ಮುಖಪುಟ › ಸೂರಗಳು › ಸೂರ Ad-Dukhaan
ಸೂರ Ad-Dukhaan الدخان
59 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 64
بِسْمِ ٱللَّهِ ٱلرَّحْمَٰنِ ٱلرَّحِيمِ حمٓ
Kannada Translation - Hamza Butur ಹಾ-ಮೀಮ್.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱلْكِتَٰبِ ٱلْمُبِينِ
Kannada Translation - Hamza Butur ಸ್ಪಷ್ಟ ಗ್ರಂಥದ ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّآ أَنزَلْنَٰهُ فِى لَيْلَةٍ مُّبَٰرَكَةٍ إِنَّا كُنَّا مُنذِرِينَ
Kannada Translation - Hamza Butur ನಿಶ್ಚಯವಾಗಿಯೂ ನಾವು ಇದನ್ನು ಒಂದು ಸಮೃದ್ಧ ರಾತ್ರಿಯಲ್ಲಿ ಅವತೀರ್ಣಗೊಳಿಸಿದ್ದೇನೆ. ನಿಶ್ಚಯವಾಗಿಯೂ ನಾವು ಮುನ್ನೆಚ್ಚರಿಕೆ ನೀಡುವವರಾಗಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فِيهَا يُفْرَقُ كُلُّ أَمْرٍ حَكِيمٍ
Kannada Translation - Hamza Butur ಆ ರಾತ್ರಿಯಲ್ಲಿ ಎಲ್ಲಾ ಕಟ್ಟುನಿಟ್ಟಿನ ಕಾರ್ಯಗಳನ್ನು ನಿರ್ಣಯಿಸಲಾಗುವುದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْرًا مِّنْ عِندِنَآ إِنَّا كُنَّا مُرْسِلِينَ
Kannada Translation - Hamza Butur ನಮ್ಮ ಕಡೆಯ ಆಜ್ಞೆಯಿಂದ! ನಿಶ್ಚಯವಾಗಿಯೂ ನಾವೇ (ಸಂದೇಶವಾಹಕರನ್ನು) ಕಳುಹಿಸುವವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
رَحْمَةً مِّن رَّبِّكَ إِنَّهُۥ هُوَ ٱلسَّمِيعُ ٱلْعَلِيمُ
Kannada Translation - Hamza Butur ನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಯಿಂದ. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
رَبِّ ٱلسَّمَٰوَٰتِ وَٱلْأَرْضِ وَمَا بَيْنَهُمَآ إِن كُنتُم مُّوقِنِينَ
Kannada Translation - Hamza Butur ಅವನು ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ. ನೀವು ದೃಢವಾಗಿ ವಿಶ್ವಾಸವಿಡುವವರಾಗಿದ್ದರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَآ إِلَٰهَ إِلَّا هُوَ يُحْىِۦ وَيُمِيتُ رَبُّكُمْ وَرَبُّ ءَابَآئِكُمُ ٱلْأَوَّلِينَ
Kannada Translation - Hamza Butur ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಜೀವ ಮತ್ತು ಮರಣವನ್ನು ನೀಡುತ್ತಾನೆ. ಅವನು ನಿಮ್ಮ ಮತ್ತು ನಿಮ್ಮ ಪೂರ್ವಜರ ಪರಿಪಾಲಕನಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
بَلْ هُمْ فِى شَكٍّ يَلْعَبُونَ
Kannada Translation - Hamza Butur ಆದರೆ ಅವರು ಸಂಶಯದಲ್ಲಿ ಬಿದ್ದು ಆಡುತ್ತಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱرْتَقِبْ يَوْمَ تَأْتِى ٱلسَّمَآءُ بِدُخَانٍ مُّبِينٍ
Kannada Translation - Hamza Butur ಆಕಾಶವು ಸ್ಪಷ್ಟವಾಗಿ ಕಾಣುವ ಹೊಗೆಯನ್ನು ತರುವ ದಿನವನ್ನು ನಿರೀಕ್ಷಿಸಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَغْشَى ٱلنَّاسَ هَٰذَا عَذَابٌ أَلِيمٌ
Kannada Translation - Hamza Butur ಅದು ಮನುಷ್ಯರನ್ನು ಆವರಿಸಿಕೊಳ್ಳುವುದು. ಇದು ಯಾತನಾಮಯ ಶಿಕ್ಷೆಯಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
رَّبَّنَا ٱكْشِفْ عَنَّا ٱلْعَذَابَ إِنَّا مُؤْمِنُونَ
Kannada Translation - Hamza Butur (ಅವರು ಹೇಳುವರು): “ನಮ್ಮ ಪರಿಪಾಲಕನೇ! ನಮ್ಮಿಂದ ಈ ಶಿಕ್ಷೆಯನ್ನು ನಿವಾರಿಸು. ನಿಶ್ಚಯವಾಗಿಯೂ ನಾವು ವಿಶ್ವಾಸವಿಡುತ್ತೇವೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَنَّىٰ لَهُمُ ٱلذِّكْرَىٰ وَقَدْ جَآءَهُمْ رَسُولٌ مُّبِينٌ
Kannada Translation - Hamza Butur ಅವರಿಗೆ ಉಪದೇಶವು ಪ್ರಯೋಜನಪಡುವುದು ಹೇಗೆ? (ವಿಷಯವನ್ನು) ಸ್ಪಷ್ಟವಾಗಿ ವಿವರಿಸುವ ಒಬ್ಬ ಸಂದೇಶವಾಹಕರು ಅವರ ಬಳಿಗೆ ಬಂದಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ثُمَّ تَوَلَّوْا۟ عَنْهُ وَقَالُوا۟ مُعَلَّمٌ مَّجْنُونٌ
Kannada Translation - Hamza Butur ಆದರೂ ಅವರು ಆ ಸಂದೇಶವಾಹಕರಿಂದ ವಿಮುಖರಾದರು. ಅವರು ಹೇಳಿದರು: “ಇವನು ಕಲಿಸಿಕೊಡಲಾದ ಮಾನಸಿಕ ಅಸ್ವಸ್ಥ!”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّا كَاشِفُوا۟ ٱلْعَذَابِ قَلِيلًا إِنَّكُمْ عَآئِدُونَ
Kannada Translation - Hamza Butur ನಿಶ್ಚಯವಾಗಿಯೂ ನಾವು ಶಿಕ್ಷೆಯನ್ನು ಸ್ವಲ್ಪ ನಿವಾರಿಸುವೆವು. ಆದರೆ ನೀವು ನಿಶ್ಚಯವಾಗಿಯೂ (ಹಿಂದಿನ ಸ್ಥಿತಿಗೇ) ಮರಳುವಿರಿ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَوْمَ نَبْطِشُ ٱلْبَطْشَةَ ٱلْكُبْرَىٰٓ إِنَّا مُنتَقِمُونَ
Kannada Translation - Hamza Butur ನಾವು ಅತ್ಯಂತ ಬಲಿಷ್ಠ ಹಿಡಿತದೊಂದಿಗೆ ಹಿಡಿಯುವ ದಿನ! ನಿಶ್ಚಯವಾಗಿಯೂ ನಾವು ಪ್ರತೀಕಾರ ಪಡೆಯುವೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ فَتَنَّا قَبْلَهُمْ قَوْمَ فِرْعَوْنَ وَجَآءَهُمْ رَسُولٌ كَرِيمٌ
Kannada Translation - Hamza Butur ಅವರಿಗಿಂತ ಮೊದಲು ಫರೋಹನ ಜನರನ್ನು ನಾವು ಪರೀಕ್ಷಿಸಿದ್ದೆವು. ಒಬ್ಬ ಗೌರವಾನ್ವಿತ ಸಂದೇಶವಾಹಕರು (ಮೂಸಾ) ಅವರ ಬಳಿಗೆ ಬಂದಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَنْ أَدُّوٓا۟ إِلَىَّ عِبَادَ ٱللَّهِ إِنِّى لَكُمْ رَسُولٌ أَمِينٌ
Kannada Translation - Hamza Butur (ಅವರು ಹೇಳಿದರು): “ಅಲ್ಲಾಹನ ದಾಸರನ್ನು ನನಗೆ ಒಪ್ಪಿಸಿರಿ. ನಿಶ್ಚಯವಾಗಿಯೂ ನಾನು ನಿಮ್ಮ ಬಳಿಗೆ ಬಂದ ಒಬ್ಬ ವಿಶ್ವಾಸಾರ್ಹ ಸಂದೇಶವಾಹಕನಾಗಿದ್ದೇನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَن لَّا تَعْلُوا۟ عَلَى ٱللَّهِ إِنِّىٓ ءَاتِيكُم بِسُلْطَٰنٍ مُّبِينٍ
Kannada Translation - Hamza Butur ನೀವು ಅಲ್ಲಾಹನ ಮುಂದೆ ದರ್ಪ ತೋರಬೇಡಿ. ನಿಶ್ಚಯವಾಗಿಯೂ ನಾನು ನಿಮ್ಮ ಬಳಿಗೆ ಸ್ಪಷ್ಟ ಸಾಕ್ಷ್ಯವನ್ನು ತರುವೆನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنِّى عُذْتُ بِرَبِّى وَرَبِّكُمْ أَن تَرْجُمُونِ
Kannada Translation - Hamza Butur ನೀವು ನನಗೆ ಕಲ್ಲೆಸೆಯದಿರಲು ನಾನು ನನ್ನ ಮತ್ತು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಅಭಯ ಯಾಚಿಸುತ್ತೇನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِن لَّمْ تُؤْمِنُوا۟ لِى فَٱعْتَزِلُونِ
Kannada Translation - Hamza Butur ನೀವು ನನ್ನಲ್ಲಿ ವಿಶ್ವಾಸವಿಡುವುದಿಲ್ಲ ಎಂದಾದರೆ ನನ್ನಿಂದ ಬೇರೆ ಹೋಗಿರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَدَعَا رَبَّهُۥٓ أَنَّ هَٰٓؤُلَآءِ قَوْمٌ مُّجْرِمُونَ
Kannada Translation - Hamza Butur ಇವರೆಲ್ಲರೂ ಅಪರಾಧಿಗಳಾದ ಜನರು ಎಂದು ಅವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَسْرِ بِعِبَادِى لَيْلًا إِنَّكُم مُّتَّبَعُونَ
Kannada Translation - Hamza Butur (ಅಲ್ಲಾಹು ಹೇಳಿದನು): “ನೀವು ರಾತ್ರಿ ವೇಳೆ ನನ್ನ ದಾಸರೊಡನೆ ಹೊರಡಿರಿ. ನಿಶ್ಚಯವಾಗಿಯೂ ವೈರಿಗಳು ನಿಮ್ಮನ್ನು ಹಿಂಬಾಲಿಸುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱتْرُكِ ٱلْبَحْرَ رَهْوًا إِنَّهُمْ جُندٌ مُّغْرَقُونَ
Kannada Translation - Hamza Butur ನೀವು ಸಮುದ್ರವನ್ನು ಶಾಂತ ಸ್ಥಿತಿಯಲ್ಲಿ ಬಿಟ್ಟುಬಿಡಿ. ನಿಶ್ಚಯವಾಗಿಯೂ ಈ ಸೈನ್ಯವನ್ನು ಮುಳುಗಿಸಲಾಗುವುದು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَمْ تَرَكُوا۟ مِن جَنَّٰتٍ وَعُيُونٍ
Kannada Translation - Hamza Butur ಅವರು ಎಷ್ಟೊಂದು ತೋಟಗಳನ್ನು ಮತ್ತು ತೊರೆಗಳನ್ನು ಬಿಟ್ಟು ಹೋದರು!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَزُرُوعٍ وَمَقَامٍ كَرِيمٍ
Kannada Translation - Hamza Butur ಎಷ್ಟೊಂದು ಕೃಷಿಗಳನ್ನು ಮತ್ತು ಗೌರವಾನ್ವಿತ ವಸತಿಗಳನ್ನು!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَنَعْمَةٍ كَانُوا۟ فِيهَا فَٰكِهِينَ
Kannada Translation - Hamza Butur ಅವರು ಆನಂದದಿಂದ ಅನುಭವಿಸುತ್ತಿದ್ದ ಎಷ್ಟೊಂದು ಸವಲತ್ತುಗಳನ್ನು!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَذَٰلِكَ وَأَوْرَثْنَٰهَا قَوْمًا ءَاخَرِينَ
Kannada Translation - Hamza Butur ಈ ರೀತಿ ಅದು ಸಂಭವಿಸಿತು. ನಾವು ಅವೆಲ್ಲವನ್ನೂ ಬೇರೆ ಜನರಿಗೆ ಉತ್ತರಾಧಿಕಾರವಾಗಿ ನೀಡಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَمَا بَكَتْ عَلَيْهِمُ ٱلسَّمَآءُ وَٱلْأَرْضُ وَمَا كَانُوا۟ مُنظَرِينَ
Kannada Translation - Hamza Butur ಆಕಾಶ ಅಥವಾ ಭೂಮಿ ಅವರಿಗಾಗಿ ಅಳಲಿಲ್ಲ. ಅವರಿಗೆ ಕಾಲಾವಕಾಶವೂ ದೊರೆಯಲಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدْ نَجَّيْنَا بَنِىٓ إِسْرَٰٓءِيلَ مِنَ ٱلْعَذَابِ ٱلْمُهِينِ
Kannada Translation - Hamza Butur ನಾವು ಇಸ್ರಾಯೇಲ್ ಮಕ್ಕಳನ್ನು ಅವಮಾನಕರ ಶಿಕ್ಷೆಯಿಂದ ಪಾರು ಮಾಡಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مِن فِرْعَوْنَ إِنَّهُۥ كَانَ عَالِيًا مِّنَ ٱلْمُسْرِفِينَ
Kannada Translation - Hamza Butur ಫರೋಹನಿಂದ. ನಿಶ್ಚಯವಾಗಿಯೂ ಅವನು ಅಹಂಕಾರಿಯಾಗಿದ್ದು ಎಲ್ಲೆ ಮೀರಿದವರಲ್ಲಿ ಸೇರಿದ್ದನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَقَدِ ٱخْتَرْنَٰهُمْ عَلَىٰ عِلْمٍ عَلَى ٱلْعَٰلَمِينَ
Kannada Translation - Hamza Butur ನಿಶ್ಚಯವಾಗಿಯೂ ನಾವು ತಿಳಿದೂ ಸಹ ಇಸ್ರಾಯೇಲ್ ಮಕ್ಕಳನ್ನು (ಸಮಕಾಲೀನ) ಜಗತ್ತಿನಲ್ಲಿ ಶ್ರೇಷ್ಠಗೊಳಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَءَاتَيْنَٰهُم مِّنَ ٱلْـَٔايَٰتِ مَا فِيهِ بَلَٰٓؤٌا۟ مُّبِينٌ
Kannada Translation - Hamza Butur ನಾವು ಅವರಿಗೆ ಸ್ಪಷ್ಟ ಪರೀಕ್ಷೆಯನ್ನು ಹೊಂದಿದ್ದ ದೃಷ್ಟಾಂತಗಳನ್ನು ನೀಡಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ هَٰٓؤُلَآءِ لَيَقُولُونَ
Kannada Translation - Hamza Butur ನಿಶ್ಚಯವಾಗಿಯೂ ಇವರು (ಸತ್ಯನಿಷೇಧಿಗಳು) ಹೇಳುತ್ತಾರೆ:
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنْ هِىَ إِلَّا مَوْتَتُنَا ٱلْأُولَىٰ وَمَا نَحْنُ بِمُنشَرِينَ
Kannada Translation - Hamza Butur “ನಮ್ಮ ಮೊದಲ ಸಾವಲ್ಲದೆ ಬೇರೇನೂ ಇಲ್ಲ. ನಮ್ಮನ್ನು ಪುನಃ ಜೀವಂತಗೊಳಿಸಲಾಗುವುದೂ ಇಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأْتُوا۟ بِـَٔابَآئِنَآ إِن كُنتُمْ صَٰدِقِينَ
Kannada Translation - Hamza Butur ನೀವು ಸತ್ಯವಂತರಾಗಿದ್ದರೆ (ಸತ್ತು ಹೋದ) ನಮ್ಮ ಪೂರ್ವಜರನ್ನು ಕರೆದುಕೊಂಡು ಬನ್ನಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَهُمْ خَيْرٌ أَمْ قَوْمُ تُبَّعٍ وَٱلَّذِينَ مِن قَبْلِهِمْ أَهْلَكْنَٰهُمْ إِنَّهُمْ كَانُوا۟ مُجْرِمِينَ
Kannada Translation - Hamza Butur ಇವರು ಶ್ರೇಷ್ಠರೋ? ಅಥವಾ ತುಬ್ಬಅ್‌ನ ಜನರು[1] ಮತ್ತು ಅವರಿಗಿಂತ ಮೊದಲಿನವರೋ? ನಾವು ಅವರೆಲ್ಲರನ್ನು ನಾಶ ಮಾಡಿದೆವು. ನಿಶ್ಚಯವಾಗಿಯೂ ಅವರು ಅಪರಾಧಿಗಳಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمَا خَلَقْنَا ٱلسَّمَٰوَٰتِ وَٱلْأَرْضَ وَمَا بَيْنَهُمَا لَٰعِبِينَ
Kannada Translation - Hamza Butur ನಾವು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ವಸ್ತುಗಳನ್ನು ಆಟಕ್ಕಾಗಿ ಸೃಷ್ಟಿಸಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مَا خَلَقْنَٰهُمَآ إِلَّا بِٱلْحَقِّ وَلَٰكِنَّ أَكْثَرَهُمْ لَا يَعْلَمُونَ
Kannada Translation - Hamza Butur ನಾವು ಅವುಗಳನ್ನು ಸರಿಯಾದ ಉದ್ದೇಶದಿಂದಲೇ ಸೃಷ್ಟಿಸಿದ್ದೇವೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ يَوْمَ ٱلْفَصْلِ مِيقَٰتُهُمْ أَجْمَعِينَ
Kannada Translation - Hamza Butur ನಿಶ್ಚಯವಾಗಿಯೂ ತೀರ್ಪು ನೀಡುವ ದಿನವು ಅವರೆಲ್ಲರಿಗೂ ನಿಶ್ಚಯಿಸಲಾದ ದಿನವಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَوْمَ لَا يُغْنِى مَوْلًى عَن مَّوْلًى شَيْـًٔا وَلَا هُمْ يُنصَرُونَ
Kannada Translation - Hamza Butur ಅಂದು ಒಬ್ಬ ಗೆಳೆಯ ಇನ್ನೊಬ್ಬ ಗೆಳೆಯನಿಗೆ ಯಾವುದೇ ಉಪಕಾರ ಮಾಡುವುದಿಲ್ಲ. ಅವರಿಗೆ ಸಹಾಯವೂ ದೊರೆಯುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِلَّا مَن رَّحِمَ ٱللَّهُ إِنَّهُۥ هُوَ ٱلْعَزِيزُ ٱلرَّحِيمُ
Kannada Translation - Hamza Butur ಅಲ್ಲಾಹು ದಯೆ ತೋರಿದವರ ಹೊರತು. ನಿಶ್ಚಯವಾಗಿಯೂ ಅವನು ಪ್ರಬಲನು ಮತ್ತು ದಯೆ ತೋರುವವನಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ شَجَرَتَ ٱلزَّقُّومِ
Kannada Translation - Hamza Butur ನಿಶ್ಚಯವಾಗಿಯೂ ಝಕ್ಕೂಮ್ ಮರವು,
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
طَعَامُ ٱلْأَثِيمِ
Kannada Translation - Hamza Butur ಪಾಪಿಗಳ ಆಹಾರವಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَٱلْمُهْلِ يَغْلِى فِى ٱلْبُطُونِ
Kannada Translation - Hamza Butur ಅದು ಕಾಯಿಸಿದ ಲೋಹದಂತಿದೆ. ಅದು ಹೊಟ್ಟೆಯಲ್ಲಿ ಕುದಿಯುತ್ತದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَغَلْىِ ٱلْحَمِيمِ
Kannada Translation - Hamza Butur ಬಿಸಿ ನೀರು ಕುದಿಯುವಂತೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
خُذُوهُ فَٱعْتِلُوهُ إِلَىٰ سَوَآءِ ٱلْجَحِيمِ
Kannada Translation - Hamza Butur “ಅವನನ್ನು ಹಿಡಿಯಿರಿ ಮತ್ತು ನರಕಾಗ್ನಿಯ ಮಧ್ಯಭಾಗಕ್ಕೆ ಎಳೆದೊಯ್ಯಿರಿ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ثُمَّ صُبُّوا۟ فَوْقَ رَأْسِهِۦ مِنْ عَذَابِ ٱلْحَمِيمِ
Kannada Translation - Hamza Butur ನಂತರ ಅವನ ತಲೆಯ ಮೇಲೆ ಕುದಿಯುವ ನೀರಿನ ಶಿಕ್ಷೆಯನ್ನು ಸುರಿಯಿರಿ!”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ذُقْ إِنَّكَ أَنتَ ٱلْعَزِيزُ ٱلْكَرِيمُ
Kannada Translation - Hamza Butur (ಅವನೊಡನೆ ಹೇಳಲಾಗುವುದು): “ಇದರ ರುಚಿ ನೋಡು! ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ಗೌರವಾನ್ವಿತನಾಗಿದ್ದೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ هَٰذَا مَا كُنتُم بِهِۦ تَمْتَرُونَ
Kannada Translation - Hamza Butur ನಿಶ್ಚಯವಾಗಿಯೂ ಇದು ನೀವು ಸಂಶಯಪಡುತ್ತಿದ್ದ ವಿಷಯವಾಗಿದೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ ٱلْمُتَّقِينَ فِى مَقَامٍ أَمِينٍ
Kannada Translation - Hamza Butur ನಿಶ್ಚಯವಾಗಿಯೂ ದೇವಭಯವುಳ್ಳವರು ನಿರ್ಭಯ ಸ್ಥಳದಲ್ಲಿರುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فِى جَنَّٰتٍ وَعُيُونٍ
Kannada Translation - Hamza Butur ತೋಟಗಳಲ್ಲಿ ಮತ್ತು ತೊರೆಗಳಲ್ಲಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَلْبَسُونَ مِن سُندُسٍ وَإِسْتَبْرَقٍ مُّتَقَٰبِلِينَ
Kannada Translation - Hamza Butur ನಯ ಮತ್ತು ದಪ್ಪ ರೇಷ್ಮೆ ಉಡುಪುಗಳನ್ನು ಧರಿಸಿ, ಪರಸ್ಪರ ಎದುರು-ಬದುರು ಕುಳಿತಿರುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَذَٰلِكَ وَزَوَّجْنَٰهُم بِحُورٍ عِينٍ
Kannada Translation - Hamza Butur (ಅವರ ಸ್ಥಿತಿ) ಈ ರೀತಿಯಾಗಿದೆ. ನಾವು ಅರಳಿದ ಕಣ್ಣುಗಳ ಬೆಳ್ಳಗಿನ ಸ್ತ್ರೀಯರನ್ನು ಅವರಿಗೆ ವಿವಾಹ ಮಾಡಿಕೊಡುವೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَدْعُونَ فِيهَا بِكُلِّ فَٰكِهَةٍ ءَامِنِينَ
Kannada Translation - Hamza Butur ಅವರು ನಿರ್ಭಯ ಸ್ಥಿತಿಯಲ್ಲಿದ್ದು ಎಲ್ಲ ತರಹದ ಹಣ್ಣುಗಳನ್ನು ಬೇಡುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لَا يَذُوقُونَ فِيهَا ٱلْمَوْتَ إِلَّا ٱلْمَوْتَةَ ٱلْأُولَىٰ وَوَقَىٰهُمْ عَذَابَ ٱلْجَحِيمِ
Kannada Translation - Hamza Butur ಅವರು ಮೊದಲನೆಯ ಮರಣದ ಹೊರತು ಬೇರೊಂದು ಮರಣದ ರುಚಿಯನ್ನು ನೋಡುವುದಿಲ್ಲ. ಅವನು ಅವರನ್ನು ನರಕ ಶಿಕ್ಷೆಯಿಂದ ಪಾರು ಮಾಡುವನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَضْلًا مِّن رَّبِّكَ ذَٰلِكَ هُوَ ٱلْفَوْزُ ٱلْعَظِيمُ
Kannada Translation - Hamza Butur ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಔದಾರ್ಯವಾಗಿದೆ. ಇದೇ ಮಹಾ ಯಶಸ್ಸು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَإِنَّمَا يَسَّرْنَٰهُ بِلِسَانِكَ لَعَلَّهُمْ يَتَذَكَّرُونَ
Kannada Translation - Hamza Butur ಅವರು ಉಪದೇಶವನ್ನು ಪಡೆಯುವುದಕ್ಕಾಗಿ ನಾವು ಇದನ್ನು (ಕುರ್‌ಆನನ್ನು) ನಿಮ್ಮ ಭಾಷೆಯಲ್ಲಿ ಸರಳಗೊಳಿಸಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱرْتَقِبْ إِنَّهُم مُّرْتَقِبُونَ
Kannada Translation - Hamza Butur ನೀವು ಕಾಯಿರಿ. ಅವರು ಕೂಡ ಕಾಯುತ್ತಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
← ಸೂರ Az-Zukhruf
ಸೂರ Al-Jaathiya →
Looking for a topic? Try the meaning search — your question is scanned across all 6,236 verses.
→
Arabic text and translations via Tanzil and QuranEnc — verbatim, unmodified · Translations belong to their translators and are not the Qur'an itself
ಇದು ಸಂಶೋಧನಾ ಸಹಾಯಕ; ಧಾರ್ಮಿಕ ತೀರ್ಪಿನ ಮೂಲವಲ್ಲ.