وَٱتَّخَذَ قَوْمُ مُوسَىٰ مِنۢ بَعْدِهِۦ مِنْ حُلِيِّهِمْ عِجْلًا جَسَدًا لَّهُۥ خُوَارٌ أَلَمْ يَرَوْا۟ أَنَّهُۥ لَا يُكَلِّمُهُمْ وَلَا يَهْدِيهِمْ سَبِيلًا ٱتَّخَذُوهُ وَكَانُوا۟ ظَٰلِمِينَ
Kannada Translation - Hamza Buturಮೂಸಾರ ನಿರ್ಗಮನದ ಬಳಿಕ ಅವರ ಜನರು (ಇಸ್ರಾಯೇಲ್ ಮಕ್ಕಳು) ತಮ್ಮ ಆಭರಣಗಳಿಂದ ಧ್ವನಿ ಹೊರಡಿಸುವ ಒಂದು ಕರುವಿನ ರೂಪವನ್ನು (ದೇವರಾಗಿ) ಮಾಡಿಕೊಂಡರು. ಅದು ಅವರೊಡನೆ ಮಾತನಾಡುವುದಿಲ್ಲ ಮತ್ತು ಅವರಿಗೆ ಸನ್ಮಾರ್ಗ ತೋರಿಸುವುದಿಲ್ಲವೆಂದು ಅವರಿಗೆ ತಿಳಿದಿಲ್ಲವೇ? ಅವರು ಅದನ್ನು (ದೇವರಾಗಿ) ಮಾಡಿಕೊಂಡರು. ಅವರು ಅಕ್ರಮಿಗಳಾಗಿದ್ದರು.