸ್ವಸ್ಥರಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَنۢبَتْنَا عَلَيْهِ شَجَرَةً مِّن يَقْطِينٍ
Kannada Translation - Hamza Butur ನಾವು ಅವರಿಗೆ (ನೆರಳು ನೀಡುವ) ಸೋರೆ ಬಳ್ಳಿಯ ಮರವನ್ನು ಬೆಳೆಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَرْسَلْنَٰهُ إِلَىٰ مِا۟ئَةِ أَلْفٍ أَوْ يَزِيدُونَ
Kannada Translation - Hamza Butur ನಾವು ಅವರನ್ನು ಒಂದು ಲಕ್ಷ ಅಥವಾ ಅದಕ್ಕಿಂತಲೂ ಹೆಚ್ಚಿನ ಜನರ ಬಳಿಗೆ ಕಳುಹಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَـَٔامَنُوا۟ فَمَتَّعْنَٰهُمْ إِلَىٰ حِينٍ
Kannada Translation - Hamza Butur ಅವರು (ಆ ಜನರು) ವಿಶ್ವಾಸವಿಟ್ಟರು. ಆದ್ದರಿಂದ ನಾವು ಅವರಿಗೆ ಒಂದು ಕಾಲದವರೆಗೆ ಸುಖ ಜೀವನವನ್ನು ಒದಗಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱسْتَفْتِهِمْ أَلِرَبِّكَ ٱلْبَنَاتُ وَلَهُمُ ٱلْبَنُونَ
Kannada Translation - Hamza Butur (ಓ ಪ್ರವಾದಿಯವರೇ!) ಅವರೊಂದಿಗೆ ಕೇಳಿರಿ: “ನಿಮ್ಮ ಪರಿಪಾಲಕನಿಗೆ ಹೆಣ್ಣು ಮಕ್ಕಳು ಮತ್ತು ಅವರಿಗೆ ಗಂಡುಮಕ್ಕಳೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ خَلَقْنَا ٱلْمَلَٰٓئِكَةَ إِنَٰثًا وَهُمْ شَٰهِدُونَ
Kannada Translation - Hamza Butur ಅಥವಾ ನಾವು ದೇವದೂತರುಗಳನ್ನು ಸ್ತ್ರೀಯರನ್ನಾಗಿ ಸೃಷ್ಟಿಸುವಾಗ ಅವರು ಅಲ್ಲಿ ಉಪಸ್ಥಿತರಿದ್ದರೇ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَلَآ إِنَّهُم مِّنْ إِفْكِهِمْ لَيَقُولُونَ
Kannada Translation - Hamza Butur ತಿಳಿಯಿರಿ! ಅವರು ಕೇವಲ ಸುಳ್ಳನ್ನು ಕಲ್ಪಿಸಿ ಹೇಳುತ್ತಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَدَ ٱللَّهُ وَإِنَّهُمْ لَكَٰذِبُونَ
Kannada Translation - Hamza Butur ಅಲ್ಲಾಹನಿಗೆ ಮಕ್ಕಳಿದ್ದಾರೆಂದು. ನಿಶ್ಚಯವಾಗಿಯೂ ಅವರು ಸುಳ್ಳು ಹೇಳುವವರಾಗಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَصْطَفَى ٱلْبَنَاتِ عَلَى ٱلْبَنِينَ
Kannada Translation - Hamza Butur ಅಲ್ಲಾಹು ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳಿಗೆ ಪ್ರಾಶಸ್ತ್ಯ ನೀಡಿದನೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مَا لَكُمْ كَيْفَ تَحْكُمُونَ
Kannada Translation - Hamza Butur ನಿಮಗೇನಾಗಿದೆ? ನೀವು ಹೇಗೆ ತೀರ್ಪು ನೀಡುತ್ತಿದ್ದೀರಿ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَفَلَا تَذَكَّرُونَ
Kannada Translation - Hamza Butur ನೀವು ಆಲೋಚಿಸುವುದಿಲ್ಲವೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ لَكُمْ سُلْطَٰنٌ مُّبِينٌ
Kannada Translation - Hamza Butur ಇದಕ್ಕೆ ನಿಮ್ಮ ಬಳಿ ಯಾವುದಾದರೂ ಸ್ಪಷ್ಟ ಸಾಕ್ಷ್ಯಾಧಾರವಿದೆಯೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأْتُوا۟ بِكِتَٰبِكُمْ إِن كُنتُمْ صَٰدِقِينَ
Kannada Translation - Hamza Butur ಹಾಗಿದ್ದರೆ ನೀವು ನಿಮ್ಮ ಗ್ರಂಥವನ್ನು ತನ್ನಿರಿ. ನೀವು ಸತ್ಯವಂತರಾಗಿದ್ದರೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَجَعَلُوا۟ بَيْنَهُۥ وَبَيْنَ ٱلْجِنَّةِ نَسَبًا وَلَقَدْ عَلِمَتِ ٱلْجِنَّةُ إِنَّهُمْ لَمُحْضَرُونَ
Kannada Translation - Hamza Butur ಅವರು ಅವನ (ಅಲ್ಲಾಹನ) ಮತ್ತು ಜಿನ್ನ್‌ಗಳ ಮಧ್ಯೆ ಕುಟುಂಬ ಸಂಬಂಧವನ್ನು ಸ್ಥಾಪಿಸಿದ್ದರು. ಆದರೆ (ಇಂತಹ ನಂಬಿಕೆಯಿರುವ ಜನರನ್ನು) ನಿಶ್ಚಯವಾಗಿಯೂ ಶಿಕ್ಷೆಗೆ ಹಾಜರುಪಡಿಸಲಾಗುವುದೆಂದು ಜಿನ್ನ್‌ಗಳಿಗೆ ತಿಳಿದಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
سُبْحَٰنَ ٱللَّهِ عَمَّا يَصِفُونَ
Kannada Translation - Hamza Butur ಅವರು (ಅಲ್ಲಾಹನ ಬಗ್ಗೆ) ವರ್ಣಿಸಿ ಹೇಳುವ ಇಂತಹ ಸುಳ್ಳುಗಳಿಂದ ಅಲ್ಲಾಹು ಎಷ್ಟೋ ಪರಿಶುದ್ಧನಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا عِبَادَ ٱللَّهِ ٱلْمُخْلَصِينَ
Kannada Translation - Hamza Butur ಆದರೆ ಅಲ್ಲಾಹನ ನಿಷ್ಕಳಂಕ ದಾಸರು (ಇದರಿಂದ) ಹೊರತಾಗಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَإِنَّكُمْ وَمَا تَعْبُدُونَ
Kannada Translation - Hamza Butur ನಿಶ್ಚಯವಾಗಿಯೂ ನೀವು ಮತ್ತು ನೀವು ಆರಾಧಿಸುತ್ತಿರುವ ದೇವರುಗಳು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مَآ أَنتُمْ عَلَيْهِ بِفَٰتِنِينَ
Kannada Translation - Hamza Butur ಯಾರನ್ನೂ ಅವನಿಂದ (ಅಲ್ಲಾಹನಿಂದ) ತಪ್ಪಿಸಿಬಿಡಲು ನಿಮಗೆ ಸಾಧ್ಯವಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا مَنْ هُوَ صَالِ ٱلْجَحِيمِ
Kannada Translation - Hamza Butur ನರಕವಾಸಿಯಾಗುವವನ ಹೊರತು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمَا مِنَّآ إِلَّا لَهُۥ مَقَامٌ مَّعْلُومٌ
Kannada Translation - Hamza Butur (ದೇವದೂತರುಗಳು ಹೇಳುತ್ತಾರೆ): “ನಮ್ಮಲ್ಲಿ ಪ್ರತಿಯೊಬ್ಬರಿಗೂ ಒಂದು ನಿಶ್ಚಿತ ಸ್ಥಾನವಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّا لَنَحْنُ ٱلصَّآفُّونَ
Kannada Translation - Hamza Butur ನಿಶ್ಚಯವಾಗಿಯೂ ನಾವು (ಅಲ್ಲಾಹನನ್ನು ಆರಾಧಿಸಲು) ಸಾಲುಗಟ್ಟಿ ನಿಲ್ಲುತ್ತೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّا لَنَحْنُ ٱلْمُسَبِّحُونَ
Kannada Translation - Hamza Butur ನಿಶ್ಚಯವಾಗಿಯೂ ನಾವು (ಅಲ್ಲಾಹನ) ಪರಿಶುದ್ಧಿಯನ್ನು ಕೊಂಡಾಡುವವರಾಗಿದ್ದೇವೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِن كَانُوا۟ لَيَقُولُونَ
Kannada Translation - Hamza Butur ನಿಶ್ಚಯವಾಗಿಯೂ ಅವರು (ಸತ್ಯನಿಷೇಧಿಗಳು) ಹೇಳುತ್ತಿದ್ದರು:
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَوْ أَنَّ عِندَنَا ذِكْرًا مِّنَ ٱلْأَوَّلِينَ
Kannada Translation - Hamza Butur “ನಮ್ಮ ಬಳಿ ಪೂರ್ವಜರ ಯಾವುದಾದರೂ ಉಪದೇಶವು ಇರುತ್ತಿದ್ದರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَكُنَّا عِبَادَ ٱللَّهِ ٱلْمُخْلَصِينَ
Kannada Translation - Hamza Butur ನಾವು ಕೂಡ ಅಲ್ಲಾಹನ ನಿಷ್ಕಳಂಕ ದಾಸರಾಗಿರುತ್ತಿದ್ದೆವು.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَكَفَرُوا۟ بِهِۦ فَسَوْفَ يَعْلَمُونَ
Kannada Translation - Hamza Butur ಆದರೂ ಅವರು ಅದನ್ನು (ಪವಿತ್ರ ಕುರ್‌ಆನನ್ನು) ನಿಷೇಧಿಸಿದರು. ಆದ್ದರಿಂದ ಸದ್ಯವೇ ಅವರು ತಿಳಿಯುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ سَبَقَتْ كَلِمَتُنَا لِعِبَادِنَا ٱلْمُرْسَلِينَ
Kannada Translation - Hamza Butur ನಮ್ಮ ವಾಗ್ದಾನವು ಸಂದೇಶವಾಹಕರುಗಳಾದ ನಮ್ಮ ದಾಸರಿಗೆ ಈಗಾಗಲೇ ಜಾರಿಯಾಗಿಬಿಟ್ಟಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّهُمْ لَهُمُ ٱلْمَنصُورُونَ
Kannada Translation - Hamza Butur (ಅದೇನೆಂದರೆ) ನಿಶ್ಚಯವಾಗಿಯೂ ಅವರಿಗೇ ಸಹಾಯ ಮಾಡಲಾಗುವುದೆಂದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّ جُندَنَا لَهُمُ ٱلْغَٰلِبُونَ
Kannada Translation - Hamza Butur ನಿಶ್ಚಯವಾಗಿಯೂ ನಮ್ಮ ಸೈನ್ಯವೇ ವಿಜಯಿಯಾಗುವುದೆಂದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَتَوَلَّ عَنْهُمْ حَتَّىٰ حِينٍ
Kannada Translation - Hamza Butur ಆದ್ದರಿಂದ ನೀವು ಕೆಲವು ದಿನಗಳ ತನಕ ಅವರಿಂದ ವಿಮುಖರಾಗಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَبْصِرْهُمْ فَسَوْفَ يُبْصِرُونَ
Kannada Translation - Hamza Butur ಅವರನ್ನು ವೀಕ್ಷಿಸುತ್ತಿರಿ. ಅವರು ಕೂಡ ಮುಂದೆ (ಏನಾಗುವುದೆಂದು) ನೋಡುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَفَبِعَذَابِنَا يَسْتَعْجِلُونَ
Kannada Translation - Hamza Butur ಅವರು ನಮ್ಮ ಶಿಕ್ಷೆಗಾಗಿ ತ್ವರೆ ಮಾಡುತ್ತಿದ್ದಾರೆಯೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَإِذَا نَزَلَ بِسَاحَتِهِمْ فَسَآءَ صَبَاحُ ٱلْمُنذَرِينَ
Kannada Translation - Hamza Butur ಆದರೆ ನಮ್ಮ ಶಿಕ್ಷೆಯು ಅವರ ಅಂಗಳದಲ್ಲಿ ಇಳಿಯುವಾಗ ಮುನ್ನೆಚ್ಚರಿಕೆ ನೀಡಲಾದವರ ಮುಂಜಾನೆಯು ಬಹಳ ನಿಕೃಷ್ಟವಾಗಿರುವುದು!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَتَوَلَّ عَنْهُمْ حَتَّىٰ حِينٍ
Kannada Translation - Hamza Butur ಆದ್ದರಿಂದ ನೀವು ಕೆಲವು ದಿನಗಳ ತನಕ ಅವರಿಂದ ವಿಮುಖರಾಗಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَبْصِرْ فَسَوْفَ يُبْصِرُونَ
Kannada Translation - Hamza Butur ಅವರನ್ನು ವೀಕ್ಷಿಸುತ್ತಿರಿ. ಅವರು ಕೂಡ ಮುಂದೆ (ಏನಾಗುವುದೆಂದು) ನೋಡುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
سُبْحَٰنَ رَبِّكَ رَبِّ ٱلْعِزَّةِ عَمَّا يَصِفُونَ
Kannada Translation - Hamza Butur ಮಹಾ ಪ್ರತಿಷ್ಠೆಯ ಒಡೆಯನಾದ ನಿಮ್ಮ ಪರಿಪಾಲಕನು (ಅಲ್ಲಾಹು) ಅವರು ವರ್ಣಿಸುವ ಎಲ್ಲಾ ಸುಳ್ಳುಗಳಿಂದ ಎಷ್ಟೋ ಪರಿಶುದ್ಧನಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَسَلَٰمٌ عَلَى ٱلْمُرْسَلِينَ
Kannada Translation - Hamza Butur ಸಂದೇಶವಾಹಕರುಗಳ ಮೇಲೆ ಶಾಂತಿಯಿರಲಿ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱلْحَمْدُ لِلَّهِ رَبِّ ٱلْعَٰلَمِينَ
Kannada Translation - Hamza Butur ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಗೆ ಸರ್ವಸ್ತುತಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
← ಸೂರ Yaseen
ಸೂರ Saad →
Looking for a topic? Try the meaning search — your question is scanned across all 6,236 verses.
→
Arabic text and translations via Tanzil and QuranEnc — verbatim, unmodified · Translations belong to their translators and are not the Qur'an itself
ಇದು ಸಂಶೋಧನಾ ಸಹಾಯಕ; ಧಾರ್ಮಿಕ ತೀರ್ಪಿನ ಮೂಲವಲ್ಲ.