caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 6

ಮದೀನಾ · ಅವತರಣ ಕ್ರಮ 92 · 4:6

وَٱبْتَلُوا۟ ٱلْيَتَٰمَىٰ حَتَّىٰٓ إِذَا بَلَغُوا۟ ٱلنِّكَاحَ فَإِنْ ءَانَسْتُم مِّنْهُمْ رُشْدًا فَٱدْفَعُوٓا۟ إِلَيْهِمْ أَمْوَٰلَهُمْ وَلَا تَأْكُلُوهَآ إِسْرَافًا وَبِدَارًا أَن يَكْبَرُوا۟ وَمَن كَانَ غَنِيًّا فَلْيَسْتَعْفِفْ وَمَن كَانَ فَقِيرًا فَلْيَأْكُلْ بِٱلْمَعْرُوفِ فَإِذَا دَفَعْتُمْ إِلَيْهِمْ أَمْوَٰلَهُمْ فَأَشْهِدُوا۟ عَلَيْهِمْ وَكَفَىٰ بِٱللَّهِ حَسِيبًا

Kannada Translation - Hamza Buturಅನಾಥರು ಪ್ರೌಢರಾಗುವ ತನಕ ಅವರನ್ನು ಪರೀಕ್ಷಿಸುತ್ತಿರಿ. ಅವರಲ್ಲಿ ವಿವೇಕ ಮತ್ತು ವ್ಯವಹಾರ ಪ್ರಜ್ಞೆಯನ್ನು ಕಂಡರೆ, ಅವರ ಆಸ್ತಿಯನ್ನು ಅವರಿಗೆ ಹಸ್ತಾಂತರಿಸಿ. ಅವರು ಪ್ರೌಢರಾಗುತ್ತಿದ್ದಾರೆಂಬ ಭಯದಿಂದ ಅವರ ಆಸ್ತಿಯನ್ನು ಅಗತ್ಯಕ್ಕಿಂತ ಹೆಚ್ಚಾಗಿ ತ್ವರೆಯಿಂದ ತಿನ್ನಬೇಡಿ. ಪೋಷಕನು ಶ್ರೀಮಂತನಾಗಿದ್ದರೆ ಆ ಆಸ್ತಿಯನ್ನು ಮುಟ್ಟದೆ ಸಂಯಮ ತೋರಲಿ. ಆದರೆ ಅವನು ಬಡವನಾಗಿದ್ದರೆ ಅಗತ್ಯಕ್ಕೆ ತಕ್ಕಷ್ಟು ಮಾತ್ರ ತೆಗೆದುಕೊಳ್ಳಲಿ. ಅವರ ಆಸ್ತಿಯನ್ನು ಅವರಿಗೆ ಹಸ್ತಾಂತರಿಸುವಾಗ ಸಾಕ್ಷಿಗಳನ್ನು ನಿಲ್ಲಿಸಿರಿ. ವಿಚಾರಣೆ ಮಾಡುವವನಾಗಿ ಅಲ್ಲಾಹು ಸಾಕು.
Looking for a topic? Try the meaning search — your question is scanned across all 6,236 verses.
ಭಾಷೆ — 70