caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Maaida, ಆಯತ್ 106

ಮದೀನಾ · ಅವತರಣ ಕ್ರಮ 112 · 5:106

يَٰٓأَيُّهَا ٱلَّذِينَ ءَامَنُوا۟ شَهَٰدَةُ بَيْنِكُمْ إِذَا حَضَرَ أَحَدَكُمُ ٱلْمَوْتُ حِينَ ٱلْوَصِيَّةِ ٱثْنَانِ ذَوَا عَدْلٍ مِّنكُمْ أَوْ ءَاخَرَانِ مِنْ غَيْرِكُمْ إِنْ أَنتُمْ ضَرَبْتُمْ فِى ٱلْأَرْضِ فَأَصَٰبَتْكُم مُّصِيبَةُ ٱلْمَوْتِ تَحْبِسُونَهُمَا مِنۢ بَعْدِ ٱلصَّلَوٰةِ فَيُقْسِمَانِ بِٱللَّهِ إِنِ ٱرْتَبْتُمْ لَا نَشْتَرِى بِهِۦ ثَمَنًا وَلَوْ كَانَ ذَا قُرْبَىٰ وَلَا نَكْتُمُ شَهَٰدَةَ ٱللَّهِ إِنَّآ إِذًا لَّمِنَ ٱلْـَٔاثِمِينَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನಿಮ್ಮಲ್ಲೊಬ್ಬನು ಮರಣಶಯ್ಯೆಯಲ್ಲಿದ್ದು ಉಯಿಲು ಮಾಡುವಾಗ, ನಿಮ್ಮಲ್ಲಿನ ಇಬ್ಬರು ನ್ಯಾಯವಂತರು ಅಥವಾ ನಿಮ್ಮವರಲ್ಲದ ಇಬ್ಬರು ಸಾಕ್ಷಿ ನಿಲ್ಲಲಿ—ನೀವು ಭೂಮಿಯಲ್ಲಿ ಪ್ರಯಾಣ ಮಾಡುತ್ತಿರುವಾಗ ನಿಮಗೆ ಮರಣವು ಸನ್ನಿಹಿತವಾದರೆ. ಇನ್ನು ನಿಮಗೆ (ಅವರ ಸಾಕ್ಷಿಯಲ್ಲಿ) ಸಂಶಯವಾದರೆ ನಮಾಝ್ ನಿರ್ವಹಿಸಿದ ನಂತರ ಅವರಿಬ್ಬರನ್ನು ತಡೆದು ನಿಲ್ಲಿಸಿರಿ; ಆಗ ಅವರು ಅಲ್ಲಾಹನ ಮೇಲೆ ಆಣೆ ಮಾಡಿ ಹೀಗೆ ಹೇಳಲಿ: “ನಾವು ಈ ಸಾಕ್ಷಿಗೆ ಬದಲಿಯಾಗಿ ಯಾವುದೇ ಬೆಲೆಯನ್ನು ಪಡೆಯುವುದಿಲ್ಲ, ಅವನು ಹತ್ತಿರದ ಸಂಬಂಧಿಕನಾದರೂ ಸಹ. ಅಲ್ಲಾಹನಿಗಾಗಿರುವ ಸಾಕ್ಷ್ಯವನ್ನು ನಾವು ಅಡಗಿಸುವುದಿಲ್ಲ. ನಾವೇನಾದರೂ ಹಾಗೆ ಮಾಡಿದರೆ ನಿಶ್ಚಯವಾಗಿಯೂ ನಾವು ಪಾಪಿಗಳಲ್ಲಿ ಸೇರುವೆವು.”
Looking for a topic? Try the meaning search — your question is scanned across all 6,236 verses.
ಭಾಷೆ — 70