caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Az-Zumar الزمر

75 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 59

بِسْمِ ٱللَّهِ ٱلرَّحْمَٰنِ ٱلرَّحِيمِ تَنزِيلُ ٱلْكِتَٰبِ مِنَ ٱللَّهِ ٱلْعَزِيزِ ٱلْحَكِيمِ

Kannada Translation - Hamza Buturಈ ಗ್ರಂಥವು ಪ್ರಬಲನು ಮತ್ತು ವಿವೇಕಪೂರ್ಣನಾದ ಅಲ್ಲಾಹನಿಂದ ಅವತೀರ್ಣವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّآ أَنزَلْنَآ إِلَيْكَ ٱلْكِتَٰبَ بِٱلْحَقِّ فَٱعْبُدِ ٱللَّهَ مُخْلِصًا لَّهُ ٱلدِّينَ

Kannada Translation - Hamza Buturನಿಶ್ಚಯವಾಗಿಯೂ ನಾವು ಈ ಗ್ರಂಥವನ್ನು ನಿಮಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಆರಾಧಿಸಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَلَا لِلَّهِ ٱلدِّينُ ٱلْخَالِصُ وَٱلَّذِينَ ٱتَّخَذُوا۟ مِن دُونِهِۦٓ أَوْلِيَآءَ مَا نَعْبُدُهُمْ إِلَّا لِيُقَرِّبُونَآ إِلَى ٱللَّهِ زُلْفَىٰٓ إِنَّ ٱللَّهَ يَحْكُمُ بَيْنَهُمْ فِى مَا هُمْ فِيهِ يَخْتَلِفُونَ إِنَّ ٱللَّهَ لَا يَهْدِى مَنْ هُوَ كَٰذِبٌ كَفَّارٌ

Kannada Translation - Hamza Buturತಿಳಿಯಿರಿ! ನಿಷ್ಕಳಂಕವಾದ ಆರಾಧನೆಯು ಅಲ್ಲಾಹನಿಗೆ ಮಾತ್ರವಾಗಿರಬೇಕು. ಅಲ್ಲಾಹನನ್ನು ಬಿಟ್ಟು ಬೇರೆಯವರನ್ನು ರಕ್ಷಕರನ್ನಾಗಿ ಮಾಡಿಕೊಂಡವರು ಹೇಳುತ್ತಾರೆ: “ನಾವು ಅವರನ್ನು ಆರಾಧಿಸುವುದು ಅವರು ನಮ್ಮನ್ನು ಅಲ್ಲಾಹನಿಗೆ ಹತ್ತಿರಗೊಳಿಸುತ್ತಾರೆಂಬ ಕಾರಣದಿಂದಾಗಿದೆ.” ಅವರು ಯಾವ ವಿಷಯದಲ್ಲಿ ಭಿನ್ನಮತದಲ್ಲಿದ್ದಾರೋ ಆ ವಿಷಯದಲ್ಲಿ ನಿಶ್ಚಯವಾಗಿಯೂ ಅಲ್ಲಾಹು ಅವರ ಮಧ್ಯೆ ತೀರ್ಪು ನೀಡುವನು. ನಿಶ್ಚಯವಾಗಿಯೂ ಸುಳ್ಳು ಹೇಳುವ ಮತ್ತು ಕೃತಜ್ಞತಾಭಾವವಿಲ್ಲದ ಯಾರಿಗೂ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَّوْ أَرَادَ ٱللَّهُ أَن يَتَّخِذَ وَلَدًا لَّٱصْطَفَىٰ مِمَّا يَخْلُقُ مَا يَشَآءُ سُبْحَٰنَهُۥ هُوَ ٱللَّهُ ٱلْوَٰحِدُ ٱلْقَهَّارُ

Kannada Translation - Hamza Buturಮಕ್ಕಳಿರಬೇಕೆಂಬುದು ಅಲ್ಲಾಹನ ಉದ್ದೇಶವಾಗಿದ್ದರೆ ಅವನ ಸೃಷ್ಟಿಗಳಲ್ಲಿ ಅವನು ಇಚ್ಛಿಸುವ ಯಾರನ್ನಾದರೂ ಅವನು ಆರಿಸುತ್ತಿದ್ದನು. ಅವನು ಪರಿಶುದ್ಧನು! ಅವನು ಏಕೈಕನು ಮತ್ತು ಸರ್ವಾಧಿಕಾರಿಯಾದ ಅಲ್ಲಾಹನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

خَلَقَ ٱلسَّمَٰوَٰتِ وَٱلْأَرْضَ بِٱلْحَقِّ يُكَوِّرُ ٱلَّيْلَ عَلَى ٱلنَّهَارِ وَيُكَوِّرُ ٱلنَّهَارَ عَلَى ٱلَّيْلِ وَسَخَّرَ ٱلشَّمْسَ وَٱلْقَمَرَ كُلٌّ يَجْرِى لِأَجَلٍ مُّسَمًّى أَلَا هُوَ ٱلْعَزِيزُ ٱلْغَفَّٰرُ

Kannada Translation - Hamza Buturಅವನು ಭೂಮ್ಯಾಕಾಶಗಳನ್ನು ಸತ್ಯದೊಂದಿಗೆ ಸೃಷ್ಟಿಸಿದನು. ಅವನು ರಾತ್ರಿಯನ್ನು ಹಗಲಿನ ಮೇಲೆ ಸುತ್ತಿ ಹೊದಿಯುತ್ತಾನೆ ಮತ್ತು ಹಗಲನ್ನು ರಾತ್ರಿಯ ಮೇಲೆ ಸುತ್ತಿ ಹೊದಿಯುತ್ತಾನೆ. ಅವನು ಸೂರ್ಯ ಮತ್ತು ಚಂದ್ರನನ್ನು ಅಧೀನಗೊಳಿಸಿದ್ದಾನೆ. ಎಲ್ಲವೂ ಒಂದು ನಿಶ್ಚಿತ ಅವಧಿಯವರೆಗೆ ಚಲಿಸುತ್ತವೆ. ತಿಳಿಯಿರಿ! ಅವನು ಪ್ರಬಲನು ಮತ್ತು ಕ್ಷಮಿಸುವವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

خَلَقَكُم مِّن نَّفْسٍ وَٰحِدَةٍ ثُمَّ جَعَلَ مِنْهَا زَوْجَهَا وَأَنزَلَ لَكُم مِّنَ ٱلْأَنْعَٰمِ ثَمَٰنِيَةَ أَزْوَٰجٍ يَخْلُقُكُمْ فِى بُطُونِ أُمَّهَٰتِكُمْ خَلْقًا مِّنۢ بَعْدِ خَلْقٍ فِى ظُلُمَٰتٍ ثَلَٰثٍ ذَٰلِكُمُ ٱللَّهُ رَبُّكُمْ لَهُ ٱلْمُلْكُ لَآ إِلَٰهَ إِلَّا هُوَ فَأَنَّىٰ تُصْرَفُونَ

Kannada Translation - Hamza Buturಅವನು ನಿಮ್ಮನ್ನು ಒಂದೇ ದೇಹದಿಂದ ಸೃಷ್ಟಿಸಿದನು. ನಂತರ ಅದರಿಂದ ಅದರ ಸಂಗಾತಿಯನ್ನು ಉಂಟುಮಾಡಿದನು. ಅವನು ನಿಮಗೆ ಜಾನುವಾರುಗಳಲ್ಲಿ ಎಂಟು ಜೋಡಿಗಳನ್ನು ಇಳಿಸಿಕೊಟ್ಟನು. ಅವನು ನಿಮ್ಮನ್ನು ನಿಮ್ಮ ತಾಯಂದಿರ ಉದರಗಳಲ್ಲಿ ಮೂರು ರೀತಿಯ ಕತ್ತಲೆಗಳೊಳಗೆ ಒಂದು ಹಂತದ ಬಳಿಕ ಮತ್ತೊಂದು ಹಂತವಾಗಿ ಸೃಷ್ಟಿಸುತ್ತಾನೆ. ಅವನೇ ನಿಮ್ಮ ಪರಿಪಾಲಕನಾದ ಅಲ್ಲಾಹು. ಸಾರ್ವಭೌಮತ್ವವು ಅವನಿಗೆ ಸೇರಿದ್ದು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಆದರೂ ನೀವು (ಸತ್ಯದಿಂದ) ತಪ್ಪಿಹೋಗುವುದು ಹೇಗೆ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِن تَكْفُرُوا۟ فَإِنَّ ٱللَّهَ غَنِىٌّ عَنكُمْ وَلَا يَرْضَىٰ لِعِبَادِهِ ٱلْكُفْرَ وَإِن تَشْكُرُوا۟ يَرْضَهُ لَكُمْ وَلَا تَزِرُ وَازِرَةٌ وِزْرَ أُخْرَىٰ ثُمَّ إِلَىٰ رَبِّكُم مَّرْجِعُكُمْ فَيُنَبِّئُكُم بِمَا كُنتُمْ تَعْمَلُونَ إِنَّهُۥ عَلِيمٌۢ بِذَاتِ ٱلصُّدُورِ

Kannada Translation - Hamza Buturನೀವು ಕೃತಘ್ನತೆ ತೋರುವುದಾದರೆ ನಿಶ್ಚಯವಾಗಿಯೂ ಅಲ್ಲಾಹನಿಗೆ ನಿಮ್ಮ ಅಗತ್ಯವಿಲ್ಲ. ದಾಸರು ಕೃತಘ್ನರಾಗುವುದನ್ನು ಅವನು ಇಷ್ಟಪಡುವುದಿಲ್ಲ. ನೀವು ಕೃತಜ್ಞರಾಗುವುದಾದರೆ ಅವನು ಅದನ್ನು ನಿಮಗಾಗಿ ಇಷ್ಟಪಡುವನು. ಪಾಪಗಳ ಭಾರವನ್ನು ಹೊರುವವರು ಇತರರು ಮಾಡಿದ ಪಾಪಗಳ ಭಾರವನ್ನು ಹೊರುವುದಿಲ್ಲ. ನಂತರ ನಿಮ್ಮನ್ನು ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ನಿಮಗೆ ತಿಳಿಸಿಕೊಡುವನು. ನಿಶ್ಚಯವಾಗಿಯೂ ಅವನು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا مَسَّ ٱلْإِنسَٰنَ ضُرٌّ دَعَا رَبَّهُۥ مُنِيبًا إِلَيْهِ ثُمَّ إِذَا خَوَّلَهُۥ نِعْمَةً مِّنْهُ نَسِىَ مَا كَانَ يَدْعُوٓا۟ إِلَيْهِ مِن قَبْلُ وَجَعَلَ لِلَّهِ أَندَادًا لِّيُضِلَّ عَن سَبِيلِهِۦ قُلْ تَمَتَّعْ بِكُفْرِكَ قَلِيلًا إِنَّكَ مِنْ أَصْحَٰبِ ٱلنَّارِ

Kannada Translation - Hamza Buturಮನುಷ್ಯನಿಗೆ ಏನಾದರೂ ತೊಂದರೆಯುಂಟಾದರೆ ಅವನು ತನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ತಿರುಗಿ ಅವನನ್ನು ಕರೆದು ಪ್ರಾರ್ಥಿಸುತ್ತಾನೆ. ನಂತರ ಅಲ್ಲಾಹು ಅವನಿಗೆ ತನ್ನ ಕಡೆಯ ಏನಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಮೊದಲು ಯಾವುದಕ್ಕಾಗಿ ಪ್ರಾರ್ಥಿಸಿದ್ದನೋ ಅದನ್ನು ಅವನು ಮರೆತುಬಿಡುತ್ತಾನೆ ಮತ್ತು ಅಲ್ಲಾಹನಿಗೆ ಸರಿಸಮಾನರನ್ನು ನಿಶ್ಚಯಿಸಿ ಜನರನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸುತ್ತಾನೆ. ಹೇಳಿರಿ: “ನೀನು ನಿನ್ನ ಈ ಸತ್ಯನಿಷೇಧದಿಂದ ಸ್ವಲ್ಪ ಕಾಲದವರೆಗೆ ಆನಂದದಿಂದ ಜೀವಿಸು. ನಿಶ್ಚಯವಾಗಿಯೂ ನೀನು ನರಕವಾಸಿಗಳಲ್ಲಿ ಸೇರಿಕೊಳ್ಳುವೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَمَّنْ هُوَ قَٰنِتٌ ءَانَآءَ ٱلَّيْلِ سَاجِدًا وَقَآئِمًا يَحْذَرُ ٱلْـَٔاخِرَةَ وَيَرْجُوا۟ رَحْمَةَ رَبِّهِۦ قُلْ هَلْ يَسْتَوِى ٱلَّذِينَ يَعْلَمُونَ وَٱلَّذِينَ لَا يَعْلَمُونَ إِنَّمَا يَتَذَكَّرُ أُو۟لُوا۟ ٱلْأَلْبَٰبِ

Kannada Translation - Hamza Buturಯಾರು ರಾತ್ರಿಯ ಸಮಯವನ್ನು ಸಾಷ್ಟಾಂಗ ಮತ್ತು ನಮಾಝ್ ಮಾಡುತ್ತಾ (ಆರಾಧನೆಯಲ್ಲಿ) ಕಳೆಯುತ್ತಾನೋ, ಪರಲೋಕವನ್ನು ಭಯಪಡುತ್ತಾನೋ ಮತ್ತು ತನ್ನ ಪರಿಪಾಲಕನ (ಅಲ್ಲಾಹನ) ದಯೆಯನ್ನು ಆಶಿಸುತ್ತಾನೋ (ಇಂತಹವನು ಮತ್ತು ಇದಕ್ಕೆ ವಿರುದ್ಧವಾಗಿ ವರ್ತಿಸುವವನು ಸಮಾನರಾಗುವರೇ)? ಹೇಳಿರಿ: “ಜ್ಞಾನವುಳ್ಳವರು ಮತ್ತು ಜ್ಞಾನವಿಲ್ಲದವರು ಸಮಾನರೇ?” ಬುದ್ಧಿವಂತರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ يَٰعِبَادِ ٱلَّذِينَ ءَامَنُوا۟ ٱتَّقُوا۟ رَبَّكُمْ لِلَّذِينَ أَحْسَنُوا۟ فِى هَٰذِهِ ٱلدُّنْيَا حَسَنَةٌ وَأَرْضُ ٱللَّهِ وَٰسِعَةٌ إِنَّمَا يُوَفَّى ٱلصَّٰبِرُونَ أَجْرَهُم بِغَيْرِ حِسَابٍ

Kannada Translation - Hamza Buturಹೇಳಿರಿ: “ಓ ನನ್ನ ಸತ್ಯವಿಶ್ವಾಸಿ ದಾಸರೇ! ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡಿರಿ. ಯಾರು ಈ ಐಹಿಕ ಜೀವನದಲ್ಲಿ ಒಳಿತು ಮಾಡುತ್ತಾರೋ ಅವರಿಗೆ ಒಳಿತಿದೆ. ಅಲ್ಲಾಹನ ಭೂಮಿಯು ವಿಶಾಲವಾಗಿದೆ. ನಿಶ್ಚಯವಾಗಿಯೂ ತಾಳ್ಮೆಯಿಂದಿರುವವರಿಗೆ ಅವರ ಪ್ರತಿಫಲವನ್ನು ಲೆಕ್ಕವಿಲ್ಲದೆ ಪೂರ್ಣವಾಗಿ ನೀಡಲಾಗುವುದು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ إِنِّىٓ أُمِرْتُ أَنْ أَعْبُدَ ٱللَّهَ مُخْلِصًا لَّهُ ٱلدِّينَ

Kannada Translation - Hamza Buturಹೇಳಿರಿ: “ಆರಾಧನೆಯನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಆರಾಧಿಸಬೇಕೆಂದು ನನಗೆ ಆಜ್ಞಾಪಿಸಲಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأُمِرْتُ لِأَنْ أَكُونَ أَوَّلَ ٱلْمُسْلِمِينَ

Kannada Translation - Hamza Buturನಾನು ಶರಣಾದವರಲ್ಲಿ ಮೊದಲಿಗನಾಗಬೇಕೆಂದೂ ನನಗೆ ಆಜ್ಞಾಪಿಸಲಾಗಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ إِنِّىٓ أَخَافُ إِنْ عَصَيْتُ رَبِّى عَذَابَ يَوْمٍ عَظِيمٍ

Kannada Translation - Hamza Buturಹೇಳಿರಿ: “ನಾನು ನನ್ನ ಪರಿಪಾಲಕನ (ಅಲ್ಲಾಹನ) ಆಜ್ಞೋಲ್ಲಂಘನೆ ಮಾಡಿದರೆ ಒಂದು ಭಯಾನಕ ದಿನದ ಶಿಕ್ಷೆಯನ್ನು ನಿಶ್ಚಯವಾಗಿಯೂ ನಾನು ಭಯಪಡುತ್ತೇನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلِ ٱللَّهَ أَعْبُدُ مُخْلِصًا لَّهُۥ دِينِى

Kannada Translation - Hamza Buturಹೇಳಿರಿ: “ನಾನು ನನ್ನ ಆರಾಧನೆಯನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಆರಾಧಿಸುತ್ತೇನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَٱعْبُدُوا۟ مَا شِئْتُم مِّن دُونِهِۦ قُلْ إِنَّ ٱلْخَٰسِرِينَ ٱلَّذِينَ خَسِرُوٓا۟ أَنفُسَهُمْ وَأَهْلِيهِمْ يَوْمَ ٱلْقِيَٰمَةِ أَلَا ذَٰلِكَ هُوَ ٱلْخُسْرَانُ ٱلْمُبِينُ

Kannada Translation - Hamza Buturನೀವು ಅವನನ್ನು ಬಿಟ್ಟು ನಿಮಗೆ ಇಷ್ಟವಿರುವವರನ್ನು ಆರಾಧಿಸಿರಿ. ಹೇಳಿರಿ: “ಪುನರುತ್ಥಾನ ದಿನದಂದು ಯಾರು ಸ್ವಯಂ ತನ್ನನ್ನು ಮತ್ತು ತನ್ನ ಜನರನ್ನು ನಷ್ಟಹೊಂದುವಂತೆ ಮಾಡುತ್ತಾನೋ ಅವರೇ ನಷ್ಟಹೊಂದಿದವರು. ಅದೇ ಅತ್ಯಂತ ಸ್ಪಷ್ಟ ನಷ್ಟ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَهُم مِّن فَوْقِهِمْ ظُلَلٌ مِّنَ ٱلنَّارِ وَمِن تَحْتِهِمْ ظُلَلٌ ذَٰلِكَ يُخَوِّفُ ٱللَّهُ بِهِۦ عِبَادَهُۥ يَٰعِبَادِ فَٱتَّقُونِ

Kannada Translation - Hamza Buturಅವರಿಗೆ ಅವರ ಮೇಲ್ಭಾಗದಲ್ಲಿ ಅಗ್ನಿಯ ಮೇಲ್ಕಟ್ಟುಗಳಿವೆ. ಅವರ ತಳಭಾಗದಲ್ಲೂ ಮೇಲ್ಕಟ್ಟುಗಳಿವೆ. ಅಲ್ಲಾಹು ತನ್ನ ದಾಸರನ್ನು ಇದೇ ಶಿಕ್ಷೆಯ ಬಗ್ಗೆ ಭಯಪಡಿಸುತ್ತಿದ್ದಾನೆ. ಓ ನನ್ನ ದಾಸರೇ! ನನ್ನನ್ನು ಭಯಪಡಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ ٱجْتَنَبُوا۟ ٱلطَّٰغُوتَ أَن يَعْبُدُوهَا وَأَنَابُوٓا۟ إِلَى ٱللَّهِ لَهُمُ ٱلْبُشْرَىٰ فَبَشِّرْ عِبَادِ

Kannada Translation - Hamza Buturಯಾರು ಮಿಥ್ಯಾರಾಧ್ಯರ ಆರಾಧನೆಯನ್ನು ಬಿಟ್ಟು ಅಲ್ಲಾಹನ ಕಡೆಗೆ ವಿನಮ್ರವಾಗಿ ಮರಳುತ್ತಾರೋ ಅವರಿಗೆ ಸುವಾರ್ತೆಯಿದೆ. ನನ್ನ ದಾಸರಿಗೆ ಸುವಾರ್ತೆ ನೀಡಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلَّذِينَ يَسْتَمِعُونَ ٱلْقَوْلَ فَيَتَّبِعُونَ أَحْسَنَهُۥٓ أُو۟لَٰٓئِكَ ٱلَّذِينَ هَدَىٰهُمُ ٱللَّهُ وَأُو۟لَٰٓئِكَ هُمْ أُو۟لُوا۟ ٱلْأَلْبَٰبِ

Kannada Translation - Hamza Buturಅವರು ಯಾರೆಂದರೆ, ಮಾತುಗಳಿಗೆ ಕಿವಿಗೊಡುವವರು ಮತ್ತು ಅದರ ಅತ್ಯುತ್ತಮ ಭಾಗವನ್ನು ಅನುಸರಿಸುವವರು. ಇವರೇ ಅಲ್ಲಾಹನಿಂದ ಮಾರ್ಗದರ್ಶನ ಪಡೆದವರು ಮತ್ತು ಇವರೇ ಬುದ್ಧಿವಂತರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَفَمَنْ حَقَّ عَلَيْهِ كَلِمَةُ ٱلْعَذَابِ أَفَأَنتَ تُنقِذُ مَن فِى ٱلنَّارِ

Kannada Translation - Hamza Buturಯಾರ ಮೇಲೆ ಶಿಕ್ಷೆಯ ವಚನ ಖಾತ್ರಿಯಾಗಿದೆಯೋ (ಅವನಿಗೆ ಸಹಾಯ ಮಾಡಲು ನಿಮಗೆ ಸಾಧ್ಯವೇ)? ನರಕದಲ್ಲಿರುವವನನ್ನು ರಕ್ಷಿಸಲು ನಿಮಗೆ ಸಾಧ್ಯವೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَٰكِنِ ٱلَّذِينَ ٱتَّقَوْا۟ رَبَّهُمْ لَهُمْ غُرَفٌ مِّن فَوْقِهَا غُرَفٌ مَّبْنِيَّةٌ تَجْرِى مِن تَحْتِهَا ٱلْأَنْهَٰرُ وَعْدَ ٱللَّهِ لَا يُخْلِفُ ٱللَّهُ ٱلْمِيعَادَ

Kannada Translation - Hamza Buturಯಾರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುತ್ತಾರೋ ಅವರಿಗೆ ಮಹಡಿಗಳಿವೆ. ಅವುಗಳ ಮೇಲೆಯೂ ಮಹಡಿಗಳನ್ನು ನಿರ್ಮಿಸಲಾಗಿವೆ. ಅವುಗಳ ತಳಭಾಗದಿಂದ ನದಿಗಳು ಹರಿಯುತ್ತವೆ. ಅದು ಅಲ್ಲಾಹನ ವಾಗ್ದಾನವಾಗಿದೆ. ಅಲ್ಲಾಹು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَلَمْ تَرَ أَنَّ ٱللَّهَ أَنزَلَ مِنَ ٱلسَّمَآءِ مَآءً فَسَلَكَهُۥ يَنَٰبِيعَ فِى ٱلْأَرْضِ ثُمَّ يُخْرِجُ بِهِۦ زَرْعًا مُّخْتَلِفًا أَلْوَٰنُهُۥ ثُمَّ يَهِيجُ فَتَرَىٰهُ مُصْفَرًّا ثُمَّ يَجْعَلُهُۥ حُطَٰمًا إِنَّ فِى ذَٰلِكَ لَذِكْرَىٰ لِأُو۟لِى ٱلْأَلْبَٰبِ

Kannada Translation - Hamza Buturಅಲ್ಲಾಹು ಆಕಾಶದಿಂದ ಮಳೆ ಸುರಿಸುವುದನ್ನು ನೀವು ನೋಡಿಲ್ಲವೇ? ನಂತರ ಅದನ್ನು ಭೂಮಿಯಲ್ಲಿರುವ ತೊರೆಗಳಿಗೆ ತಲುಪಿಸುತ್ತಾನೆ. ನಂತರ ಅದರಿಂದ ತರತರಹದ ಬಣ್ಣಗಳಿರುವ ಬೆಳೆಗಳನ್ನು ಉತ್ಪಾದಿಸುತ್ತಾನೆ. ನಂತರ ಅದು ಒಣಗಿ ಹಳದಿಯಾಗಿ ಮಾರ್ಪಡುವುದನ್ನು ನೀವು ಕಾಣುತ್ತೀರಿ. ನಂತರ ಅವನು ಅದನ್ನು ಕಸಕಡ್ಡಿಗಳಾಗಿ ಮಾಡುತ್ತಾನೆ. ನಿಶ್ಚಯವಾಗಿಯೂ ಬುದ್ಧಿವಂತರಿಗೆ ಅದರಲ್ಲಿ ಉಪದೇಶವಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَفَمَن شَرَحَ ٱللَّهُ صَدْرَهُۥ لِلْإِسْلَٰمِ فَهُوَ عَلَىٰ نُورٍ مِّن رَّبِّهِۦ فَوَيْلٌ لِّلْقَٰسِيَةِ قُلُوبُهُم مِّن ذِكْرِ ٱللَّهِ أُو۟لَٰٓئِكَ فِى ضَلَٰلٍ مُّبِينٍ

Kannada Translation - Hamza Buturಅಲ್ಲಾಹು ಯಾರ ಹೃದಯವನ್ನು ಇಸ್ಲಾಮಿಗಾಗಿ ತೆರೆದುಕೊಟ್ಟು, ನಂತರ ಅವನು ತನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಬೆಳಕಿನಲ್ಲಿರುತ್ತಾನೋ (ಅವನು ಹೃದಯವು ಕಠೋರವಾದವನಂತೆ ಆಗುವನೇ?) ಅಲ್ಲಾಹನ ಸ್ಮರಣೆಯಿಂದ ದೂರ ಸರಿದು ಹೃದಯಗಳು ಕಠೋರವಾದವರು ಯಾರೋ ಅವರಿಗೆ ವಿನಾಶ ಕಾದಿದೆ. ಅವರು ಸ್ಪಷ್ಟವಾದ ದುರ್ಮಾರ್ಗದಲ್ಲಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱللَّهُ نَزَّلَ أَحْسَنَ ٱلْحَدِيثِ كِتَٰبًا مُّتَشَٰبِهًا مَّثَانِىَ تَقْشَعِرُّ مِنْهُ جُلُودُ ٱلَّذِينَ يَخْشَوْنَ رَبَّهُمْ ثُمَّ تَلِينُ جُلُودُهُمْ وَقُلُوبُهُمْ إِلَىٰ ذِكْرِ ٱللَّهِ ذَٰلِكَ هُدَى ٱللَّهِ يَهْدِى بِهِۦ مَن يَشَآءُ وَمَن يُضْلِلِ ٱللَّهُ فَمَا لَهُۥ مِنْ هَادٍ

Kannada Translation - Hamza Buturಅಲ್ಲಾಹು ಅತ್ಯುತ್ತಮ ವಚನಗಳನ್ನು ಅವತೀರ್ಣಗೊಳಿಸಿದ್ದಾನೆ. ಅಂದರೆ ಪರಸ್ಪರ ಹೋಲಿಕೆಯಿರುವ ಮತ್ತು ಪುನರಾವರ್ತನೆಯಾಗುವ ವಚನಗಳಿರುವ ಒಂದು ಗ್ರಂಥವನ್ನು. ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವರ ಚರ್ಮಗಳು ಅದರಿಂದ ರೋಮಾಂಚನಗೊಳ್ಳುತ್ತವೆ. ನಂತರ ಅವರ ದೇಹ ಮತ್ತು ಹೃದಯಗಳು ಅಲ್ಲಾಹನ ಸ್ಮರಣೆಗಾಗಿ ಮೃದುವಾಗುತ್ತವೆ. ಅದು ಅಲ್ಲಾಹನ ಮಾರ್ಗದರ್ಶನ. ಅವನು ಅದರ ಮೂಲಕ ಅವನು ಇಚ್ಛಿಸುವವರನ್ನು ಸನ್ಮಾರ್ಗಕ್ಕೆ ಸೇರಿಸುತ್ತಾನೆ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ದಾರಿ ತೋರಿಸುವವರು ಯಾರೂ ಇಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَفَمَن يَتَّقِى بِوَجْهِهِۦ سُوٓءَ ٱلْعَذَابِ يَوْمَ ٱلْقِيَٰمَةِ وَقِيلَ لِلظَّٰلِمِينَ ذُوقُوا۟ مَا كُنتُمْ تَكْسِبُونَ

Kannada Translation - Hamza Buturಯಾರು ಪುನರುತ್ಥಾನ ದಿನದ ಕೆಟ್ಟ ಶಿಕ್ಷೆಗೆ ತನ್ನ ಮುಖವನ್ನೇ ಗುರಾಣಿಯಾಗಿ ಮಾಡಿಕೊಳ್ಳುತ್ತಾನೋ (ಅವನು ಅದರಿಂದ ಪಾರಾಗುವವನಿಗೆ ಸಮಾನನಾಗುವನೋ?) “ನೀವು ಮಾಡಿದ ಕರ್ಮಗಳ ರುಚಿಯನ್ನು ನೋಡಿರಿ” ಎಂದು ಆ ಅಕ್ರಮಿಗಳೊಡನೆ ಹೇಳಲಾಗುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كَذَّبَ ٱلَّذِينَ مِن قَبْلِهِمْ فَأَتَىٰهُمُ ٱلْعَذَابُ مِنْ حَيْثُ لَا يَشْعُرُونَ

Kannada Translation - Hamza Buturಅವರಿಗಿಂತ ಮೊದಲಿನವರೂ ಸತ್ಯವನ್ನು ನಿಷೇಧಿಸಿದ್ದರು. ಆಗ ಅವರು ನಿರೀಕ್ಷಿಸದ ದಿಕ್ಕಿನಿಂದ ಶಿಕ್ಷೆಯು ಅವರ ಮೇಲೆರಗಿತು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَأَذَاقَهُمُ ٱللَّهُ ٱلْخِزْىَ فِى ٱلْحَيَوٰةِ ٱلدُّنْيَا وَلَعَذَابُ ٱلْـَٔاخِرَةِ أَكْبَرُ لَوْ كَانُوا۟ يَعْلَمُونَ

Kannada Translation - Hamza Buturಹೀಗೆ ಇಹಲೋಕ ಜೀವನದಲ್ಲೇ ಅಲ್ಲಾಹು ಅವರಿಗೆ ಅವಮಾನದ ರುಚಿ ನೋಡುವಂತೆ ಮಾಡಿದನು. ಪರಲೋಕದ ಶಿಕ್ಷೆಯಂತೂ ಅತ್ಯಂತ ಘೋರವಾಗಿದೆ. ಅವರು ಅದನ್ನು ತಿಳಿಯುತ್ತಿದ್ದರೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ ضَرَبْنَا لِلنَّاسِ فِى هَٰذَا ٱلْقُرْءَانِ مِن كُلِّ مَثَلٍ لَّعَلَّهُمْ يَتَذَكَّرُونَ

Kannada Translation - Hamza Buturನಿಶ್ಚಯವಾಗಿಯೂ ನಾವು ಈ ಕುರ್‌ಆನ್‍ನಲ್ಲಿ ಜನರಿಗೋಸ್ಕರ ಎಲ್ಲ ತರಹದ ಉದಾಹರಣೆಗಳನ್ನು ವಿವರಿಸಿದ್ದೇವೆ. ಅವರು ಉಪದೇಶವನ್ನು ಸ್ವೀಕರಿಸುವುದಕ್ಕಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُرْءَانًا عَرَبِيًّا غَيْرَ ذِى عِوَجٍ لَّعَلَّهُمْ يَتَّقُونَ

Kannada Translation - Hamza Buturಇದು ಅರಬ್ಬಿ ಭಾಷೆಯಲ್ಲಿರುವ ಕುರ್‌ಆನ್. ಅದರಲ್ಲಿ ಯಾವುದೇ ವಕ್ರತೆಗಳಿಲ್ಲ. ಅವರು ದೇವಭಯವುಳ್ಳವರಾಗುವುದಕ್ಕಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ضَرَبَ ٱللَّهُ مَثَلًا رَّجُلًا فِيهِ شُرَكَآءُ مُتَشَٰكِسُونَ وَرَجُلًا سَلَمًا لِّرَجُلٍ هَلْ يَسْتَوِيَانِ مَثَلًا ٱلْحَمْدُ لِلَّهِ بَلْ أَكْثَرُهُمْ لَا يَعْلَمُونَ

Kannada Translation - Hamza Buturಅಲ್ಲಾಹು ಒಂದು ಉದಾಹರಣೆಯನ್ನು ನೀಡುತ್ತಾನೆ. ಪರಸ್ಪರ ಕಚ್ಚಾಡುವ ಹಲವು ಪಾಲುದಾರರಿಗೆ ಗುಲಾಮನಾಗಿರುವ ಒಬ್ಬ ವ್ಯಕ್ತಿಮತ್ತು ಒಬ್ಬನೇ ಯಜಮಾನನಿಗೆ ಗುಲಾಮನಾಗಿರುವ ಇನ್ನೊಬ್ಬ ವ್ಯಕ್ತಿ. ಇವರಿಬ್ಬರು ಹೋಲಿಕೆಯಲ್ಲಿ ಸಮಾನರಾಗುವರೇ? ಅಲ್ಲಾಹನಿಗೆ ಸರ್ವಸ್ತುತಿ! ಆದರೆ ಅವರಲ್ಲಿ ಹೆಚ್ಚಿನವರೂ ತಿಳಿಯುವುದಿಲ್ಲ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّكَ مَيِّتٌ وَإِنَّهُم مَّيِّتُونَ

Kannada Translation - Hamza Buturನಿಶ್ಚಯವಾಗಿಯೂ ನೀವು ನಿಧನರಾಗುವಿರಿ ಮತ್ತು ಅವರು ಕೂಡ ನಿಧನರಾಗುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ إِنَّكُمْ يَوْمَ ٱلْقِيَٰمَةِ عِندَ رَبِّكُمْ تَخْتَصِمُونَ

Kannada Translation - Hamza Buturನಂತರ ನೀವೆಲ್ಲರೂ ಪುನರುತ್ಥಾನ ದಿನದಂದು ನಿಮ್ಮ ಪರಿಪಾಲಕನ (ಅಲ್ಲಾಹನ) ಮುಂದೆ ತರ್ಕಿಸುವಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَمَنْ أَظْلَمُ مِمَّن كَذَبَ عَلَى ٱللَّهِ وَكَذَّبَ بِٱلصِّدْقِ إِذْ جَآءَهُۥٓ أَلَيْسَ فِى جَهَنَّمَ مَثْوًى لِّلْكَٰفِرِينَ

Kannada Translation - Hamza Buturಅಲ್ಲಾಹನ ಮೇಲೆ ಸುಳ್ಳು ಹೇಳಿದವನಿಗಿಂತ ಮತ್ತು ಸತ್ಯವು ತನ್ನ ಬಳಿಗೆ ಬಂದಾಗ ಅದನ್ನು ನಿಷೇಧಿಸಿದವನಿಗಿಂತ ದೊಡ್ಡ ಅಕ್ರಮಿ ಯಾರು? ನರಕದಲ್ಲಿ ಸತ್ಯನಿಷೇಧಿಗಳಿಗೆ ಸ್ಥಳವಿಲ್ಲವೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِى جَآءَ بِٱلصِّدْقِ وَصَدَّقَ بِهِۦٓ أُو۟لَٰٓئِكَ هُمُ ٱلْمُتَّقُونَ

Kannada Translation - Hamza Buturಸತ್ಯಧರ್ಮವನ್ನು ತಂದವರು ಮತ್ತು ಅದರಲ್ಲಿ ವಿಶ್ವಾಸವಿಟ್ಟವರು ಯಾರೋ ಅವರೇ ದೇವಭಯವುಳ್ಳವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَهُم مَّا يَشَآءُونَ عِندَ رَبِّهِمْ ذَٰلِكَ جَزَآءُ ٱلْمُحْسِنِينَ

Kannada Translation - Hamza Buturಅವರಿಗೆ ಅವರು ಇಚ್ಛಿಸುವುದೆಲ್ಲವೂ ಅವರ ಪರಿಪಾಲಕನ (ಅಲ್ಲಾಹನ) ಬಳಿಯಿದೆ. ಅದು ಸಜ್ಜನರಿಗೆ ದೊರೆಯುವ ಪ್ರತಿಫಲವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لِيُكَفِّرَ ٱللَّهُ عَنْهُمْ أَسْوَأَ ٱلَّذِى عَمِلُوا۟ وَيَجْزِيَهُمْ أَجْرَهُم بِأَحْسَنِ ٱلَّذِى كَانُوا۟ يَعْمَلُونَ

Kannada Translation - Hamza Buturಅಲ್ಲಾಹು ಅವರು ಮಾಡಿರುವ ಕೆಟ್ಟ ಕರ್ಮಗಳನ್ನು ಅಳಿಸುವುದಕ್ಕಾಗಿ ಮತ್ತು ಅವರು ಮಾಡಿರುವ ಉತ್ತಮ ಕರ್ಮಗಳಿಗೆ ಅತ್ಯುತ್ತಮ ಪ್ರತಿಫಲವನ್ನು ನೀಡುವುದಕ್ಕಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَلَيْسَ ٱللَّهُ بِكَافٍ عَبْدَهُۥ وَيُخَوِّفُونَكَ بِٱلَّذِينَ مِن دُونِهِۦ وَمَن يُضْلِلِ ٱللَّهُ فَمَا لَهُۥ مِنْ هَادٍ

Kannada Translation - Hamza Buturಅಲ್ಲಾಹು ಅವನ ದಾಸನಿಗೆ ಸಾಕಾಗುವುದಿಲ್ಲವೇ? ಅವರು ಅಲ್ಲಾಹನಲ್ಲದವರ ಬಗ್ಗೆ ಹೇಳಿ ನಿಮ್ಮನ್ನು ಹೆದರಿಸುತ್ತಾರೆ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಸನ್ಮಾರ್ಗ ತೋರಿಸುವವರು ಯಾರೂ ಇಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَن يَهْدِ ٱللَّهُ فَمَا لَهُۥ مِن مُّضِلٍّ أَلَيْسَ ٱللَّهُ بِعَزِيزٍ ذِى ٱنتِقَامٍ

Kannada Translation - Hamza Buturಅಲ್ಲಾಹು ಯಾರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೋ ಅವನನ್ನು ದಾರಿತಪ್ಪಿಸಲು ಯಾರಿಗೂ ಸಾಧ್ಯವಿಲ್ಲ. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಲ್ಲವೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَئِن سَأَلْتَهُم مَّنْ خَلَقَ ٱلسَّمَٰوَٰتِ وَٱلْأَرْضَ لَيَقُولُنَّ ٱللَّهُ قُلْ أَفَرَءَيْتُم مَّا تَدْعُونَ مِن دُونِ ٱللَّهِ إِنْ أَرَادَنِىَ ٱللَّهُ بِضُرٍّ هَلْ هُنَّ كَٰشِفَٰتُ ضُرِّهِۦٓ أَوْ أَرَادَنِى بِرَحْمَةٍ هَلْ هُنَّ مُمْسِكَٰتُ رَحْمَتِهِۦ قُلْ حَسْبِىَ ٱللَّهُ عَلَيْهِ يَتَوَكَّلُ ٱلْمُتَوَكِّلُونَ

Kannada Translation - Hamza Butur“ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಯಾರು?” ಎಂದು ನೀವು ಅವರೊಡನೆ ಕೇಳಿದರೆ ಅವರು ಖಂಡಿತವಾಗಿಯೂ “ಅಲ್ಲಾಹು” ಎಂದು ಹೇಳುತ್ತಾರೆ. ಕೇಳಿರಿ: “ಹಾಗಾದರೆ ಅಲ್ಲಾಹನನ್ನು ಬಿಟ್ಟು ನೀವು ಕರೆದು ಪ್ರಾರ್ಥಿಸುತ್ತಿರುವ ದೇವರುಗಳ ಬಗ್ಗೆ ನೀವು ಯೋಚಿಸಿದ್ದೀರಾ? ಅಲ್ಲಾಹು ನನಗೆ ಏನಾದರೂ ತೊಂದರೆ ನೀಡಲು ಬಯಸಿದರೆ ಆ ತೊಂದರೆಯನ್ನು ನಿವಾರಿಸಲು ಅವರಿಗೆ ಸಾಧ್ಯವೇ? ಅಥವಾ ಅವನು ನನಗೆ ದಯೆ ತೋರಲು ಬಯಸಿದರೆ ಅವನ ದಯೆಯನ್ನು ತಡೆಯಲು ಅವರಿಗೆ ಸಾಧ್ಯವೇ?” ಹೇಳಿರಿ: “ನನಗೆ ಅಲ್ಲಾಹು ಸಾಕು. ಭರವಸೆಯಿಡುವವರು ಅವನಲ್ಲಿಯೇ ಭರವಸೆಯಿಡಲಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ يَٰقَوْمِ ٱعْمَلُوا۟ عَلَىٰ مَكَانَتِكُمْ إِنِّى عَٰمِلٌ فَسَوْفَ تَعْلَمُونَ

Kannada Translation - Hamza Buturಹೇಳಿರಿ: “ಓ ನನ್ನ ಜನರೇ! ನೀವು ನಿಮ್ಮ ಸ್ಥಾನದಲ್ಲಿ ಕಾರ್ಯ ನಿರ್ವಹಿಸಿರಿ. ನಿಶ್ಚಯವಾಗಿಯೂ ನಾನೂ ಕಾರ್ಯ ನಿರ್ವಹಿಸುತ್ತೇನೆ. ನೀವು ಸದ್ಯವೇ ತಿಳಿಯುವಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَن يَأْتِيهِ عَذَابٌ يُخْزِيهِ وَيَحِلُّ عَلَيْهِ عَذَابٌ مُّقِيمٌ

Kannada Translation - Hamza Buturಯಾರಿಗೆ ಅವಮಾನಗೊಳಿಸುವಂತಹ ಶಿಕ್ಷೆಯು ಬರಲಿದೆ ಮತ್ತು ಯಾರ ಮೇಲೆ ಶಾಶ್ವತ (ಪರಲೋಕದ) ಶಿಕ್ಷೆ ಎರಗಲಿದೆಯೆಂದು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّآ أَنزَلْنَا عَلَيْكَ ٱلْكِتَٰبَ لِلنَّاسِ بِٱلْحَقِّ فَمَنِ ٱهْتَدَىٰ فَلِنَفْسِهِۦ وَمَن ضَلَّ فَإِنَّمَا يَضِلُّ عَلَيْهَا وَمَآ أَنتَ عَلَيْهِم بِوَكِيلٍ

Kannada Translation - Hamza Buturನಿಶ್ಚಯವಾಗಿಯೂ ನಾವು ಮನುಷ್ಯರಿಗೋಸ್ಕರ ಈ ಗ್ರಂಥವನ್ನು ನಿಮಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ಯಾರಾದರೂ ಸನ್ಮಾರ್ಗವನ್ನು ಸ್ವೀಕರಿಸಿದರೆ ಅವನು ಅವನ ಒಳಿತಿಗಾಗಿಯೇ ಅದನ್ನು ಸ್ವೀಕರಿಸುತ್ತಾನೆ. ಯಾರಾದರೂ ದುರ್ಮಾರ್ಗವನ್ನು ಆರಿಸಿದರೆ ಅವನು ಅವನ ಕೆಡುಕಿಗಾಗಿಯೇ ಅದನ್ನು ಆರಿಸುತ್ತಾನೆ. ನಿಮಗೆ ಅವರ ಮೇಲೆ ಯಾವುದೇ ಅಧಿಕಾರವಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱللَّهُ يَتَوَفَّى ٱلْأَنفُسَ حِينَ مَوْتِهَا وَٱلَّتِى لَمْ تَمُتْ فِى مَنَامِهَا فَيُمْسِكُ ٱلَّتِى قَضَىٰ عَلَيْهَا ٱلْمَوْتَ وَيُرْسِلُ ٱلْأُخْرَىٰٓ إِلَىٰٓ أَجَلٍ مُّسَمًّى إِنَّ فِى ذَٰلِكَ لَـَٔايَٰتٍ لِّقَوْمٍ يَتَفَكَّرُونَ

Kannada Translation - Hamza Buturಅಲ್ಲಾಹು ಆತ್ಮಗಳನ್ನು ಅವು ಮರಣಹೊಂದುವ ಸಮಯದಲ್ಲಿ ಮತ್ತು ಮರಣವು ವಿಧಿಸಲ್ಪಡದ ಆತ್ಮಗಳನ್ನು ಅವುಗಳ ನಿದ್ದೆಯ ಸಮಯದಲ್ಲಿ ವಶಪಡಿಸುತ್ತಾನೆ. ನಂತರ ಮರಣವು ವಿಧಿಸಲಾದ ಆತ್ಮಗಳನ್ನು ಅವನು ಹಿಡಿದಿಟ್ಟುಕೊಳ್ಳುತ್ತಾನೆ ಮತ್ತು ಉಳಿದವುಗಳನ್ನು ಒಂದು ನಿಗದಿತ ಅವಧಿಯವರೆಗೆ ಬಿಟ್ಟುಬಿಡುತ್ತಾನೆ. ನಿಶ್ಚಯವಾಗಿಯೂ ಇದರಲ್ಲಿ ಆಲೋಚಿಸುವ ಜನರಿಗೆ ದೃಷ್ಟಾಂತಗಳಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَمِ ٱتَّخَذُوا۟ مِن دُونِ ٱللَّهِ شُفَعَآءَ قُلْ أَوَلَوْ كَانُوا۟ لَا يَمْلِكُونَ شَيْـًٔا وَلَا يَعْقِلُونَ

Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಇತರರನ್ನು ಶಿಫಾರಸುಗಾರರನ್ನಾಗಿ ಸ್ವೀಕರಿಸಿದ್ದಾರೆಯೇ? ಹೇಳಿರಿ: “ಅವರ (ಶಿಫಾರಸುಗಾರರ) ಅಧೀನದಲ್ಲಿ ಏನೂ ಇಲ್ಲದಿದ್ದರೂ ಮತ್ತು ಅವರು ಆಲೋಚಿಸದವರಾಗಿದ್ದರೂ ಸಹ (ನೀವು ಅವರನ್ನು ಶಿಫಾರಸುಗಾರರನ್ನಾಗಿ ಸ್ವೀಕರಿಸುವಿರಾ)?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُل لِّلَّهِ ٱلشَّفَٰعَةُ جَمِيعًا لَّهُۥ مُلْكُ ٱلسَّمَٰوَٰتِ وَٱلْأَرْضِ ثُمَّ إِلَيْهِ تُرْجَعُونَ

Kannada Translation - Hamza Buturಹೇಳಿರಿ: “ಶಿಫಾರಸು ಸಂಪೂರ್ಣವಾಗಿ ಅಲ್ಲಾಹನ ಅಧೀನದಲ್ಲಿದೆ. ಭೂಮ್ಯಾಕಾಶಗಳ ಸಾರ್ವಭೌಮತ್ವವು ಅವನಿಗೆ ಸೇರಿದ್ದು. ನಂತರ ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا ذُكِرَ ٱللَّهُ وَحْدَهُ ٱشْمَأَزَّتْ قُلُوبُ ٱلَّذِينَ لَا يُؤْمِنُونَ بِٱلْـَٔاخِرَةِ وَإِذَا ذُكِرَ ٱلَّذِينَ مِن دُونِهِۦٓ إِذَا هُمْ يَسْتَبْشِرُونَ

Kannada Translation - Hamza Buturಅಲ್ಲಾಹನನ್ನು ಮಾತ್ರ ಪ್ರಸ್ತಾಪಿಸಲಾದಾಗ ಪರಲೋಕದಲ್ಲಿ ವಿಶ್ವಾಸವಿಡದವರ ಹೃದಯಗಳಲ್ಲಿ ದ್ವೇಷವುಂಟಾಗುತ್ತದೆ. ಅವನನ್ನು ಬಿಟ್ಟು ಇತರರನ್ನು ಪ್ರಸ್ತಾಪಿಸಲಾದರೆ ಅಗೋ! ಅವರು ಸಂತೋಷಪಡುತ್ತಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلِ ٱللَّهُمَّ فَاطِرَ ٱلسَّمَٰوَٰتِ وَٱلْأَرْضِ عَٰلِمَ ٱلْغَيْبِ وَٱلشَّهَٰدَةِ أَنتَ تَحْكُمُ بَيْنَ عِبَادِكَ فِى مَا كَانُوا۟ فِيهِ يَخْتَلِفُونَ

Kannada Translation - Hamza Buturಹೇಳಿರಿ: “ಓ ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಅಲ್ಲಾಹನೇ! ದೃಶ್ಯ-ಅದೃಶ್ಯಗಳನ್ನು ತಿಳಿದವನೇ! ನಿನ್ನ ದಾಸರು ಭಿನ್ನಮತದಲ್ಲಿರುವ ವಿಷಯಗಳ ಬಗ್ಗೆ ನೀನು ಅವರ ನಡುವೆ ತೀರ್ಪು ನೀಡುವೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَوْ أَنَّ لِلَّذِينَ ظَلَمُوا۟ مَا فِى ٱلْأَرْضِ جَمِيعًا وَمِثْلَهُۥ مَعَهُۥ لَٱفْتَدَوْا۟ بِهِۦ مِن سُوٓءِ ٱلْعَذَابِ يَوْمَ ٱلْقِيَٰمَةِ وَبَدَا لَهُم مِّنَ ٱللَّهِ مَا لَمْ يَكُونُوا۟ يَحْتَسِبُونَ

Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳ ಬಳಿ ಭೂಮಿಯಲ್ಲಿರುವುದೆಲ್ಲವೂ ಮತ್ತು ಅದರಷ್ಟೇ ಬೇರೆಯೂ ಇದ್ದಿದ್ದರೆ, ಪುನರುತ್ಥಾನ ದಿನದ ಕೆಟ್ಟ ಶಿಕ್ಷೆಯಿಂದ ಪಾರಾಗಲು ಅವರು ಅವೆಲ್ಲವನ್ನೂ ಪರಿಹಾರವಾಗಿ ನೀಡುತ್ತಿದ್ದರು. ಅವರು ಭಾವಿಸಿರದಂತಹ ಅನೇಕ ವಿಷಯಗಳು ಅಲ್ಲಾಹನ ಕಡೆಯಿಂದ ಅವರಿಗೆ ಬಹಿರಂಗವಾಗುವುವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَبَدَا لَهُمْ سَيِّـَٔاتُ مَا كَسَبُوا۟ وَحَاقَ بِهِم مَّا كَانُوا۟ بِهِۦ يَسْتَهْزِءُونَ

Kannada Translation - Hamza Buturಅವರು ಮಾಡಿದ ಕರ್ಮಗಳ ದುಷ್ಪರಿಣಾಮಗಳು ಅವರಿಗೆ ಬಹಿರಂಗವಾಗುವುವು. ಅವರು ಏನನ್ನು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಕೊಳ್ಳುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَإِذَا مَسَّ ٱلْإِنسَٰنَ ضُرٌّ دَعَانَا ثُمَّ إِذَا خَوَّلْنَٰهُ نِعْمَةً مِّنَّا قَالَ إِنَّمَآ أُوتِيتُهُۥ عَلَىٰ عِلْمٍۭ بَلْ هِىَ فِتْنَةٌ وَلَٰكِنَّ أَكْثَرَهُمْ لَا يَعْلَمُونَ

Kannada Translation - Hamza Buturಮನುಷ್ಯನಿಗೆ ತೊಂದರೆಯುಂಟಾದರೆ ಅವನು ನಮ್ಮನ್ನು ಕರೆದು ಪ್ರಾರ್ಥಿಸುತ್ತಾನೆ. ನಂತರ ನಾವು ಅವನಿಗೆ ನಮ್ಮ ಕಡೆಯ ಏನಾದರೂ ಅನುಗ್ರಹವನ್ನು ದಯಪಾಲಿಸಿದರೆ, ಅವನು ಹೇಳುತ್ತಾನೆ: “ಇದು ನನ್ನ ಜ್ಞಾನದ ಕಾರಣದಿಂದ ನನಗೆ ನೀಡಲಾಗಿದೆ.” ಅಲ್ಲ, ವಾಸ್ತವವಾಗಿ ಅದೊಂದು ಪರೀಕ್ಷೆಯಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قَدْ قَالَهَا ٱلَّذِينَ مِن قَبْلِهِمْ فَمَآ أَغْنَىٰ عَنْهُم مَّا كَانُوا۟ يَكْسِبُونَ

Kannada Translation - Hamza Buturಅವರಿಗಿಂತ ಮೊದಲಿನವರೂ ಹೀಗೆಯೇ ಹೇಳಿದ್ದರು. ಆದರೆ ಅವರು ಸಂಪಾದಿಸಿದ ಯಾವುದೂ ಅವರಿಗೆ ಪ್ರಯೋಜನವಾಗಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَأَصَابَهُمْ سَيِّـَٔاتُ مَا كَسَبُوا۟ وَٱلَّذِينَ ظَلَمُوا۟ مِنْ هَٰٓؤُلَآءِ سَيُصِيبُهُمْ سَيِّـَٔاتُ مَا كَسَبُوا۟ وَمَا هُم بِمُعْجِزِينَ

Kannada Translation - Hamza Buturಅವರು ಮಾಡಿದ ಕರ್ಮಗಳ ದುಷ್ಪರಿಣಾಮಗಳು ಅವರ ಮೇಲೆರಗಿದವು. ಅದೇ ರೀತಿ ಇವರಲ್ಲಿರುವ ಅಕ್ರಮಿಗಳು ಮಾಡಿದ ಕರ್ಮಗಳ ದುಷ್ಪರಿಣಾಮಗಳು ಇವರ ಮೇಲೆರಗುವುವು. ಇವರಿಗೆ ನಮ್ಮನ್ನು ಸೋಲಿಸಲಾಗದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوَلَمْ يَعْلَمُوٓا۟ أَنَّ ٱللَّهَ يَبْسُطُ ٱلرِّزْقَ لِمَن يَشَآءُ وَيَقْدِرُ إِنَّ فِى ذَٰلِكَ لَـَٔايَٰتٍ لِّقَوْمٍ يُؤْمِنُونَ

Kannada Translation - Hamza Buturಅಲ್ಲಾಹು ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಇಕ್ಕಟ್ಟುಗೊಳಿಸುತ್ತಾನೆಂದು ಅವರಿಗೆ ತಿಳಿದಿಲ್ಲವೇ? ನಿಶ್ಚಯವಾಗಿಯೂ ಸತ್ಯವಿಶ್ವಾಸವಿಡುವ ಜನರಿಗೆ ಇದರಲ್ಲಿ ದೃಷ್ಟಾಂತಗಳಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ يَٰعِبَادِىَ ٱلَّذِينَ أَسْرَفُوا۟ عَلَىٰٓ أَنفُسِهِمْ لَا تَقْنَطُوا۟ مِن رَّحْمَةِ ٱللَّهِ إِنَّ ٱللَّهَ يَغْفِرُ ٱلذُّنُوبَ جَمِيعًا إِنَّهُۥ هُوَ ٱلْغَفُورُ ٱلرَّحِيمُ

Kannada Translation - Hamza Buturಹೇಳಿರಿ: “ಸ್ವಯಂ ಅತಿರೇಕವೆಸಗಿದ ನನ್ನ ದಾಸರೇ! ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗಬೇಡಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ಪಾಪಗಳನ್ನೂ ಕ್ಷಮಿಸುತ್ತಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنِيبُوٓا۟ إِلَىٰ رَبِّكُمْ وَأَسْلِمُوا۟ لَهُۥ مِن قَبْلِ أَن يَأْتِيَكُمُ ٱلْعَذَابُ ثُمَّ لَا تُنصَرُونَ

Kannada Translation - Hamza Buturನಿಮ್ಮ ಬಳಿಗೆ ಶಿಕ್ಷೆಯು ಬರುವುದಕ್ಕೆ ಮೊದಲು ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಗೆ ವಿನಮ್ರತೆಯಿಂದ ಮರಳಿರಿ ಮತ್ತು ಅವನಿಗೆ ಶರಣಾಗಿರಿ. ನಂತರ ನಿಮಗೆ ಸಹಾಯವು ಲಭ್ಯವಾಗುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱتَّبِعُوٓا۟ أَحْسَنَ مَآ أُنزِلَ إِلَيْكُم مِّن رَّبِّكُم مِّن قَبْلِ أَن يَأْتِيَكُمُ ٱلْعَذَابُ بَغْتَةً وَأَنتُمْ لَا تَشْعُرُونَ

Kannada Translation - Hamza Buturನೀವು ನಿರೀಕ್ಷಿಸದ ರೀತಿಯಲ್ಲಿ ಶಿಕ್ಷೆಯು ಹಠಾತ್ತನೆ ನಿಮ್ಮ ಬಳಿಗೆ ಬರುವುದಕ್ಕೆ ಮೊದಲು ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ನಿಮಗೆ ಅವತೀರ್ಣವಾದ ಈ ಅತ್ಯುತ್ತಮ ಗ್ರಂಥವನ್ನು ಅನುಸರಿಸಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَن تَقُولَ نَفْسٌ يَٰحَسْرَتَىٰ عَلَىٰ مَا فَرَّطتُ فِى جَنۢبِ ٱللَّهِ وَإِن كُنتُ لَمِنَ ٱلسَّٰخِرِينَ

Kannada Translation - Hamza Butur“ಅಯ್ಯೋ! ನನ್ನ ದುರ್ಗತಿಯೇ! ಅಲ್ಲಾಹನ ಹಕ್ಕಿನಲ್ಲಿ ನಾನು ಲೋಪವೆಸಗಿಬಿಟ್ಟೆನಲ್ಲ! ನಿಶ್ಚಯವಾಗಿಯೂ ನಾನು ತಮಾಷೆ ಮಾಡುವವರಲ್ಲಿ ಸೇರಿಬಿಟ್ಟೆನಲ್ಲ!” ಎಂದು ನೀವು ಹೇಳದಿರುವುದಕ್ಕಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوْ تَقُولَ لَوْ أَنَّ ٱللَّهَ هَدَىٰنِى لَكُنتُ مِنَ ٱلْمُتَّقِينَ

Kannada Translation - Hamza Buturಅಥವಾ “ಅಲ್ಲಾಹು ನನ್ನನ್ನು ಸನ್ಮಾರ್ಗದಲ್ಲಿ ಸೇರಿಸಿದ್ದರೆ ನಾನು ದೇವಭಯವುಳ್ಳವರಲ್ಲಿ ಸೇರುತ್ತಿದ್ದೆ” ಎಂದು ಹೇಳದಿರುವುದಕ್ಕಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَوْ تَقُولَ حِينَ تَرَى ٱلْعَذَابَ لَوْ أَنَّ لِى كَرَّةً فَأَكُونَ مِنَ ٱلْمُحْسِنِينَ

Kannada Translation - Hamza Buturಅಥವಾ ಶಿಕ್ಷೆಯನ್ನು ನೇರವಾಗಿ ನೋಡುವಾಗ, “ನನಗೆ (ಇಹಲೋಕಕ್ಕೆ) ಮರಳುವ ಅವಕಾಶವಿರುತ್ತಿದ್ದರೆ ನಾನು ನೀತಿವಂತರಲ್ಲಿ ಸೇರುತ್ತಿದ್ದೆ” ಎಂದು ಹೇಳದಿರುವುದಕ್ಕಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

بَلَىٰ قَدْ جَآءَتْكَ ءَايَٰتِى فَكَذَّبْتَ بِهَا وَٱسْتَكْبَرْتَ وَكُنتَ مِنَ ٱلْكَٰفِرِينَ

Kannada Translation - Hamza Buturಹೌದು! ನಿಶ್ಚಯವಾಗಿಯೂ ನನ್ನ ವಚನಗಳು ನಿನ್ನ ಬಳಿಗೆ ಬಂದಿವೆ. ಆದರೆ ನೀನು ಅವುಗಳನ್ನು ನಿಷೇಧಿಸಿ ಅಹಂಕಾರ ತೋರಿದೆ. ನೀನು ಸತ್ಯನಿಷೇಧಿಗಳಲ್ಲಿ ಸೇರಿದವನಾಗಿದ್ದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَوْمَ ٱلْقِيَٰمَةِ تَرَى ٱلَّذِينَ كَذَبُوا۟ عَلَى ٱللَّهِ وُجُوهُهُم مُّسْوَدَّةٌ أَلَيْسَ فِى جَهَنَّمَ مَثْوًى لِّلْمُتَكَبِّرِينَ

Kannada Translation - Hamza Buturಅಲ್ಲಾಹನ ಮೇಲೆ ಸುಳ್ಳು ಹೇಳಿದವರ ಮುಖಗಳು ಪುನರುತ್ಥಾನ ದಿನದಂದು ಕಪ್ಪಾಗಿರುವುದನ್ನು ನೀವು ನೋಡುವಿರಿ. ನರಕದಲ್ಲಿ ಅಹಂಕಾರಿಗಳಿಗೆ ಸ್ಥಳವಿಲ್ಲವೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيُنَجِّى ٱللَّهُ ٱلَّذِينَ ٱتَّقَوْا۟ بِمَفَازَتِهِمْ لَا يَمَسُّهُمُ ٱلسُّوٓءُ وَلَا هُمْ يَحْزَنُونَ

Kannada Translation - Hamza Buturದೇವಭಯವುಳ್ಳವರನ್ನು ಅಲ್ಲಾಹು ಅವರ ಯಶಸ್ಸಿನೊಂದಿಗೆ ಪಾರು ಮಾಡುವನು. ಯಾವುದೇ ರೀತಿಯ ವ್ಯಥೆಯು ಅವರನ್ನು ಸ್ಪರ್ಶಿಸುವುದಿಲ್ಲ. ಅವರು ದುಃಖಿಸುವುದೂ ಇಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱللَّهُ خَٰلِقُ كُلِّ شَىْءٍ وَهُوَ عَلَىٰ كُلِّ شَىْءٍ وَكِيلٌ

Kannada Translation - Hamza Buturಅಲ್ಲಾಹು ಎಲ್ಲ ವಸ್ತುಗಳ ಸೃಷ್ಟಿಕರ್ತನಾಗಿದ್ದಾನೆ. ಅವನು ಎಲ್ಲ ವಸ್ತುಗಳ ಕಾರ್ಯನಿರ್ವಾಹಕನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَّهُۥ مَقَالِيدُ ٱلسَّمَٰوَٰتِ وَٱلْأَرْضِ وَٱلَّذِينَ كَفَرُوا۟ بِـَٔايَٰتِ ٱللَّهِ أُو۟لَٰٓئِكَ هُمُ ٱلْخَٰسِرُونَ

Kannada Translation - Hamza Buturಭೂಮ್ಯಾಕಾಶಗಳ ಕೀಲಿಗಳು ಅವನಿಗೆ ಸೇರಿದ್ದು. ಅಲ್ಲಾಹನ ವಚನಗಳನ್ನು ನಿಷೇಧಿಸಿದವರು ಯಾರೋ ಅವರೇ ನಷ್ಟ ಹೊಂದಿದವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ أَفَغَيْرَ ٱللَّهِ تَأْمُرُوٓنِّىٓ أَعْبُدُ أَيُّهَا ٱلْجَٰهِلُونَ

Kannada Translation - Hamza Buturಹೇಳಿರಿ: “ಓ ಅಜ್ಞಾನಿಗಳೇ! ನಾನು ಅಲ್ಲಾಹನನ್ನು ಬಿಟ್ಟು ಬೇರೆಯವರನ್ನು ಆರಾಧಿಸಬೇಕೆಂದು ನೀವು ನನಗೆ ಆದೇಶಿಸುತ್ತಿದ್ದೀರಾ?”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ أُوحِىَ إِلَيْكَ وَإِلَى ٱلَّذِينَ مِن قَبْلِكَ لَئِنْ أَشْرَكْتَ لَيَحْبَطَنَّ عَمَلُكَ وَلَتَكُونَنَّ مِنَ ٱلْخَٰسِرِينَ

Kannada Translation - Hamza Buturನೀವೇನಾದರೂ ಸಹಭಾಗಿತ್ವ (ಶಿರ್ಕ್) ಮಾಡಿದರೆ ನಿಶ್ಚಯವಾಗಿಯೂ ನಿಮ್ಮ ಕರ್ಮಗಳು ನಿಷ್ಫಲವಾಗುತ್ತವೆ ಮತ್ತು ನೀವು ನಷ್ಟ ಹೊಂದಿದವರಲ್ಲಿ ಸೇರುವಿರಿ ಎಂದು ನಿಮಗೂ ನಿಮಗಿಂತ ಮೊದಲಿನವರಿಗೂ ದೇವವಾಣಿ ನೀಡಲಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

بَلِ ٱللَّهَ فَٱعْبُدْ وَكُن مِّنَ ٱلشَّٰكِرِينَ

Kannada Translation - Hamza Buturಬದಲಿಗೆ, ನೀವು ಅಲ್ಲಾಹನನ್ನು ಮಾತ್ರ ಆರಾಧಿಸಿರಿ ಮತ್ತು ಕೃತಜ್ಞರಾಗಿರುವವರೊಂದಿಗೆ ಸೇರಿಕೊಳ್ಳಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا قَدَرُوا۟ ٱللَّهَ حَقَّ قَدْرِهِۦ وَٱلْأَرْضُ جَمِيعًا قَبْضَتُهُۥ يَوْمَ ٱلْقِيَٰمَةِ وَٱلسَّمَٰوَٰتُ مَطْوِيَّٰتٌۢ بِيَمِينِهِۦ سُبْحَٰنَهُۥ وَتَعَٰلَىٰ عَمَّا يُشْرِكُونَ

Kannada Translation - Hamza Buturಅವರು ಅಲ್ಲಾಹನಿಗೆ ಮಹತ್ವ ನೀಡಬೇಕಾದ ರೀತಿಯಲ್ಲಿ ಮಹತ್ವ ನೀಡಲಿಲ್ಲ. ಪುನರುತ್ಥಾನ ದಿನದಂದು ಭೂಮಿಯು ಸಂಪೂರ್ಣವಾಗಿ ಅವನ ಮುಷ್ಠಿಯಲ್ಲಿರುತ್ತದೆ ಮತ್ತು ಆಕಾಶಗಳೆಲ್ಲವೂ ಅವನ ಬಲಗೈಯಲ್ಲಿ ಸುರುಳಿಯಾಗಿರುತ್ತವೆ. ಅವರು ಸಹಾಭಾಗಿತ್ವ (ಶಿರ್ಕ್) ಮಾಡುವ ಎಲ್ಲಾ ವಸ್ತುಗಳಿಂದಲೂ ಅವನು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَنُفِخَ فِى ٱلصُّورِ فَصَعِقَ مَن فِى ٱلسَّمَٰوَٰتِ وَمَن فِى ٱلْأَرْضِ إِلَّا مَن شَآءَ ٱللَّهُ ثُمَّ نُفِخَ فِيهِ أُخْرَىٰ فَإِذَا هُمْ قِيَامٌ يَنظُرُونَ

Kannada Translation - Hamza Buturಕಹಳೆಯಲ್ಲಿ ಊದಲಾಗುವಾಗ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲರೂ ಸ್ಮೃತಿ ತಪ್ಪಿ ಬೀಳುವರು. ಅಲ್ಲಾಹು ಇಚ್ಛಿಸಿದವರ ಹೊರತು. ನಂತರ ಅದರಲ್ಲಿ (ಕಹಳೆಯಲ್ಲಿ) ಇನ್ನೊಮ್ಮೆ ಊದಲಾಗುವಾಗ ಅಗೋ! ಅವರು ಎದ್ದು ನಿಂತು ನೋಡುತ್ತಿರುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَشْرَقَتِ ٱلْأَرْضُ بِنُورِ رَبِّهَا وَوُضِعَ ٱلْكِتَٰبُ وَجِا۟ىٓءَ بِٱلنَّبِيِّـۧنَ وَٱلشُّهَدَآءِ وَقُضِىَ بَيْنَهُم بِٱلْحَقِّ وَهُمْ لَا يُظْلَمُونَ

Kannada Translation - Hamza Buturಭೂಮಿಯು ಅದರ ಪರಿಪಾಲಕನ (ಅಲ್ಲಾಹನ) ಪ್ರಭೆಯಿಂದ ಬೆಳಗುವುದು. ಕರ್ಮಪುಸ್ತಕಗಳನ್ನು ಇಡಲಾಗುವುದು, ಪ್ರವಾದಿಗಳನ್ನು ಹಾಗೂ ಸಾಕ್ಷಿಗಳನ್ನು ಕರೆ ತರಲಾಗುವುದು. ನಂತರ ಜನರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَوُفِّيَتْ كُلُّ نَفْسٍ مَّا عَمِلَتْ وَهُوَ أَعْلَمُ بِمَا يَفْعَلُونَ

Kannada Translation - Hamza Buturಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗುವುದು. ಅವರು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ಬಹಳ ಚೆನ್ನಾಗಿ ತಿಳಿದಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَسِيقَ ٱلَّذِينَ كَفَرُوٓا۟ إِلَىٰ جَهَنَّمَ زُمَرًا حَتَّىٰٓ إِذَا جَآءُوهَا فُتِحَتْ أَبْوَٰبُهَا وَقَالَ لَهُمْ خَزَنَتُهَآ أَلَمْ يَأْتِكُمْ رُسُلٌ مِّنكُمْ يَتْلُونَ عَلَيْكُمْ ءَايَٰتِ رَبِّكُمْ وَيُنذِرُونَكُمْ لِقَآءَ يَوْمِكُمْ هَٰذَا قَالُوا۟ بَلَىٰ وَلَٰكِنْ حَقَّتْ كَلِمَةُ ٱلْعَذَابِ عَلَى ٱلْكَٰفِرِينَ

Kannada Translation - Hamza Buturಸತ್ಯನಿಷೇಧಿಗಳನ್ನು ಗುಂಪು ಗುಂಪಾಗಿ ನರಕಕ್ಕೆ ಸಾಗಿಸಲಾಗುವುದು. ಎಲ್ಲಿಯವರೆಗೆಂದರೆ ಅವರು ಅದರ ಸಮೀಪಕ್ಕೆ ಬಂದಾಗ ಅದರ ಬಾಗಿಲುಗಳನ್ನು ತೆರೆಯಲಾಗುವುದು. ಅವುಗಳ ಕಾವಲುಗಾರರು ಕೇಳುವರು: “ನಿಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಓದಿಕೊಡುವ, ನಿಮ್ಮ ಈ ದಿನವನ್ನು ನೀವು ಸಂಧಿಸಲಿರುವಿರಿ ಎಂದು ನಿಮಗೆ ಎಚ್ಚರಿಕೆ ನೀಡುವ, ನಿಮ್ಮವರೇ ಆಗಿರುವ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿರಲಿಲ್ಲವೇ?” ಅವರು ಹೇಳುವರು: “ಹೌದು! ಆದರೆ ಸತ್ಯನಿಷೇಧಿಗಳ ಮೇಲೆ ಶಿಕ್ಷೆಯ ವಚನವು ಖಾತ್ರಿಯಾಗಿ ಬಿಟ್ಟಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قِيلَ ٱدْخُلُوٓا۟ أَبْوَٰبَ جَهَنَّمَ خَٰلِدِينَ فِيهَا فَبِئْسَ مَثْوَى ٱلْمُتَكَبِّرِينَ

Kannada Translation - Hamza Buturಅವರೊಂದಿಗೆ ಹೇಳಲಾಗುವುದು: “ನೀವು ನರಕದ ದ್ವಾರಗಳನ್ನು ಪ್ರವೇಶಿಸಿರಿ. ನೀವು ಅದರಲ್ಲಿ ಶಾಶ್ವತವಾಗಿ ವಾಸಿಸುವಿರಿ. ಅಹಂಕಾರಿಗಳ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ!”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَسِيقَ ٱلَّذِينَ ٱتَّقَوْا۟ رَبَّهُمْ إِلَى ٱلْجَنَّةِ زُمَرًا حَتَّىٰٓ إِذَا جَآءُوهَا وَفُتِحَتْ أَبْوَٰبُهَا وَقَالَ لَهُمْ خَزَنَتُهَا سَلَٰمٌ عَلَيْكُمْ طِبْتُمْ فَٱدْخُلُوهَا خَٰلِدِينَ

Kannada Translation - Hamza Buturತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಟ್ಟು ಜೀವಿಸಿದವರನ್ನು ಗುಂಪು ಗುಂಪಾಗಿ ಸ್ವರ್ಗಕ್ಕೆ ಸಾಗಿಸಲಾಗುವುದು. ಎಲ್ಲಿಯವರೆಗೆಂದರೆ ಅವರು ಅದರ ಸಮೀಪಕ್ಕೆ ಬಂದಾಗ ಅದರ ಬಾಗಿಲುಗಳನ್ನು ತೆರೆಯಲಾಗುವುದು. ಅವುಗಳ ಕಾವಲುಗಾರರು ಹೇಳುವರು: “ನಿಮ್ಮ ಮೇಲೆ ಶಾಂತಿಯಿರಲಿ! ನೀವು ಸಂತೋಷವಾಗಿರಿ. ನೀವು ಶಾಶ್ವತ ನಿವಾಸಿಗಳಾಗಿ ಇದನ್ನು ಪ್ರವೇಶಿಸಿರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالُوا۟ ٱلْحَمْدُ لِلَّهِ ٱلَّذِى صَدَقَنَا وَعْدَهُۥ وَأَوْرَثَنَا ٱلْأَرْضَ نَتَبَوَّأُ مِنَ ٱلْجَنَّةِ حَيْثُ نَشَآءُ فَنِعْمَ أَجْرُ ٱلْعَٰمِلِينَ

Kannada Translation - Hamza Buturಅವರು ಹೇಳುವರು: “ಅಲ್ಲಾಹನಿಗೆ ಸರ್ವಸ್ತುತಿ. ಅವನು ನಮಗೆ ನೀಡಿದ ವಾಗ್ದಾನವನ್ನು ಈಡೇರಿಸಿದ್ದಾನೆ ಮತ್ತು ಸ್ವರ್ಗದಲ್ಲಿ ನಾವು ಇಚ್ಛಿಸುವ ಕಡೆ ವಾಸಿಸಬಹುದಾದ ರೀತಿಯಲ್ಲಿ ಈ ಸ್ವರ್ಗಭೂಮಿಗೆ ನಮ್ಮನ್ನು ಉತ್ತರಾಧಿಕಾರಿಗಳನ್ನಾಗಿ ಮಾಡಿದ್ದಾನೆ. ಕರ್ಮವೆಸಗಿದವರಿಗೆ ದೊರೆಯುವ ಪ್ರತಿಫಲವು ಬಹಳ ಉತ್ತಮವಾಗಿದೆ!

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَتَرَى ٱلْمَلَٰٓئِكَةَ حَآفِّينَ مِنْ حَوْلِ ٱلْعَرْشِ يُسَبِّحُونَ بِحَمْدِ رَبِّهِمْ وَقُضِىَ بَيْنَهُم بِٱلْحَقِّ وَقِيلَ ٱلْحَمْدُ لِلَّهِ رَبِّ ٱلْعَٰلَمِينَ

Kannada Translation - Hamza Buturದೇವದೂತರು‍ಗಳು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ, ಅವನ ಪರಿಶುದ್ಧತೆಯನ್ನು ಕೊಂಡಾಡುತ್ತಾ ಸಿಂಹಾಸನದ ಸುತ್ತಲೂ ನೆರೆಯುವುದನ್ನು ನೀವು ನೋಡುವಿರಿ. ಅವರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. “ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಗೆ ಸರ್ವಸ್ತುತಿ” ಎಂದು ಹೇಳಲಾಗುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70