caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 157

ಮಕ್ಕಾ · ಅವತರಣ ಕ್ರಮ 39 · 7:157

ٱلَّذِينَ يَتَّبِعُونَ ٱلرَّسُولَ ٱلنَّبِىَّ ٱلْأُمِّىَّ ٱلَّذِى يَجِدُونَهُۥ مَكْتُوبًا عِندَهُمْ فِى ٱلتَّوْرَىٰةِ وَٱلْإِنجِيلِ يَأْمُرُهُم بِٱلْمَعْرُوفِ وَيَنْهَىٰهُمْ عَنِ ٱلْمُنكَرِ وَيُحِلُّ لَهُمُ ٱلطَّيِّبَٰتِ وَيُحَرِّمُ عَلَيْهِمُ ٱلْخَبَٰٓئِثَ وَيَضَعُ عَنْهُمْ إِصْرَهُمْ وَٱلْأَغْلَٰلَ ٱلَّتِى كَانَتْ عَلَيْهِمْ فَٱلَّذِينَ ءَامَنُوا۟ بِهِۦ وَعَزَّرُوهُ وَنَصَرُوهُ وَٱتَّبَعُوا۟ ٱلنُّورَ ٱلَّذِىٓ أُنزِلَ مَعَهُۥٓ أُو۟لَٰٓئِكَ هُمُ ٱلْمُفْلِحُونَ

Kannada Translation - Hamza Buturಅವರು ಯಾರೆಂದರೆ, ತಮ್ಮ ಬಳಿಯಿರುವ ತೌರಾತ್‍ ಮತ್ತು ಇಂಜೀಲ್‍ನಲ್ಲಿ ಉಲ್ಲೇಖವಿರುವುದಾಗಿ ಕಾಣುವ ಅನಕ್ಷರಸ್ಥ ಪ್ರವಾದಿಯಾದ ಸಂದೇಶವಾಹಕರನ್ನು (ಪ್ರವಾದಿ ಮುಹಮ್ಮದರನ್ನು) ಅನುಸರಿಸುವವರು. ಆ ಪ್ರವಾದಿ ಅವರಿಗೆ ಒಳಿತನ್ನು ಆದೇಶಿಸುತ್ತಾರೆ ಮತ್ತು ಕೆಡುಕನ್ನು ವಿರೋಧಿಸುತ್ತಾರೆ. ಅವರಿಗೆ ಉತ್ತಮ ವಸ್ತುಗಳನ್ನು ಅನುಮತಿಸುತ್ತಾರೆ ಮತ್ತು ಕೆಟ್ಟ ವಸ್ತುಗಳನ್ನು ನಿಷೇಧಿಸುತ್ತಾರೆ. ಅವರ ಭಾರವನ್ನು ಕೆಳಗಿಳಿಸಿ ಅವರ ಮೇಲೆ ಹೊರಿಸಲಾಗಿದ್ದ ಸಂಕೋಲೆಗಳನ್ನು ಕಳಚುತ್ತಾರೆ. ಆ ಪ್ರವಾದಿಯಲ್ಲಿ ವಿಶ್ವಾಸವಿಡುವವರು, ಅವರನ್ನು ಬೆಂಬಲಿಸುವವರು, ಸಹಾಯ ಮಾಡುವವರು ಮತ್ತು ಅವರೊಂದಿಗೆ ಅವತೀರ್ಣವಾದ ಬೆಳಕನ್ನು ಅನುಸರಿಸುವವರು ಯಾರೋ—ಅವರೇ ಯಶಸ್ವಿಯಾದವರು.
Looking for a topic? Try the meaning search — your question is scanned across all 6,236 verses.
ಭಾಷೆ — 70