caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 57

ಮಕ್ಕಾ · ಅವತರಣ ಕ್ರಮ 39 · 7:57

وَهُوَ ٱلَّذِى يُرْسِلُ ٱلرِّيَٰحَ بُشْرًۢا بَيْنَ يَدَىْ رَحْمَتِهِۦ حَتَّىٰٓ إِذَآ أَقَلَّتْ سَحَابًا ثِقَالًا سُقْنَٰهُ لِبَلَدٍ مَّيِّتٍ فَأَنزَلْنَا بِهِ ٱلْمَآءَ فَأَخْرَجْنَا بِهِۦ مِن كُلِّ ٱلثَّمَرَٰتِ كَذَٰلِكَ نُخْرِجُ ٱلْمَوْتَىٰ لَعَلَّكُمْ تَذَكَّرُونَ

Kannada Translation - Hamza Buturತನ್ನ ದಯೆಗೆ (ಮಳೆಗೆ) ಮೊದಲು ಸುವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನು ಅವನೇ. ಎಲ್ಲಿಯವರೆಗೆಂದರೆ, ಅದು ಭಾರವಾದ ಮೋಡಗಳನ್ನು ಹೊತ್ತಾಗ ನಾವು ಅದನ್ನು ಬರಡು ಪ್ರದೇಶಕ್ಕೆ ಸಾಗಿಸುವೆವು. ನಂತರ ನಾವು ಅಲ್ಲಿ ಮಳೆ ಸುರಿಸುವೆವು ಮತ್ತು ಅದರಿಂದ ವಿಭಿನ್ನ ಹಣ್ಣುಗಳನ್ನು ಉತ್ಪಾದಿಸುವೆವು. ಇದೇ ರೀತಿ ನಾವು ಸತ್ತವರನ್ನು (ಸಮಾಧಿಯಿಂದ) ಹೊರತರುವೆವು. ನೀವು ಉಪದೇಶ ಪಡೆಯುವುದಕ್ಕಾಗಿ (ಇದನ್ನು ವಿವರಿಸುತ್ತಿದ್ದೇವೆ).
Looking for a topic? Try the meaning search — your question is scanned across all 6,236 verses.
ಭಾಷೆ — 70