caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jumu'a الجمعة

11 ಆಯತ್‌ಗಳು · ಮದೀನಾ · ಅವತರಣ ಕ್ರಮ 110

بِسْمِ ٱللَّهِ ٱلرَّحْمَٰنِ ٱلرَّحِيمِ يُسَبِّحُ لِلَّهِ مَا فِى ٱلسَّمَٰوَٰتِ وَمَا فِى ٱلْأَرْضِ ٱلْمَلِكِ ٱلْقُدُّوسِ ٱلْعَزِيزِ ٱلْحَكِيمِ

Kannada Translation - Hamza Buturಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಸಾಮ್ರಾಟನು, ಪರಮ ಪವಿತ್ರನು, ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هُوَ ٱلَّذِى بَعَثَ فِى ٱلْأُمِّيِّـۧنَ رَسُولًا مِّنْهُمْ يَتْلُوا۟ عَلَيْهِمْ ءَايَٰتِهِۦ وَيُزَكِّيهِمْ وَيُعَلِّمُهُمُ ٱلْكِتَٰبَ وَٱلْحِكْمَةَ وَإِن كَانُوا۟ مِن قَبْلُ لَفِى ضَلَٰلٍ مُّبِينٍ

Kannada Translation - Hamza Buturಅವನೇ ಅನಕ್ಷರಸ್ಥ ಜನರಿಗೆ ಅವರಿಂದಲೇ ಒಬ್ಬ ಸಂದೇಶವಾಹಕರನ್ನು ಕಳುಹಿಸಿದವನು. ಆ ಸಂದೇಶವಾಹಕರು ಅವರಿಗೆ ಅಲ್ಲಾಹನ ವಚನಗಳನ್ನು ಓದಿಕೊಡುತ್ತಾರೆ, ಅವರನ್ನು ಶುದ್ಧೀಕರಿಸುತ್ತಾರೆ ಮತ್ತು ಅವರಿಗೆ ಗ್ರಂಥ ಹಾಗೂ ವಿವೇಕವನ್ನು ಕಲಿಸಿಕೊಡುತ್ತಾರೆ. ಇದಕ್ಕಿಂತ ಮೊದಲು ಅವರು ಸ್ಪಷ್ಟ ದುರ್ಮಾರ್ಗದಲ್ಲಿದ್ದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَءَاخَرِينَ مِنْهُمْ لَمَّا يَلْحَقُوا۟ بِهِمْ وَهُوَ ٱلْعَزِيزُ ٱلْحَكِيمُ

Kannada Translation - Hamza Buturಅವರಲ್ಲಿ ಇನ್ನೂ ಅವರೊಡನೆ ಸೇರಿಕೊಳ್ಳದ ಜನರಿಗೂ ಕೂಡ (ಅವರು ಸಂದೇಶವಾಹಕರಾಗಿದ್ದಾರೆ). ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذَٰلِكَ فَضْلُ ٱللَّهِ يُؤْتِيهِ مَن يَشَآءُ وَٱللَّهُ ذُو ٱلْفَضْلِ ٱلْعَظِيمِ

Kannada Translation - Hamza Buturಅದು ಅಲ್ಲಾಹನ ಔದಾರ್ಯವಾಗಿದ್ದು ಅವನು ಇಚ್ಛಿಸುವವರಿಗೆ ಅದನ್ನು ದಯಪಾಲಿಸುತ್ತಾನೆ. ಅಲ್ಲಾಹು ಮಹಾ ಔದಾರ್ಯವಂತನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَثَلُ ٱلَّذِينَ حُمِّلُوا۟ ٱلتَّوْرَىٰةَ ثُمَّ لَمْ يَحْمِلُوهَا كَمَثَلِ ٱلْحِمَارِ يَحْمِلُ أَسْفَارًۢا بِئْسَ مَثَلُ ٱلْقَوْمِ ٱلَّذِينَ كَذَّبُوا۟ بِـَٔايَٰتِ ٱللَّهِ وَٱللَّهُ لَا يَهْدِى ٱلْقَوْمَ ٱلظَّٰلِمِينَ

Kannada Translation - Hamza Buturತೌರಾತ್‌ನಲ್ಲಿರುವಂತೆ ನಡೆದುಕೊಳ್ಳಲು ಆದೇಶಿಸಲಾಗಿಯೂ ಸಹ ಅದರಂತೆ ನಡೆದುಕೊಳ್ಳದವರು ಯಾರೋ ಅವರ ಉದಾಹರಣೆಯು ಗ್ರಂಥಗಳನ್ನು ಹೊರುವ ಕತ್ತೆಯಂತೆ. ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುವ ಜನರ ಉದಾಹರಣೆಯು ಬಹಳ ನಿಕೃಷ್ಟವಾಗಿದೆ. ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ يَٰٓأَيُّهَا ٱلَّذِينَ هَادُوٓا۟ إِن زَعَمْتُمْ أَنَّكُمْ أَوْلِيَآءُ لِلَّهِ مِن دُونِ ٱلنَّاسِ فَتَمَنَّوُا۟ ٱلْمَوْتَ إِن كُنتُمْ صَٰدِقِينَ

Kannada Translation - Hamza Buturಹೇಳಿರಿ: “ಓ ಯಹೂದಿಗಳೇ! ಇತರ ಜನರ ಹೊರತಾಗಿ ನೀವು ಮಾತ್ರ ಅಲ್ಲಾಹನ ಮಿತ್ರರು ಎಂಬ ನಿಮ್ಮ ದಾವೆಯು ಸತ್ಯವಾಗಿದ್ದರೆ ನೀವು ಸಾವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَا يَتَمَنَّوْنَهُۥٓ أَبَدًۢا بِمَا قَدَّمَتْ أَيْدِيهِمْ وَٱللَّهُ عَلِيمٌۢ بِٱلظَّٰلِمِينَ

Kannada Translation - Hamza Buturಆದರೆ ಅವರ ಕೈಗಳು ಈಗಾಗಲೇ ಮಾಡಿಟ್ಟಿರುವ ದುಷ್ಕರ್ಮಗಳಿಂದಾಗಿ ಅವರೆಂದೂ ಸಾವನ್ನು ಬಯಸುವುದಿಲ್ಲ. ಅಲ್ಲಾಹು ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ إِنَّ ٱلْمَوْتَ ٱلَّذِى تَفِرُّونَ مِنْهُ فَإِنَّهُۥ مُلَٰقِيكُمْ ثُمَّ تُرَدُّونَ إِلَىٰ عَٰلِمِ ٱلْغَيْبِ وَٱلشَّهَٰدَةِ فَيُنَبِّئُكُم بِمَا كُنتُمْ تَعْمَلُونَ

Kannada Translation - Hamza Buturಹೇಳಿರಿ: “ಯಾವ ಸಾವನ್ನು ಹೆದರಿ ನೀವು ಓಡಿ ಹೋಗುತ್ತಿದ್ದೀರೋ ಅದು ನಿಮ್ಮನ್ನು ಖಂಡಿತ ಭೇಟಿಯಾಗಲಿದೆ. ನಂತರ ನಿಮ್ಮನ್ನು ದೃಶ್ಯ-ಅದೃಶ್ಯಗಳನ್ನು ತಿಳಿದ ಅಲ್ಲಾಹನ ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ನಿಮಗೆ ತಿಳಿಸಿಕೊಡುವನು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَٰٓأَيُّهَا ٱلَّذِينَ ءَامَنُوٓا۟ إِذَا نُودِىَ لِلصَّلَوٰةِ مِن يَوْمِ ٱلْجُمُعَةِ فَٱسْعَوْا۟ إِلَىٰ ذِكْرِ ٱللَّهِ وَذَرُوا۟ ٱلْبَيْعَ ذَٰلِكُمْ خَيْرٌ لَّكُمْ إِن كُنتُمْ تَعْلَمُونَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಶುಕ್ರವಾರ ನಮಾಝ್‍ಗಾಗಿ ಕರೆಯಲಾದರೆ (ಅಝಾನ್ ನೀಡಲಾದರೆ) ಅಲ್ಲಾಹನ ಸ್ಮರಣೆಯ ಕಡೆಗೆ ಧಾವಿಸಿರಿ ಮತ್ತು ವ್ಯಾಪಾರ-ವ್ಯವಹಾರಗಳನ್ನು ಬಿಟ್ಟುಬಿಡಿ. ಅದು ನಿಮಗೆ ಅತ್ಯುತ್ತಮವಾಗಿದೆ. ನೀವು ತಿಳಿದವರಾಗಿದ್ದರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَإِذَا قُضِيَتِ ٱلصَّلَوٰةُ فَٱنتَشِرُوا۟ فِى ٱلْأَرْضِ وَٱبْتَغُوا۟ مِن فَضْلِ ٱللَّهِ وَٱذْكُرُوا۟ ٱللَّهَ كَثِيرًا لَّعَلَّكُمْ تُفْلِحُونَ

Kannada Translation - Hamza Buturನಮಾಝ್ ಮುಗಿದ ನಂತರ ನೀವು ಭೂಮಿಯಲ್ಲಿ ಚದುರಿ ಹೋಗಿರಿ ಮತ್ತು ಅಲ್ಲಾಹನ ಔದಾರ್ಯವನ್ನು ಹುಡುಕಿರಿ. ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸಿರಿ. ನೀವು ಯಶಸ್ವಿಯಾಗುವುದಕ್ಕಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا رَأَوْا۟ تِجَٰرَةً أَوْ لَهْوًا ٱنفَضُّوٓا۟ إِلَيْهَا وَتَرَكُوكَ قَآئِمًا قُلْ مَا عِندَ ٱللَّهِ خَيْرٌ مِّنَ ٱللَّهْوِ وَمِنَ ٱلتِّجَٰرَةِ وَٱللَّهُ خَيْرُ ٱلرَّٰزِقِينَ

Kannada Translation - Hamza Buturಅವರು ವ್ಯಾಪಾರದ ಸರಕು ಮಾರಾಟವಾಗುವುದನ್ನು ಕಂಡರೆ ಅಥವಾ ಮನೋರಂಜನೆಯನ್ನು ಕಂಡರೆ ಅದರ ಕಡೆಗೆ ಓಡುತ್ತಾರೆ ಮತ್ತು ನಿಮ್ಮನ್ನು ನಿಂತ ಸ್ಥಿತಿಯಲ್ಲೇ ಬಿಟ್ಟುಬಿಡುತ್ತಾರೆ.[1] ಹೇಳಿರಿ: “ಅಲ್ಲಾಹನ ಬಳಿ ಏನಿದೆಯೋ ಅದು ವ್ಯಾಪಾರ ಮತ್ತು ಮನೋರಂಜನೆಗಿಂತಲೂ ಶ್ರೇಷ್ಠವಾಗಿದೆ. ಅಲ್ಲಾಹು ಉಪಜೀವನ ನೀಡುವುದರಲ್ಲಿ ಅತ್ಯುತ್ತಮನಾಗಿದ್ದಾನೆ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70