caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Bayyina البينة

8 ಆಯತ್‌ಗಳು · ಮದೀನಾ · ಅವತರಣ ಕ್ರಮ 100

بِسْمِ ٱللَّهِ ٱلرَّحْمَٰنِ ٱلرَّحِيمِ لَمْ يَكُنِ ٱلَّذِينَ كَفَرُوا۟ مِنْ أَهْلِ ٱلْكِتَٰبِ وَٱلْمُشْرِكِينَ مُنفَكِّينَ حَتَّىٰ تَأْتِيَهُمُ ٱلْبَيِّنَةُ

Kannada Translation - Hamza Buturಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳು ಮತ್ತು ಬಹುದೇವವಿಶ್ವಾಸಿಗಳು ಸ್ಪಷ್ಟ ಸಾಕ್ಷ್ಯವು ಅವರ ಬಳಿಗೆ ಬರುವ ತನಕ (ಸತ್ಯನಿಷೇಧದಿಂದ) ದೂರವಾಗುವವರಾಗಿರಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

رَسُولٌ مِّنَ ٱللَّهِ يَتْلُوا۟ صُحُفًا مُّطَهَّرَةً

Kannada Translation - Hamza Butur(ಆ ಸಾಕ್ಷ್ಯವು) ಪರಿಶುದ್ಧ ಗ್ರಂಥಗಳನ್ನು ಓದಿಕೊಡುವ ಅಲ್ಲಾಹನ ಕಡೆಯ ಸಂದೇಶವಾಹಕರಾಗಿದ್ದಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فِيهَا كُتُبٌ قَيِّمَةٌ

Kannada Translation - Hamza Buturಅದರಲ್ಲಿ (ಆ ಗ್ರಂಥದಲ್ಲಿ) ಸರಿಯಾದ ನಿಯಮಗಳಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَا تَفَرَّقَ ٱلَّذِينَ أُوتُوا۟ ٱلْكِتَٰبَ إِلَّا مِنۢ بَعْدِ مَا جَآءَتْهُمُ ٱلْبَيِّنَةُ

Kannada Translation - Hamza Buturಗ್ರಂಥ ನೀಡಲಾದವರು ಅವರ ಬಳಿಗೆ ಸ್ಪಷ್ಟ ಸಾಕ್ಷ್ಯವು ಬಂದ ಬಳಿಕವೇ (ಭಿನ್ನಮತ ತಳೆದು) ವಿಭಿನ್ನ ಪಂಗಡಗಳಾದರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمَآ أُمِرُوٓا۟ إِلَّا لِيَعْبُدُوا۟ ٱللَّهَ مُخْلِصِينَ لَهُ ٱلدِّينَ حُنَفَآءَ وَيُقِيمُوا۟ ٱلصَّلَوٰةَ وَيُؤْتُوا۟ ٱلزَّكَوٰةَ وَذَٰلِكَ دِينُ ٱلْقَيِّمَةِ

Kannada Translation - Hamza Buturಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕವಾಗಿಸಿ ಏಕನಿಷ್ಠರಾಗಿ ಅವನನ್ನು ಮಾತ್ರ ಆರಾಧಿಸಿರಿ, ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ ಎಂದಲ್ಲದೆ ಬೇರೇನನ್ನೂ ಅವರಿಗೆ ಆದೇಶಿಸಲಾಗಿರಲಿಲ್ಲ. ಅದೇ ನೇರವಾದ ಧರ್ಮ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ كَفَرُوا۟ مِنْ أَهْلِ ٱلْكِتَٰبِ وَٱلْمُشْرِكِينَ فِى نَارِ جَهَنَّمَ خَٰلِدِينَ فِيهَآ أُو۟لَٰٓئِكَ هُمْ شَرُّ ٱلْبَرِيَّةِ

Kannada Translation - Hamza Buturನಿಶ್ಚಯವಾಗಿಯೂ ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳು ಮತ್ತು ಬಹುದೇವವಿಶ್ವಾಸಿಗಳು ನರಕವಾಸಿಗಳಾಗಿದ್ದಾರೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅವರು ಸೃಷ್ಟಿಗಳಲ್ಲೇ ಅತಿನಿಕೃಷ್ಟರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ أُو۟لَٰٓئِكَ هُمْ خَيْرُ ٱلْبَرِيَّةِ

Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರು ಸೃಷ್ಟಿಗಳಲ್ಲೇ ಅತಿಶ್ರೇಷ್ಠರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

جَزَآؤُهُمْ عِندَ رَبِّهِمْ جَنَّٰتُ عَدْنٍ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَآ أَبَدًا رَّضِىَ ٱللَّهُ عَنْهُمْ وَرَضُوا۟ عَنْهُ ذَٰلِكَ لِمَنْ خَشِىَ رَبَّهُۥ

Kannada Translation - Hamza Buturಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿಯಿರುವ ಪ್ರತಿಫಲವು ಶಾಶ್ವತವಾಸದ ಸ್ವರ್ಗೋದ್ಯಾನಗಳಾಗಿವೆ. ಅವುಗಳ ತಳಭಾಗದಿಂದ ನದಿಗಳು ಹರಿಯುತ್ತವೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಇದು ತನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವನಿಗೆ ಇರುವುದಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70