مِنْ أَجْلِ ذَٰلِكَ كَتَبْنَا عَلَىٰ بَنِىٓ إِسْرَٰٓءِيلَ أَنَّهُۥ مَن قَتَلَ نَفْسًۢا بِغَيْرِ نَفْسٍ أَوْ فَسَادٍ فِى ٱلْأَرْضِ فَكَأَنَّمَا قَتَلَ ٱلنَّاسَ جَمِيعًا وَمَنْ أَحْيَاهَا فَكَأَنَّمَآ أَحْيَا ٱلنَّاسَ جَمِيعًا وَلَقَدْ جَآءَتْهُمْ رُسُلُنَا بِٱلْبَيِّنَٰتِ ثُمَّ إِنَّ كَثِيرًا مِّنْهُم بَعْدَ ذَٰلِكَ فِى ٱلْأَرْضِ لَمُسْرِفُونَ
Kannada Translation - Hamza Buturಇದೇ ಕಾರಣದಿಂದ, ನಾವು ಇಸ್ರಾಯೇಲ್ ಮಕ್ಕಳಿಗೆ ಹೀಗೆ ವಿಧಿಸಿದೆವು: ಕೊಲೆಗೆ ಪ್ರತೀಕಾರವಾಗಿ ಅಥವಾ ಭೂಮಿಯಲ್ಲಿ ಕಿಡಿಗೇಡಿತನ ಮಾಡಿದ್ದಕ್ಕಾಗಿ ಹೊರತು ಒಬ್ಬ ವ್ಯಕ್ತಿಯನ್ನು ಯಾರಾದರೂ ಕೊಂದರೆ ಅದು ಸಂಪೂರ್ಣ ಮನುಕುಲವನ್ನು ಕೊಲ್ಲುವುದಕ್ಕೆ ಸಮಾನವಾಗಿದೆ ಮತ್ತು ಒಬ್ಬ ವ್ಯಕ್ತಿಯ ಜೀವವನ್ನು ಯಾರಾದರೂ ಉಳಿಸಿದರೆ ಅದು ಸಂಪೂರ್ಣ ಮನುಕುಲದ ಜೀವವನ್ನು ಉಳಿಸಿದ್ದಕ್ಕೆ ಸಮಾನವಾಗಿದೆ. ನಮ್ಮ ಸಂದೇಶವಾಹಕರು ಈಗಾಗಲೇ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಿದ್ದಾರೆ. ನಂತರ ಆ ಬಳಿಕವೂ ಅವರಲ್ಲಿ ಅನೇಕ ಮಂದಿ ಭೂಮಿಯಲ್ಲಿ ಅತಿರೇಕವೆಸಗುತ್ತಲೇ ಇದ್ದಾರೆ.