ಮುಖಪುಟ › ಸೂರಗಳು › ಸೂರ At-Tur
ಸೂರ At-Tur الطور
49 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 76
بِسْمِ ٱللَّهِ ٱلرَّحْمَٰنِ ٱلرَّحِيمِ وَٱلطُّورِ
Kannada Translation - Hamza Butur ತೂರ್ ಪರ್ವತದ ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَكِتَٰبٍ مَّسْطُورٍ
Kannada Translation - Hamza Butur ಲಿಖಿತಗೊಳಿಸಿದ ಗ್ರಂಥದ ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فِى رَقٍّ مَّنشُورٍ
Kannada Translation - Hamza Butur ತೆರೆದಿಟ್ಟ ತೊಗಲಿನ ಹಾಳೆಗಳಲ್ಲಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱلْبَيْتِ ٱلْمَعْمُورِ
Kannada Translation - Hamza Butur ಬೈತುಲ್ ಮಅಮೂರ್‌ನ ಮೇಲಾಣೆ![1]
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱلسَّقْفِ ٱلْمَرْفُوعِ
Kannada Translation - Hamza Butur ಎತ್ತರದ ಛಾವಣಿಯ (ಆಕಾಶದ) ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱلْبَحْرِ ٱلْمَسْجُورِ
Kannada Translation - Hamza Butur ಹೊತ್ತಿ ಉರಿಸಲಾದ ಸಮುದ್ರದ ಮೇಲಾಣೆ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ عَذَابَ رَبِّكَ لَوَٰقِعٌ
Kannada Translation - Hamza Butur ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಶಿಕ್ಷೆಯು ಸಂಭವಿಸಿಯೇ ತೀರುತ್ತದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مَّا لَهُۥ مِن دَافِعٍ
Kannada Translation - Hamza Butur ಅದನ್ನು ತಡೆಯುವವರು ಯಾರೂ ಇಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَوْمَ تَمُورُ ٱلسَّمَآءُ مَوْرًا
Kannada Translation - Hamza Butur ಆಕಾಶವು ಪ್ರಬಲವಾಗಿ ಓಲಾಡುವ ದಿನ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَتَسِيرُ ٱلْجِبَالُ سَيْرًا
Kannada Translation - Hamza Butur ಪರ್ವತಗಳು ಚಲಿಸತೊಡಗುವ ದಿನ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَوَيْلٌ يَوْمَئِذٍ لِّلْمُكَذِّبِينَ
Kannada Translation - Hamza Butur ಅಂದು ಸತ್ಯನಿಷೇಧಿಗಳಿಗೆ ವಿನಾಶವಿದೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ٱلَّذِينَ هُمْ فِى خَوْضٍ يَلْعَبُونَ
Kannada Translation - Hamza Butur ಅವರು ಯಾರೆಂದರೆ, ವ್ಯರ್ಥ ಮಾತುಗಳಲ್ಲಿ ಮಗ್ನವಾಗಿ ಆಟವಾಡುವವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَوْمَ يُدَعُّونَ إِلَىٰ نَارِ جَهَنَّمَ دَعًّا
Kannada Translation - Hamza Butur ಅವರನ್ನು ಬಲವಾಗಿ ನರಕಾಗ್ನಿಗೆ ತಳ್ಳಲಾಗುವ ದಿನ!
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
هَٰذِهِ ٱلنَّارُ ٱلَّتِى كُنتُم بِهَا تُكَذِّبُونَ
Kannada Translation - Hamza Butur (ಅವರೊಂದಿಗೆ ಹೇಳಲಾಗುವುದು): “ಇದೇ ನೀವು ನಿಷೇಧಿಸುತ್ತಿದ್ದ ನರಕ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَفَسِحْرٌ هَٰذَآ أَمْ أَنتُمْ لَا تُبْصِرُونَ
Kannada Translation - Hamza Butur ಇದೇನು ಮಾಟಗಾರಿಕೆಯೇ? ಅಥವಾ ನಿಮಗೆ ನೋಡಲು ಸಾಧ್ಯವಾಗುವುದಿಲ್ಲವೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
ٱصْلَوْهَا فَٱصْبِرُوٓا۟ أَوْ لَا تَصْبِرُوا۟ سَوَآءٌ عَلَيْكُمْ إِنَّمَا تُجْزَوْنَ مَا كُنتُمْ تَعْمَلُونَ
Kannada Translation - Hamza Butur ಅದನ್ನು ಪ್ರವೇಶಿಸಿರಿ. ಅದರಲ್ಲಿ ನೀವು ತಾಳ್ಮೆಯಿಂದಿದ್ದರೂ ಅಥವಾ ತಾಳ್ಮೆಗೆಟ್ಟರೂ ಪರಿಣಾಮ ಒಂದೇ. ನೀವು ಮಾಡಿದ ಕರ್ಮಗಳಿಗಾಗಿ ಮಾತ್ರ ನಿಮಗೆ ಪ್ರತಿಫಲ ನೀಡಲಾಗುವುದು.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّ ٱلْمُتَّقِينَ فِى جَنَّٰتٍ وَنَعِيمٍ
Kannada Translation - Hamza Butur ನಿಶ್ಚಯವಾಗಿಯೂ ದೇವಭಯವುಳ್ಳವರು ಸ್ವರ್ಗೋದ್ಯಾನಗಳಲ್ಲಿ ಮತ್ತು ಅನುಗ್ರಹಗಳಲ್ಲಿರುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَٰكِهِينَ بِمَآ ءَاتَىٰهُمْ رَبُّهُمْ وَوَقَىٰهُمْ رَبُّهُمْ عَذَابَ ٱلْجَحِيمِ
Kannada Translation - Hamza Butur ಅವರಿಗೆ ಅವರ ಪರಿಪಾಲಕನು (ಅಲ್ಲಾಹು) ನೀಡಿದ್ದರಲ್ಲಿ ಅವರು ಸಂತೋಷವಾಗಿರುವರು. ಅವರ ಪರಿಪಾಲಕನು (ಅಲ್ಲಾಹು) ಅವರನ್ನು ಜ್ವಲಿಸುವ ನರಕ ಶಿಕ್ಷೆಯಿಂದ ಪಾರು ಮಾಡಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
كُلُوا۟ وَٱشْرَبُوا۟ هَنِيٓـًٔۢا بِمَا كُنتُمْ تَعْمَلُونَ
Kannada Translation - Hamza Butur (ಅವರೊಂದಿಗೆ ಹೇಳಲಾಗುವುದು): “ನೀವು ಮಾಡಿದ ಕರ್ಮಗಳ ಪ್ರತಿಫಲವಾಗಿ ನೀವು ಸಂತೃಪ್ತಿಯಿಂದ ತಿನ್ನಿರಿ ಮತ್ತು ಕುಡಿಯಿರಿ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
مُتَّكِـِٔينَ عَلَىٰ سُرُرٍ مَّصْفُوفَةٍ وَزَوَّجْنَٰهُم بِحُورٍ عِينٍ
Kannada Translation - Hamza Butur ಅವರು ಸಾಲಾಗಿ ಜೋಡಿಸಿ ಮಂಚಗಳಲ್ಲಿ ಒರಗಿ ಕುಳಿತಿರುವರು. ನಾವು ಅವರಿಗೆ ಅರಳಿದ ಕಣ್ಣುಗಳುಳ್ಳ ಬೆಳ್ಳಗಿನ ತರುಣಿಯರನ್ನು ವಿವಾಹ ಮಾಡಿಕೊಡುವೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱلَّذِينَ ءَامَنُوا۟ وَٱتَّبَعَتْهُمْ ذُرِّيَّتُهُم بِإِيمَٰنٍ أَلْحَقْنَا بِهِمْ ذُرِّيَّتَهُمْ وَمَآ أَلَتْنَٰهُم مِّنْ عَمَلِهِم مِّن شَىْءٍ كُلُّ ٱمْرِئٍۭ بِمَا كَسَبَ رَهِينٌ
Kannada Translation - Hamza Butur ಸತ್ಯವಿಶ್ವಾಸಿಗಳಾದವರು ಮತ್ತು ಸತ್ಯವಿಶ್ವಾಸದಲ್ಲಿ ಅವರನ್ನು ಹಿಂಬಾಲಿಸಿದ ಅವರ ಮಕ್ಕಳು—ನಾವು ಅವರ ಮಕ್ಕಳನ್ನು ಅವರ ಜೊತೆಗೆ ಸೇರಿಸುವೆವು. ನಾವು ಅವರ ಕರ್ಮಫಲಗಳಲ್ಲಿ ಏನೂ ಕಡಿಮೆ ಮಾಡುವುದಿಲ್ಲ. ಪ್ರತಿಯೊಬ್ಬ ವ್ಯಕ್ತಿಯೂ ಅವನು ಮಾಡಿದ ಕರ್ಮಗಳಿಗೆ ಅಡಮಾನವಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَمْدَدْنَٰهُم بِفَٰكِهَةٍ وَلَحْمٍ مِّمَّا يَشْتَهُونَ
Kannada Translation - Hamza Butur ನಾವು ಅವರಿಗೆ ಹಣ್ಣು-ಹಂಪಲುಗಳನ್ನು ಮತ್ತು ಅವರು ಬಯಸುವ ಮಾಂಸವನ್ನು ಯಥೇಷ್ಟವಾಗಿ ನೀಡುವೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَتَنَٰزَعُونَ فِيهَا كَأْسًا لَّا لَغْوٌ فِيهَا وَلَا تَأْثِيمٌ
Kannada Translation - Hamza Butur ಅವರು ಪರಸ್ಪರ (ಸಂತೋಷದಿಂದ) ಒಬ್ಬರು ಇನ್ನೊಬ್ಬರ (ಶರಾಬಿನ) ಲೋಟವನ್ನು ಕಸಿಯುವರು. ಆ ಶರಾಬು ಕುಡಿಯುವುದರಿಂದ ವ್ಯರ್ಥ ಮಾತುಗಳಾಗಲಿ, ಅಪರಾಧಕೃತ್ಯಗಳಾಗಲಿ ಉಂಟಾಗುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَيَطُوفُ عَلَيْهِمْ غِلْمَانٌ لَّهُمْ كَأَنَّهُمْ لُؤْلُؤٌ مَّكْنُونٌ
Kannada Translation - Hamza Butur ಅವರ ಸುತ್ತಮುತ್ತಲು ಅವರ ಪರಿಚಾರಕರಾದ ಹುಡುಗರು ಸುತ್ತುತ್ತಿರುವರು. ಅವರು ಜೋಪಾನವಾಗಿ ತೆಗೆದಿಡಲಾದ ಮುತ್ತುಗಳಂತಿರುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَأَقْبَلَ بَعْضُهُمْ عَلَىٰ بَعْضٍ يَتَسَآءَلُونَ
Kannada Translation - Hamza Butur ಅವರು ಪರಸ್ಪರ ಒಬ್ಬರು ಇನ್ನೊಬ್ಬರ ಕಡೆಗೆ ತಿರುಗಿ ಪ್ರಶ್ನಿಸುವರು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قَالُوٓا۟ إِنَّا كُنَّا قَبْلُ فِىٓ أَهْلِنَا مُشْفِقِينَ
Kannada Translation - Hamza Butur ಅವರು ಹೇಳುವರು: “ನಿಶ್ಚಯವಾಗಿಯೂ ಇದಕ್ಕೆ ಮೊದಲು ನಾವು ನಮ್ಮ ಕುಟುಂಬದವರೊಡನೆ ಇದ್ದಾಗ ಭಯಪಡುತ್ತಿದ್ದೆವು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَمَنَّ ٱللَّهُ عَلَيْنَا وَوَقَىٰنَا عَذَابَ ٱلسَّمُومِ
Kannada Translation - Hamza Butur ಅಲ್ಲಾಹು ನಮಗೆ ಬಹಳ ದೊಡ್ಡ ಉಪಕಾರವನ್ನು ಮಾಡಿದನು. ಅವನು ನಮ್ಮನ್ನು ತೀಕ್ಷ್ಣವಾಗಿ ಜ್ವಲಿಸುವ ನರಕ ಶಿಕ್ಷೆಯಿಂದ ಪಾರು ಮಾಡಿದನು.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
إِنَّا كُنَّا مِن قَبْلُ نَدْعُوهُ إِنَّهُۥ هُوَ ٱلْبَرُّ ٱلرَّحِيمُ
Kannada Translation - Hamza Butur ನಿಶ್ಚಯವಾಗಿಯೂ ಇದಕ್ಕೆ ಮೊದಲು ನಾವು ಅವನನ್ನು ಕರೆದು ಪ್ರಾರ್ಥಿಸುತ್ತಿದ್ದೆವು. ನಿಶ್ಚಯವಾಗಿಯೂ ಅವನು ಅತ್ಯಂತ ಉಪಕಾರ ಮಾಡುವವನು ಮತ್ತು ದಯೆ ತೋರುವವನಾಗಿದ್ದಾನೆ.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَذَكِّرْ فَمَآ أَنتَ بِنِعْمَتِ رَبِّكَ بِكَاهِنٍ وَلَا مَجْنُونٍ
Kannada Translation - Hamza Butur (ಪ್ರವಾದಿಯವರೇ) ನೀವು ಉಪದೇಶ ನೀಡಿರಿ. ನಿಮ್ಮ ಪರಿಪಾಲಕನ (ಅಲ್ಲಾಹನ) ಅನುಗ್ರಹದಿಂದ ನೀವು ಜ್ಯೋತಿಷಿಯೋ ಮಾನಸಿಕ ಅಸ್ವಸ್ಥರೋ ಅಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ يَقُولُونَ شَاعِرٌ نَّتَرَبَّصُ بِهِۦ رَيْبَ ٱلْمَنُونِ
Kannada Translation - Hamza Butur “ಇವನೊಬ್ಬ ಕವಿಯಾಗಿದ್ದಾನೆ. ಇವನಿಗೆ ಕೇಡುಗಾಲ (ಸಾವು) ಬರುವುದನ್ನು ನಾವು ಕಾಯುತ್ತಿದ್ದೇವೆ” ಎಂದು ಅವರು (ಸತ್ಯನಿಷೇಧಿಗಳು) ಹೇಳುತ್ತಿದ್ದಾರೆಯೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
قُلْ تَرَبَّصُوا۟ فَإِنِّى مَعَكُم مِّنَ ٱلْمُتَرَبِّصِينَ
Kannada Translation - Hamza Butur ಹೇಳಿರಿ: “ನೀವು ಕಾಯಿರಿ! ನಿಶ್ಚಯವಾಗಿಯೂ ನಾನೂ ನಿಮ್ಮೊಂದಿಗೆ ಕಾಯುವವರಲ್ಲಿ ಸೇರುವೆನು.”
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ تَأْمُرُهُمْ أَحْلَٰمُهُم بِهَٰذَآ أَمْ هُمْ قَوْمٌ طَاغُونَ
Kannada Translation - Hamza Butur ಅವರ ಮನಸ್ಸು ಅವರಿಗೆ ಇದನ್ನೇ ಕಲಿಸುತ್ತದೆಯೇ? ಅಥವಾ ಅವರು ಅತಿರೇಕಿಗಳಾದ ಜನರಾಗಿದ್ದಾರೆಯೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ يَقُولُونَ تَقَوَّلَهُۥ بَل لَّا يُؤْمِنُونَ
Kannada Translation - Hamza Butur “ಅವನು ಇದನ್ನು ಸ್ವಯಂ ರಚಿಸಿದ್ದಾನೆ” ಎಂದು ಅವರು ಹೇಳುತ್ತಿದ್ದಾರೆಯೇ? ಅಲ್ಲ, ವಾಸ್ತವವಾಗಿ ಅವರು ವಿಶ್ವಾಸವಿಡುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَلْيَأْتُوا۟ بِحَدِيثٍ مِّثْلِهِۦٓ إِن كَانُوا۟ صَٰدِقِينَ
Kannada Translation - Hamza Butur ಅವರು ಸತ್ಯವನ್ನೇ ಹೇಳುತ್ತಿದ್ದರೆ ಇದರಂತಿರುವ ಒಂದು ವಚನವನ್ನು ಅವರು ರಚಿಸಿ ತರಲಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ خُلِقُوا۟ مِنْ غَيْرِ شَىْءٍ أَمْ هُمُ ٱلْخَٰلِقُونَ
Kannada Translation - Hamza Butur ಅವರು (ಯಾವುದೇ ಸೃಷ್ಟಿಕರ್ತನಿಲ್ಲದೆ) ಸ್ವಯಂ ಅಸ್ತಿತ್ವಕ್ಕೆ ಬಂದರೇ? ಅಥವಾ ಅವರೇ ಅವರ ಸೃಷ್ಟಿಕರ್ತರಾಗಿದ್ದಾರೆಯೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ خَلَقُوا۟ ٱلسَّمَٰوَٰتِ وَٱلْأَرْضَ بَل لَّا يُوقِنُونَ
Kannada Translation - Hamza Butur ಅವರೇ ಭೂಮ್ಯಾಕಾಶಗಳನ್ನು ಸೃಷ್ಟಿಸಿದರೇ? ಅಲ್ಲ, ವಾಸ್ತವವಾಗಿ ಅವರು ದೃಢವಿಶ್ವಾಸವಿಡುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ عِندَهُمْ خَزَآئِنُ رَبِّكَ أَمْ هُمُ ٱلْمُصَۣيْطِرُونَ
Kannada Translation - Hamza Butur ನಿಮ್ಮ ಪರಿಪಾಲಕನ (ಅಲ್ಲಾಹನ) ಬೊಕ್ಕಸಗಳು ಅವರ ಬಳಿಯಲ್ಲಿವೆಯೇ? ಅಥವಾ ಅವರು (ಆ ಬೊಕ್ಕಸಗಳ) ನಿರ್ವಾಹಕರೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ لَهُمْ سُلَّمٌ يَسْتَمِعُونَ فِيهِ فَلْيَأْتِ مُسْتَمِعُهُم بِسُلْطَٰنٍ مُّبِينٍ
Kannada Translation - Hamza Butur ಅವರ ಬಳಿ ಒಂದು ಏಣಿಯಿದ್ದು ಅವರು ಅದನ್ನು ಏರಿ (ಆಕಾಶದ ಮಾತುಗಳನ್ನು) ಕಿವಿಗೊಟ್ಟು ಕೇಳುತ್ತಾರೆಯೇ? ಹಾಗಿದ್ದರೆ ಅವರಲ್ಲಿ ಕಿವಿಗೊಟ್ಟು ಕೇಳಿದ ವ್ಯಕ್ತಿ ಸ್ಪಷ್ಟ ಆಧಾರವನ್ನು ತರಲಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ لَهُ ٱلْبَنَٰتُ وَلَكُمُ ٱلْبَنُونَ
Kannada Translation - Hamza Butur ಅಲ್ಲಾಹನಿಗೆ ಹೆಣ್ಣು ಮಕ್ಕಳು ಮತ್ತು ನಿಮಗೆ ಗಂಡು ಮಕ್ಕಳೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ تَسْـَٔلُهُمْ أَجْرًا فَهُم مِّن مَّغْرَمٍ مُّثْقَلُونَ
Kannada Translation - Hamza Butur ನೀವು ಅವರೊಡನೆ ಪ್ರತಿಫಲವನ್ನು ಕೇಳಿ ಅವರು (ಅದನ್ನು ನೀಡಲು ಸಾಧ್ಯವಾಗದೆ) ಸಾಲದ ಹೊರೆಯನ್ನು ಹೊರುತ್ತಿದ್ದಾರೆಯೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ عِندَهُمُ ٱلْغَيْبُ فَهُمْ يَكْتُبُونَ
Kannada Translation - Hamza Butur ಅವರ ಬಳಿ ಅದೃಶ್ಯ ಜ್ಞಾನವಿದ್ದು ಅವರು ಅದನ್ನು ಬರೆಯುತ್ತಿದ್ದಾರೆಯೇ?
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ يُرِيدُونَ كَيْدًا فَٱلَّذِينَ كَفَرُوا۟ هُمُ ٱلْمَكِيدُونَ
Kannada Translation - Hamza Butur ಅವರು ಏನಾದರೂ ಪಿತೂರಿ ಮಾಡಲು ಬಯಸುತ್ತಿದ್ದಾರೆಯೇ? ಆದರೆ ಪಿತೂರಿಗೆ ಬಲಿಯಾಗುವವರು ಸತ್ಯನಿಷೇಧಿಗಳೇ ಆಗಿದ್ದಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
أَمْ لَهُمْ إِلَٰهٌ غَيْرُ ٱللَّهِ سُبْحَٰنَ ٱللَّهِ عَمَّا يُشْرِكُونَ
Kannada Translation - Hamza Butur ಅವರಿಗೆ ಅಲ್ಲಾಹನ ಹೊರತು ಬೇರೆ ದೇವರಿದ್ದಾನೆಯೇ? ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಪರಿಶುದ್ಧನಾಗಿದ್ದಾನೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِن يَرَوْا۟ كِسْفًا مِّنَ ٱلسَّمَآءِ سَاقِطًا يَقُولُوا۟ سَحَابٌ مَّرْكُومٌ
Kannada Translation - Hamza Butur ಅವರು ಆಕಾಶದಿಂದ ಒಂದು ತುಣುಕು ಉದುರುವುದನ್ನು ಕಂಡರೆ, “ಅದು ಪದರ ಪದರವಾಗಿ ಪೇರಿಸಿಟ್ಟ ಮೋಡ” ಎಂದು ಹೇಳುತ್ತಾರೆ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
فَذَرْهُمْ حَتَّىٰ يُلَٰقُوا۟ يَوْمَهُمُ ٱلَّذِى فِيهِ يُصْعَقُونَ
Kannada Translation - Hamza Butur ಆದ್ದರಿಂದ ಅವರನ್ನು ಸ್ಮೃತಿ ತಪ್ಪುವಂತೆ ಮಾಡುವ ಅವರ ಆ ದಿನವನ್ನು ಭೇಟಿಯಾಗುವ ತನಕ ಅವರನ್ನು (ಅವರ ಪಾಡಿಗೆ) ಬಿಟ್ಟುಬಿಡಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
يَوْمَ لَا يُغْنِى عَنْهُمْ كَيْدُهُمْ شَيْـًٔا وَلَا هُمْ يُنصَرُونَ
Kannada Translation - Hamza Butur ಆ ದಿನ ಅವರ ತಂತ್ರಗಾರಿಕೆಗಳು ಅವರಿಗೆ ಉಪಕಾರ ಮಾಡುವುದಿಲ್ಲ. ಅವರಿಗೆ ಸಹಾಯವೂ ದೊರೆಯುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَإِنَّ لِلَّذِينَ ظَلَمُوا۟ عَذَابًا دُونَ ذَٰلِكَ وَلَٰكِنَّ أَكْثَرَهُمْ لَا يَعْلَمُونَ
Kannada Translation - Hamza Butur ನಿಶ್ಚಯವಾಗಿಯೂ ಅಕ್ರಮಿಗಳಿಗೆ ಇದರ ಹೊರತಾಗಿ ಬೇರೆ ಶಿಕ್ಷೆಯೂ ಇದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَٱصْبِرْ لِحُكْمِ رَبِّكَ فَإِنَّكَ بِأَعْيُنِنَا وَسَبِّحْ بِحَمْدِ رَبِّكَ حِينَ تَقُومُ
Kannada Translation - Hamza Butur ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ತೀರ್ಮಾನವನ್ನು ತಾಳ್ಮೆಯಿಂದ ಕಾಯಿರಿ. ನಿಶ್ಚಯವಾಗಿಯೂ ನೀವು ನಮ್ಮ ಕಣ್ಣುಗಳ ಮುಂಭಾಗದಲ್ಲಿದ್ದೀರಿ. ನೀವು (ಬೆಳಗ್ಗೆ) ಎದ್ದೇಳುವಾಗ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
وَمِنَ ٱلَّيْلِ فَسَبِّحْهُ وَإِدْبَٰرَ ٱلنُّجُومِ
Kannada Translation - Hamza Butur ರಾತ್ರಿಯಲ್ಲೂ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ. ನಕ್ಷತ್ರಗಳು ಮರೆಯಾಗುವ ಸಮಯದಲ್ಲೂ ಸಹ.
ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →
← ಸೂರ Adh-Dhaariyat
ಸೂರ An-Najm →
Looking for a topic? Try the meaning search — your question is scanned across all 6,236 verses.
→
Arabic text and translations via Tanzil and QuranEnc — verbatim, unmodified · Translations belong to their translators and are not the Qur'an itself
ಇದು ಸಂಶೋಧನಾ ಸಹಾಯಕ; ಧಾರ್ಮಿಕ ತೀರ್ಪಿನ ಮೂಲವಲ್ಲ.