caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qamar القمر

55 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 37

بِسْمِ ٱللَّهِ ٱلرَّحْمَٰنِ ٱلرَّحِيمِ ٱقْتَرَبَتِ ٱلسَّاعَةُ وَٱنشَقَّ ٱلْقَمَرُ

Kannada Translation - Hamza Buturಅಂತ್ಯಸಮಯವು ಹತ್ತಿರವಾಗಿದೆ ಮತ್ತು ಚಂದ್ರ ಇಬ್ಭಾಗವಾಗಿದೆ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِن يَرَوْا۟ ءَايَةً يُعْرِضُوا۟ وَيَقُولُوا۟ سِحْرٌ مُّسْتَمِرٌّ

Kannada Translation - Hamza Buturಅವರು ಯಾವುದೇ ದೃಷ್ಟಾಂತವನ್ನು ನೋಡಿದರೂ ವಿಮುಖರಾಗುತ್ತಾರೆ ಮತ್ತು “ಇದು ಹಿಂದಿನಿಂದಲೇ ನಡೆದು ಬರುತ್ತಿರುವ ಮಾಟಗಾರಿಕೆ” ಎಂದು ಹೇಳುತ್ತಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكَذَّبُوا۟ وَٱتَّبَعُوٓا۟ أَهْوَآءَهُمْ وَكُلُّ أَمْرٍ مُّسْتَقِرٌّ

Kannada Translation - Hamza Buturಅವರು ನಿಷೇಧಿಸಿದರು ಮತ್ತು ತಮ್ಮ ಸ್ವೇಚ್ಛೆಗಳನ್ನು ಹಿಂಬಾಲಿಸಿದರು. ಎಲ್ಲಾ ವಿಷಯಗಳಿಗೂ ಒಂದು ನಿಶ್ಚಿತ ಸಮಯವನ್ನು ನಿರ್ಣಯಿಸಲಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ جَآءَهُم مِّنَ ٱلْأَنۢبَآءِ مَا فِيهِ مُزْدَجَرٌ

Kannada Translation - Hamza Buturನಿಶ್ಚಯವಾಗಿಯೂ ಅವರ ಬಳಿಗೆ ಗದರಿಕೆಯ (ಉಪದೇಶವಿರುವ) ಸಮಾಚಾರಗಳು ಬಂದಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

حِكْمَةٌۢ بَٰلِغَةٌ فَمَا تُغْنِ ٱلنُّذُرُ

Kannada Translation - Hamza Buturಪೂರ್ಣರೂಪದ ವಿವೇಕಯುಕ್ತ ಮಾತುಗಳು. ಆದರೂ ಆ ಮುನ್ನೆಚ್ಚರಿಕೆಗಳು ಪ್ರಯೋಜನ ನೀಡಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَتَوَلَّ عَنْهُمْ يَوْمَ يَدْعُ ٱلدَّاعِ إِلَىٰ شَىْءٍ نُّكُرٍ

Kannada Translation - Hamza Buturಆದ್ದರಿಂದ (ಪ್ರವಾದಿಯವರೇ!) ನೀವು ಅವರಿಂದ ವಿಮುಖರಾಗಿ ಬಿಡಿ. ಕರೆ ನೀಡುವವನು ಅನಿಷ್ಟಕರ ವಿಷಯದ ಕಡೆಗೆ ಕರೆ ನೀಡುವ ದಿನ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

خُشَّعًا أَبْصَٰرُهُمْ يَخْرُجُونَ مِنَ ٱلْأَجْدَاثِ كَأَنَّهُمْ جَرَادٌ مُّنتَشِرٌ

Kannada Translation - Hamza Buturಅವರ ಕಣ್ಣುಗಳು ವಿನಮ್ರವಾಗಿರುವುವು. ದಿಕ್ಕೆಟ್ಟು ಹಾರಾಡುವ ಮಿಡತೆಗಳಂತೆ ಅವರು ಸಮಾಧಿಗಳಿಂದ ಹೊರಬರುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مُّهْطِعِينَ إِلَى ٱلدَّاعِ يَقُولُ ٱلْكَٰفِرُونَ هَٰذَا يَوْمٌ عَسِرٌ

Kannada Translation - Hamza Buturಅವರು ಕರೆ ನೀಡುವವನ ಕಡೆಗೆ ಆತುರದಿಂದ ಓಡುವರು. ಸತ್ಯನಿಷೇಧಿಗಳು ಹೇಳುವರು: “ಇದು ಕಠೋರ ದಿನವಾಗಿದೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كَذَّبَتْ قَبْلَهُمْ قَوْمُ نُوحٍ فَكَذَّبُوا۟ عَبْدَنَا وَقَالُوا۟ مَجْنُونٌ وَٱزْدُجِرَ

Kannada Translation - Hamza Buturಅವರಿಗಿಂತ ಮೊದಲು ನೂಹರ ಜನರು ನಿಷೇಧಿಸಿದ್ದರು. ಅವರು ನಮ್ಮ ದಾಸನನ್ನು ನಿಷೇಧಿಸಿದರು. ಮಾನಸಿಕ ಅಸ್ವಸ್ಥ ಎಂದು ಜರೆಯುತ್ತಾ ಅವರನ್ನು ಗದರಿಸಿದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَدَعَا رَبَّهُۥٓ أَنِّى مَغْلُوبٌ فَٱنتَصِرْ

Kannada Translation - Hamza Buturಆಗ ನೂಹ್ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದರು: “ನಾನು ಅಸಹಾಯಕನಾಗಿದ್ದೇನೆ. ನನಗೆ ಸಹಾಯ ಮಾಡು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَفَتَحْنَآ أَبْوَٰبَ ٱلسَّمَآءِ بِمَآءٍ مُّنْهَمِرٍ

Kannada Translation - Hamza Buturಆಗ ರಭಸವಾಗಿ ಸುರಿಯುವ ಮಳೆಗಾಗಿ ನಾವು ಆಕಾಶದ್ವಾರಗಳನ್ನು ತೆರೆದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَفَجَّرْنَا ٱلْأَرْضَ عُيُونًا فَٱلْتَقَى ٱلْمَآءُ عَلَىٰٓ أَمْرٍ قَدْ قُدِرَ

Kannada Translation - Hamza Buturನಾವು ಭೂಮಿಯಲ್ಲಿ ಒರತೆಗಳನ್ನು ಚಿಮ್ಮುವಂತೆ ಮಾಡಿದೆವು. ಈಗಾಗಲೇ ನಿರ್ಣಯಿಸಿದ ವಿಷಯಕ್ಕಾಗಿ (ಆಕಾಶ ಮತ್ತು ಭೂಮಿಯ) ನೀರು ಸಂಗಮವಾಯಿತು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَحَمَلْنَٰهُ عَلَىٰ ذَاتِ أَلْوَٰحٍ وَدُسُرٍ

Kannada Translation - Hamza Buturನಾವು ಅವರನ್ನು ಹಲಗೆಗಳು ಮತ್ತು ಮೊಳೆಗಳಿಂದ (ನಿರ್ಮಿಸಿದ ಹಡಗಿನಲ್ಲಿ) ಒಯ್ದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

تَجْرِى بِأَعْيُنِنَا جَزَآءً لِّمَن كَانَ كُفِرَ

Kannada Translation - Hamza Buturಅದು ನಮ್ಮ ಕಣ್ಣುಗಳ ಮುಂಭಾಗದಲ್ಲಿ ಚಲಿಸುತ್ತಿತ್ತು. ಯಾರನ್ನು ನಿಷೇಧಿಸಲಾಯಿತೋ ಅವರಿಗೆ (ನೂಹರಿಗೆ) ಪ್ರತಿಫಲವಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَد تَّرَكْنَٰهَآ ءَايَةً فَهَلْ مِن مُّدَّكِرٍ

Kannada Translation - Hamza Buturನಿಶ್ಚಯವಾಗಿಯೂ ನಾವು ಆ ಘಟನೆಯನ್ನು ಒಂದು ದೃಷ್ಟಾಂತವಾಗಿ ಉಳಿಸಿದೆವು. ಉಪದೇಶ ಸ್ವೀಕರಿಸುವವರು ಯಾರಾದರೂ ಇದ್ದಾರೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَكَيْفَ كَانَ عَذَابِى وَنُذُرِ

Kannada Translation - Hamza Buturನನ್ನ ಶಿಕ್ಷೆ ಮತ್ತು ಎಚ್ಚರಿಕೆಯ ಮಾತುಗಳು ಹೇಗಿದ್ದವು (ಎಂದು ಹೇಳಿರಿ).

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ يَسَّرْنَا ٱلْقُرْءَانَ لِلذِّكْرِ فَهَلْ مِن مُّدَّكِرٍ

Kannada Translation - Hamza Buturನಾವು ಕುರ್‌ಆನನ್ನು ಅರ್ಥಮಾಡಿಕೊಳ್ಳುವುದಕ್ಕಾಗಿ ಸರಳಗೊಳಿಸಿದ್ದೇವೆ. ಉಪದೇಶ ಸ್ವೀಕರಿಸುವವರು ಯಾರಾದರೂ ಇದ್ದಾರೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كَذَّبَتْ عَادٌ فَكَيْفَ كَانَ عَذَابِى وَنُذُرِ

Kannada Translation - Hamza Buturಆದ್ ಗೋತ್ರದವರು ನಿಷೇಧಿಸಿದರು. ಆಗ ನನ್ನ ಶಿಕ್ಷೆ ಮತ್ತು ಎಚ್ಚರಿಕೆಯ ಮಾತುಗಳು ಹೇಗಿದ್ದವು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّآ أَرْسَلْنَا عَلَيْهِمْ رِيحًا صَرْصَرًا فِى يَوْمِ نَحْسٍ مُّسْتَمِرٍّ

Kannada Translation - Hamza Buturನಿಶ್ಚಯವಾಗಿಯೂ ನಾವು ನಿರಂತರವಾಗಿ ಬೀಸುವ ಭೀಕರ ಚಳಿಗಾಳಿಯನ್ನು ಅಶುಭ ದಿನಗಳಲ್ಲಿ ಅವರ ಕಡೆಗೆ ಕಳುಹಿಸಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

تَنزِعُ ٱلنَّاسَ كَأَنَّهُمْ أَعْجَازُ نَخْلٍ مُّنقَعِرٍ

Kannada Translation - Hamza Buturಅದು ಮನುಷ್ಯರನ್ನು ಎತ್ತಿ ಎಸೆಯುತ್ತಿತ್ತು. ಅವರು ಬುಡಸಮೇತ ಕೀಳಲಾದ ಖರ್ಜೂರ ಮರದ ಕಾಂಡಗಳೋ ಎಂಬಂತೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَكَيْفَ كَانَ عَذَابِى وَنُذُرِ

Kannada Translation - Hamza Buturಆಗ ನನ್ನ ಶಿಕ್ಷೆ ಮತ್ತು ಎಚ್ಚರಿಕೆಯ ಮಾತುಗಳು ಹೇಗಿದ್ದವು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ يَسَّرْنَا ٱلْقُرْءَانَ لِلذِّكْرِ فَهَلْ مِن مُّدَّكِرٍ

Kannada Translation - Hamza Buturನಾವು ಕುರ್‌ಆನನ್ನು ಅರ್ಥಮಾಡಿಕೊಳ್ಳುವುದಕ್ಕಾಗಿ ಸರಳಗೊಳಿಸಿದ್ದೇವೆ. ಉಪದೇಶ ಸ್ವೀಕರಿಸುವವರು ಯಾರಾದರೂ ಇದ್ದಾರೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كَذَّبَتْ ثَمُودُ بِٱلنُّذُرِ

Kannada Translation - Hamza Buturಸಮೂದ್ ಗೋತ್ರದವರು ಎಚ್ಚರಿಕೆಗಳನ್ನು ನಿಷೇಧಿಸಿದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَقَالُوٓا۟ أَبَشَرًا مِّنَّا وَٰحِدًا نَّتَّبِعُهُۥٓ إِنَّآ إِذًا لَّفِى ضَلَٰلٍ وَسُعُرٍ

Kannada Translation - Hamza Buturಅವರು ಹೇಳಿದರು: “ನಮ್ಮವರಲ್ಲೇ ಸೇರಿದ ಒಬ್ಬನನ್ನು ನಾವು ಅನುಸರಿಸಬೇಕೇ? ಹಾಗೇನಾದರೂ ಆದರೆ ನಿಶ್ಚಯವಾಗಿಯೂ ನಾವು ಪ್ರಮಾದದಲ್ಲಿ ಬೀಳುವೆವು ಮತ್ತು ಮತಿಯಿಲ್ಲದವರಾಗಿ ಬಿಡುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَءُلْقِىَ ٱلذِّكْرُ عَلَيْهِ مِنۢ بَيْنِنَا بَلْ هُوَ كَذَّابٌ أَشِرٌ

Kannada Translation - Hamza Buturನಮ್ಮ ನಡುವೆ ಅವನಿಗೆ ಮಾತ್ರ ದೇವವಾಣಿ ನೀಡಲಾಗುತ್ತಿದೆಯೇ? ಅಲ್ಲ, ವಾಸ್ತವವಾಗಿ ಅವನು ಸುಳ್ಳುಗಾರ ಮತ್ತು ಅಹಂಭಾವಿಯಾಗಿದ್ದಾನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

سَيَعْلَمُونَ غَدًا مَّنِ ٱلْكَذَّابُ ٱلْأَشِرُ

Kannada Translation - Hamza Buturಸುಳ್ಳುಗಾರ ಮತ್ತು ಅಹಂಭಾವಿ ಯಾರೆಂದು ಅವರು ನಾಳೆ ತಿಳಿಯುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّا مُرْسِلُوا۟ ٱلنَّاقَةِ فِتْنَةً لَّهُمْ فَٱرْتَقِبْهُمْ وَٱصْطَبِرْ

Kannada Translation - Hamza Buturನಿಶ್ಚಯವಾಗಿಯೂ ನಾವು ಅವರಿಗೆ ಪರೀಕ್ಷೆಯಾಗಿ ಒಂದು ಒಂಟೆಯನ್ನು ಕಳುಹಿಸುವೆವು. (ಓ ಸ್ವಾಲಿಹ್) ನೀವು ಅವರನ್ನು ಗಮನಿಸುತ್ತಿರಿ ಮತ್ತು ತಾಳ್ಮೆಯಿಂದಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَنَبِّئْهُمْ أَنَّ ٱلْمَآءَ قِسْمَةٌۢ بَيْنَهُمْ كُلُّ شِرْبٍ مُّحْتَضَرٌ

Kannada Translation - Hamza Buturನೀರನ್ನು ಅವರ ಮಧ್ಯೆ (ಅವರಿಗೆ ಮತ್ತು ಒಂಟೆಗೆ) ಪಾಲು ಮಾಡಲಾಗಿದೆಯೆಂದು ಅವರಿಗೆ ತಿಳಿಸಿರಿ. ಪ್ರತಿಯೊಬ್ಬರೂ ತಮ್ಮ ಸರದಿ ಬಂದಾಗ ಉಪಸ್ಥಿತರಾಗಲಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَنَادَوْا۟ صَاحِبَهُمْ فَتَعَاطَىٰ فَعَقَرَ

Kannada Translation - Hamza Buturಆದರೆ ಅವರು ಅವರ ಗೆಳೆಯನನ್ನು ಕರೆದರು. ಅವನು ಆ ಒಂಟೆಯನ್ನು ಹಿಡಿದು ಅದರ ಕಾಲುಗಳನ್ನು ಕತ್ತರಿಸಿದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَكَيْفَ كَانَ عَذَابِى وَنُذُرِ

Kannada Translation - Hamza Buturಆಗ ನನ್ನ ಶಿಕ್ಷೆ ಮತ್ತು ಎಚ್ಚರಿಕೆಯ ಮಾತುಗಳು ಹೇಗಿದ್ದವು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّآ أَرْسَلْنَا عَلَيْهِمْ صَيْحَةً وَٰحِدَةً فَكَانُوا۟ كَهَشِيمِ ٱلْمُحْتَظِرِ

Kannada Translation - Hamza Buturನಾವು ಅವರ ಮೇಲೆ ಒಂದೇ ಚೀತ್ಕಾರವನ್ನು ಕಳುಹಿಸಿದೆವು. ಆಗ ಅವರು ಹಟ್ಟಿ ನಿರ್ಮಿಸುವವನು ಎಸೆದ ಹುಲ್ಲಿನಂತಾಗಿ ಬಿಟ್ಟರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ يَسَّرْنَا ٱلْقُرْءَانَ لِلذِّكْرِ فَهَلْ مِن مُّدَّكِرٍ

Kannada Translation - Hamza Buturನಾವು ಕುರ್‌ಆನನ್ನು ಅರ್ಥಮಾಡಿಕೊಳ್ಳುವುದಕ್ಕಾಗಿ ಸರಳಗೊಳಿಸಿದ್ದೇವೆ. ಉಪದೇಶ ಸ್ವೀಕರಿಸುವವರು ಯಾರಾದರೂ ಇದ್ದಾರೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كَذَّبَتْ قَوْمُ لُوطٍۭ بِٱلنُّذُرِ

Kannada Translation - Hamza Buturಲೂತ‌ರ ಜನರು ಎಚ್ಚರಿಕೆಗಳನ್ನು ನಿಷೇಧಿಸಿದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّآ أَرْسَلْنَا عَلَيْهِمْ حَاصِبًا إِلَّآ ءَالَ لُوطٍ نَّجَّيْنَٰهُم بِسَحَرٍ

Kannada Translation - Hamza Buturನಿಶ್ಚಯವಾಗಿಯೂ ನಾವು ಅವರ ಮೇಲೆ ಕಲ್ಲುಗಳ ಬಿರುಗಾಳಿಯನ್ನು ಕಳುಹಿಸಿದೆವು. ಲೂತ‌ರ ಕುಟುಂಬದ ಹೊರತು. ನಾವು ಅವರನ್ನು ಸಹರಿಯ ವೇಳೆಯಲ್ಲಿ (ರಾತ್ರಿಯ ಕೊನೆಯ ಸಮಯ) ರಕ್ಷಿಸಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

نِّعْمَةً مِّنْ عِندِنَا كَذَٰلِكَ نَجْزِى مَن شَكَرَ

Kannada Translation - Hamza Buturನಮ್ಮ ಕಡೆಯ ಒಂದು ಉಪಕಾರವಾಗಿ. ಕೃತಜ್ಞರಾಗಿರುವವರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುವೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ أَنذَرَهُم بَطْشَتَنَا فَتَمَارَوْا۟ بِٱلنُّذُرِ

Kannada Translation - Hamza Buturನಮ್ಮ ಹಿಡಿತದ ಬಗ್ಗೆ ಅವರು (ಲೂತ್) ಅವರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಅವರು ಆ ಎಚ್ಚರಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ رَٰوَدُوهُ عَن ضَيْفِهِۦ فَطَمَسْنَآ أَعْيُنَهُمْ فَذُوقُوا۟ عَذَابِى وَنُذُرِ

Kannada Translation - Hamza Buturಅವರು ಲೂತರನ್ನು ಅವರ ಅತಿಥಿಗಳ ವಿಷಯದಲ್ಲಿ ಪುಸಲಾಯಿಸಿದರು. ಆಗ ನಾವು ಅವರ ಕಣ್ಣುಗಳನ್ನು ಕುರುಡಾಗಿಸಿದೆವು. (ನಾವು ಹೇಳಿದೆವು): “ನನ್ನ ಶಿಕ್ಷೆ ಮತ್ತು ಎಚ್ಚರಿಕೆಗಳ ರುಚಿಯನ್ನು ನೋಡಿರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ صَبَّحَهُم بُكْرَةً عَذَابٌ مُّسْتَقِرٌّ

Kannada Translation - Hamza Buturಮುಂಜಾನೆಯೇ ಅವರನ್ನು ಒಂದೇ ಸ್ಥಳದಲ್ಲಿ ಹಿಡಿದಿಡುವ ಶಿಕ್ಷೆಯು ಅವರ ಮೇಲೆರಗಿಬಿಟ್ಟಿತು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَذُوقُوا۟ عَذَابِى وَنُذُرِ

Kannada Translation - Hamza Butur(ನಾವು ಹೇಳಿದೆವು): “ನನ್ನ ಶಿಕ್ಷೆ ಮತ್ತು ಎಚ್ಚರಿಕೆಗಳ ರುಚಿಯನ್ನು ನೋಡಿರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ يَسَّرْنَا ٱلْقُرْءَانَ لِلذِّكْرِ فَهَلْ مِن مُّدَّكِرٍ

Kannada Translation - Hamza Buturನಾವು ಕುರ್‌ಆನನ್ನು ಅರ್ಥಮಾಡಿಕೊಳ್ಳುವುದಕ್ಕಾಗಿ ಸರಳಗೊಳಿಸಿದ್ದೇವೆ. ಉಪದೇಶ ಸ್ವೀಕರಿಸುವವರು ಯಾರಾದರೂ ಇದ್ದಾರೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ جَآءَ ءَالَ فِرْعَوْنَ ٱلنُّذُرُ

Kannada Translation - Hamza Buturಫರೋಹನ ಜನರಿಗೂ ಎಚ್ಚರಿಕೆಗಳು ಬಂದಿದ್ದವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

كَذَّبُوا۟ بِـَٔايَٰتِنَا كُلِّهَا فَأَخَذْنَٰهُمْ أَخْذَ عَزِيزٍ مُّقْتَدِرٍ

Kannada Translation - Hamza Buturಅವರು ನಮ್ಮ ದೃಷ್ಟಾಂತಗಳೆಲ್ಲವನ್ನೂ ನಿಷೇಧಿಸಿದರು. ಆಗ ನಾವು ಮಹಾ ಪ್ರಬಲನು ಮತ್ತು ಶಕ್ತಿವಂತನು ಹಿಡಿಯುವಂತೆ ಅವರನ್ನು ಹಿಡಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَكُفَّارُكُمْ خَيْرٌ مِّنْ أُو۟لَٰٓئِكُمْ أَمْ لَكُم بَرَآءَةٌ فِى ٱلزُّبُرِ

Kannada Translation - Hamza Butur(ಓ ಕುರೈಶರೇ) ನಿಮ್ಮ ಸತ್ಯನಿಷೇಧಿಗಳು ಇವರಿಗಿಂತ ಒಳ್ಳೆಯವರೇ? ಅಥವಾ ನಿಮಗೆ ಪೂರ್ವ ಗ್ರಂಥಗಳಲ್ಲಿ ವಿನಾಯಿತಿ ನಿಶ್ಚಯಿಸಲಾಗಿದೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَمْ يَقُولُونَ نَحْنُ جَمِيعٌ مُّنتَصِرٌ

Kannada Translation - Hamza Buturಅಥವಾ, “ನಾವು ಗೆಲ್ಲುವ ಸಂಘವಾಗಿದ್ದೇವೆ” ಎಂದು ಅವರು ಹೇಳುತ್ತಿದ್ದಾರೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

سَيُهْزَمُ ٱلْجَمْعُ وَيُوَلُّونَ ٱلدُّبُرَ

Kannada Translation - Hamza Buturಅವರ ಸಂಘವು ಸದ್ಯವೇ ಪರಾಭವಗೊಳ್ಳಲಿದೆ ಮತ್ತು ಅವರು ಬೆನ್ನು ತೋರಿಸಿ ಓಡಲಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

بَلِ ٱلسَّاعَةُ مَوْعِدُهُمْ وَٱلسَّاعَةُ أَدْهَىٰ وَأَمَرُّ

Kannada Translation - Hamza Buturಅಲ್ಲ, ಅಂತ್ಯಸಮಯವು (ಪುನರುತ್ಥಾನ ದಿನವು) ಅವರಿಗೆ ವಾಗ್ದಾನ ಮಾಡಲಾದ ಸಮಯವಾಗಿದೆ. ಅಂತ್ಯಸಮಯವು ಅತ್ಯಂತ ಕಠೋರ ಮತ್ತು ಅತ್ಯಂತ ಕಹಿಯಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلْمُجْرِمِينَ فِى ضَلَٰلٍ وَسُعُرٍ

Kannada Translation - Hamza Buturನಿಶ್ಚಯವಾಗಿಯೂ ಅಪರಾಧಿಗಳು ದುರ್ಮಾರ್ಗದಲ್ಲಿ ಮತ್ತು ಶಿಕ್ಷೆಯಲ್ಲಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَوْمَ يُسْحَبُونَ فِى ٱلنَّارِ عَلَىٰ وُجُوهِهِمْ ذُوقُوا۟ مَسَّ سَقَرَ

Kannada Translation - Hamza Buturಅವರನ್ನು ಅವರ ಮುಖದ ಮೇಲೆ ನರಕಾಗ್ನಿಯಲ್ಲಿ ಎಳೆದೊಯ್ಯಲಾಗುವ ದಿನ! (ಅವರೊಡನೆ ಹೇಳಲಾಗುವುದು): “ನೀವು ನರಕ ಸ್ಪರ್ಶದ ರುಚಿಯನ್ನು ನೋಡಿರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّا كُلَّ شَىْءٍ خَلَقْنَٰهُ بِقَدَرٍ

Kannada Translation - Hamza Buturನಿಶ್ಚಯವಾಗಿಯೂ ನಾವು ಎಲ್ಲಾ ವಸ್ತುಗಳನ್ನು ಒಂದು (ನಿಶ್ಚಿತ) ನಿರ್ಣಯದಂತೆ ಸೃಷ್ಟಿಸಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَآ أَمْرُنَآ إِلَّا وَٰحِدَةٌ كَلَمْحٍۭ بِٱلْبَصَرِ

Kannada Translation - Hamza Buturನಮ್ಮ ಆಜ್ಞೆಯು ಕಣ್ಣೆವೆಯಿಕ್ಕುವಂತೆ ಒಂದು ಮಾತು ಮಾತ್ರವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ أَهْلَكْنَآ أَشْيَاعَكُمْ فَهَلْ مِن مُّدَّكِرٍ

Kannada Translation - Hamza Buturನಾವು ನಿಮ್ಮಂತಹ ಅನೇಕರನ್ನು ನಾಶ ಮಾಡಿದ್ದೇವೆ. ಉಪದೇಶ ಸ್ವೀಕರಿಸುವವರು ಯಾರಾದರೂ ಇದ್ದಾರೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكُلُّ شَىْءٍ فَعَلُوهُ فِى ٱلزُّبُرِ

Kannada Translation - Hamza Buturಅವರು ಮಾಡಿದ ಕರ್ಮಗಳೆಲ್ಲವೂ ಕರ್ಮಪುಸ್ತಕಗಳಲ್ಲಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكُلُّ صَغِيرٍ وَكَبِيرٍ مُّسْتَطَرٌ

Kannada Translation - Hamza Buturಚಿಕ್ಕ ಮತ್ತು ದೊಡ್ಡದಾದ ಎಲ್ಲವನ್ನೂ ನಮೂದಿಸಲಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلْمُتَّقِينَ فِى جَنَّٰتٍ وَنَهَرٍ

Kannada Translation - Hamza Buturನಿಶ್ಚಯವಾಗಿಯೂ ದೇವಭಯವುಳ್ಳವರು ಸ್ವರ್ಗೋದ್ಯಾನಗಳಲ್ಲಿ ಮತ್ತು ನದಿಗಳಲ್ಲಿರುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فِى مَقْعَدِ صِدْقٍ عِندَ مَلِيكٍ مُّقْتَدِرٍۭ

Kannada Translation - Hamza Buturಗೌರವದ ಆಸನದಲ್ಲಿ, ಬಲಿಷ್ಠ ಸಾಮ್ರಾಟನ ಬಳಿಯಲ್ಲಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70