caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jinn الجن

28 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 40

بِسْمِ ٱللَّهِ ٱلرَّحْمَٰنِ ٱلرَّحِيمِ قُلْ أُوحِىَ إِلَىَّ أَنَّهُ ٱسْتَمَعَ نَفَرٌ مِّنَ ٱلْجِنِّ فَقَالُوٓا۟ إِنَّا سَمِعْنَا قُرْءَانًا عَجَبًا

Kannada Translation - Hamza Butur(ಪ್ರವಾದಿಯವರೇ) ಹೇಳಿರಿ: ನಿಶ್ಚಯವಾಗಿಯೂ ಜಿನ್ನ್‌ಗಳಲ್ಲಿ ಸೇರಿದ ಒಂದು ಗುಂಪು (ಕುರ್‌ಆನನ್ನು) ಕಿವಿಗೊಟ್ಟು ಕೇಳಿದರೆಂದು ನನಗೆ ದಿವ್ಯವಾಣಿ ನೀಡಲಾಗಿದೆ. ನಂತರ ಅವರು ಹೇಳಿದರು: “ನಿಶ್ಚಯವಾಗಿಯೂ ನಾವು ಅದ್ಭುತವಾದ ಕುರ್‌ಆನನ್ನು ಕೇಳಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَهْدِىٓ إِلَى ٱلرُّشْدِ فَـَٔامَنَّا بِهِۦ وَلَن نُّشْرِكَ بِرَبِّنَآ أَحَدًا

Kannada Translation - Hamza Buturಅದು ಸನ್ಮಾರ್ಗಕ್ಕೆ ದಾರಿ ತೋರಿಸುತ್ತದೆ. ಆದ್ದರಿಂದ ನಾವು ಅದರಲ್ಲಿ ವಿಶ್ವಾಸವಿಟ್ಟೆವು. ನಾವು ನಮ್ಮ ಪರಿಪಾಲಕನೊಂದಿಗೆ (ಅಲ್ಲಾಹನೊಂದಿಗೆ) ಯಾರನ್ನೂ ಎಂದಿಗೂ ಸಹಭಾಗಿಯಾಗಿ ಮಾಡುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّهُۥ تَعَٰلَىٰ جَدُّ رَبِّنَا مَا ٱتَّخَذَ صَٰحِبَةً وَلَا وَلَدًا

Kannada Translation - Hamza Buturನಿಶ್ಚಯವಾಗಿಯೂ ನಮ್ಮ ಪರಿಪಾಲಕನ (ಅಲ್ಲಾಹನ) ಮಹಿಮೆಯು ಸರ್ವೋನ್ನತವಾಗಿದೆ. ಅವನು ಯಾರನ್ನೂ ತನ್ನ ಮಡದಿ-ಮಕ್ಕಳಾಗಿ ಮಾಡಿಕೊಂಡಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّهُۥ كَانَ يَقُولُ سَفِيهُنَا عَلَى ٱللَّهِ شَطَطًا

Kannada Translation - Hamza Buturನಮ್ಮಲ್ಲಿನ ಒಬ್ಬ ಅವಿವೇಕಿಯು (ಇಬ್ಲೀಸ್) ಅಲ್ಲಾಹನ ಬಗ್ಗೆ ಸತ್ಯಕ್ಕೆ ವಿರುದ್ಧವಾದ ಮಾತನ್ನು ಹೇಳುತ್ತಿದ್ದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّا ظَنَنَّآ أَن لَّن تَقُولَ ٱلْإِنسُ وَٱلْجِنُّ عَلَى ٱللَّهِ كَذِبًا

Kannada Translation - Hamza Buturಮನುಷ್ಯರು ಮತ್ತು ಜಿನ್ನ್‌ಗಳು ಅಲ್ಲಾಹನ ಬಗ್ಗೆ ಎಂದೂ ಸುಳ್ಳು ಹೇಳುವುದು ಸಾಧ್ಯವಿಲ್ಲವೆಂದು ನಾವು ಭಾವಿಸಿದ್ದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّهُۥ كَانَ رِجَالٌ مِّنَ ٱلْإِنسِ يَعُوذُونَ بِرِجَالٍ مِّنَ ٱلْجِنِّ فَزَادُوهُمْ رَهَقًا

Kannada Translation - Hamza Buturಮನುಷ್ಯರಲ್ಲಿ ಕೆಲವರು ಕೆಲವು ಜಿನ್ನ್‌ಗಳೊಡನೆ ಅಭಯ ಕೋರುತ್ತಿದ್ದರು. ಇದರಿಂದ ಅವರು (ಜಿನ್ನ್‌ಗಳು) ತಮ್ಮ ಅತಿರೇಕವನ್ನು ಹೆಚ್ಚಿಸಿಕೊಂಡರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّهُمْ ظَنُّوا۟ كَمَا ظَنَنتُمْ أَن لَّن يَبْعَثَ ٱللَّهُ أَحَدًا

Kannada Translation - Hamza Buturಅಲ್ಲಾಹು ಯಾರನ್ನೂ ಪುನಃ ಜೀವ ನೀಡಿ ಎಬ್ಬಿಸುವುದಿಲ್ಲವೆಂದು ನೀವು ಭಾವಿಸಿದಂತೆಯೇ ಮನುಷ್ಯರೂ ಭಾವಿಸಿದ್ದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّا لَمَسْنَا ٱلسَّمَآءَ فَوَجَدْنَٰهَا مُلِئَتْ حَرَسًا شَدِيدًا وَشُهُبًا

Kannada Translation - Hamza Buturನಾವು ಆಕಾಶವನ್ನು ಮುಟ್ಟಿದೆವು. ಆಗ ಅದು ಪ್ರಬಲ ಕಾವಲುಗಾರರು ಮತ್ತು ಅಗ್ನಿಜ್ವಾಲೆಗಳಿಂದ ತುಂಬಿದ್ದಾಗಿ ಕಂಡೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّا كُنَّا نَقْعُدُ مِنْهَا مَقَٰعِدَ لِلسَّمْعِ فَمَن يَسْتَمِعِ ٱلْـَٔانَ يَجِدْ لَهُۥ شِهَابًا رَّصَدًا

Kannada Translation - Hamza Buturನಾವು ಇದಕ್ಕಿಂತ ಮೊದಲು (ಆಕಾಶಲೋಕದ) ಮಾತುಗಳಿಗೆ ಕಿವಿಗೊಡಲು ಆಕಾಶದ ವಿವಿಧ ಸ್ಥಳಗಳಲ್ಲಿ ಕುಳಿತುಕೊಳ್ಳುತ್ತಿದ್ದೆವು. ಆದರೆ ಈಗ ಯಾರಾದರೂ ಕಿವಿಗೊಟ್ಟು ಕೇಳಿದರೆ, ಅವನಿಗೋಸ್ಕರ ಹೊಂಚು ಹಾಕುತ್ತಿರುವ ಒಂದು ಅಗ್ನಿಜ್ವಾಲೆಯನ್ನು ಕಾಣುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّا لَا نَدْرِىٓ أَشَرٌّ أُرِيدَ بِمَن فِى ٱلْأَرْضِ أَمْ أَرَادَ بِهِمْ رَبُّهُمْ رَشَدًا

Kannada Translation - Hamza Buturಭೂಮಿಯಲ್ಲಿರುವವರಿಗೆ ಕೆಡುಕನ್ನು ಉದ್ದೇಶಿಸಲಾಗಿದೆಯೋ, ಅಥವಾ ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ಒಳಿತನ್ನು ಉದ್ದೇಶಿಸಿದ್ದಾನೋ ಎಂದು ನಮಗೆ ತಿಳಿದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّا مِنَّا ٱلصَّٰلِحُونَ وَمِنَّا دُونَ ذَٰلِكَ كُنَّا طَرَآئِقَ قِدَدًا

Kannada Translation - Hamza Buturನಮ್ಮಲ್ಲಿ ನೀತಿವಂತರಿದ್ದಾರೆ ಮತ್ತು ನಮ್ಮಲ್ಲಿ ಅದಕ್ಕೆ ಹೊರತಾದವರೂ ಇದ್ದಾರೆ. ನಾವು ಹಲವಾರು ಭಿನ್ನ ಮಾರ್ಗಗಳಲ್ಲಿ ಹಂಚಿ ಹೋಗಿದ್ದೇವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّا ظَنَنَّآ أَن لَّن نُّعْجِزَ ٱللَّهَ فِى ٱلْأَرْضِ وَلَن نُّعْجِزَهُۥ هَرَبًا

Kannada Translation - Hamza Buturಭೂಮಿಯಲ್ಲಿ ಎಂದಿಗೂ ಅಲ್ಲಾಹನನ್ನು ಅಸಮರ್ಥಗೊಳಿಸಲು ಸಾಧ್ಯವಿಲ್ಲ ಮತ್ತು ಪಲಾಯನ ಮಾಡುವ ಮೂಲಕವೂ ಅವನನ್ನು ಸೋಲಿಸಲು ಸಾಧ್ಯವಿಲ್ಲವೆಂದು ನಮಗೆ ಖಾತ್ರಿಯಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّا لَمَّا سَمِعْنَا ٱلْهُدَىٰٓ ءَامَنَّا بِهِۦ فَمَن يُؤْمِنۢ بِرَبِّهِۦ فَلَا يَخَافُ بَخْسًا وَلَا رَهَقًا

Kannada Translation - Hamza Buturನಾವು ಸನ್ಮಾರ್ಗವನ್ನು (ಕುರ್‌ಆನನ್ನು) ಆಲಿಸಿದಾಗ ಅದರಲ್ಲಿ ವಿಶ್ವಾಸವಿಟ್ಟೆವು. ಯಾರು ತನ್ನ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಡುತ್ತಾನೋ ಅವನು ನಷ್ಟವನ್ನು ಅಥವಾ ಅನ್ಯಾಯವನ್ನು ಭಯಪಡಬೇಕಾಗಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّا مِنَّا ٱلْمُسْلِمُونَ وَمِنَّا ٱلْقَٰسِطُونَ فَمَنْ أَسْلَمَ فَأُو۟لَٰٓئِكَ تَحَرَّوْا۟ رَشَدًا

Kannada Translation - Hamza Buturನಮ್ಮಲ್ಲಿ ಮುಸ್ಲಿಮರಿದ್ದಾರೆ ಮತ್ತು ನಮ್ಮಲ್ಲಿ ಅನ್ಯಾಯ ಮಾಡುವವರೂ ಇದ್ದಾರೆ. ಯಾರು ಮುಸ್ಲಿಮನಾದನೋ ಅವನು ಸನ್ಮಾರ್ಗವನ್ನು ಗುರಿಯಾಗಿಸಿಕೊಂಡನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَمَّا ٱلْقَٰسِطُونَ فَكَانُوا۟ لِجَهَنَّمَ حَطَبًا

Kannada Translation - Hamza Buturಆದರೆ ಅನ್ಯಾಯ ಮಾಡಿದವರು ಯಾರೋ ಅವರು ನರಕಕ್ಕೆ ಸೌದೆಯಾಗುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَلَّوِ ٱسْتَقَٰمُوا۟ عَلَى ٱلطَّرِيقَةِ لَأَسْقَيْنَٰهُم مَّآءً غَدَقًا

Kannada Translation - Hamza Buturಜನರು ನೇರಮಾರ್ಗದಲ್ಲಿ ದೃಢವಾಗಿ ನಿಂತರೆ, ನಾವು ಅವರಿಗೆ ಹೇರಳವಾಗಿ ನೀರನ್ನು ಕುಡಿಯಲು ಕೊಡುತ್ತಿದ್ದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لِّنَفْتِنَهُمْ فِيهِ وَمَن يُعْرِضْ عَن ذِكْرِ رَبِّهِۦ يَسْلُكْهُ عَذَابًا صَعَدًا

Kannada Translation - Hamza Buturಅದರ ಮೂಲಕ ಅವರನ್ನು ಪರೀಕ್ಷಿಸುವುದಕ್ಕಾಗಿ. ಯಾರು ತನ್ನ ಪರಿಪಾಲಕನ (ಅಲ್ಲಾಹನ) ಸ್ಮರಣೆಯಿಂದ ವಿಮುಖನಾಗುತ್ತಾನೋ ಅವನಿಗೆ ಅಲ್ಲಾಹು ಅತಿಕಠೋರ ಶಿಕ್ಷೆಯನ್ನು ನೀಡುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّ ٱلْمَسَٰجِدَ لِلَّهِ فَلَا تَدْعُوا۟ مَعَ ٱللَّهِ أَحَدًا

Kannada Translation - Hamza Buturಮಸೀದಿಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಆದ್ದರಿಂದ ನೀವು ಅಲ್ಲಾಹನ ಜೊತೆಗೆ ಯಾರನ್ನೂ ಕರೆದು ಪ್ರಾರ್ಥಿಸಬೇಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَنَّهُۥ لَمَّا قَامَ عَبْدُ ٱللَّهِ يَدْعُوهُ كَادُوا۟ يَكُونُونَ عَلَيْهِ لِبَدًا

Kannada Translation - Hamza Buturಅಲ್ಲಾಹನ ದಾಸನು (ಪ್ರವಾದಿ) ಅಲ್ಲಾಹನೊಡನೆ ಪ್ರಾರ್ಥಿಸಲು ನಿಂತಾಗ ಅವರು (ಜಿನ್ನ್‌ಗಳು) ಇನ್ನೇನು ಗುಂಪು ಗುಂಪಾಗಿ ಅವರ ಮೇಲೆ ಮುಗಿಬೀಳುವಂತಿದ್ದರು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ إِنَّمَآ أَدْعُوا۟ رَبِّى وَلَآ أُشْرِكُ بِهِۦٓ أَحَدًا

Kannada Translation - Hamza Buturಹೇಳಿರಿ: “ನಾನು ನನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಮಾತ್ರ ಕರೆದು ಪ್ರಾರ್ಥಿಸುತ್ತೇನೆ. ನಾನು ಅವನೊಂದಿಗೆ ಯಾರನ್ನೂ ಸಹಭಾಗಿಯಾಗಿ ಮಾಡುವುದಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ إِنِّى لَآ أَمْلِكُ لَكُمْ ضَرًّا وَلَا رَشَدًا

Kannada Translation - Hamza Buturಹೇಳಿರಿ: “ನಿಮಗೆ ಯಾವುದೇ ತೊಂದರೆ ಅಥವಾ ಉಪಕಾರ ಮಾಡುವುದು ನನ್ನ ಅಧೀನದಲ್ಲಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ إِنِّى لَن يُجِيرَنِى مِنَ ٱللَّهِ أَحَدٌ وَلَنْ أَجِدَ مِن دُونِهِۦ مُلْتَحَدًا

Kannada Translation - Hamza Buturಹೇಳಿರಿ: “ನಿಶ್ಚಯವಾಗಿಯೂ ನನ್ನನ್ನು ಯಾರೂ ಎಂದಿಗೂ ಅಲ್ಲಾಹನಿಂದ ರಕ್ಷಿಸಲಾರರು. ನಾನು ಅವನ ಹೊರತು ಎಲ್ಲಿಯೂ ಆಶ್ರಯವನ್ನು ಪಡೆಯಲಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِلَّا بَلَٰغًا مِّنَ ٱللَّهِ وَرِسَٰلَٰتِهِۦ وَمَن يَعْصِ ٱللَّهَ وَرَسُولَهُۥ فَإِنَّ لَهُۥ نَارَ جَهَنَّمَ خَٰلِدِينَ فِيهَآ أَبَدًا

Kannada Translation - Hamza Buturಅಲ್ಲಾಹನ ವಚನಗಳು ಮತ್ತು ಅವನ ಸಂದೇಶಗಳನ್ನು (ಜನರಿಗೆ) ತಲುಪಿಸುವುದು ಮಾತ್ರ ನನ್ನ ಕರ್ತವ್ಯವಾಗಿದೆ.” ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ಅವಿಧೇಯತೆ ತೋರುತ್ತಾನೋ ನಿಶ್ಚಯವಾಗಿಯೂ ಅವನಿಗೆ ನರಕಾಗ್ನಿಯಿದೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

حَتَّىٰٓ إِذَا رَأَوْا۟ مَا يُوعَدُونَ فَسَيَعْلَمُونَ مَنْ أَضْعَفُ نَاصِرًا وَأَقَلُّ عَدَدًا

Kannada Translation - Hamza Buturಎಲ್ಲಿಯವರೆಗೆಂದರೆ, ಅವರಿಗೆ ವಾಗ್ದಾನ ಮಾಡಲಾಗುವುದನ್ನು ಅವರು ಕಣ್ಣಾರೆ ನೋಡುವ ತನಕ (ಅವರ ಸತ್ಯವನ್ನು ಅಂಗೀಕರಿಸುವುದಿಲ್ಲ). ಆಗ ಅವರು ತಿಳಿದುಕೊಳ್ಳುವರು—ಯಾರ ಸಹಾಯಕ ಅತ್ಯಂತ ದುರ್ಬಲ ಮತ್ತು ಯಾರು ಅತಿ ಕಡಿಮೆ ಸಂಖ್ಯೆಯವರು ಎಂದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلْ إِنْ أَدْرِىٓ أَقَرِيبٌ مَّا تُوعَدُونَ أَمْ يَجْعَلُ لَهُۥ رَبِّىٓ أَمَدًا

Kannada Translation - Hamza Buturಹೇಳಿರಿ: “ನಿಮಗೆ ವಾಗ್ದಾನ ಮಾಡಲಾಗುತ್ತಿರುವುದು ಹತ್ತಿರದಲ್ಲಿದೆಯೋ ಅಥವಾ ನನ್ನ ಪರಿಪಾಲಕನು (ಅಲ್ಲಾಹು) ಅದಕ್ಕೆ ದೂರದ ಒಂದು ಅವಧಿಯನ್ನು ನಿಶ್ಚಯಿಸುವನೋ ಎಂದು ನನಗೆ ತಿಳಿದಿಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

عَٰلِمُ ٱلْغَيْبِ فَلَا يُظْهِرُ عَلَىٰ غَيْبِهِۦٓ أَحَدًا

Kannada Translation - Hamza Buturಅವನು ಅದೃಶ್ಯವನ್ನು ತಿಳಿದವನು. ಅವನು ತನ್ನ ಅದೃಶ್ಯವನ್ನು ಯಾರಿಗೂ ಪ್ರಕಟಗೊಳಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِلَّا مَنِ ٱرْتَضَىٰ مِن رَّسُولٍ فَإِنَّهُۥ يَسْلُكُ مِنۢ بَيْنِ يَدَيْهِ وَمِنْ خَلْفِهِۦ رَصَدًا

Kannada Translation - Hamza Buturಅವನು ಇಷ್ಟಪಡುವ ಸಂದೇಶವಾಹಕರಿಗೆ ಹೊರತು. ಆಗಲೂ ಅವನು ಆ ಸಂದೇಶವಾಹಕರ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಪಹರೆಗಾರರನ್ನು ನಿಶ್ಚಯಿಸುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لِّيَعْلَمَ أَن قَدْ أَبْلَغُوا۟ رِسَٰلَٰتِ رَبِّهِمْ وَأَحَاطَ بِمَا لَدَيْهِمْ وَأَحْصَىٰ كُلَّ شَىْءٍ عَدَدًۢا

Kannada Translation - Hamza Buturಅವರು (ಸಂದೇಶವಾಹಕರು) ಅವರ ಪರಿಪಾಲಕನ (ಅಲ್ಲಾಹನ) ಸಂದೇಶಗಳನ್ನು ತಲುಪಿಸಿದ್ದಾರೆಂದು ಪ್ರವಾದಿಯವರು ತಿಳಿಯುವುದಕ್ಕಾಗಿ. ಅವನು ಅವರ ಬಳಿಯಿರುವುದನ್ನು ಆವರಿಸಿಕೊಂಡಿದ್ದಾನೆ ಮತ್ತು ಎಲ್ಲಾ ವಸ್ತುಗಳನ್ನು ಸರಿಯಾಗಿ ಎಣಿಸಿಟ್ಟಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70