مَا قُلْتُ لَهُمْ إِلَّا مَآ أَمَرْتَنِى بِهِۦٓ أَنِ ٱعْبُدُوا۟ ٱللَّهَ رَبِّى وَرَبَّكُمْ وَكُنتُ عَلَيْهِمْ شَهِيدًا مَّا دُمْتُ فِيهِمْ فَلَمَّا تَوَفَّيْتَنِى كُنتَ أَنتَ ٱلرَّقِيبَ عَلَيْهِمْ وَأَنتَ عَلَىٰ كُلِّ شَىْءٍ شَهِيدٌ
Kannada Translation - Hamza Buturನೀನು ನನಗೆ ಆದೇಶಿಸಿದ್ದನ್ನು—ಅಂದರೆ ನನ್ನ ಮತ್ತು ನಿಮ್ಮ ಪರಿಪಾಲಕನಾದ ಅಲ್ಲಾಹನನ್ನು ಮಾತ್ರ ಆರಾಧಿಸಿರಿ ಎಂಬುದನ್ನು ಬಿಟ್ಟು ಬೇರೇನನ್ನೂ ನಾನು ಅವರಿಗೆ ಹೇಳಿಲ್ಲ. ನಾನು ಎಲ್ಲಿಯ ತನಕ ಅವರೊಂದಿಗೆ ಇದ್ದೆನೋ ಅಲ್ಲಿಯ ತನಕ ನಾನು ಅವರ ಮೇಲೆ ಸಾಕ್ಷಿಯಾಗಿದ್ದೆ. ನಂತರ ನೀನು ನನ್ನನ್ನು ಎತ್ತಿಕೊಂಡ ಬಳಿಕ ನೀನೇ ಅವರ ವೀಕ್ಷಕನಾಗಿದ್ದೆ. ನೀನು ಎಲ್ಲಾ ವಿಷಯಗಳಿಗೂ ಸಾಕ್ಷಿಯಾಗಿರುವೆ.