Kannada Translation - Hamza Buturಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಸಾರ್ವಭೌಮತ್ವವು ಅವನಿಗೆ ಸೇರಿದ್ದು ಮತ್ತು ಸರ್ವಸ್ತುತಿಯು ಅವನಿಗೆ ಮೀಸಲು. ಅವನು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
Kannada Translation - Hamza Buturಅವನೇ ನಿಮ್ಮನ್ನು ಸೃಷ್ಟಿಸಿದವನು. ನಿಮ್ಮಲ್ಲಿ ಸತ್ಯನಿಷೇಧಿಗಳಿದ್ದಾರೆ ಮತ್ತು ಸತ್ಯವಿಶ್ವಾಸಿಗಳೂ ಇದ್ದಾರೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.
Kannada Translation - Hamza Buturಅವನು ಭೂಮ್ಯಾಕಾಶಗಳನ್ನು ಸತ್ಯದೊಂದಿಗೆ ಸೃಷ್ಟಿಸಿದ್ದಾನೆ. ಅವನು ನಿಮಗೆ ರೂಪವನ್ನು ನೀಡಿದ್ದಾನೆ ಮತ್ತು ನಿಮ್ಮ ರೂಪಗಳನ್ನು ಅತ್ಯುತ್ತಮಗೊಳಿಸಿದ್ದಾನೆ. ಗಮ್ಯಸ್ಥಾನವು ಅವನ ಬಳಿಯಲ್ಲೇ ಆಗಿದೆ.
Kannada Translation - Hamza Buturಭೂಮ್ಯಾಕಾಶಗಳಲ್ಲಿರುವುದೆಲ್ಲವನ್ನೂ ಅವನು ತಿಳಿದಿದ್ದಾನೆ. ನೀವು ಮುಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅವನು ತಿಳಿಯುತ್ತಾನೆ. ಅಲ್ಲಾಹು ಎದೆಗಳ ಒಳಗಿರುವುದನ್ನು ತಿಳಿಯುತ್ತಾನೆ.
Kannada Translation - Hamza Buturಇದಕ್ಕಿಂತ ಮೊದಲು ಸತ್ಯವನ್ನು ನಿಷೇಧಿಸಿದವರ ಸಮಾಚಾರವು ನಿಮಗೆ ತಲುಪಿಲ್ಲವೇ? ಅವರು ಅವರ ದುಷ್ಕರ್ಮಗಳ ರುಚಿಯನ್ನು ನೋಡಿದರು. ಅವರಿಗೆ (ಪರಲೋಕದಲ್ಲಿ) ಯಾತನಾಮಯ ಶಿಕ್ಷೆಯಿದೆ.
Kannada Translation - Hamza Buturಅದೇಕೆಂದರೆ, ಅವರ ಬಳಿಗೆ ಸಂದೇಶವಾಹಕರು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಬರುತ್ತಿದ್ದರು. ಆದರೆ ಅವರು ಕೇಳಿದರು: “ಒಬ್ಬ ಮನುಷ್ಯ ನಮಗೆ ದಾರಿ ತೋರಿಸುವುದೇ?” ಅವರು ನಿಷೇಧಿಸಿದರು ಮತ್ತು ಮುಖ ತಿರುಗಿಸಿ ನಡೆದರು. ಅಲ್ಲಾಹು ಅವರ ಬಗ್ಗೆ ನಿರಪೇಕ್ಷನಾದನು. ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.
Kannada Translation - Hamza Buturತಮ್ಮನ್ನು ಪುನಃ ಜೀವ ನೀಡಿ ಎಬ್ಬಿಸಲಾಗುವುದಿಲ್ಲ ಎಂದು ಸತ್ಯನಿಷೇಧಿಗಳು ವಾದಿಸಿದರು. ಹೇಳಿರಿ: “ಹೌದು! ನನ್ನ ಪರಿಪಾಲಕನ ಮೇಲಾಣೆ! ಖಂಡಿತವಾಗಿಯೂ ನಿಮಗೆ ಜೀವ ನೀಡಿ ಎಬ್ಬಿಸಲಾಗುವುದು. ನಂತರ ನೀವು ಮಾಡಿದ ಕರ್ಮಗಳ ಬಗ್ಗೆ ನಿಮಗೆ ಖಂಡಿತ ತಿಳಿಸಲಾಗುವುದು. ಅದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.”
Kannada Translation - Hamza Buturಆದ್ದರಿಂದ ನೀವು ಅಲ್ಲಾಹನಲ್ಲಿ, ಅವನ ಸಂದೇಶವಾಹಕರಲ್ಲಿ ಮತ್ತು ನಾವು ಅವತೀರ್ಣಗೊಳಿಸಿದ ಬೆಳಕಿನಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿಡಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
Kannada Translation - Hamza Buturಒಟ್ಟುಗೂಡಿಸುವ ಆ ದಿನಕ್ಕಾಗಿ (ಪುನರುತ್ಥಾನ ದಿನಕ್ಕಾಗಿ) ಅವನು ನಿಮ್ಮೆಲ್ಲರನ್ನು ಒಟ್ಟುಗೂಡಿಸುವ ದಿನ! ಅದು ಸೋಲು-ಗೆಲುವಿನ ದಿನವಾಗಿದೆ. ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ ಮತ್ತು ಸತ್ಕರ್ಮವೆಸಗುತ್ತಾನೋ ಅವನ ಪಾಪಗಳನ್ನು ಅಲ್ಲಾಹು ಅಳಿಸುತ್ತಾನೆ ಮತ್ತು ಅವನನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುತ್ತಾನೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅದೇ ಮಹಾ ವಿಜಯ.
Kannada Translation - Hamza Buturಸತ್ಯವನ್ನು ನಿಷೇಧಿಸಿದವರು ಮತ್ತು ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.
Kannada Translation - Hamza Buturಯಾವುದೇ ವಿಪತ್ತು ಅಲ್ಲಾಹನ ಅಪ್ಪಣೆಯಿಂದಲ್ಲದೆ ಸಂಭವಿಸುವುದಿಲ್ಲ. ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ ಅವನ ಹೃದಯವನ್ನು ಅಲ್ಲಾಹು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ.
Kannada Translation - Hamza Buturನೀವು ಅಲ್ಲಾಹು ಅವನ ಮತ್ತು ಸಂದೇಶವಾಹಕರ ಆಜ್ಞಾಪಾಲನೆ ಮಾಡಿರಿ. ನೀವೇನಾದರೂ ವಿಮುಖರಾಗುವುದಾದರೆ, ನಮ್ಮ ಸಂದೇಶವಾಹಕರ ಕರ್ತವ್ಯವು ಸಂದೇಶವನ್ನು ಸ್ಪಷ್ಟವಾಗಿ ತಲುಪಿಸುವುದು ಮಾತ್ರವಾಗಿದೆ.
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನಿಶ್ಚಯವಾಗಿಯೂ ನಿಮ್ಮ ಪತ್ನಿಯರಲ್ಲಿ ಮತ್ತು ನಿಮ್ಮ ಮಕ್ಕಳಲ್ಲಿ ನಿಮಗೆ ವೈರಿಗಳಿದ್ದಾರೆ. ಆದ್ದರಿಂದ ಅವರ ಬಗ್ಗೆ ಜಾಗರೂಕರಾಗಿರಿ. ನೀವು ಮನ್ನಿಸುವುದಾದರೆ, (ಅವರ ತಪ್ಪುಗಳನ್ನು) ನಿರ್ಲಕ್ಷಿಸುವುದಾದರೆ ಮತ್ತು ಅವರಿಗೆ ಕ್ಷಮಿಸುವುದಾದರೆ ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.[1]
Kannada Translation - Hamza Buturಆದ್ದರಿಂದ ನಿಮಗೆ ಸಾಧ್ಯವಾಗುವಷ್ಟರ ಮಟ್ಟಿಗೆ ನೀವು ಅಲ್ಲಾಹನನ್ನು ಭಯಪಡಿರಿ. ಕಿವಿಗೊಟ್ಟು ಕೇಳಿರಿ ಮತ್ತು ಅನುಸರಿಸಿರಿ. ನಿಮಗೆ ಒಳಿತಾಗಿರುವ ವಿಧದಲ್ಲಿ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ. ಯಾರನ್ನು ಅವರ ಮನಸ್ಸಿನ ಆಸೆಬುರುಕತನದಿಂದ ಕಾಪಾಡಲಾಗಿದೆಯೋ ಅವರು ಯಶಸ್ವಿಯಾದವರು.
Kannada Translation - Hamza Buturನೀವು ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡುವುದಾದರೆ ಅವನು ಅದನ್ನು ನಿಮಗೆ ಹಲವು ಪಟ್ಟು ದ್ವಿಗುಣಗೊಳಿಸುವನು ಮತ್ತು ನಿಮ್ಮನ್ನು ಕ್ಷಮಿಸುವನು. ಅಲ್ಲಾಹು ಕೃತಜ್ಞನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ.