ٱلَّذِينَ يَحْمِلُونَ ٱلْعَرْشَ وَمَنْ حَوْلَهُۥ يُسَبِّحُونَ بِحَمْدِ رَبِّهِمْ وَيُؤْمِنُونَ بِهِۦ وَيَسْتَغْفِرُونَ لِلَّذِينَ ءَامَنُوا۟ رَبَّنَا وَسِعْتَ كُلَّ شَىْءٍ رَّحْمَةً وَعِلْمًا فَٱغْفِرْ لِلَّذِينَ تَابُوا۟ وَٱتَّبَعُوا۟ سَبِيلَكَ وَقِهِمْ عَذَابَ ٱلْجَحِيمِ
Kannada Translation - Hamza Buturಸಿಂಹಾಸನವನ್ನು ಹೊರುವವರು ಮತ್ತು ಅದರ ಸುತ್ತಲಲ್ಲಿರುವವರು (ದೇವದೂತರುಗಳು) ಅವರ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುವುದರೊಂದಿಗೆ ಅವನ ಪರಿಶುದ್ಧಿಯನ್ನು ಕೊಂಡಾಡುತ್ತಾರೆ. ಅವರು ಅವನಲ್ಲಿ ವಿಶ್ವಾಸವಿಟ್ಟಿದ್ದಾರೆ ಮತ್ತು ಸತ್ಯವಿಶ್ವಾಸಿಗಳಿಗಾಗಿ ಕ್ಷಮೆಯಾಚನೆ ಮಾಡುತ್ತಾ ಪ್ರಾರ್ಥಿಸುತ್ತಾರೆ: “ನಮ್ಮ ಪರಿಪಾಲಕನೇ! ನೀನು ನಿನ್ನ ದಯೆ ಮತ್ತು ಜ್ಞಾನದ ಮೂಲಕ ಎಲ್ಲಾ ವಸ್ತುಗಳನ್ನು ಆವರಿಸಿಕೊಂಡಿರುವೆ. ಆದ್ದರಿಂದ ಪಶ್ಚಾತ್ತಾಪಪಡುವವರನ್ನು ಮತ್ತು ನಿನ್ನ ಮಾರ್ಗವನ್ನು ಹಿಂಬಾಲಿಸುವವರನ್ನು ಕ್ಷಮಿಸು. ಅವರನ್ನು ನರಕ ಶಿಕ್ಷೆಯಿಂದ ಪಾರು ಮಾಡು.