caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 43

ಮಕ್ಕಾ · ಅವತರಣ ಕ್ರಮ 39 · 7:43

وَنَزَعْنَا مَا فِى صُدُورِهِم مِّنْ غِلٍّ تَجْرِى مِن تَحْتِهِمُ ٱلْأَنْهَٰرُ وَقَالُوا۟ ٱلْحَمْدُ لِلَّهِ ٱلَّذِى هَدَىٰنَا لِهَٰذَا وَمَا كُنَّا لِنَهْتَدِىَ لَوْلَآ أَنْ هَدَىٰنَا ٱللَّهُ لَقَدْ جَآءَتْ رُسُلُ رَبِّنَا بِٱلْحَقِّ وَنُودُوٓا۟ أَن تِلْكُمُ ٱلْجَنَّةُ أُورِثْتُمُوهَا بِمَا كُنتُمْ تَعْمَلُونَ

Kannada Translation - Hamza Buturನಾವು ಅವರ ಹೃದಯಗಳಲ್ಲಿರುವ ದ್ವೇಷವನ್ನು ತೆಗೆದು ಬಿಡುವೆವು. ಅವರ ತಳಭಾಗದಿಂದ ನದಿಗಳು ಹರಿಯುವುವು. ಅವರು ಹೇಳುವರು: “ಇದರ ಕಡೆಗೆ ನಮಗೆ ದಾರಿ ತೋರಿಸಿದ ಅಲ್ಲಾಹನಿಗೆ ಸರ್ವಸ್ತುತಿ. ಅಲ್ಲಾಹು ನಮಗೆ ದಾರಿ ತೋರಿಸದಿದ್ದರೆ ನಾವು ಸನ್ಮಾರ್ಗದಲ್ಲಿರುತ್ತಿರಲಿಲ್ಲ. ನಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸಂದೇಶವಾಹಕರು ಸತ್ಯದೊಂದಿಗೇ ಬಂದಿದ್ದರು.” ಆಗ ಅವರೊಡನೆ ಹೇಳಲಾಗುವುದು: “ನೀವು ಮಾಡಿದ ಕರ್ಮಗಳಿಗೆ ಪ್ರತಿಫಲವಾಗಿ ಈ ಸ್ವರ್ಗವನ್ನು ನೀವು ಉತ್ತರಾಧಿಕಾರವಾಗಿ ಪಡೆದಿರುವಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70