وَإِذْ قَالَ عِيسَى ٱبْنُ مَرْيَمَ يَٰبَنِىٓ إِسْرَٰٓءِيلَ إِنِّى رَسُولُ ٱللَّهِ إِلَيْكُم مُّصَدِّقًا لِّمَا بَيْنَ يَدَىَّ مِنَ ٱلتَّوْرَىٰةِ وَمُبَشِّرًۢا بِرَسُولٍ يَأْتِى مِنۢ بَعْدِى ٱسْمُهُۥٓ أَحْمَدُ فَلَمَّا جَآءَهُم بِٱلْبَيِّنَٰتِ قَالُوا۟ هَٰذَا سِحْرٌ مُّبِينٌ
Kannada Translation - Hamza Buturಮರ್ಯಮರ ಮಗ ಈಸಾ ಹೇಳಿದ ಸಂದರ್ಭ: “ಓ ಇಸ್ರಾಯೇಲ್ ಮಕ್ಕಳೇ! ನಾನು ನನಗಿಂತ ಮೊದಲು ಅವತೀರ್ಣವಾದ ತೌರಾತನ್ನು ದೃಢೀಕರಿಸಲು ಮತ್ತು ನನ್ನ ನಂತರ ಬರುವ ಅಹ್ಮದ್[1] ಎಂಬ ಹೆಸರಿನ ಒಬ್ಬ ಸಂದೇಶವಾಹಕರ ಬಗ್ಗೆ ನಿಮಗೆ ಸುವಾರ್ತೆ ತಿಳಿಸಲು ನಿಮ್ಮ ಬಳಿಗೆ ಕಳುಹಿಸಲಾಗಿರುವ ಅಲ್ಲಾಹನ ಸಂದೇಶವಾಹಕನಾಗಿದ್ದೇನೆ.” ಆದರೆ ಅವರು (ಈಸಾ) ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಾಗ ಅವರು ಹೇಳಿದರು: “ಇದು ಸ್ಪಷ್ಟ ಮಾಟಗಾರಿಕೆಯಾಗಿದೆ.”