أَمْ يَقُولُونَ ٱفْتَرَىٰهُ قُلْ إِنِ ٱفْتَرَيْتُهُۥ فَلَا تَمْلِكُونَ لِى مِنَ ٱللَّهِ شَيْـًٔا هُوَ أَعْلَمُ بِمَا تُفِيضُونَ فِيهِ كَفَىٰ بِهِۦ شَهِيدًۢا بَيْنِى وَبَيْنَكُمْ وَهُوَ ٱلْغَفُورُ ٱلرَّحِيمُ
Kannada Translation - Hamza Buturಅದನ್ನು ಅವರು (ಪ್ರವಾದಿ) ಸ್ವಯಂ ರಚಿಸಿದರು ಎಂದು ಅವರು ಹೇಳುತ್ತಿದ್ದಾರೆಯೇ? ಹೇಳಿರಿ: “ಅದನ್ನು ನಾನೇ ಸ್ವಯಂ ರಚಿಸಿದ್ದರೆ ಅಲ್ಲಾಹನ ಶಿಕ್ಷೆಯಿಂದ ನನ್ನನ್ನು ರಕ್ಷಿಸಲು ನಿಮಗೆ ಸಾಧ್ಯವಿಲ್ಲ. ನೀವು ಅದರ (ಕುರ್‌ಆನಿನ) ಬಗ್ಗೆ ಏನು ಮಾತನಾಡುತ್ತಿದ್ದೀರೋ ಅದನ್ನು ಅವನು ಬಹಳ ಚೆನ್ನಾಗಿ ತಿಳಿದಿದ್ದಾನೆ. ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅವನೇ ಸಾಕು. ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”