ಮುಖಪುಟ › ಸೂರಗಳು › ಸೂರ Adh-Dhaariyat
ಸೂರ Adh-Dhaariyat الذاريات
60 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 67
بِسْمِ ٱللَّهِ ٱلرَّحْمَٰنِ ٱلرَّحِيمِ وَٱلذَّٰرِيَٰتِ ذَرْوًا
Kannada Translation - Hamza Butur ಬಲವಾಗಿ ಧೂಳಿಯನ್ನು ಹರಡುವ (ಗಾಳಿಯ) ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱلْحَٰمِلَٰتِ وِقْرًا
Kannada Translation - Hamza Butur ಭಾರವನ್ನು ಹೊರುವ (ಮೋಡಗಳ) ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱلْجَٰرِيَٰتِ يُسْرًا
Kannada Translation - Hamza Butur ಸುಗಮವಾಗಿ ಸಂಚರಿಸುವ (ಹಡಗುಗಳ) ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٱلْمُقَسِّمَٰتِ أَمْرًا
Kannada Translation - Hamza Butur ಕಾರ್ಯಗಳನ್ನು ವಿಂಗಡಿಸಿಕೊಡುವ (ದೇವದೂತರುಗಳ) ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّمَا تُوعَدُونَ لَصَادِقٌ
Kannada Translation - Hamza Butur ನಿಶ್ಚಯವಾಗಿಯೂ ನಿಮಗೆ ಎಚ್ಚರಿಕೆ ನೀಡಲಾಗುವ ವಿಷಯವು ಸತ್ಯವಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّ ٱلدِّينَ لَوَٰقِعٌ
Kannada Translation - Hamza Butur ನಿಶ್ಚಯವಾಗಿಯೂ ವಿಚಾರಣೆಯು ಸಂಭವಿಸಿಯೇ ತೀರುತ್ತದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱلسَّمَآءِ ذَاتِ ٱلْحُبُكِ
Kannada Translation - Hamza Butur ಕಕ್ಷೆಗಳನ್ನು ಹೊಂದಿರುವ ಆಕಾಶದ ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّكُمْ لَفِى قَوْلٍ مُّخْتَلِفٍ
Kannada Translation - Hamza Butur ನಿಶ್ಚಯವಾಗಿಯೂ ನೀವು ವಿಭಿನ್ನ ಅಭಿಪ್ರಾಯಗಳಲ್ಲಿದ್ದೀರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يُؤْفَكُ عَنْهُ مَنْ أُفِكَ
Kannada Translation - Hamza Butur (ಸತ್ಯದಿಂದ) ತಪ್ಪಿಸಲ್ಪಟ್ಟವನು ಅದರಿಂದ (ಕುರ್‌ಆನ್‍ನಿಂದ) ತಪ್ಪಿಸಲ್ಪಡುತ್ತಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قُتِلَ ٱلْخَرَّٰصُونَ
Kannada Translation - Hamza Butur ಆಧಾರರಹಿತ ಮಾತುಗಳನ್ನು ಹೇಳುವವರು ನಾಶವಾಗಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ٱلَّذِينَ هُمْ فِى غَمْرَةٍ سَاهُونَ
Kannada Translation - Hamza Butur ಅವರು ಅಜ್ಞಾನದಲ್ಲಿದ್ದಾರೆ ಮತ್ತು ಮರೆತುಬಿಟ್ಟಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَسْـَٔلُونَ أَيَّانَ يَوْمُ ٱلدِّينِ
Kannada Translation - Hamza Butur “ಪ್ರತಿಫಲದ ದಿನ ಯಾವಾಗ?” ಎಂದು ಅವರು ಕೇಳುತ್ತಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَوْمَ هُمْ عَلَى ٱلنَّارِ يُفْتَنُونَ
Kannada Translation - Hamza Butur ಅವರನ್ನು ನರಕಾಗ್ನಿಯಲ್ಲಿ ಶಿಕ್ಷಿಸಲಾಗುವ ದಿನ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ذُوقُوا۟ فِتْنَتَكُمْ هَٰذَا ٱلَّذِى كُنتُم بِهِۦ تَسْتَعْجِلُونَ
Kannada Translation - Hamza Butur (ಅವರೊಂದಿಗೆ ಹೇಳಲಾಗುವುದು): “ನಿಮ್ಮ ಶಿಕ್ಷೆಯ ರುಚಿಯನ್ನು ನೋಡಿರಿ. ಇದಕ್ಕೇ ನೀವು ತ್ವರೆ ಮಾಡುತ್ತಿದ್ದಿರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ ٱلْمُتَّقِينَ فِى جَنَّٰتٍ وَعُيُونٍ
Kannada Translation - Hamza Butur ನಿಶ್ಚಯವಾಗಿಯೂ ದೇವಭಯವುಳ್ಳವರು ಸ್ವರ್ಗೋದ್ಯಾನಗಳಲ್ಲಿ ಮತ್ತು ತೊರೆಗಳಲ್ಲಿರುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ءَاخِذِينَ مَآ ءَاتَىٰهُمْ رَبُّهُمْ إِنَّهُمْ كَانُوا۟ قَبْلَ ذَٰلِكَ مُحْسِنِينَ
Kannada Translation - Hamza Butur ಅವರಿಗೆ ಅವರ ಪರಿಪಾಲಕನು (ಅಲ್ಲಾಹು) ನೀಡಿದ್ದನ್ನು ಅವರು ಪಡೆಯುವರು. ನಿಶ್ಚಯವಾಗಿಯೂ ಇದಕ್ಕಿಂತ ಮೊದಲು ಅವರು ನೀತಿವಂತರಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَانُوا۟ قَلِيلًا مِّنَ ٱلَّيْلِ مَا يَهْجَعُونَ
Kannada Translation - Hamza Butur ಅವರು ರಾತ್ರಿಯಲ್ಲಿ ಬಹಳ ಕಡಿಮೆ ನಿದ್ರಿಸುತ್ತಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَبِٱلْأَسْحَارِ هُمْ يَسْتَغْفِرُونَ
Kannada Translation - Hamza Butur ಸಹರಿಯ ಸಮಯದಲ್ಲಿ ಅವರು (ಅಲ್ಲಾಹನಲ್ಲಿ) ಕ್ಷಮೆಯಾಚಿಸುತ್ತಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَفِىٓ أَمْوَٰلِهِمْ حَقٌّ لِّلسَّآئِلِ وَٱلْمَحْرُومِ
Kannada Translation - Hamza Butur ಅವರ ಧನದಲ್ಲಿ ಬೇಡುವವರಿಗೆ ಮತ್ತು (ಉಪಜೀವನ) ತಡೆಯಲ್ಪಟ್ಟವರಿಗೆ ಹಕ್ಕಿತ್ತು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَفِى ٱلْأَرْضِ ءَايَٰتٌ لِّلْمُوقِنِينَ
Kannada Translation - Hamza Butur ದೃಢವಿಶ್ವಾಸವುಳ್ಳವರಿಗೆ ಭೂಮಿಯಲ್ಲಿ ಅನೇಕ ದೃಷ್ಟಾಂತಗಳಿವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَفِىٓ أَنفُسِكُمْ أَفَلَا تُبْصِرُونَ
Kannada Translation - Hamza Butur ನಿಮ್ಮ ದೇಹಗಳಲ್ಲೂ ಕೂಡ. ಆದರೂ ನೀವು ನೋಡುವುದಿಲ್ಲವೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَفِى ٱلسَّمَآءِ رِزْقُكُمْ وَمَا تُوعَدُونَ
Kannada Translation - Hamza Butur ಆಕಾಶದಲ್ಲಿ ನಿಮ್ಮ ಉಪಜೀವನ ಮತ್ತು ನಿಮಗೆ ವಾಗ್ದಾನ ಮಾಡಲಾಗುವ ಎಲ್ಲವೂ ಇದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَوَرَبِّ ٱلسَّمَآءِ وَٱلْأَرْضِ إِنَّهُۥ لَحَقٌّ مِّثْلَ مَآ أَنَّكُمْ تَنطِقُونَ
Kannada Translation - Hamza Butur ಭೂಮ್ಯಾಕಾಶಗಳ ಪರಿಪಾಲಕನ (ಅಲ್ಲಾಹನ) ಮೇಲಾಣೆ! ನೀವು ಹೇಗೆ ಮಾತನಾಡುತ್ತಿರುವಿರೋ ಹಾಗೆಯೇ ಇವೆಲ್ಲವೂ ಸತ್ಯವಾಗಿದೆ.[1]
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
هَلْ أَتَىٰكَ حَدِيثُ ضَيْفِ إِبْرَٰهِيمَ ٱلْمُكْرَمِينَ
Kannada Translation - Hamza Butur ಇಬ್ರಾಹೀಮರ ಸನ್ಮಾನ್ಯ ಅತಿಥಿಗಳ ಸಮಾಚಾರವು ನಿಮಗೆ ತಲುಪಿದೆಯೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِذْ دَخَلُوا۟ عَلَيْهِ فَقَالُوا۟ سَلَٰمًا قَالَ سَلَٰمٌ قَوْمٌ مُّنكَرُونَ
Kannada Translation - Hamza Butur ಅವರು ಇಬ್ರಾಹೀಮರ ಬಳಿಗೆ ಬಂದು ಸಲಾಂ ಹೇಳಿದ ಸಂದರ್ಭ. ಇಬ್ರಾಹೀಮ್ ಸಲಾಂಗೆ ಉತ್ತರಿಸಿ ಹೇಳಿದರು: “ನೀವು ಅಪರಿಚಿತ ಜನರಂತೆ ಕಾಣುತ್ತೀರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَرَاغَ إِلَىٰٓ أَهْلِهِۦ فَجَآءَ بِعِجْلٍ سَمِينٍ
Kannada Translation - Hamza Butur ನಂತರ ಅವರು ಆತುರದಿಂದ ತಮ್ಮ ಮನೆಯವರ ಕಡೆಗೆ ತೆರಳಿ ಒಂದು ಕೊಬ್ಬಿದ ಕರುವನ್ನು (ಬೇಯಿಸಿ) ತಂದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَقَرَّبَهُۥٓ إِلَيْهِمْ قَالَ أَلَا تَأْكُلُونَ
Kannada Translation - Hamza Butur ಅದನ್ನು ಅವರ ಮುಂದೆ ಇಟ್ಟರು. ನಂತರ ಕೇಳಿದರು: “ನೀವೇಕೆ ತಿನ್ನುವುದಿಲ್ಲ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَوْجَسَ مِنْهُمْ خِيفَةً قَالُوا۟ لَا تَخَفْ وَبَشَّرُوهُ بِغُلَٰمٍ عَلِيمٍ
Kannada Translation - Hamza Butur ಇಬ್ರಾಹೀಮರಿಗೆ ಅವರ ಬಗ್ಗೆ ಮನಸ್ಸಿನಲ್ಲಿ ಗಾಬರಿ ಉಂಟಾಯಿತು. ಅವರು ಹೇಳಿದರು: “ಗಾಬರಿಯಾಗಬೇಡಿ.” ಅವರು ಇಬ್ರಾಹೀಮರಿಗೆ ಜ್ಞಾನವಂತ ಮಗುವಿನ (ಜನನದ ಬಗ್ಗೆ) ಸುವಾರ್ತೆ ತಿಳಿಸಿದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَقْبَلَتِ ٱمْرَأَتُهُۥ فِى صَرَّةٍ فَصَكَّتْ وَجْهَهَا وَقَالَتْ عَجُوزٌ عَقِيمٌ
Kannada Translation - Hamza Butur ಅವರ ಪತ್ನಿ ಸದ್ದು ಮಾಡುತ್ತಾ ಮುಂದಕ್ಕೆ ಬಂದು ತನ್ನ ಮುಖಕ್ಕೆ ಬಡಿದು ಹೇಳಿದರು: “ನಾನೊಬ್ಬ ಮುದುಕಿ ಮತ್ತು ಬಂಜೆಯಾಗಿದ್ದೇನೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالُوا۟ كَذَٰلِكِ قَالَ رَبُّكِ إِنَّهُۥ هُوَ ٱلْحَكِيمُ ٱلْعَلِيمُ
Kannada Translation - Hamza Butur ದೇವದೂತರುಗಳು ಹೇಳಿದರು: “ಈ ರೀತಿ ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದ್ದಾನೆ. ನಿಶ್ಚಯವಾಗಿಯೂ ಅವನು ವಿವೇಕಪೂರ್ಣನು ಮತ್ತು ಸರ್ವಜ್ಞನಾಗಿದ್ದಾನೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالَ فَمَا خَطْبُكُمْ أَيُّهَا ٱلْمُرْسَلُونَ
Kannada Translation - Hamza Butur ಇಬ್ರಾಹೀಮ್ ಕೇಳಿದರು: “ಓ ದೂತರೇ! ಇಲ್ಲಿ ನಿಮಗೇನು ಕೆಲಸವಿದೆಯೆಂದು ಬಂದಿದ್ದೀರಿ?”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالُوٓا۟ إِنَّآ أُرْسِلْنَآ إِلَىٰ قَوْمٍ مُّجْرِمِينَ
Kannada Translation - Hamza Butur ಅವರು ಉತ್ತರಿಸಿದರು: “ನಮ್ಮನ್ನು ಅಪರಾಧಿಗಳಾದ ಜನರ ಬಳಿಗೆ ಕಳುಹಿಸಲಾಗಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
لِنُرْسِلَ عَلَيْهِمْ حِجَارَةً مِّن طِينٍ
Kannada Translation - Hamza Butur ಅವರ ಮೇಲೆ ಜೇಡಿಮಣ್ಣಿನ ಕಲ್ಲುಗಳನ್ನು ಸುರಿಸುವುದಕ್ಕಾಗಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مُّسَوَّمَةً عِندَ رَبِّكَ لِلْمُسْرِفِينَ
Kannada Translation - Hamza Butur ಅದು ಎಲ್ಲೆ ಮೀರಿದ ಜನರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಗುರುತು ಹಾಕಲಾದ ಕಲ್ಲುಗಳಾಗಿವೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَخْرَجْنَا مَن كَانَ فِيهَا مِنَ ٱلْمُؤْمِنِينَ
Kannada Translation - Hamza Butur ನಾವು ಅಲ್ಲಿದ್ದ ಎಲ್ಲಾ ಸತ್ಯವಿಶ್ವಾಸಿಗಳನ್ನು ಹೊರತೆಗೆದೆವು (ರಕ್ಷಿಸಿದೆವು).
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَمَا وَجَدْنَا فِيهَا غَيْرَ بَيْتٍ مِّنَ ٱلْمُسْلِمِينَ
Kannada Translation - Hamza Butur ಆದರೆ ನಾವು ಅಲ್ಲಿ ಮುಸ್ಲಿಮರಿಗೆ ಸೇರಿದ ಒಂದೇ ಒಂದು ಮನೆಯನ್ನು ಮಾತ್ರ ಕಂಡೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَتَرَكْنَا فِيهَآ ءَايَةً لِّلَّذِينَ يَخَافُونَ ٱلْعَذَابَ ٱلْأَلِيمَ
Kannada Translation - Hamza Butur ಯಾತನಾಮಯ ಶಿಕ್ಷೆಯನ್ನು ಭಯಪಡುವವರಿಗೆ ನಾವು ಅಲ್ಲಿ ಒಂದು ದೃಷ್ಟಾಂತವನ್ನು ಉಳಿಸಿದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَفِى مُوسَىٰٓ إِذْ أَرْسَلْنَٰهُ إِلَىٰ فِرْعَوْنَ بِسُلْطَٰنٍ مُّبِينٍ
Kannada Translation - Hamza Butur ಮೂಸಾರ ಸಮಾಚಾರದಲ್ಲೂ (ದೃಷ್ಟಾಂತಗಳಿವೆ). ನಾವು ಅವರನ್ನು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಫರೋಹನ ಬಳಿಗೆ ಕಳುಹಿಸಿದ ಸಂದರ್ಭ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَتَوَلَّىٰ بِرُكْنِهِۦ وَقَالَ سَٰحِرٌ أَوْ مَجْنُونٌ
Kannada Translation - Hamza Butur ಆದರೆ ಅವನು ತನ್ನ ಶಕ್ತಿಸಾಮರ್ಥ್ಯಕ್ಕೆ ಮರುಳಾಗಿ ಮುಖ ತಿರುಗಿಸುತ್ತಾ ಹೇಳಿದನು: “ಇವನೊಬ್ಬ ಮಾಟಗಾರ ಅಥವಾ ಮಾನಸಿಕ ಅಸ್ವಸ್ಥ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَأَخَذْنَٰهُ وَجُنُودَهُۥ فَنَبَذْنَٰهُمْ فِى ٱلْيَمِّ وَهُوَ مُلِيمٌ
Kannada Translation - Hamza Butur ಆದ್ದರಿಂದ ನಾವು ಅವನನ್ನು ಮತ್ತು ಅವನ ಸೈನ್ಯಗಳನ್ನು ಹಿಡಿದು ಸಮುದ್ರಕ್ಕೆ ಎಸೆದವು. ಅವನು ಆಕ್ಷೇಪಾರ್ಹನಾಗಿದ್ದನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَفِى عَادٍ إِذْ أَرْسَلْنَا عَلَيْهِمُ ٱلرِّيحَ ٱلْعَقِيمَ
Kannada Translation - Hamza Butur ಆದ್ ಗೋತ್ರದಲ್ಲೂ (ದೃಷ್ಟಾಂತವಿದೆ). ನಾವು ಅವರ ವಿರುದ್ಧ ಬರಡು ಗಾಳಿಯನ್ನು ಕಳುಹಿಸಿದ ಸಂದರ್ಭ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مَا تَذَرُ مِن شَىْءٍ أَتَتْ عَلَيْهِ إِلَّا جَعَلَتْهُ كَٱلرَّمِيمِ
Kannada Translation - Hamza Butur ಅದು ಯಾವೆಲ್ಲಾ ವಸ್ತುಗಳ ಮೇಲೆ ಬೀಸುತ್ತಿತ್ತೋ ಅವೆಲ್ಲವನ್ನೂ ಕೊಳೆತ ತುಣುಕುಗಳಂತೆ (ಚೂರು ಚೂರು) ಮಾಡುತ್ತಿತ್ತು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَفِى ثَمُودَ إِذْ قِيلَ لَهُمْ تَمَتَّعُوا۟ حَتَّىٰ حِينٍ
Kannada Translation - Hamza Butur ಸಮೂದ್ ಗೋತ್ರದಲ್ಲೂ (ದೃಷ್ಟಾಂತವಿದೆ). “ಒಂದು ಅವಧಿಯವರೆಗೆ ಆನಂದಿಸಿರಿ” ಎಂದು ಅವರೊಡನೆ ಹೇಳಲಾದ ಸಂದರ್ಭ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَعَتَوْا۟ عَنْ أَمْرِ رَبِّهِمْ فَأَخَذَتْهُمُ ٱلصَّٰعِقَةُ وَهُمْ يَنظُرُونَ
Kannada Translation - Hamza Butur ಆದರೆ ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆಯನ್ನು ಧಿಕ್ಕರಿಸಿದರು. ಆಗ ಅವರು ನೋಡುತ್ತಿದ್ದಂತೆಯೇ ಭಯಾನಕ ಶಬ್ದವು ಅವರನ್ನು ಹಿಡಿಯಿತು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَمَا ٱسْتَطَٰعُوا۟ مِن قِيَامٍ وَمَا كَانُوا۟ مُنتَصِرِينَ
Kannada Translation - Hamza Butur ಅವರಿಗೆ ಎದ್ದು ನಿಲ್ಲಲು ಕೂಡ ಸಾಧ್ಯವಾಗಲಿಲ್ಲ. ಅವರಿಗೆ ಸ್ವಯಂ ರಕ್ಷಿಸಿಕೊಳ್ಳಲೂ ಸಾಧ್ಯವಾಗಲಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَقَوْمَ نُوحٍ مِّن قَبْلُ إِنَّهُمْ كَانُوا۟ قَوْمًا فَٰسِقِينَ
Kannada Translation - Hamza Butur ಅದಕ್ಕಿಂತ ಮೊದಲು ನೂಹರ ಜನರಿಗೂ (ಇದೇ ಸ್ಥಿತಿ ಉಂಟಾಗಿತ್ತು). ನಿಶ್ಚಯವಾಗಿಯೂ ಅವರು ದುಷ್ಕರ್ಮಿಗಳಾದ ಜನರಾಗಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱلسَّمَآءَ بَنَيْنَٰهَا بِأَيْي۟دٍ وَإِنَّا لَمُوسِعُونَ
Kannada Translation - Hamza Butur ನಾವು ಆಕಾಶವನ್ನು ಕೈಗಳಿಂದ ನಿರ್ಮಿಸಿದ್ದೇವೆ. ನಿಶ್ಚಯವಾಗಿಯೂ ನಾವು ವಿಸ್ತರಿಸುವವರಾಗಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱلْأَرْضَ فَرَشْنَٰهَا فَنِعْمَ ٱلْمَٰهِدُونَ
Kannada Translation - Hamza Butur ನಾವು ಭೂಮಿಯನ್ನು ಹಾಸಿನಂತೆ ಹರಡಿದ್ದೇವೆ. ನಾವು ಅತ್ಯುತ್ತಮವಾಗಿ ಹಾಸುವವರಾಗಿದ್ದೇವೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمِن كُلِّ شَىْءٍ خَلَقْنَا زَوْجَيْنِ لَعَلَّكُمْ تَذَكَّرُونَ
Kannada Translation - Hamza Butur ನಾವು ಎಲ್ಲ ವಸ್ತುಗಳನ್ನೂ ಜೋಡಿಯಾಗಿ ಸೃಷ್ಟಿಸಿದ್ದೇವೆ. ನೀವು ಉಪದೇಶ ಸ್ವೀಕರಿಸುವುದಕ್ಕಾಗಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَفِرُّوٓا۟ إِلَى ٱللَّهِ إِنِّى لَكُم مِّنْهُ نَذِيرٌ مُّبِينٌ
Kannada Translation - Hamza Butur ಆದ್ದರಿಂದ ನೀವು ಅಲ್ಲಾಹನ ಕಡೆಗೆ (ಪಶ್ಚಾತ್ತಾಪದೊಂದಿಗೆ) ಧಾವಿಸಿರಿ. ನಿಶ್ಚಯವಾಗಿಯೂ ನಾನು ನಿಮಗೆ ಅವನ ಕಡೆಯ ಸ್ಪಷ್ಟ ಮುನ್ನೆಚ್ಚರಿಕೆಗಾರನಾಗಿದ್ದೇನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَلَا تَجْعَلُوا۟ مَعَ ٱللَّهِ إِلَٰهًا ءَاخَرَ إِنِّى لَكُم مِّنْهُ نَذِيرٌ مُّبِينٌ
Kannada Translation - Hamza Butur ನೀವು ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ಮಾಡಿಕೊಳ್ಳಬೇಡಿ. ನಿಶ್ಚಯವಾಗಿಯೂ ನಾನು ನಿಮಗೆ ಅವನ ಕಡೆಯ ಸ್ಪಷ್ಟ ಮುನ್ನೆಚ್ಚರಿಕೆಗಾರನಾಗಿದ್ದೇನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كَذَٰلِكَ مَآ أَتَى ٱلَّذِينَ مِن قَبْلِهِم مِّن رَّسُولٍ إِلَّا قَالُوا۟ سَاحِرٌ أَوْ مَجْنُونٌ
Kannada Translation - Hamza Butur ಈ ರೀತಿ ಇವರಿಗಿಂತ ಮೊದಲಿನವರ ಬಳಿಗೆ ಸಂದೇಶವಾಹಕರು ಬಂದಾಗಲೆಲ್ಲಾ ಅವರು ಅವರನ್ನು ಮಾಟಗಾರ ಅಥವಾ ಮಾನಸಿಕ ಅಸ್ವಸ್ಥ ಎಂದೇ ಹೇಳುತ್ತಿದ್ದರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَتَوَاصَوْا۟ بِهِۦ بَلْ هُمْ قَوْمٌ طَاغُونَ
Kannada Translation - Hamza Butur ಇವರು ಈ ಮಾತನ್ನು ಪರಸ್ಪರ ಉಪದೇಶ ಮಾಡಿದ್ದಾರೆಯೇ? ಅಲ್ಲ, ವಾಸ್ತವವಾಗಿ ಅವರು ಅತಿರೇಕಿಗಳಾದ ಜನರಾಗಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَتَوَلَّ عَنْهُمْ فَمَآ أَنتَ بِمَلُومٍ
Kannada Translation - Hamza Butur ಆದ್ದರಿಂದ ನೀವು ಅವರನ್ನು ಬಿಟ್ಟು ವಿಮುಖರಾಗಿರಿ. ನಿಮ್ಮ ಮೇಲೆ ಯಾವುದೇ ಆಕ್ಷೇಪವಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَذَكِّرْ فَإِنَّ ٱلذِّكْرَىٰ تَنفَعُ ٱلْمُؤْمِنِينَ
Kannada Translation - Hamza Butur ನೀವು ಉಪದೇಶ ಮಾಡಿರಿ. ನಿಶ್ಚಯವಾಗಿಯೂ ಉಪದೇಶವು ಸತ್ಯವಿಶ್ವಾಸಿಗಳಿಗೆ ಪ್ರಯೋಜನ ನೀಡುತ್ತದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمَا خَلَقْتُ ٱلْجِنَّ وَٱلْإِنسَ إِلَّا لِيَعْبُدُونِ
Kannada Translation - Hamza Butur ನಾನು ಜಿನ್ನ್‌ಗಳನ್ನು ಮತ್ತು ಮನುಷ್ಯರನ್ನು ಸೃಷ್ಟಿಸಿದ್ದು ನನ್ನನ್ನು ಆರಾಧಿಸುವುದಕ್ಕಾಗಿ ಮಾತ್ರ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مَآ أُرِيدُ مِنْهُم مِّن رِّزْقٍ وَمَآ أُرِيدُ أَن يُطْعِمُونِ
Kannada Translation - Hamza Butur ನಾನು ಅವರಿಂದ ಯಾವುದೇ ಉಪಜೀವನವನ್ನು ಬಯಸುವುದಿಲ್ಲ. ಅವರು ನನಗೆ ಆಹಾರ ನೀಡಬೇಕೆಂದೂ ನಾನು ಬಯಸುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ ٱللَّهَ هُوَ ٱلرَّزَّاقُ ذُو ٱلْقُوَّةِ ٱلْمَتِينُ
Kannada Translation - Hamza Butur ನಿಶ್ಚಯವಾಗಿಯೂ ಅಲ್ಲಾಹನೇ ಎಲ್ಲರಿಗೂ ಉಪಜೀವನ ನೀಡುವವನು. ಅವನು ಮಹಾಶಕ್ತಿಶಾಲಿ ಮತ್ತು ಬಲಿಷ್ಠನಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَإِنَّ لِلَّذِينَ ظَلَمُوا۟ ذَنُوبًا مِّثْلَ ذَنُوبِ أَصْحَٰبِهِمْ فَلَا يَسْتَعْجِلُونِ
Kannada Translation - Hamza Butur ಅಕ್ರಮವೆಸಗಿದವರಿಗೆ ಅವರ ಸಂಗಡಿಗರಿಗೆ ದೊರೆತ (ಶಿಕ್ಷೆಯ) ಪಾಲಿನಂತೆಯೇ ಒಂದು ಪಾಲು ದೊರೆಯಲಿದೆ. ಆದ್ದರಿಂದ ಅವರು ನನ್ನೊಡನೆ ತ್ವರೆ ಮಾಡದಿರಲಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَوَيْلٌ لِّلَّذِينَ كَفَرُوا۟ مِن يَوْمِهِمُ ٱلَّذِى يُوعَدُونَ
Kannada Translation - Hamza Butur ಅವರಿಗೆ ವಾಗ್ದಾನ ಮಾಡಲಾದ ಆ ದಿನದ ಕಾರಣದಿಂದ ಸತ್ಯನಿಷೇಧಿಗಳಿಗೆ ವಿನಾಶವಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
← ಸೂರ Qaaf
ಸೂರ At-Tur →
Looking for a topic? Try the meaning search — your question is scanned across all 6,236 verses.
→
Arabic text and translations via Tanzil and QuranEnc — verbatim, unmodified · Translations belong to their translators and are not the Qur'an itself
ಇದು ಸಂಶೋಧನಾ ಸಹಾಯಕ; ಧಾರ್ಮಿಕ ತೀರ್ಪಿನ ಮೂಲವಲ್ಲ.