وَمِنَ ٱلَّذِينَ قَالُوٓا۟ إِنَّا نَصَٰرَىٰٓ أَخَذْنَا مِيثَٰقَهُمْ فَنَسُوا۟ حَظًّا مِّمَّا ذُكِّرُوا۟ بِهِۦ فَأَغْرَيْنَا بَيْنَهُمُ ٱلْعَدَاوَةَ وَٱلْبَغْضَآءَ إِلَىٰ يَوْمِ ٱلْقِيَٰمَةِ وَسَوْفَ يُنَبِّئُهُمُ ٱللَّهُ بِمَا كَانُوا۟ يَصْنَعُونَ
Kannada Translation - Hamza Butur“ನಾವು ಕ್ರೈಸ್ತರು” ಎಂದು ಹೇಳಿದವರಿಂದಲೂ ನಾವು ಕರಾರನ್ನು ಪಡೆದಿದ್ದೇವೆ. ಅವರಿಗೆ ಉಪದೇಶ ಮಾಡಲಾದ ಒಂದಂಶವನ್ನು ಅವರು ಮರೆತುಬಿಟ್ಟರು. ಆದ್ದರಿಂದ ಪುನರುತ್ಥಾನದ ದಿನದ ತನಕ ನಾವು ಅವರ ನಡುವೆ ವೈರ ಮತ್ತು ದ್ವೇಷವನ್ನು ಉಂಟುಮಾಡಿದೆವು. ಅವರು ಮಾಡಿದ ದುಷ್ಕರ್ಮಗಳ ಬಗ್ಗೆ ಅಲ್ಲಾಹು ಸದ್ಯವೇ ಅವರಿಗೆ ತಿಳಿಸಿಕೊಡುವನು.