فَخَلَفَ مِنۢ بَعْدِهِمْ خَلْفٌ وَرِثُوا۟ ٱلْكِتَٰبَ يَأْخُذُونَ عَرَضَ هَٰذَا ٱلْأَدْنَىٰ وَيَقُولُونَ سَيُغْفَرُ لَنَا وَإِن يَأْتِهِمْ عَرَضٌ مِّثْلُهُۥ يَأْخُذُوهُ أَلَمْ يُؤْخَذْ عَلَيْهِم مِّيثَٰقُ ٱلْكِتَٰبِ أَن لَّا يَقُولُوا۟ عَلَى ٱللَّهِ إِلَّا ٱلْحَقَّ وَدَرَسُوا۟ مَا فِيهِ وَٱلدَّارُ ٱلْـَٔاخِرَةُ خَيْرٌ لِّلَّذِينَ يَتَّقُونَ أَفَلَا تَعْقِلُونَ
Kannada Translation - Hamza Buturನಂತರ ಅವರ ಹಿಂದೆಯೇ ಅವರ ನಂತರದವರು ಬಂದರು. ಅವರು ಗ್ರಂಥದ ಉತ್ತರಾಧಿಕಾರವನ್ನು ವಹಿಸಿಕೊಂಡರು. ಅವರು ಇಹಲೋಕ ಜೀವನದ ಕೀಳು ವಸ್ತುಗಳನ್ನು ಪಡೆಯುತ್ತಾರೆ. ಅವರು ಹೇಳುತ್ತಾರೆ: “ನಮ್ಮನ್ನು ಕ್ಷಮಿಸಲಾಗುತ್ತದೆ.”[1] ಅದರಂತಹ ಬೇರೆ ವಸ್ತುಗಳು ದೊರಕಿದರೂ ಅವರು ಅದನ್ನು ಪಡೆಯುತ್ತಾರೆ. ಅಲ್ಲಾಹನ ಮೇಲೆ ಸತ್ಯವಲ್ಲದೆ ಬೇರೇನೂ ಹೇಳುವುದಿಲ್ಲ ಮತ್ತು ಗ್ರಂಥವನ್ನು ಅಧ್ಯಯನ ಮಾಡಿ (ಅದರಂತೆ ನಡೆಯುತ್ತೇವೆ) ಎಂದು ಅವರಿಂದ ಗ್ರಂಥದ ಮೂಲಕ ಕರಾರು ಪಡೆಯಲಾಗಿಲ್ಲವೇ? ದೇವಭಯವುಳ್ಳವರಿಗೆ ಪರಲೋಕ ಜೀವನವೇ ಉತ್ತಮ. ನೀವು ಅರ್ಥಮಾಡಿಕೊಳ್ಳುವುದಿಲ್ಲವೇ?