caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mujaadila, ಆಯತ್ 22

ಮದೀನಾ · ಅವತರಣ ಕ್ರಮ 105 · 58:22

لَّا تَجِدُ قَوْمًا يُؤْمِنُونَ بِٱللَّهِ وَٱلْيَوْمِ ٱلْـَٔاخِرِ يُوَآدُّونَ مَنْ حَآدَّ ٱللَّهَ وَرَسُولَهُۥ وَلَوْ كَانُوٓا۟ ءَابَآءَهُمْ أَوْ أَبْنَآءَهُمْ أَوْ إِخْوَٰنَهُمْ أَوْ عَشِيرَتَهُمْ أُو۟لَٰٓئِكَ كَتَبَ فِى قُلُوبِهِمُ ٱلْإِيمَٰنَ وَأَيَّدَهُم بِرُوحٍ مِّنْهُ وَيُدْخِلُهُمْ جَنَّٰتٍ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَا رَضِىَ ٱللَّهُ عَنْهُمْ وَرَضُوا۟ عَنْهُ أُو۟لَٰٓئِكَ حِزْبُ ٱللَّهِ أَلَآ إِنَّ حِزْبَ ٱللَّهِ هُمُ ٱلْمُفْلِحُونَ

Kannada Translation - Hamza Buturಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವ ಜನರು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುವವರೊಡನೆ ಮೈತ್ರಿ ಮಾಡುವುದನ್ನು ನೀವು ಕಾಣಲಾರಿರಿ. ಅವರು ಅವರ ತಂದೆಯರು, ಮಕ್ಕಳು, ಸಹೋದರರು ಅಥವಾ ಸಂಬಂಧಿಕರಾಗಿದ್ದರೂ ಸಹ. ಅವರ ಹೃದಯಗಳಲ್ಲಿ ಅವನು ವಿಶ್ವಾಸವನ್ನು ದಾಖಲಿಸಿದ್ದಾನೆ ಮತ್ತು ತನ್ನ ವತಿಯ ಆತ್ಮದಿಂದ ಅವರಿಗೆ ಬೆಂಬಲವನ್ನು ನೀಡಿದ್ದಾನೆ. ಅವನು ಅವರನ್ನು ತಳಭಾಗದಲ್ಲಿ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಅವರೇ ಅಲ್ಲಾಹನ ಪಂಗಡದವರು. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹನ ಪಂಗಡದವರೇ ವಿಜಯಗಳಿಸುವವರು.
Looking for a topic? Try the meaning search — your question is scanned across all 6,236 verses.
ಭಾಷೆ — 70