يَٰٓأَيُّهَا ٱلَّذِينَ ءَامَنُوا۟ لَا تَقْرَبُوا۟ ٱلصَّلَوٰةَ وَأَنتُمْ سُكَٰرَىٰ حَتَّىٰ تَعْلَمُوا۟ مَا تَقُولُونَ وَلَا جُنُبًا إِلَّا عَابِرِى سَبِيلٍ حَتَّىٰ تَغْتَسِلُوا۟ وَإِن كُنتُم مَّرْضَىٰٓ أَوْ عَلَىٰ سَفَرٍ أَوْ جَآءَ أَحَدٌ مِّنكُم مِّنَ ٱلْغَآئِطِ أَوْ لَٰمَسْتُمُ ٱلنِّسَآءَ فَلَمْ تَجِدُوا۟ مَآءً فَتَيَمَّمُوا۟ صَعِيدًا طَيِّبًا فَٱمْسَحُوا۟ بِوُجُوهِكُمْ وَأَيْدِيكُمْ إِنَّ ٱللَّهَ كَانَ عَفُوًّا غَفُورًا
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಪಾನಮತ್ತರಾದ ಸ್ಥಿತಿಯಲ್ಲಿ ನೀವು ನಮಾಝ್ ಮಾಡಲು ಬರಬೇಡಿ—ನೀವೇನು ಹೇಳುತ್ತಿದ್ದೀರಿ ಎಂದು ನಿಮಗೆ ಅರ್ಥವಾಗುವ ತನಕ. ದೊಡ್ಡ ಅಶುದ್ಧಿಯಿರುವಾಗಲೂ[1] ಬರಬೇಡಿ—ಸ್ನಾನ ಮಾಡಿ ಶುದ್ಧರಾಗುವ ತನಕ. ಆದರೆ (ಮಸೀದಿಯ ಮೂಲಕ) ಹಾದು ಹೋಗುವುದರಲ್ಲಿ ತೊಂದರೆಯಿಲ್ಲ. ನೀವು ಅನಾರೋಗ್ಯದಲ್ಲಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ; ಅಥವಾ ನಿಮ್ಮಲ್ಲೊಬ್ಬನು ಮಲಮೂತ್ರ ವಿಸರ್ಜನೆ ಮಾಡಿ ಬಂದಿದ್ದರೆ, ಅಥವಾ ಮಹಿಳೆಯರನ್ನು ಸ್ಪರ್ಶಿಸಿದ್ದರೆ (ಲೈಂಗಿಕ ಸಂಪರ್ಕ ಮಾಡಿದ್ದರೆ); ನಂತರ ನಿಮಗೆ ಶುದ್ಧಿಯಾಗಲು ನೀರು ದೊರೆಯದಿದ್ದರೆ, ಶುದ್ಧ ಮಣ್ಣಿನಿಂದ ತಯಮ್ಮುಮ್[2] ಮಾಡಿ ಮುಖ ಮತ್ತು ಕೈಗಳನ್ನು ಸವರಿರಿ. ನಿಶ್ಚಯವಾಗಿಯೂ ಅಲ್ಲಾಹು ಮನ್ನಿಸುವವನು ಮತ್ತು ಕ್ಷಮಿಸುವವನಾಗಿದ್ದಾನೆ.